Breaking News

ರಾಜ್ಯ

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ   ಲಾರಿ ಚಾಲಕ ಅರ್ಜುನ ಸೇರಿದಂತೆ ನಾಪತ್ತೆಯಾದವರ ಪತ್ತೆಗೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ ಕಾರವಾರ/ಅಂಕೋಲಾ: ಜುಲೈ 16 ರಂದು ಉತ್ತರಕನ್ನಡದ ಶಿರೂರಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಲಾರಿ ಸಮೇತ ಚಾಲಕ ಅರ್ಜುನ್ ಸೇರಿದಂತೆ ಮೂವರು ನಾಪತ್ತೆಯಾಗಿ ಇಂದಿಗೆ ಹನ್ನೊಂದು ದಿನಗಳು ಕಳೆದಿದ್ದು ಇನ್ನೂ ಹುಡುಕಾಟ ಮುಂದುವರೆದಿದೆ, ಅದರಂತೆ ಇಂದು ಮಲ್ಪೆ ಈಶ್ವರ್ ತಂಡ ಶಿರೂರಿಗೆ ಬಂದಿದ್ದು ನಾಪತ್ತೆಯಾದ ಕಾರ್ಯಾಚರಣೆ ನಡೆಸಲಿದ್ದಾರೆ …

Read More »

ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ

ರಬಕವಿ-ಬನಹಟ್ಟಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅಲ್ಲಿನ ವಿವಿಧ ಜಲಾಶಯಗಳಿಂದ ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಸಮೀಪದ ಕೃಷ್ಣಾ ನದಿಯಲ್ಲಿ ದಿನದಿಂದ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ಶನಿವಾರ ಹಿಪ್ಪರಗಿ ಜಲಾಶಯಕ್ಕೆ 2,28,056 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುರಿಂದ ಅವಳಿ ರಬಕವಿ-ಬನಹಟ್ಟಿ ನಗರಗಳಿಗೆ ನೀರು ಪೂರೈಸುವ ಜಾಕವೆಲ್‌ಗಳಿಗೆ ಹೋಗುವ ಮಾರ್ಗ ಬಂದಾಗಿದೆ. ಸದ್ಯ ಜಾಕವೆಲ್‌ಗಳು ಸಂಪೂರ್ಣವಾಗಿ ನಡುಗಡ್ಡೆಗಳಾಗಿವೆ. ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ …

Read More »

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ

ಶಿವಮೊಗ್ಗ: ಗಾಜನೂರಿನ ತು೦ಗಾ ಜಲಾಶಯಕ್ಕೆ 70 ಸಾವಿರ ಕ್ಯೂಸೆಕ್ ಗಿಂತಲೂ ಅಧಿಕ ನೀರು ಬರುತ್ತಿದ್ದು ಅಷ್ಟೇ ಪ್ರಮಾಣದ ನೀರು ನದಿಗೆ ಬಿಡಲಾಗುತ್ತಿರುವುದರಿಂದ ಈ ಭಾಗದ ರಸ್ತೆಗಳು ಜಲಾವೃತವಾಗುತ್ತದೆ. ಇದರಿಂದ ಗದ್ದೆ ತೋಟಗಳು ಮುಳುಗಿ ತುಂಬಾ ನಷ್ಠವಾಗುತ್ತಿದೆ. ಪ್ರತಿ ವರ್ಷದ ಮಳೆಗಾಲದಲ್ಲಿ ಈ ಪರಿಸ್ಥಿತಿ ಉಂಟಾಗುತ್ತಿದ್ದು ಇದಕ್ಕೊಂದು ಶಾಶ್ವತ ಪರಿಹಾರವನ್ನು ಸರ್ಕಾರ ಕೈಗೊಳ್ಳಬೇಕಿದೆ ಎಂಬುದು ಈ ಭಾಗದ ರೈತರ, ಗ್ರಾಮಸ್ಥರ ಮತ್ತು ಭಕ್ತರ ಆಗ್ರಹವಾಗಿದೆ. ಭದ್ರಾ ಜಲಾಶಯದ ಗರಿಷ್ಠ ಮಟ್ಟ 186 ಅಡಿಗಳಿದ್ದು …

Read More »

ದೇಶದಲ್ಲಿ ಕಳೆದ 5 ವರ್ಷಗಳಲ್ಲಿ 628 ಹುಲಿಗಳು ಸಾವು

ಹೊಸದಿಲ್ಲಿ: ಕಳೆದ ಐದು ವರ್ಷಗಳಲ್ಲಿ ಭಾರತದಲ್ಲಿ ಒಟ್ಟು 628 ಹುಲಿಗಳು ನೈಸರ್ಗಿಕ ಕಾರಣಗಳು ಮತ್ತು ಬೇಟೆ ಸೇರಿದಂತೆ ಇತರ ಕಾರಣಗಳಿಂದ ಸಾವನ್ನಪ್ಪಿವೆ ಎಂದು ಸರಕಾರದ ಅಂಕಿಅಂಶಗಳು ತಿಳಿಸಿವೆ. ಅವಧಿಯಲ್ಲಿ ಹುಲಿ ದಾಳಿಯಲ್ಲಿ 349 ಜನರು ಪ್ರಾಣಕಳೆದುಕೊಂಡಿದ್ದು ಮಹಾರಾಷ್ಟ್ರವೊಂದರಲ್ಲೇ ಅತ್ಯಧಿಕ 200 ಮಂದಿಯ ಸಾವು ದಾಖಲಾಗಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ಪ್ರಕಾರ, 2019 ರಲ್ಲಿ 96, 2020 ರಲ್ಲಿ 106, 2021 ರಲ್ಲಿ 127, 2022 ರಲ್ಲಿ 121 ಮತ್ತು …

Read More »

ಗುಡ್​ನ್ಯೂಸ್: ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು, ಜುಲೈ 26: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಸಲ್ಲಿಸುವುದಕ್ಕೆ ವಿಶೇಷ ಅವಕಾಶದ ಜೊತೆಗೆ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೂ ವಿಶೇಷ ಅವಕಾಶ ನೀಡಲು ಸಚಿವ ಸಂಪುಟ ನಿರ್ಧಾರ ಮಾಡಿದೆ ಎಂದು ಸಚಿವ ಎಚ್‌ ಕೆ ಪಾಟೀಲ್‌ ಹೇಳಿದರು.   ಈ ಕುರಿತು ಸಚಿವ ಸಂಪುಟದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, 2017-18ನೇ …

Read More »

ವಸತಿ ಯೋಜನೆ ಫಲಾನುಭವಿಗಳಿಗೆ 1 ಲಕ್ಷ ರೂ.ನೆರವು ಘೋಷಣೆ

ವಸತಿ ಯೋಜನೆ ಫಲಾನುಭವಿಗಳಿಗೆ 1 ಲಕ್ಷ ರೂ.ನೆರವು ಘೋಷಣೆ   ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಒಂದು ಲಕ್ಷ ಮನೆ ಯೋಜನೆ ಅಡಿ ಆಯ್ಕೆಯಾದ ಕುಟುಂಬಗಳು ಕಟ್ಟಬೇಕಿದ್ದ 1 ಲಕ್ಷ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ ಎಂದು ಸಚಿವ ಜಮೀರ್‌ ಅಹ್ಮದ್‌ ಖಾನ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಅಡಿ ಆಯ್ಕೆಯಾದ 12,153 ಕುಟುಂಬಗಳು ಕಟ್ಟಬೇಕಿದ್ದ …

Read More »

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ರೈತರ ಜೀವಕ್ಕೆ ಬೆಲೆ ಇಲ್ಲ. ಇದೊಂದು ದೊಡ್ಡ ದುರಂತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಹ್ಲಾದ್ ಜೋಶಿ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ರೈತರಿಗೆ ರಾಜ್ಯದಲ್ಲಿ ಉಜ್ವಲ ಭವಿಷ್ಯ ಇಲ್ಲದಂತಾಗಿದೆ. ಸರ್ಕಾರ ರೈತರ ಆತ್ಮಹತ್ಯೆ …

Read More »

ಕಲೆ, ಸಾಹಿತ್ಯ, ಸಂಗೀತಕ್ಕೂ ಬೇಕು ಮಾನ್ಯತೆ: ಡಾ. ನಾ. ಸೋಮೇಶ್ವರ ಅಭಿಮತ

ಯಲಹಂಕ: ಆಧುನಿಕ ಸಮಾಜದಲ್ಲಿ ವಿಜ್ಞಾನ ಮತ್ತು ಗಣಿತಕ್ಕೆ ನೀಡುತ್ತಿರುವ ಮಾನ್ಯತೆ ಕಲೆ, ಸಾಹಿತ್ಯ ಮತ್ತು ಸಂಗೀತಕ್ಕೆ ದೊರಕುತ್ತಿಲ್ಲ ಎಂದು ಡಾ. ನಾ. ಸೋಮೇಶ್ವರ ಹೇಳಿದ್ದಾರೆ. ಗುರುಪೂರ್ಣಿಮೆ ಪ್ರಯುಕ್ತ ಸಂಸ್ಕಾರ ಭಾರತಿ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಇತಿಹಾಸತಜ್ಞ, ಶಾಸನ ಸಂಶೋಧಕ ಕೆ.ಆರ್. ನರಸಿಂಹನ್ ಅವರನ್ನು ಸನ್ಮಾನಿಸಿ ಮಾತನಾಡಿದರು. ಶಾಸನ ಸಂಶೋಧನೆಗೆ ನರಸಿಂಹನ್ ನೀಡಿರುವ ಕೊಡುಗೆ ಅಪಾರ. ಒಂದು ಸಂಸ್ಥೆ, ಒಂದು ವಿಶ್ವವಿದ್ಯಾಲಯ ಮಾಡಬೇಕಾದ ಕೆಲಸವನ್ನು ಅವರ ತಂಡ ಮಾಡುತ್ತಿರುವುದು ಶ್ಲಾಘನೀಯ ಎಂದರು. 120ಕ್ಕೂ …

Read More »

ಭಾರತದಲ್ಲಿ ಎಲ್ಲಾ ಮಾದರಿಗಳ ‘ಐಫೋನ್’ ಬೆಲೆ ಇಳಿಕೆ

ನವದೆಹಲಿ : ಐಫೋನ್ ಖರೀದಿದಾರರಿಗೆ ಆಪಲ್ ಸಿಹಿ ಸುದ್ದಿ ನೀಡಿದೆ. ಭಾರತದಲ್ಲಿ ತನ್ನ ಐಫೋನ್ ಶ್ರೇಣಿಯ ಬೆಲೆಗಳನ್ನ ಕಡಿತಗೊಳಿಸಿದೆ. ಭಾರತದ ಇತ್ತೀಚಿನ ಬಜೆಟ್ ಘೋಷಣೆಯ ಹಿನ್ನೆಲೆಯಲ್ಲಿ ಬೆಲೆ ಕಡಿತ ಬಂದಿದೆ. ಆಮದು ಮಾಡಿಕೊಳ್ಳುವ ಮೊಬೈಲ್ ಫೋನ್ಗಳು ಮತ್ತು ಬಿಡಿಭಾಗಗಳ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನ (BCD) 20% ರಿಂದ 15%ಕ್ಕೆ ಇಳಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಕೇಂದ್ರ ಬಜೆಟ್ ಭಾಷಣದಲ್ಲಿ ಘೋಷಿಸಿದರು. ಗಮನಾರ್ಹವಾಗಿ, ಆಪಲ್ ಭಾರತೀಯ …

Read More »

ರಾಮನಗರ ಹೆಸರು ತೆಗೆದವರು ಸರ್ವನಾಶ ಆಗುತ್ತಾರೆ:H.D.K.

ನವದೆಹಲಿ: ರಾಮನಗರ ಜಿಲ್ಲೆಗೆ ರಾಮನ ಹೆಸರು ತೆಗೆಯಲು ಆಗಲ್ಲ. ಈ ಭೂಮಿ ಇರುವ ತನಕ ರಾಮನಗರ ಹೆಸರನ್ನು ತೆಗೆಯಲು ಸಾಧ್ಯವಿಲ್ಲ. ಒಂದು ವೇಳೆ ತಮ್ಮ ಸ್ವಾರ್ಥಕ್ಕಾಗಿ ಹೆಸರು ಬದಲಾವಣೆ ಮಾಡಿದರೆ, ಆ ಕೃತ್ಯ ಎಸಗಿದವರು ಸರ್ವನಾಶ ಆಗುತ್ತಾರೆ ಎಂದು ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ನವದೆಹಲಿಯಲ್ಲಿ ಶುಕ್ರವಾರ ಸಂಜೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಮನಗರ ಜಿಲ್ಲೆಯ ಹೆಸರನ್ನು ತೆಗೆದು ಬೆಂಗಳೂರು ದಕ್ಷಿಣ ಎಂದು ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ …

Read More »