ಹಾವೇರಿ, ಜೂನ್ 28: ಬ್ಯಾಡಗಿ (Byadagi) ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ (TT Vehicle) ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ. ಪರಶುರಾಮ್ (45), ಭಾಗ್ಯ (40), ನಾಗೇಶ (50), ವಿಶಾಲಾಕ್ಷಿ (40), ಅರ್ಪಿತಾ (18), ಸುಭದ್ರಾ …
Read More »ದರ್ಶನ್ ವಿರುದ್ಧ ಸುಮಾರು 30ಕ್ಕೂ ಅಧಿಕ ಸಾಕ್ಷ್ಯಗಳು ಸಿಕ್ಕಿವೆ?
ಕೊಲೆ ಕೇಸ್ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಕೊಲೆಯಲ್ಲಿ ಅವರ ಪಾತ್ರವೂ ಇದೆ ಎನ್ನಲಾಗಿದೆ. ಈ ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ದರ್ಶನ್ ವಿರುದ್ಧ ಸುಮಾರು 30ಕ್ಕೂ ಅಧಿಕ ಸಾಕ್ಷ್ಯಗಳು ಸಿಕ್ಕಿವೆ ಎಂದು ವರದಿ ಆಗಿದೆ. ನಟ ದರ್ಶನ್ ಅವರು ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಮಾಡಿದ ಆರೋಪವನ್ನು …
Read More »ಧಾರವಾಡ ಕೃಷಿ ವಿಶ್ವವಿದ್ಯಾಲಯ ಘಟಿಕೋತ್ಸವ: ಶ್ರೀಯಾಗೆ 3 ಚಿನ್ನದ ಪದಕ
ಧಾರವಾಡ ಕೃಷಿ ವಿಶ್ವವಿದ್ಯಾಲಯ ಘಟಿಕೋತ್ಸವ: ಶ್ರೀಯಾಗೆ 3 ಚಿನ್ನದ ಪದಕ ಧಾರವಾಡ: ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ 37ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಅವರು ಪದವೀಧರರಿಗೆ ಪ್ರಮಾಣ ಪತ್ರ ಪದಾನ ಮಾಡಿದರು. ಬಿ.ಎಸ್ಸಿ (ಆನರ್ಸ್) ಕೃಷಿ ಸ್ನಾತಕ ಪದವಿ ಕೋರ್ಸ್‌ನಲ್ಲಿ ಶ್ರೀಯಾ ಎಸ್.ಕರಿ ಅವರು ಮೂರು ಚಿನ್ನದ ಪದಕ ಪಡೆದಿದ್ದಾರೆ. ವಿಶ್ವವಿದ್ಯಾಲಯದಲ್ಲಿ 2023-24ನೇ ಸಾಲಿನಲ್ಲಿ ಒಟ್ಟು 933 ಮಂದಿ ವಿವಿಧ ಪದವಿ ಪೂರೈಸಿದ್ದಾರೆ. ಪಿಎಚ್.ಡಿ 69, ಸ್ನಾತಕೋತ್ತರ …
Read More »ಕೆಟ್ಟು ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, 10ಕ್ಕೂ ಹೆಚ್ಚು ಗಾಯ
ಕಾನಾಹೊಸಹಳ್ಳಿ,-ವಿಜಯನಗರ: ಕಾನಾಹೊಸಹಳ್ಳಿ ಠಾಣಾ ವ್ಯಾಪ್ತಿಯ ಆಲೂರು ಹುಲಿಕೆರೆ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ50 ರಲ್ಲಿ ಗುರುವಾರ ತಡರಾತ್ರಿ ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲ್ಲರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಒಬ್ಬರು ಸಾವನ್ನಪ್ಪಿದ್ದು , ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಕೃಷ್ಣಪ್ಪ (62 ವರ್ಷ) ಮೃತ ದುರ್ದೈವಿಯಾಗಿದ್ದು ಟಿಟಿ ವಾಹನವು ಕಲಬುರಗಿ ಯಿಂದ ಚಿಕ್ಕಬಳ್ಳಾಪುರ ತಾಲೂಕಿನ ಆರೋಡಿ ಗ್ರಾಮಕ್ಕೆ ತೆರಳುತ್ತಿದ್ದು ಕಲಬರುಗಿಯಲ್ಲಿ ನಿಶ್ಚಿತಾರ್ಥ ಮುಗಿಸಿಕೊಂಡು ಸ್ವ ಗ್ರಾಮ ಆರೋಡಿಗೆ ವಾಪಸು …
Read More »ರಾಜ್ಯದಲ್ಲಿ ಆತಂಕ ಮೂಡಿಸಿದ ‘ಡೇಂಘಿ’ ಜ್ವರ : ಹಾವೇರಿಯಲ್ಲಿ ಮಹಾಮಾರಿಗೆ ಮೊದಲ ಬಲಿ!
ಹಾವೇರಿ : ರಾಜ್ಯದಲ್ಲಿ ಡೇಂಘಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಹಾವೇರಿ ಜಿಲ್ಲೆಯಲ್ಲಿ ಡೇಂಘಿ ಮಹಾಮಾರಿಗೆ ಮೊದಲ ಬಲಿಯಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದ 30 ವರ್ಷದ ಮಹಿಳೆ ಡೇಂಘಿಗೆ ಸಾವನ್ನಪ್ಪಿದ್ದಾರೆ. ಹೌದು ಮಹಾಮಾರಿ ಡೇಂಘಿಗೆ 30 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.ಹಾನಗಲ್ ತಾಲೂಕಿನ ನರೇಗಲ್ಲ ಗ್ರಾಮದ ಗೌಸಿಯ (30) ಎಂಬ ಮಹಿಳೆ ಇದೀಗ ಸಾವನ್ನಪ್ಪಿದ್ದಾರೆ.ಹಾವೇರಿ ನಗರದ ಮಲ್ಲಾಡದ ಆಸ್ಪತ್ರೆಯಲ್ಲಿ ನಿನ್ನೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ತೀವ್ರ ಜ್ವರದಿಂದ …
Read More »3 ದಿನ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ
ಬೆಂಗಳೂರು : ರಾಜ್ಯಕ್ಕೆ ಬರುವ ಅನುದಾನಗಳ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲದೆ ನಾಳೆ ಮೂರನೇ ಬಾರಿಗೆ ಪ್ರಧಾನಿಯಾದ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಅಭಿನಂದನೆ ತಿಳಿಸಲಿದ್ದಾರೆ. ಹೌದು ಇಂದಿನಿಂದ ಮೂರು ದಿನಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯಕ್ಕೆ ಬರಬೇಕಿರುವ ಅನುದಾನಗಳ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಲಿದ್ದಾರೆ. ಕೇಂದ್ರ ಸಚಿವರನ್ನು ಭೇಟಿಯಾಗಿ ಮುಖ್ಯಮಂತ್ರಿ …
Read More »ರೇಣುಕಸ್ವಾಮಿ ಪತ್ನಿಗೆ ಸರ್ಕಾರಿ ನೌಕರಿ ನೀಡಲು ಒತ್ತಾಯ
ಇಳಕಲ್: ಕೊಲೆಯಾಗಿರುವ ಚಿತ್ರದುರ್ಗದ ರೇಣುಕಸ್ವಾಮಿ ಅವರ ಪತ್ನಿಗೆ ಸರ್ಕಾರಿ ನೌಕರಿ ಕೊಡಬೇಕು. ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ, ಇಲ್ಲಿಯ ಕಂಠಿ ವೃತ್ತದಲ್ಲಿ ಮಂಗಳವಾರ ವೀರಮಾಹೇಶ್ವರ ಜಂಗಮ ಸಮಾಜದವರು ತಹಶೀಲ್ದಾರ್ ಸತೀಶ ಕೂಡಲಗಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನಗರದ ಪ್ರವಾಸಿ ಮಂದಿರ ಹತ್ತಿರದ ರೇಣುಕಾಚಾರ್ಯ ವೃತ್ತದಲ್ಲಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಬಸ್ ನಿಲ್ದಾಣ ಮಾರ್ಗವಾಗಿ ಕಂಠಿ ವೃತ್ತ ತಲುಪಿದರು. ಸಂದೇಶಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ …
Read More »ವೀರಶೈವ ಲಿಂಗಾಯತ ವಧು-ವರರ ಮುಖಾಮುಖಿ ಸಮಾವೇಶ
ಬೆಂಗಳೂರು: ಡಾಕ್ಟರ್ಸ್, ಇಂಜಿನಿಯರ್ಸ್, ವಿವಿಧ ಪದವೀಧರರು, ಎನ್‌ಆರ್‌ಐಗಳು ಹಾಗೂ ಇನ್ನಿತರೆ ಎಲ್ಲ ವೀರಶೈವ ಲಿಂಗಾಯತ ವಧು-ವರರ ಮಾಸಿಕ ಮುಖಾ-ಮುಖಿ ಸಮಾವೇಶವು ಜೂ.30 ಭಾನುವಾರ ಮಧ್ಯಾಹ್ನ 2ಕ್ಕೆ ಹಮ್ಮಿಕೊಂಡಿರುವುದಾಗಿ ಲಿಂಗಾಯತ ಕಲ್ಯಾಣ ಟ್ರಸ್ಟ್ ತಿಳಿಸಿದೆ. ಗಾಂಧಿನಗರದ 5ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆಯಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ ಸಮಾವೇಶ ನಡೆಯಲಿದ್ದು, ಆಸಕ್ತ ವಧು-ವರರು ಮತ್ತು ಪೋಷಕರು ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಬಹುದು. ಆನ್‌ಲೈನ್ ಮುಖಾಂತರ ಹೆಸರು ನೋಂದಾಯಿಸಲು www.lingayathkalyanatrust.org ಲಾಗ್‌ಇನ್ ಆಗಿ. ಹೆಚ್ಚಿನ ಮಾಹಿತಿಗೆ ದೂ: 080 …
Read More »ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಸಾರ್ವಜನಿಕರ ಯಾವುದೇ ಸಣ್ಣ-ಪುಟ್ಟ ಸಮಸ್ಯೆಗಳಿದ್ದರೂ ಸ್ಥಳದಲ್ಲಿಯೇ ಅಧಿಕಾರಿಗಳು ಪರಿಹರಿಸಬೇಕು. ವಿನಾಕಾರಣ ಅವರಿಗೆ ಅನಗತ್ಯ ತೊಂದರೆಗಳನ್ನು ನೀಡಿದರೇ ಸಹಿಸುವದಿಲ್ಲ. ಅಧಿಕಾರಿಗಳು ತಮಗೆ ನಿಯೋಜಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಅಧಿಕಾರಿಗಳ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು. ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ …
Read More »ಬುಧವಾರ ಮತ್ತೆ ಎರಡು ಅನಧಿಕೃತ ಆಸ್ಪತ್ರೆ ಸೀಜ್
ಚನ್ನಮ್ಮನ ಕಿತ್ತೂರು : ಮಕ್ಕಳ ಮಾರಾಟ ಹಾಗೂ ಭ್ರೂಣ ಹತ್ಯೆ ಪ್ರಕರಣದ ಬೆನ್ನಲೇ ಕಿತ್ತೂರಿನಲ್ಲಿ ಬುಧವಾರ ಮತ್ತೆ ಎರಡು ಆಸ್ಪತ್ರೆಗಳಿಗೆ ತಾಲೂಕು ವೈದ್ಯಧಿಕಾರಿಗಳು ಭೇಟಿ ನೀಡಿ ಆಸ್ಪತ್ರೆಗಳನ್ನು ಬಂದ್ ಮಾಡಿದ್ದಾರೆ. ಇಲ್ಲಿಯ ಪೊಲೀಸ್ ಠಾಣೆ ಎದುರು ಕಾಲೇಜು ರಸ್ತೆಯಲ್ಲಿರುವ ಮಹೇಶ ಹಟ್ಟಿಹೊಳಿಗೆ ಸೇರಿದ ‘ಧನ್ವಂತರಿ ಕ್ಲಿನಿಕ್’ ಹಾಗೂ ರೈತರ ಓಣಿ ಕ್ರಾಸ್ ಹತ್ತಿರ ಇರುವ ಇಬ್ರಾಹಿಂ ಜಮಾದಾರ್ ಗೆ ಸೇರಿದ ‘ಜಮಾದಾರ ಕ್ಲಿನಿಕ್’ ಅನ್ನು ಪರವಾನಿಗೆ ಇಲ್ಲದೆ ನಡೆಸುತ್ತಿದ್ದರು ಎಂದು …
Read More »
Laxmi News 24×7