Breaking News

ರಾಜ್ಯ

ರಾಜ್ಯದಲ್ಲಿ ಮೇ 29 ರಿಂದ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಆರಂಭ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.

ಬೆಂಗಳೂರು: ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಮೇ 29 ರಿಂದ ಆರಂಭಿಸುವ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. 2023 -24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಮೇ 29 ರಿಂದ ಅಕ್ಟೋಬರ್ 7 ರವರೆಗೆ ಮೊದಲ ಅವಧಿಯ ತರಗತಿಗಳು ನಡೆಯಲಿವೆ. ಅಕ್ಟೋಬರ್ 8 ರಿಂದ 24ರ ವರೆಗೆ ದಸರಾ ರಜೆ ನೀಡಲಿದ್ದು, ಅಕ್ಟೋಬರ್ 25 ರಿಂದ 2024ರ ಏಪ್ರಿಲ್ 10ರವರೆಗೆ ಎರಡನೇ ಅವಧಿ ತರಗತಿಗಳು ನಡೆಯಲಿವೆ. …

Read More »

ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರ ಗಾಯ

ರಾಯಚೂರು : ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರ ಗಾಯಗಳಾದ ಘಟನೆ ಪಟ್ಟಣದ ನೇತಾಜಿ ನಗರದ ಮನೆಯೊಂದರಲ್ಲಿ ನಡೆದಿದೆ. ಶಂಕುದ್ದೀನ್ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟವಾಗಿದ್ದು, ಮನೆಯಲ್ಲಿದ್ದ ಅಂಜುಮ್, ನಪೀಜಾ ಬಾನು ಹಾಗೂ ಪದ್ಮಾವತಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಂದರ್ಭಿಕ ಚಿತ್ರ ದಲಿತ ಕುಟುಂಬದ ಮೇಲೆ ಹಲ್ಲೆ : ಪೊಲೀಸರ ನಡೆ ಖಂಡಿಸಿ ಇಂದು …

Read More »

ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್

ಮೈಸೂರು : ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದಲ್ಲಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ, ವರುಣಾ ಕ್ಷೇತ್ರದಲ್ಲಿ ಬಿಜೆಪಿಯವರು ಸರಿಯಾದ ಅಭ್ಯರ್ಥಿ ಹಾಕಿಲ್ಲ, ಜೆಡಿಎಸ್ ಬಿಜೆಪಿ ಒಳ ಒಪ್ಪಂಡ ಮಾಡಿಕೊಂಡಿಲ್ಲ ಕಾಂಗ್ರೆಸ್ ಬಿಜೆಪಿ ಒಳಒಪ್ಪಂದ ಮಾಡಿಕೊಂಡಿದೆ. ಜೆಡಿಎಸ್ 124 ಸ್ಥಾನ ಗೆಲ್ಲಲು ಹೋರಾಟ ನಡೆಸುತ್ತಿದೆ ಎಂದು …

Read More »

ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ

ಬೆಂಗಳೂರು : ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಈ ಕುರಿತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.   ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು.ಆದರೆ ವಿಜಯೇಂದ್ರ ಅವರು ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸುವುದು ಖಚಿತವಾಗಿದ ಹಿನ್ನೆಲೆಯಲ್ಲಿ ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿ.ಸೋಮಣ್ಣಗೆ ಬಿಜೆಪಿ ಟಿಕೆಟ್ ನೀಡಲು …

Read More »

ಪ್ರಚಾರದಲ್ಲಿ ಪಾಲ್ಗೊಳ್ಳುವ ಸಿನೆಮಾ ಕಲಾವಿದರ ‘ಕಾರ್ಯಕ್ರಮ ಪ್ರಸಾರ’ ನಿಲ್ಲಿಸುವಂತೆ ‘KRS ಪಕ್ಷ’ ಆಗ್ರಹ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ( Karnataka Assembly Election 2023 ) ರಂಗೇರಿದೆ. ಈ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಸಿನೆಮಾ ಕಲಾವಿದರ ಕಾರ್ಯಕ್ರಮಗಳ ಪ್ರಸಾರವನ್ನು ಚುನಾವಣೆ ಮುಗಿಯುವ ತನಕ ನಿಲ್ಲಿಸುವಂತೆ ಚುನಾವಣಾ ಆಯೋಗಕ್ಕೆ KRS ಪಕ್ಷದ ಆಗ್ರಹಿಸಿದೆ.   ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರವನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರು ಬರೆದಿದ್ದಾರೆ. ಆ ಪತ್ರದಲ್ಲಿ ಚುನಾವಣಾ ಪ್ರಚಾರಕ್ಕೆಂದು …

Read More »

ವೈಎಸ್ ವಿ ದತ್ತಾಗೆ ಬಿಗ್ ಶಾಕ್ ಕಡೂರು ಕ್ಷೇತ್ರದಲ್ಲಿ ಕೆ.ಎಸ್. ಆನಂದ್ ಗೆ ಕಾಂಗ್ರೆಸ್ ಟಿಕೆಟ್

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಎಐಸಿಸಿ ಇಂದು 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಮಾಡಿದೆ. ಈ ನಡುವೆ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ವೈ.ಎಸ್. ವಿ ದತ್ತಾಗೆ ಬಿಗ್ ಶಾಕ್ ಎದುರಾಗಿದ್ದು, ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಬಯಸಿ ಬಂದ ವೈಎಸ್ ವಿ ದತ್ತಾ ಬದಲು ಕೆ.ಎಸ್ …

Read More »

ಬಳ್ಳಾರಿಯಲ್ಲಿ ಪೊಲೀಸರ ಕಾರ್ಯಾಚರಣೆ :10 ಲಕ್ಷ ರೂ. ನಗದು, 131.13 ಲೀ ಮದ್ಯ ವಶ

ಬಳ್ಳಾರಿ: ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಬುಧವಾರದಂದು ನೀತಿ ಸಂಹಿತೆ ಉಲ್ಲಂಘಿಸಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 10 ಲಕ್ಷ ನಗದು ಹಣ ಸೇರಿ 131.13 ಲೀಟರ್ (ರೂ.50,268 ಸಾವಿರ ಬೆಲೆಬಾಳುವ) ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ಮಾಹಿತಿ ನೀಡಿದ್ದಾರೆ.   ಜಿಲ್ಲೆಯಾದ್ಯಂತ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿವಿಧ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಕಾರ್ಯಪ್ರವೃತ್ತವಾಗಿದೆ. ಒಟ್ಟು 43 …

Read More »

ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ರಿಲೀಸ್ : ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್

ವಿಜಯಪುರ : ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಎಐಸಿಸಿ ಇಂದು 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ 2 ನೇ ಪಟ್ಟಿಯಲ್ಲಿ ಲಿಂಗಾಯತರಿಗೆ ಹೆಚ್ಚಿನ ಟಿಕೆಟ್ ನೀಡಲಾಗಿದೆ. ಲಿಂಗಾಯತರಿಗೆ 10, ರೆಡ್ಡಿ ಲಿಂಗಾಯ ಸಮುದಾಯಕ್ಕೆ 1 ಟಿಕೆಟ್ ಕೊಟ್ಟರೆ, ಒಕ್ಕಲಿಗ ಸಮುದಾಯಕ್ಕೆ 10 ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದೆ. ಕುರುಬ ಸಮುದಾಯಕ್ಕೆ …

Read More »

ನಾಳೆ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ನಾಳೆ ಮಧ್ಯಾಹ್ನ 2.30 ಕ್ಕೆ ಬಿಜೆಪಿ ಸಂಭ್ಯಾವ್ಯ ಅಭ್ಯರ್ಥಿಗಳ ಪಟ್ಟಿಯೊಂದಿಗೆ ದೆಹಲಿಗೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಸಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಮಧ್ಯಾಹ್ನ 2.30 ಕ್ಕೆ ಬಿಜೆಪಿ ಸಂಭ್ಯಾವ್ಯ ಅಭ್ಯರ್ಥಿಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿದ್ದಾರೆ. ಏಪ್ರಿಲ್ 8 ರಂದು ಬಿಜೆಪಿ ಸಂಸದೀಯ ಮಂಡಳಿಯ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ …

Read More »

ಬೊಮ್ಮಾಯಿ ಅಸಾಮರ್ಥ್ಯವೇ ಮಹಾರಾಷ್ಟ್ರದ ಗಡಿ ತಂಟೆಗೆ ಕಾರಣ – ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ

ಬೆಂಗಳೂರು: ಬಿಜೆಪಿ ಸರ್ಕಾರದ ವೈಫಲ್ಯ, ಬಸವರಾಜ ಬೊಮ್ಮಾಯಿ ಅವರ ಅಸಾಮರ್ಥ್ಯವೇ ಮಹಾರಾಷ್ಟ್ರದ ಗಡಿ ತಂಟೆಗೆ ಕಾರಣ. ಚುನಾವಣೆಗಾಗಿ ಏಕಾಏಕಿ ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಹುಟ್ಟಿ ವಾರಕ್ಕೊಮ್ಮೆ ಕರ್ನಾಟಕಕ್ಕೆ ಬರುವ ಮೊ-ಶಾ ಜೋಡಿ ಮಹಾರಾಷ್ಟ್ರದಲ್ಲಿನ ತಮ್ಮದೇ ಸರ್ಕಾರದ ಉದ್ಧಟತನಕ್ಕೆ ಕಡಿವಾಣ ಹಾಕುತ್ತಿಲ್ಲವೇಕೆ ಬಿಜೆಪಿ ಎಂದು ಕರ್ನಾಟಕ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.ಈ ಕುರಿತಂತೆ ಟ್ವಿಟ್ ಮಾಡಿದ್ದು, ರಮೇಶ್ ಜಾರಕಿಹೊಳಿ ಬಿಜೆಪಿಗೆ ದುಬಾರಿ ಮನುಷ್ಯನಾಗಿದ್ದಾರೆ, ಒಂದೆಡೆ ಸವದಿ ಜೊತೆ ಕಿರಿಕ್, ಇನ್ನೊಂದೆಡೆ ಈರಣ್ಣ …

Read More »