ಬೆಂಗಳೂರು: ಕೋಳಿಯನ್ನು ಎತ್ತಿ ಎಸೆಯುವಂತೆ ದರ್ಶನ್ ರೇಣುಕಾ ಸ್ವಾಮಿಯನ್ನು ಎಸೆದಿದ್ದಾನೆಂದು ಪೊಲೀಸ್ ಅಧಿಕಾರಿ ಹಾಗೂ ವ್ಯಕ್ತಿಯೊಬ್ಬರು ನಡೆಸಿದ್ದಾರೆ ಎನ್ನಲಾದ ಮೊಬೈಲ್ ಸಂಭಾಷಣೆ ಭಾರೀ ವೈರಲ್ ಆಗಿದೆ. ರೇಣುಕಾ ಸ್ವಾಮಿಯನ್ನು ಸಿಕ್ಕಾಪಟ್ಟೆ ಚಿತ್ರಹಿಂಸೆ ಕೊಟ್ಟು ಭೀಕರವಾಗಿ ಕೊಲೆ ಮಾಡಲಾಗಿದೆ ಎಂಬ ಕೃತ್ಯದ ಬಗೆಗಿನ ಆಘಾತಕಾರಿ ಅಂಶಗಳನ್ನು ಪೊಲೀಸ್ ಅಧಿಕಾರಿ ಎನ್ನಲಾದ ವ್ಯಕ್ತಿ ತನ್ನ ಸ್ನೇಹಿತನಿಗೆ ವಿವರಿಸಿದ್ದಾನೆ. ಜತೆಗೆ ದರ್ಶನ್ ಮತ್ತವರ ತಂಡ ರೇಣುಕಾ ಸ್ವಾಮಿಯನ್ನು ಅದೆಷ್ಟು ಕ್ರೂರವಾಗಿ ಕೊಂದಿದ್ದಾರೆ ಎಂಬುದನ್ನೂ ಬಿಚ್ಚಿಟ್ಟಿದ್ದಾರೆ. ಮೊಬೈಲ್ …
Read More »ವಿವಿಧ ಯೋಜನೆಯಡಿ ಶೂನ್ಯ ಬಡ್ಡಿ ದರ ಸಾಲ ಸೌಲಭ್ಯ
ಬೆಂಗಳೂರು: ರೈತರು, ಸದಸ್ಯ ನೇಕಾರರಿಗೆ ವಿವಿಧ ಯೋಜನೆಗಳಡಿ ಶೂನ್ಯ ಬಡ್ಡಿ ದರದಲ್ಲಿ ಆನೇಕಲ್ ತಾಲೂಕಿನ ಬಿಡಿಸಿಸಿ ಬ್ಯಾಂಕಿನಲ್ಲಿ ಸಾಲ ಸೌಲಭ್ಯ ನೀಡಲಾಗುವುದು. ಗೃಹ ನಿರ್ಮಾಣ, ವಾಹನ ಖರೀದಿಗೂ ಸಾಲ ನೀಡಲಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ನಿರ್ದೇಶಕ ವಿ.ಹೆಚ್. ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ. ಮಾಸಿಕ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೂನ್ಯ ಬಡ್ಡಿ ದರದಲ್ಲಿ ವಾರ್ಷಿಕ ಬೆಳೆಗಳಿಗೆ 5 ಲಕ್ಷ ರೂ., ಹೈನುಗಾರಿಕೆ ನಿರ್ವಹಣೆಗೆ 2 ಲಕ್ಷ ರೂ., ಮೀನುಗಾರಿಕೆಗೆ 3 …
Read More »ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಖಾಕಿ ಖೆಡ್ಡಕ್ಕೆ ಬಿದ್ದಿರುವ ನಟ ದರ್ಶನ್ ಮತ್ತು ತಂಡವು ಕೃತ್ಯ ನಡೆದ ಘಟನೆಯನ್ನು ಎಳೆಎಳೆಯಾಗಿ ಪೊಲೀಸರ ಮುಂದೆ ಬಿಡಿಸಿಟ್ಟಿದೆ. ಕೊಲೆಯಾಗುತ್ತಾರೆ ಎಂಬ ಕಲ್ಪನೆ ಇರಲಿಲ್ಲ ಎಂದು ಪವಿತ್ರಾ ಹೇಳಿದರೆ, ರೇಣುಕಾ ಸ್ವಾಮಿ ಕೊಲೆಗೂ ನನಗೂ ಸಂಬಂಧವಿಲ್ಲ ಎಂದು ದರ್ಶನ್ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ತನಿಖಾಧಿಕಾರಿಗಳು ಹೇಳಿಕೆ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ರೇಣುಕಾ ಸ್ವಾಮಿ …
Read More »ಯಾರೋ ದೂರು ಕೊಟ್ಟ ಮಾತ್ರಕ್ಕೆ ಬಂಧನ ಅಂದರೆ ಹೇಗೆ: BSY ಪರ ಶಾಮನೂರು ಬ್ಯಾಟಿಂಗ್
ದಾವಣಗೆರೆ: ‘ಆರೋಪ ಸಾಬೀತಾದ ಮೇಲೆ ಬಂಧನ ಅಂದರೆ ಸರಿ. ಯಾರೋ ಹೆಣ್ಣು ಮಗಳು ದೂರು ಕೊಟ್ಟ ಮಾತ್ರಕ್ಕೆ ಬಂಧನ ಅಂದರೆ ಹೇಗೆ? ಅದಕ್ಕೆ ಅರ್ಥ ಇದೆಯೇ’ ಎಂದು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಪ್ರಶ್ನಿಸಿದರು. ಯಡಿಯೂರಪ್ಪ ವಿರುದ್ಧದ ಪ್ರಕರಣ ಸಂಬಂಧ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರೋ ದಾರಿಯಲ್ಲಿ ಹೋಗೋರು ಕಂಪ್ಲೆಂಟ್ ಕೊಟ್ರೆ ಅರೆಸ್ಟ್ ಎಂದರೆ ಏನ್ ಅರ್ಥ. ಆಕೆ 55 ಜನರ ವಿರುದ್ಧವೂ ದೂರು ನೀಡಿದ್ದಾಳೆ. ಇಂತಹದಕ್ಕೆ ಬೆಲೆ ಇದೇಯೇ’ …
Read More »ಮೂಡಲಗಿ: ಸಮಗ್ರ ಕೃಷಿಯಲ್ಲಿ ಬಸವಣ್ಣಿ ಖುಷಿ
ಮೂಡಲಗಿ: ತಾಲ್ಲೂಕಿನ ಗುರ್ಲಾಪುರ ಗ್ರಾಮದ ರೈತ ಬಸವಣ್ಣಿ ಚಿಣ್ಣಪ್ಪ ಮುಗಳಖೋಡ ಒಂದೇ ಬೆಳೆ ನೆಚ್ಚಿಕೊಳ್ಳದೆ, ವಿವಿಧ ಬೆಳೆಗಳನ್ನು ಬೆಳೆಯುತ್ತ ಸಮಗ್ರ ಕೃಷಿಯಲ್ಲಿ ಯಶ ಕಂಡಿದ್ದಾರೆ. ಜತೆಗೆ, ಹೈನುಗಾರಿಕೆಯಲ್ಲಿ ಉತ್ತಮ ಆದಾಯ ಗಳಿಸುತ್ತಿದ್ದಾರೆ. ಬಿ.ಎಸ್ಸಿ ಪದವೀಧರರಾದ ಬಸವಣ್ಣಿ 40 ಎಕರೆ ಜಮೀನು ಹೊಂದಿದ್ದಾರೆ. ನೌಕರಿಗಾಗಿ ಬೆನ್ನು ಹತ್ತದೆ, ಒಕ್ಕಲುತನದಲ್ಲೇ ಖುಷಿ ಕಾಣುತ್ತಿದ್ದಾರೆ. ‘ನಾನು ಒಂದು ಸಾಲಿನಿಂದ ಇನ್ನೊಂದು ಸಾಲಿಗೆ 4 ಅಡಿ ಬಿಟ್ಟು, ಕಬ್ಬಿನ ಬೆಳೆ ನಾಟಿ ಮಾಡಿದ್ದೇನೆ. ಮಿಶ್ರ ಬೆಳೆಗಳಾಗಿ …
Read More »ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ: ಶೆಟ್ಟರ್
ಬೆಳಗಾವಿ: ‘ಕಳಸಾ-ಬಂಡೂರಿ ಯೋಜನೆಯಡಿ ರಾಜ್ಯಕ್ಕೆ 13 ಟಿಎಂಸಿ ಅಡಿ ನೀರು ಹಂಚಿಕೆಯಾಗಿದ್ದು, ಅಧಿಸೂಚನೆಯೂ ಹೊರಬಿದ್ದಿದೆ. ಆದರೆ, ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಕಾಮಗಾರಿಗೆ ಅನುಮತಿಯಷ್ಟೇ ಸಿಗಬೇಕಿದೆ. ನನ್ನ ಅಧಿಕಾರವಧಿಯಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದು ಬೆಳಗಾವಿ ಕ್ಷೇತ್ರದ ಸಂಸದ ಜಗದೀಶ ಶೆಟ್ಟರ್ ಭರವಸೆ ನೀಡಿದರು. ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಕ್ಕೆ ನೀರು ಹಂಚಿಕೆಗೊಳಿಸಿ, ಮಹದಾಯಿ ನ್ಯಾಯಾಧಿಕರಣ ತೀರ್ಪು ಕೊಟ್ಟಿದೆ. ಹಾಗಾಗಿ …
Read More »ದರ್ಶನ್ ರಕ್ಷಣೆಗೆ ‘ಕೈ-ಕಮಲ’ ನಾಯಕರಿಂದ ಕರೆ
ಬೆಂಗಳೂರು: ನಟ ದರ್ಶನ್‌ಗೆ ರಕ್ಷಣೆ ನೀಡುವಂತೆ ಅವರ ಜತೆಗೆ ನಿಕಟ ಬಾಂಧವ್ಯ ಹೊಂದಿರುವ ಹಲವು ರಾಜಕಾರಣಿಗಳು ಪೊಲೀಸರ ಮೇಲೆ ಒತ್ತಡ ಹಾಕಿದ್ದರು ಎಂಬುದು ಗೊತ್ತಾಗಿದೆ. ‘ರೇಣುಕಸ್ವಾಮಿ ಕೊಲೆಯಾದ ಬಳಿಕ ದರ್ಶನ್, ಹಲವು ರಾಜಕಾರಣಿಗಳಿಗೆ ಕರೆ ಮಾಡಿದ್ದರು. ಈ ಪೈಕಿ ಕಾಂಗ್ರೆಸ್‌ನ ಇಬ್ಬರು ಪ್ರಭಾವಿ ಮುಖಂಡರು ಹಾಗೂ ಬಿಜೆಪಿಯ ಒಬ್ಬರು, ಹಿರಿಯ ಪೊಲೀಸ್ ಅಧಿಕಾರಿಗಳ ಮೊಬೈಲ್‌ಗೆ ವಾಟ್ಸ್‌ಆಯಪ್ ಮೂಲಕ 100ಕ್ಕೂ ಹೆಚ್ಚು ಬಾರಿ ಕರೆ ಮಾಡಿದ್ದಾರೆ. ಆದರೆ, ಹಿರಿಯ ಅಧಿಕಾರಿ ಕರೆ …
Read More »ಎಷ್ಟು ದೊಡ್ಡ ರಾಜ್ಯ ಕಟ್ಟಿದ್ರಿ ಅನ್ನೋದು ಮುಖ್ಯ ಅಲ್ಲ, ಯಾವ ಥರ ರಾಜನಾಗಿ ಬಾಳಿದ್ರಿ ಅನ್ನೋದು ಮುಖ್ಯ: ಕಿಚ್ಚ
ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಕಾಂಟ್ರವರ್ಸಿಗಳೇ ಮೇಳೈಸುತ್ತಿವೆ. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರ ವಿಚ್ಛೇದನ ಸುದ್ದಿಯಿಂದ ಶುರುವಾದ ಈ ವಿವಾದದ ಬಿಸಿಗಾಳಿ, ಅದಾದ ಬಳಿಕ ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಅವರ ಡಿವೋರ್ಸ್ ವಿಚಾರವೂ ಮುನ್ನೆಲೆಗೆ ಬಂದಿತು. ದೊಡ್ಮನೆಯ ದಂಪತಿ ನಡುವೆಯೂ ಭಿನ್ನಾಭಿಪ್ರಾಯಗಳಿವೆಯೇ? ಎಂಬ ಅನುಮಾನವೂ ಅಭಿಮಾನಿ ವಲಯದಲ್ಲೂ ಬಿಸಿ ಬಿಸಿ ಚರ್ಚೆಯಾಯ್ತು. ಇವೆರಡರ ನಡುವೆ ನಟ ದರ್ಶನ್ ಮತ್ತವರ ಗ್ಯಾಂಗ್‌ನಿಂದ ನಡೆ ಕೊಲೆ ಇವೆಲ್ಲವನ್ನೂ ಮೀರಿಸಿತು. ಹೀಗಿರುವಾಗಲೇ ಈ …
Read More »ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ SSLC ಟಾಪರ್ ಅಂಕಿತಾ; ಪತ್ರದಲ್ಲಿ ಏನಿದೆ ನೋಡಿ
ಈ ಬಾರಿ ಹತ್ತನೇ ತರಗತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡ ಅಂಕಿತಾ ಬಸಪ್ಪ ಅವರು ಸಿಯಂಗೆ ಪತ್ರ ಬರೆದಿದ್ದಾರೆ. ಅವರು ಬರೆದ ಪತ್ರದಲ್ಲಿ ಏನೆಲ್ಲಾ ಇದೆ. ಅವರು ಯಾಕಾಗಿ ಈ ಪತ್ರವನ್ನು ಬರೆದಿದ್ದಾರೆ ಎಂಬ ಮಾಹಿತಿಯನ್ನು ನಾವು ನಿಮಗಿಲ್ಲಿ ನೀಡಿದ್ದೇವೆ ಗಮನಿಸಿ. ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಸ್ಸೆಸ್ಸೆಲ್ಸಿ ಟಾಪರ್ ತಮ್ಮ ಕೃತಜ್ಞತೆಯನ್ನು ತಿಳಿಸಿದ್ದಾರೆ. 1st ರ್ಯಾಂಕ್ ಅಂಕಿತಾ ಕೊಣ್ಣೂರ ರಿಂದ ಸಿಎಂಗೆ ಕೃತಜ್ಞತಾ ಪತ್ರ ಬರೆಯಲಾಗಿದೆ. ವಜ್ಜರಮಟ್ಟಿ ಗ್ರಾಮದ …
Read More »ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣ ಪೂರ್ಣ
ಬೆಂಗಳೂರು, ಜೂನ್ 13: ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಹಳದಿ ಲೈನ್ (RV ರಸ್ತೆ – ಬೊಮ್ಮಸಂದ್ರ) ಉದ್ದಕ್ಕೂ ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ (CSB) ವರೆಗಿನ 3.3 ಕಿಮೀ ರಸ್ತೆ ಮೇಲ್ಸೇತುವೆ ಪೂರ್ಣಗೊಂಡಿದೆ ಎಂದು ಘೋಷಿಸಿದೆ. ಹಲವಾರು ವಿಳಂಬಗಳ ನಂತರ ನಗರದ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಅಂತಿಮವಾಗಿ ಸಿದ್ಧವಾಗಿದೆ. ಜೂನ್ 15 ರಿಂದ ರಾಗಿಗುಡ್ಡದಿಂದ ಸಿಎಸ್‌ಬಿವರೆಗಿನ ಮೇಲ್ಸೇತುವೆಯಲ್ಲಿ ಅಧಿಕಾರಿಗಳ ಅಂತಿಮ ಪರಿಶೀಲನೆಯ ನಂತರ ವಾಹನಗಳನ್ನು …
Read More »
Laxmi News 24×7