Breaking News
Home / ರಾಜ್ಯ (page 8)

ರಾಜ್ಯ

ನೇಹಾ ಹತ್ಯೆ ಪ್ರಕರಣ: ಕೊಲೆಗಾರನಿಗೆ ಉಗ್ರ ಶಿಕ್ಷೆ:ಸಿಎಂ

ಮೈಸೂರು: ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೃತ್ಯದ ಬಳಿಕ ಕೊಲೆಗಾರರನ್ನು ತಕ್ಷಣ ಬಂಧಿಸಲಾಗಿದೆ. ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನಿಸಲಾಗುವುದು ಎಂದರು. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸುತ್ತೇವೆ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು …

Read More »

ಲವ್ ಜಿಹಾದ್ ಅನ್ನೋದು ನಿರಂತರವಾಗಿ ನಡೆಯುತ್ತಿದೆ ಎಂದು ಶೆಟ್ಟರ್ ವಾಗ್ದಾಳಿ

ಬೆಳಗಾವಿ: ಲವ್ ಜಿಹಾದ್ ಹೆಸರಲ್ಲಿ ಒಂದು ಗುಂಪಿಗೆ ತರಬೇತಿ ಕೊಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗಂಭೀರ ಆರೋಪ ಮಾಡಿದ್ದಾರೆ. ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ ನಡೆದ ಪ್ರತಿಭಟನೆ ಯಲ್ಲಿ ಮಾತನಾಡಿ, ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಘಟನೆ ರಾಕ್ಷಸಿ ಪ್ರವೃತ್ತಿಯದ್ದು, ಹಾಡಹಗಲೇ ಕಾಲೇಜಿನಲ್ಲಿ ಚಾಕುವಿನಿಂದ ಇರಿದು ವಿದ್ಯಾರ್ಥಿನಿಯನ್ನು ಕೊಂದು ಹಾಕಿದ್ದನ್ನು ಎಲ್ಲರೂ ಖಂಡಿಸಬೇಕು.ಎನ್‌ಐಎ ಮೂಲಕ ತನಿಖೆ ಮಾಡಿ ಮತಾಂತರ ಗುಂಪನ್ನು ಬಯಲಿಗೆಳೆಯುವ ಕೆಲಸ …

Read More »

ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಚುನಾವಣೆ ಸಮೀಪದಲ್ಲೇ ಬಿಜೆಪಿಗೆ (BJP) ಚುನಾವಣಾ ಆಯೋಗ ಶಾಕ್‌ ನೀಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (by vijayendra) ವಿರುದ್ಧ ಎಫ್​ಐಆರ್ (FIR) ದಾಖಲಾಗಿದೆ. ಏ. 17ರಂದು ಹೇಳಿಕೆ ನೀಡಿದ್ದ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಈ ದೂರಿನನ್ವಯ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಬಿವೈ ವಿಜಯೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಧರ್ಮ, ಭಾಷೆ ಜಾತಿ , ಸೌಹಾರ್ದ್ಯತೆ ವಿಚಾರದಲ್ಲಿ …

Read More »

47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಆಗ್ರಹ

ಮಣಿಪುರ: ಮಣಿಪುರದಲ್ಲಿ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನದ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಆಗ್ರಹಿಸಿದೆ. ಈ ಮತಗಟ್ಟೆಗಳಲ್ಲಿ ಮತಗಳನ್ನು ರಿಗ್ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಗುಂಡು ಹಾರಿಸುವುದು, ಬೆದರಿಸುವಿಕೆ, ಕೆಲವು ಮತಗಟ್ಟೆಗಳಲ್ಲಿ ಇವಿಎಂ ಗಳನ್ನು ಹಾಳುಗೆಡವಿರುವುದು ಮಣಿಪುರದಲ್ಲಿ ವರದಿಯಾಗಿದೆ. ಮಣಿಪುರದಲ್ಲಿ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು ಶೇ.68 ರಷ್ಟು ಮತದಾನ ನಡೆದಿದೆ. ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ.ಮೇಘಚಂದ್ರ ಮಾತನಾಡಿ, ಮಣಿಪುರದ …

Read More »

ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ

ಬೆಂಗಳೂರು, ಏಪ್ರಿಲ್. 20: ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧವಾಗುವುದಕ್ಕಿಂತ ಹೆಚ್ಚಾಗಿ ನಮ್ಮ ಚುನಾವಣಾ ಆಯೋಗ ಹಲವು ರೀತಿಯಲ್ಲಿ ಸಿದ್ಧವಾಗುತ್ತದೆ. ಮತ ಚಲಾಯಿಸಲು ನಿರಾಸಕ್ತಿ ತೋರಿಸಲುವ ಮತದಾರರನ್ನು ಜನರನ್ನು ಮತಗಟ್ಟೆಗಳಿಗೆ ಕರೆತರಲು ಸಾಕಷ್ಟು ಕಷ್ಟ ಪಡುತ್ತಿದೆ. ಇದೇ ನಿಟ್ಟಿನಲ್ಲಿ ಚುನಾವಣಾ ಆಯೋಗ “ನಮ್ಮ ನಡೆ ಮತಗಟ್ಟೆ ಕಡೆಗೆ” ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮತದಾನವು ಎರಡು ಹಂತಗಳಲ್ಲಿ ನಡೆಯಲಿದೆ ದಿನಾಂಕ 26.04.2024 ಹಾಗೂ 07.05.2024 ಗಳಂದು ನಡೆಯಲಿದೆ. ಈ …

Read More »

ವೈದ್ಯರ ಸಹಾಯ ಪಡೆಯಲು ನಿರಾಕರಣೆ: ಕೇಜ್ರಿವಾಲ್‌ ಸಾವಿಗೆ ಪಿತೂರಿ; ಎಎಪಿ ಆರೋಪ

ನವದೆಹಲಿ: ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಇನ್ಸುಲಿನ್‌ ಪಡೆಯಲು ಮತ್ತು ವೈದ್ಯರ ಸಹಾಯ ಪಡೆಯಲು ನಿರಾಕರಿಸುವ ಮೂಲಕ ಅವರನ್ನು ನಿಧಾನವಾಗಿ ಸಾವಿನೆಡೆಗೆ ತಳ್ಳಲಾಗುತ್ತಿದೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಎಎಪಿ ವಕ್ತಾರ ಸೌರಭ್‌ ಭಾರದ್ವಾಜ್‌, ‘ಕೇಜ್ರಿವಾಲ್‌ ಅವರು ಡಯಾಬಿಟಿಸ್‌ (ಮಧುಮೇಹ) ಹೊಂದಿದ್ದಾರೆ. ಆದ್ದರಿಂದ ಇನ್ಸುಲಿನ್‌ ಪಡೆಯಲು ಮತ್ತು ಅವರ ಕುಟುಂಬ ವೈದ್ಯರನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಂಪರ್ಕಿಸಲು ಅನುಮತಿ …

Read More »

ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ

ಧಾರವಾಡ: ನೇಹಾ ಹಿರೇಮಠ ಹತ್ಯೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ನೇಹಾ ಕೊಲೆ ಮಾಡಿದ ಫಯಾಜ್ ತಾಯಿ ಮಮ್ತಾಜ್ ಹೇಳಿದ್ದಾರೆ. ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನನ್ನ‌ಮಗ ಫಯಾಜ್ ಮಾಡಿದ ಕೃತ್ಯಕ್ಕಾಗಿ ನಾನು ರಾಜ್ಯದ ಕ್ಷಮೆಯಾಚನೆ ಮಾಡುತ್ತೇನೆ.

Read More »

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಹೊಸದಿಲ್ಲಿ: ಮತದಾನ ಮಾಡಲು ಅರ್ಹರಾಗಿದ್ದೂ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ ದಾನ ಮಾಡದೇ ಹೋದರೆ ಅಂಥವರ ಬ್ಯಾಂಕ್‌ ಖಾತೆಯಿಂದ 350 ರೂ.ಗಳನ್ನು ಕಡಿತಗೊಳಿಸಲಾಗು ವುದು! ಹೀಗೆಂದು ಹಬ್ಬಿರುವ ಸುದ್ದಿ ಕೇವಲ ವದಂತಿ ಅಷ್ಟೇ ಎಂದು ಚುನಾವಣೆ ಆಯೋಗ ಸ್ಪಷ್ಟ ಪಡಿಸಿದೆ. ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದಿ ದ್ದರೆ ಅಂಥವರ ಖಾತೆಯಿಂದ 350 ರೂ. ಕಡಿತಗೊ ಳಿಸಲು ನಿರ್ಧರಿಸಲಾಗಿದೆ. ಅಂಥವರ ಮೊಬೈಲ್‌ ರಿಚಾರ್ಜ್‌ ಹಣ ಕಡಿತಗೊಳಿಸಲಾಗುತ್ತದೆ ಎಂಬ ಬಗ್ಗೆ ಪತ್ರಿಕೆಯ ವರದಿ ವೈರಲ್‌ ಆಗಿತ್ತು. ಇದರಿಂದ ಹಲವರಿಗೆ …

Read More »

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಆಯೋಜಿಸಿರುವ ಬೃಹತ್‌ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಈ ಎರಡೂ ಕಾರ್ಯಕ್ರಮದಲ್ಲಿ ಲಕ್ಷಕ್ಕೂ ಮೇಲ್ಪಟ್ಟು ಜನ ಸೇರುವ ನಿರೀಕ್ಷೆ ಇದೆ. ಚಿಕ್ಕಬಳ್ಳಾಪುರದ ಚೊಕ್ಕಹಳ್ಳಿಯಲ್ಲಿ ನಡೆಯುವ ಸಮಾವೇಶಕ್ಕೆ ಮಧ್ಯಾಹ್ನ 2 ಗಂಟೆಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಅಲ್ಲಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸುವ ಬೃಹತ್‌ ಸಾರ್ವಜನಿಕ ಸಭೆಗೆ ಸಂಜೆ 4 ಗಂಟೆಗೆ ಆಗಮಿಸಲಿದ್ದಾರೆ. ಇಲ್ಲಿ …

Read More »

ಅಧಿಕಾರಕ್ಕೆ ಬಂದ 2-3 ತಿಂಗಳಲ್ಲಿ ಕಾಡುಗೊಲ್ಲರಿಗೆ ನ್ಯಾಯ ದೊರಕಿಸಿ ಕೊಡುತ್ತೇವೆ-ಕುಮಾರಸ್ವಾಮಿ

ಚಿತ್ರರ್ದು, : ರಾಜ್ಯದಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು, ಕುಟುಂಬದ ಮುಖ್ಯಸ್ಥರಿಂದ 4-5 ಸಾವಿರ ಹಣ ವಸೂಲಿ ಮಾಡುವ ಕಾಂಗ್ರೆಸ್ ಪಿಕ್ ಪಾಕೆಟ್ ಸರ್ಕಾರವಿದೆ. ಅವರು ಇಲ್ಲಿಯವರೆಗೂ ಬಿಜೆಪಿ ಬೈಯುವುದನ್ನು ಬಿಟ್ಟು ಬೇರೆ ಏನು ಅಭಿವೃದ್ದಿ ಮಾಡಿಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಆರೋಪಿಸಿದರು. ನಗರದ ನೆಹರೂ ಮೈದಾನದಲ್ಲಿ ಮಾತನಾಡಿದ ಅವರು, ಕೇವಲ 2 ಸಾವಿರ ಕೊಟ್ಟಿರುವ ಕಾಂಗ್ರೆಸ್, ಬಡವರ ಬೆವರು ಸುರಿಸಿದ ತೆರಿಗೆಯ ಸುಮಾರು ೩೫೦ …

Read More »