Breaking News
Home / ರಾಜ್ಯ (page 890)

ರಾಜ್ಯ

ಗ್ರಾಮದ ಯುವಕರೆಲ್ಲ ಸೇರಿ ಮಾನಸಿಕ ಅಸ್ವಸ್ಥನೊಬ್ಬನನ್ನು ಮರಕ್ಕೆ ಕಟ್ಟಿಅಮಾನವೀಯವಾಗಿ ಥಳಿತ

ಬೆಳಗಾವಿ (ಆ.25): ಗ್ರಾಮದ ಯುವಕರೆಲ್ಲ ಸೇರಿ ಮಾನಸಿಕ ಅಸ್ವಸ್ಥನೊಬ್ಬನನ್ನು ಮರಕ್ಕೆ ಕಟ್ಟಿಅಮಾನವೀಯವಾಗಿ ಥಳಿಸಿ, ಮೆರವಣಿಗೆ ಮಾಡಿದ ಪರಿಣಾಮ ಗಂಭೀರ ಗಾಯಗೊಂಡ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಘಟನೆ ಬಸವನಕುಡಚಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದ ಗಾಂಧಿ ಗಲ್ಲಿಯ ವಿಶಾಲ್‌ ಕಲ್ಲಪ್ಪ ಪಟಾಯಿ (28) ಮೃತ ವ್ಯಕ್ತಿ. ವಿಶಾಲ ಪಟಾಯಿ ಮಾನಸಿಕ ಅಸ್ವಸ್ಥನಾಗಿದ್ದ. ಈ ವಿಚಾರ ಗ್ರಾಮಸ್ಥರಿಗೂ ಗೊತ್ತಿತ್ತು. ಈತ ಆಗಾಗ ಗ್ರಾಮದವರ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. …

Read More »

ಆಗಸ್ಟ್ 7ರಂದು ನಡೆದಿದ್ದ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದೆ

ಬೆಳಗಾವಿ : ಆಗಸ್ಟ್ 7ರಂದು ನಡೆದಿದ್ದ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದ್ದು, ಬೆಳಗಾವಿಯಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 7ರಂದು ರಾಜ್ಯಾದ್ಯಂತ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ಪಟ್ಟಣದಲ್ಲಿ ಅಭ್ಯರ್ಥಿಯೊಬ್ಬ ಸ್ಮಾರ್ಟ್​ವಾಚ್ ಬಳಸಿ ಪರೀಕ್ಷೆ ಬರೆದು ಸಿಕ್ಕಿಹಾಕಿಕೊಂಡಿದ್ದರು.   ಪ್ರಕರಣ ಸಂಬಂಧ ಈಗಾಗಲೇ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಎಸ್ಪಿ ಡಾ ಸಂಜೀವ್ ಪಾಟೀಲ್ ನೇತೃತ್ವದ ತಂಡದಿಂದ ಮತ್ತೆ …

Read More »

ಪ್ಲಾಸ್ಟಿಕ್‌ ಕವರ್​​ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿದ ತಾಯಿ

ಬೆಳಗಾವಿ: ಪ್ಲಾಸ್ಟಿಕ್‌ ಕವರ್​​ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿರುವ ಅಮಾನವೀಯ ಘಟನೆ ಖಾನಾಪೂರ ತಾಲೂಕಿನ ನೇರಸಾ ಗೌಳಿವಾಡ ಗ್ರಾಮದಲ್ಲಿ ನಡೆದಿದೆ. ಸದ್ಯ ಮಗು ಆರೋಗ್ಯವಾಗಿದ್ದು, ಹೆಚ್ಚಿನ‌ ಚಿಕಿತ್ಸೆಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.   ಗ್ರಾಮದಲ್ಲಿ ಅಪರಿಚಿತ ತಾಯಿಯೊಬ್ಬರು ನಿನ್ನೆ ರಾತ್ರಿ ಪ್ಲಾಸ್ಟಿಕ್ ಕವರ್​ನಲ್ಲಿ ಗಂಡು ಶಿಶುವನ್ನಿಟ್ಟು ಮರಕ್ಕೆ ನೇತು ಹಾಕಿ ಹೋಗಿದ್ದಾರೆ. ಇತ್ತ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ಶಿಶುವನ್ನು ಖಾನಾಪೂರ ಸಾರ್ವಜನಿಕ ಆಸ್ಪತ್ರೆಗೆ …

Read More »

ಸಾರ್ವಜನಿಕ ಗಣೇಶೋತ್ಸವಕ್ಕೂ ಅನುಮತಿ ಇರುವ ಕಾರಣ ಗೌರಿ- ಗಣೇಶ ಮೂರ್ತಿಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ.

ಬೆಂಗಳೂರು: ಕಳೆದ ಎರಡು ವರ್ಷಗಳಲ್ಲಿ ಕೊರೊನಾ ಪರಿಣಾಮದಿಂದಾಗಿ ಕುಸಿತಗೊಂಡಿದ್ದ ಗಣೇಶ ಮೂರ್ತಿಗಳ ಮಾರಾಟ ಈ ವರ್ಷ ಚೇತರಿಸಿಕೊಂಡಿದೆ. ಸಾರ್ವಜನಿಕ ಗಣೇಶೋತ್ಸವಕ್ಕೂ ಅನುಮತಿ ಇರುವ ಕಾರಣ ಗೌರಿ- ಗಣೇಶ ಮೂರ್ತಿಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕಿಂತ ಈ ಸಲ ವಹಿವಾಟು ದುಪ್ಪಟ್ಟುಗೊಂಡಿದೆ. ಗಣೇಶ ಮೂರ್ತಿಗಳ ತಯಾರಿಕೆಯಲ್ಲಿ ತೊಡಗಿದ್ದವರ ಕುಟುಂಬಗಳಲ್ಲೂ ಸಂತಸ ಮನೆ ಮಾಡಿದೆ. ಕಳೆದ 2 ವರ್ಷಗಳಲ್ಲಿ ಕೇವಲ 15ರಿಂದ 20 ಲಕ್ಷ ರೂ. ಆದಾಯ ಬರುತ್ತಿತ್ತು. ಆದರೆ, ಈ …

Read More »

ಹೊಸದಾಗಿ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್

ಬೆಂಗಳೂರು : ಬಿಪಿಎಲ್ ಕಾರ್ಡ್ ಗೆ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಆಹಾರ ಸಚಿವ ಉಮೇಶ್ ಕತ್ತಿ ಸಿಹಿಸುದ್ದಿ ನೀಡಿದದು, ಶೀಘ್ರವೇ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದ್ದಾರೆ.   ವಿಧಾನಸೌಧದಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಚಿವ ಉಮೇಶ್ ಕತ್ತಿ, ಬಿಪಿಎಲ್ ಕಾರ್ಡ್ ಗೆ 1.5 ಲಕ್ಷ ಹೊಸ ಅರ್ಜಿ ಸ್ವೀಕರಿಸಲಾಗಿದೆ. ಹೊಸ ಕಾರ್ಡುದಾರರಿಗೆ ಪಡಿತರ ವಿತರಿಸಿದಲ್ಲಿ ಸರ್ಕಾರಕ್ಕೆ ಆಗುವ ಹೆಚ್ಚುವರಿ ಹೊರೆ ಬಗ್ಗೆ ಚರ್ಚೆಯಾಗಿದೆ. ಹೊಸ …

Read More »

ಕೆಪಿಎಟಿಸಿಎಲ್‌ ಪರೀಕ್ಷೆ ಅಕ್ರಮ: ಮತ್ತೆ ಮೂವರ ಬಂಧನ

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ದರ್ಜೆ ಸಹಾಯಕ ಹುದ್ದೆ ಲಿಖೀತ ಪರೀಕ್ಷೆ ವೇಳೆ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿ ಸಲಾಗಿದ್ದು, ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಹುಕ್ಕೇರಿಯ ಸರ್ಕಾರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕನಾಗಿರುವ ಕಮತನೂರ ಗ್ರಾಮದ ಆದೇಶ ಈರಪ್ಪ ನಾಗನೂರಿ (26), ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದ ಮಡಿವಾಳಪ್ಪ ಬಾಳಪ್ಪ ತೋರನಗಟ್ಟಿ (36) ಹಾಗೂ ಹೊಸಕೋಟಿ ಗ್ರಾಮದ ಶಂಕರ ಕಲ್ಲಪ್ಪ ಉಣಕಲ್‌ (30) ಎನ್ನುವವರನ್ನು ಬಂ ಧಿಸಲಾಗಿದೆ.   ಬಂಧಿತರಿಂದ ಒಂದು …

Read More »

ನಾಲಿಗೆ ಕಟ್ ಮಾಡುತ್ತೇನೆ ಹುಷಾರ್ ಎಂಬುದಾಗಿ ಈಶ್ವರಪ್ಪಗೆ  ಬೆದರಿಕೆ ಪತ್ರ

ಶಿವಮೊಗ್ಗ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ   ಇಂದು ಬೆದರಿಕೆ ಪತ್ರವೊಂದುಬಂದಿದೆ. ಆ ಪತ್ರದಲ್ಲಿ ನಾಲಿಗೆ ಕಟ್ ಮಾಡುತ್ತೇನೆ ಹುಷಾರ್ ಎಂಬುದಾಗಿ ಎಚ್ಚರಿಕೆ ನೀಡಲಾಗಿದೆ. ಈ ಸಂಬಂಧ ಅವರು ಪೊಲೀಸರಿಗೆ ಸೂಕ್ತ ತನಿಖೆ ನಡೆಸಿ, ಬೆದರಿಕೆ ಹಾಕಿದ ಆರೋಪಿಯನ್ನು ಬಂಧಿಸುವಂತೆ ದೂರು ನೀಡಿದ್ದಾರೆ.   ಶಾಸಕ ಕೆ.ಎಸ್ ಈಶ್ವರಪ್ಪ ಅವರ ಶಿವಮೊಗ್ಗ ನಗರದಲ್ಲಿನ ಮಲ್ಲೇಶ್ವರದ ನಿವಾಸಕ್ಕೆ ಅನಾಮದೇಯ ಬೆದರಿಕೆ ಪತ್ರವೊಂದು ಬಂದಿದೆ. ಆ ಪತ್ರದಲ್ಲಿ ಸ್ವತಂತ್ರ್ಯ ಸೇನಾನಿಯಾದ ನಮ್ಮ ಸಮಾಜದ …

Read More »

ಕರ್ನಾಟಕದ ಅಪರಾಧ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ

ನವದೆಹಲಿ: ಕರ್ನಾಟಕದ ಅಪರಾಧ ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಅಪರಾಧ ಪ್ರಕರಣಗಳಲ್ಲಿ ಆರೋಪಿ ತಪ್ಪಿಸಿಕೊಂಡಿದ್ದರೂ, ವಿದ್ಯುನ್ಮಾನ ಸಾಧನಗಳನ್ನು ಬಳಸಿ, ಸಾಕ್ಷಿಗಳ ಹೇಳಿಕೆಗಳನ್ನು ಆಡಿಯೋ ಮತ್ತು ವಿಡಿಯೋ ಮಾರ್ಗವಾಗಿಯೂ ಪಡೆದುಕೊಳ್ಳಬಹುದು.   ಈ ವೇಳೆ ಆರೋಪಿ ಪರ ವಕೀಲರು ಹಾಜರಿದ್ದರೆ ಸಾಕು. ಹಾಗೆಯೇ ಆರೋಪಿಯ ಗೈರಿನಲ್ಲೇ ವಿಚಾರಣೆ ನಡೆಸಿ, ಶಿಕ್ಷೆಯನ್ನೂ ಪ್ರಕಟಿಸಬಹುದು. ಈ ಕುರಿತ ಕರ್ನಾಟಕದ ತಿದ್ದುಪಡಿ ಮಸೂದೆ “ದ ಕೋಡ್‌ ಆಫ್ ಕ್ರಿಮಿನಲ್‌ ಪ್ರೊಸೀಜರ್‌-2021’ಯನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿತ್ತು. …

Read More »

ಪತ್ರಕರ್ತರ ಮಾಸಾಶನ ಹೆಚ್ಚಿಸಲಾಗುವುದು  ಎಂದು ಬಸವರಾಜ ಬೊಮ್ಮಾಯಿ

ಬೆಂಗಳೂರು : ಪತ್ರಕರ್ತರ ಮಾಸಾಶನ ಹೆಚ್ಚಿಸಲಾಗುವುದು  ಎಂದು  ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಅವರು ಬುಧವಾರ ಪ್ರೆಸ್ ಕ್ಲಬ್ ಬೆಂಗಳೂರು, ಇಲ್ಲಿ ಆಯೋಜಿಸಲಾಗಿದ್ದ ಬ್ಯುಸಿನೆಸ್ ಐಕಾನ್  ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪತ್ರಕರ್ತರ ಹಲವಾರು ಬೇಡಿಕೆಗಳಿವೆ.  ಪತ್ರಕರರಿಗೆ  ಸಾಮಾಜಿಕವಾಗಿ, ಆರ್ಥಿಕವಾಗಿ ಭದ್ರತೆಯ ಅವಶ್ಯಕತೆ ಇದೆ. ನಿವೃತ್ತ  ಪತ್ರಕರ್ತರಿಗೆ ಮಾಸಾಶನ ನೀಡುವ   ಸಮಿತಿ ರಚಿಸಲು ನಾಳೆಯೇ ಆದೇಶ ಹೊರಡಿಸಲಾಗುವದು. ಅದಕ್ಕಿರುವ  ನಿಯಮಗಳನ್ನು ಸರಳೀಕರಣಗೊಳಿಸಲಾಗುವುದು ಎಂದು ತಿಳಿಸಿದರು. ವಿಧಾನಸಭೆಯ ಹತ್ತಿರವೇ ಪ್ರೆಸ್ ಕ್ಲಬ್ ಇದೆ. …

Read More »

ಗುತ್ತಿಗೆದಾರ ಸಂತೋಷ್​ಗೂ ನನಗೂ ಯಾವುದೇ ಸಂಬಂಧವಿಲ್ಲ ನನಗೆ ಕ್ಲೀನ್​ಚಿಟ್ ಸಿಗುತ್ತೆ: ಈಶ್ವರಪ್ಪ

ಶಿವಮೊಗ್ಗ: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನಾನು ತಪ್ಪಿತಸ್ಥನಲ್ಲ. ಕೋರ್ಟ್​ನಲ್ಲೂ ನನಗೆ ಕ್ಲೀನ್​ಚಿಟ್ ಸಿಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಸಂತೋಷ್ ಸಹೋದರ ಪ್ರಶಾಂತ್ ಪಾಟೀಲ್ ಅರ್ಜಿ ಸಲ್ಲಿಕೆ ವಿಚಾರವಾಗಿ ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತನಿಖೆಯಲ್ಲಿ ನನಗೆ ಕ್ಲೀನ್​ಚಿಟ್ ಸಿಕ್ಕಿದೆ. ಪ್ರಕರಣದಿಂದ ಮುಕ್ತವಾಗಿ ಹೊರಬಂದಿದ್ದೇನೆ. ಅವರಿಗೆ ಕೋರ್ಟ್‌ಗೆ ಹೋಗೋ ಅಧಿಕಾರ ಇದೆ, ಹೋಗಿದ್ದಾರೆ ಎಂದರು.

Read More »