Breaking News
Home / ರಾಜ್ಯ (page 899)

ರಾಜ್ಯ

ವಿದ್ಯಾರ್ಥಿನಿಗೆ ಜ್ಯೂಸ್ ಎಂದು ಬಿಯರ್ ಕುಡಿಸಿ ಲೈಂಗಿಕ ಶೋಷಣೆ, ಕಾಲೇಜು ಅಧ್ಯಕ್ಷನ ಕೃತ್ಯಕ್ಕೆ ಪ್ರಿನ್ಸಿಪಾಲ್​ ಸಾಥ್!

ವಿದ್ಯಾಕಾಶಿ, ಸಾಹಿತಿಗಳ ತವರೂರು ಅಂತಲೇ ಖ್ಯಾತಿ ಪಡೆದಿರೋದು ಧಾರವಾಡ. ಉತ್ತರ ಕರ್ನಾಟಕದಲ್ಲಿಯೇ ಅತೀ ಹೆಚ್ಚು ಶಿಕ್ಷಣ ಸಂಸ್ಥೆ ಮತ್ತು ಕೋಚಿಂಗ್ ಕೇಂದ್ರಗಳನ್ನು ಹೊಂದಿರೋ ನಗರ ಅಂದ್ರೆ ಅದು ಧಾರವಾಡ. ಉತ್ತಮ ಶಿಕ್ಷಣ ಹಿನ್ನೆಲೆ ರಾಜ್ಯದ ಮೂಲೆಮೂಲೆಯಿಂದಲೂ ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಾರೆ. ಆದ್ರೆ ಈಗ ಶಿಕ್ಷಣಕ್ಕೆ ಹೆಸರುವಾಸಿಯಾಗಿರೋ ಈ ವಿದ್ಯಾನಗರಿಯ ಕಾಲೇಜೊಂದರಲ್ಲಿ ಹೇಯ ಕೃತ್ಯವೊಂದು ನಡೆದಿದೆ. ಧಾರವಾಡ ಶಿಕ್ಷಣ ಕಾಶಿ ಖ್ಯಾತಿಗೆ ಮಸಿ ಬಳಿಯೋವಂತಹ ಘಟನೆ ನಡೆದಿದೆ. ವಿದ್ಯಾರ್ಥಿನಿಗೆ ಜ್ಯೂಸ್ ಎಂದು …

Read More »

ಅಕಾಲಿಕ ಮಳೆಯಾಗಲಿದೆ. ರೋಗ ರುಜಿನಗಳು ಕಾಣಿಸಿಕೊಳ್ಳಲಿವೆ : ಕೋಡಿಮಠದ ಶ್ರೀ

ನಾಡಿನಲ್ಲಿ ಹಿಂಗಾರು ಮಳೆ ಕಡಿಮೆಯಾಗಿ ಅಕಾಲಿಕ ಮಳೆಯಾಗಲಿದೆ. ರೋಗ ರುಜಿನಗಳು ಕಾಣಿಸಿಕೊಳ್ಳಲಿವೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಸೊರಬ ತಾಲೂಕಿನ ಜಡೆ ಸಂಸ್ಥಾನ ಮಠದ ಆವರಣದಲ್ಲಿ ಜೀಣೋರ್ದ್ಧಾರವಾಗುತ್ತಿರುವ ಶ್ರೀ ಕುಮಾರ ಕಂಪಿನ ಸಿದ್ಧವೃಷಭೇಂದ್ರ ಕತೃ ಗದ್ದುಗೆಯ ಶಿಲಾಮಯ ಕಟ್ಟಡದ ಕಾಮಗಾರಿಯನ್ನು ಬುಧವಾರ ವೀಕ್ಷಿಸಿ, ಕತೃ ಗದ್ದುಗೆಯ ದರ್ಶನ ಪಡೆದ ನಂತರ ಮಾತನಾಡಿದರು.   ಶುಭಕೃತ ನಾಮಸಂವತ್ಸರ ದೇಶದಲ್ಲಿ ಅಶುಭವನ್ನುಂಟು ಮಾಡಲಿದೆ. ಮಠದಲ್ಲಿ ಪಂಚಾಗ್ನಿ …

Read More »

ಶ್ರೀ ಕೃಷ್ಣ ಜನ್ಮಾಷ್ಟಮಿ ಶುಭಾಶಯಗಳು, ಜನ್ಮಾ ಶ್ಟ ಮಿ ಬಗ್ಗೆ ಒಂದು ಮಾಹಿತಿ

ಶ್ರೀಕೃಷ್ಣನ ವಿವಿಧ ಗುಣವೈಶಿಷ್ಟ್ಯಗಳು ಭಗವಾನ್ ಕೃಷ್ಣನು ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆಯಾಗಿದ್ದಾನೆ. ಶ್ರೀಕೃಷ್ಣನು ವಿಷ್ಣುವಿನ ಎಂಟನೇ ಅವತಾರ. ಅವನು ಹದಿನಾರು ಕಲೆಗಳನ್ನು ಒಳಗೊಂಡಿರುವುದರಿಂದ ಅವನನ್ನು ಪೂರ್ಣಾವತಾರವೆಂದೂ ಕರೆಯಲಾಗುತ್ತದೆ. ೧. ಸಂಬಂಧಿಸಿದ ನದಿ : ಶ್ರೀಕೃಷ್ಣನೊಂದಿಗೆ ಯಮುನಾ ನದಿಯ ಅವಿನಾಭಾವ ಸಂಬಂಧವಿದೆ. ಯಮುನೆಯಲ್ಲಿ ಹೆಚ್ಚು ಕೃಷ್ಣತತ್ವವಿದೆ. ಅವಳ ಬಣ್ಣವು ಶ್ರೀಕೃಷ್ಣನಂತೆಯೇ ನುಸುಗಪ್ಪಾಗಿದೆ. ಯಮುನೆಯನ್ನು ‘ಕಾಲಿಂದಿ’ ಎಂದೂ ಕರೆಯುತ್ತಾರೆ. ೨. ಕುಂಡಲಿನಿಯಲ್ಲಿ ಸಂಬಂಧಿಸಿದ ಚಕ್ರಗಳು : ಕುಂಡಲಿನಿಯ ಅನಾಹತ ಚಕ್ರವು ಶ್ರೀಕೃಷ್ಣನೊಂದಿಗೆ ಸಂಬಂಧ ಹೊಂದಿದೆ. ೩. …

Read More »

ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ 142 ಕೋಟಿ ರೂ : ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದ ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಪಣ ತೊಟ್ಟಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅತಿ ಹೆಚ್ಚು ಅನುದಾನ ಬಿಡುಗಡೆಗೊಳಿಸಲಾಗಿದೆ. ಹೆಚ್ಚುವರಿಯಾಗಿ 142.59 ಕೋಟಿ ರೂ.ಗಳ ಅನುದಾನವನ್ನು ಒದಗಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ರಾಜ್ಯದಲ್ಲಿರುವ ವಿವಿಧ ಸಮುದಾಯಗಳ 178 ಮಠಗಳಿಗೆ 108.24 ಕೋಟಿ ರೂಪಾಯಿಗಳು, 59 ದೇವಸ್ಥಾನಗಳಿಗೆ 21.35 ಕೋಟಿ ರೂಪಾಯಿಗಳು ಮತ್ತು 26 ವಿವಿಧ ಸಂಘ-ಸಂಸ್ಥೆಗಳು …

Read More »

15,000 ಶಾಲಾ ಶಿಕ್ಷಕರ ನೇಮಕ ಪರೀಕ್ಷೆಯ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 2022 ರ ಮಾರ್ಚ್‌ /ಏಪ್ರಿಲ್‌ ತಿಂಗಳಲ್ಲಿ ಅರ್ಜಿ ಸ್ವೀಕಾರ ಮಾಡಿತ್ತು. ಮೇ 21, 22 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು. ಈ ನೇಮಕ ಪ್ರಕ್ರಿಯೆಯ ಗಣಕೀಕೃತ ಮೌಲ್ಯಮಾಪನ ಕಾರ್ಯ ಮುಗಿಸಿದ್ದು ತಾತ್ಕಾಲಿಕ ಆಯ್ಕೆಪಟ್ಟಿ ನೀಡಲಾಗಿದೆ. ಪ್ರಸ್ತುತ 1:2 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ …

Read More »

ಬೆಳಗಾವಿ ನೂತನ ಆರ್‌ಸಿ ಕೆ.ಪಿ.ಮೋಹನ್‌ರಾಜ್

ಬೆಳಗಾವಿಯ ನೂತನ ಪ್ರಾದೇಶಿಕ ಆಯುಕ್ತರಾಗಿ ಕೆ.ಪಿ.ಮೋಹನ್‍ರಾಜ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಅಮ್ಲಾನ್ ಆದಿತ್ಯಾ ಬಿಸ್ವಾಸ್ ಅವರ ಸ್ಥಾನಕ್ಕೆ ನೂತನ ಪ್ರಾದೇಶಿಕ ಆಯುಕ್ತರನ್ನಾಗಿ ಹಿರಿಯ ಐಎಎಸ್ ಅಧಿಕಾರಿ ಕೆ.ಪಿ.ಮೋಹನ್‍ರಾಜ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಹೀಗಾಗಿ ಗುರುವಾರ ಕೆ.ಪಿ.ಮೋಹನ್‍ರಾಜ್ ಅವರು ಅಧಿಕಾರ ಸ್ವೀಕಾರ ಮಾಡಿದರು. ಈ ವೇಳೆ ಉತ್ತರ ಶಾಸಕ ಅನಿಲ್ ಬೆನಕೆ ನೂತನ ಪ್ರಾದೇಶಿಕ ಆಯುಕ್ತರಿಗೆ ಹೂಗುಚ್ಛ ನೀಡಿ ಶುಭಾಶಯ ಕೋರಿದರು.

Read More »

ಮಗನ ಶಿವಗಣಾರಾಧನೆ ವೇಳೆ ಹೃದಯಘಾತದಿಂದ ತಾಯಿ ಸಾವು: 9 ದಿನ ಅಂತರದಲ್ಲಿ ಎರಡು ಸಾವು ಕಂಡ ಮನೆ

ಕುಷ್ಟಗಿ: ಮಗನ ಶಿವಗಣಾರಾಧನೆ ಸಂದರ್ಭದಲ್ಲಿ ತಾಯಿಗೆ ಹೃದಯಘಾತವಾಗಿದ್ದು, 9 ದಿನಗಳ ಅಂತರದಲ್ಲಿ ತಾಯಿ ಮಗ ಸಾವಿನಲ್ಲಿ ಒಂದಾದ ಮನಕಲಕುವ ಘಟನೆ ನಡೆದಿದೆ. ಕುಷ್ಟಗಿ ಪಟ್ಟಣದ 14ನೇ ವಾರ್ಡ್ ನ ಅಂಬೇಡ್ಕರ್ ನಗರದಲ್ಲಿ ರವಿಕುಮಾರ ದುರಗಪ್ಪ ಕೆಂಗಾರಿ ಲೋ ಬಿಪಿಯಿಂದ ಕಳೆದ ಆ.9ರಂದು ಅಕಾಲಿಕವಾಗಿ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಮನೆಯಲ್ಲಿ ಬುಧವಾರ ಶಿವಗಣಾರಾಧನೆ ಕಾರ್ಯಕ್ರಮ ಕ್ಕಾಗಿ ಬಂಧು ಬಾಂಧವರನ್ನು ಅಹ್ವಾನಿಸಿದ್ದರು. ದಿವಂಗತ ರವಿಕುಮಾರ ಕೆಂಗಾರಿ ಶಿವಗಣಾರಾಧನೆಯ ಪೂಜೆಯ ಸಿದ್ದತೆಯ ಸಂಧರ್ಭದಲ್ಲಿ ಮಗನ …

Read More »

ಗ್ರಾಮ ಒನ್ ಗೆ ಇನ್ನಷ್ಟು ಸೇವೆ ಸೇರ್ಪಡೆ: C.M. ಬೊಮ್ಮಾಯಿ

ಬೆಂಗಳೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸಲು ಪ್ರಾರಂಭಿಸಲಾಗಿರುವ ಗ್ರಾಮ ಒನ್ ಕೇಂದ್ರಗಳನ್ನು ಬಲಪಡಿಸಲು ಇನ್ನಷ್ಟು ಸೇವೆಗಳನ್ನು ಸೇರ್ಪಡೆಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಇ-ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಗ್ರಾಮ ಒನ್ ಕೇಂದ್ರಗಳ ಮೂಲಕ ಒದಗಿಸಬಹುದಾದ ಸೇವೆಗಳನ್ನು ಗುರುತಿಸಿ, ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಜಿಲ್ಲೆಗಳಿಗೆ ವಿಶಿಷ್ಟವಾದ ಸೇವೆಗಳನ್ನು ಆಯಾ ಜಿಲ್ಲೆಗಳಿಗೆ …

Read More »

ಏಳು ಕೆಎಸ್‌ಪಿಎಸ್‌ ಅಧಿಕಾರಿಗಳಿಗೆ ಐಪಿಎಸ್‌ಗೆ ಬಡ್ತಿ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್‌ ಸೇವೆಯ (ಕೆಎಸ್‌ಪಿಎಸ್‌) ಏಳು ಅಧಿಕಾರಿಗಳಿಗೆ ಭಾರತೀಯ ಪೊಲೀಸ್‌ ಸೇವೆಗೆ (ಐಪಿಎಸ್‌) ಬಡ್ತಿ ನೀಡಲಾಗಿದೆ. ಸಚಿನ್ ಘೋರ್ಪಡೆ, ಅಮಟೆ ವಿಕ್ರಂ, ಸಜಿತ್‌ ವಿ. ಜೆ, ರಾಮ್‌ ಲಕ್ಷ್ಮಣಸಾ ಅರಸಿದ್ದಿ, ಬಾಬಾಸಾಬ್‌ ನೇಮಗೌಡ, ಗೋಪಾಲ್‌ ಬಿ. ಬ್ಯಾಕೋಡ, ಮಹಾನಿಂಗ ನಂದಗಾನ್ವಿ ಬಡ್ತಿ ಪಡೆದವರು. 2021ನೇ ಸಾಲಿನ ಆಯ್ಕೆ ಪಟ್ಟಿಯಲ್ಲಿ ಬಡ್ತಿ ನೀಡಲು ಜುಲೈ 25ರಂದು ಆಯ್ಕೆ ಸಮಿತಿ ಸಭೆ ನಡೆದಿತ್ತು. ಇದೀಗ ಕೇಂದ್ರ ಲೋಕಸೇವಾ ಆಯೋಗ ಈ …

Read More »

ಕಾಂಗ್ರೆಸ್‌ಗೆ ಆರೋಗ್ಯವೇ ಆಘಾತಕಾರಿ: ಆಜಾದ್ ರಾಜೀನಾಮೆ ಬಗ್ಗೆ ಬಿಜೆಪಿ ವ್ಯಂಗ್ಯ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಕೆಲವೇ ಗಂಟೆಗಳಲ್ಲಿ ರಾಜೀನಾಮೆ ನೀಡಿರುವುದರಿಂದ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಒಳಜಗಳ ಮತ್ತೆ ಬೀದಿಗೆ ಬಿದ್ದಿದೆ ಎಂದು ಬಿಜೆಪಿ ಟೀಕಿಸಿದೆ.   ಗುಲಾಂ ನಬಿ ಆಜಾದ್ ರಾಜೀನಾಮೆ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಹಿರಿಯ ನಾಯಕ ಗುಲಾಂ‌ ನಬಿ ಆಜಾದ್ ಅವರನ್ನು ಕಾಶ್ಮೀರ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿದ ಕೆಲವೇ ಗಂಟೆಗಳಲ್ಲಿ ರಾಜೀನಾಮೆ ನೀಡಿದ್ದಾರೆ. …

Read More »