Breaking News
Home / ರಾಜ್ಯ (page 9)

ರಾಜ್ಯ

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿ ಮಾತನಾಡಿದರು. ಮಾವ, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪರ ಮತ ಯಾಚಿಸಿದರು. ನಮ್ಮ ತಂದೆ ದಿ.ಸುರೇಶ ಅಂಗಡಿಯವರು ಜಿಲ್ಲೆಯ ಎಲ್ಲ ಗ್ರಾಮಗಳ ಜನರ ಜತೆ ಒಳ್ಳೆಯ ಒಡನಾಟ ಇಟ್ಟುಕೊಂಡಿದ್ದರು ಹಾಗೂ ಅವರ ಅಭಿವೃದ್ದಿಗಳನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಶ್ರದ್ಧಾ ಶೆಟ್ಟರ್ ತಿಳಿಸಿದರು. ತಾಲೂಕು …

Read More »

ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಪುತ್ರಿ ಕೊಲೆ ಕೇಸ್: ನೇಹಾಳ ಜೊತೆ ಸಲುಗೆಯಲ್ಲಿರುವ ಫಯಾಜ್ ಪೋಟೋ ವೈರಲ್

ಹುಬ್ಬಳ್ಳಿ: ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯಲ್ಲಿ ನಿನ್ನೆ ಕಾರ್ಪೊರೇಟರ್ ಮಗಳು ನೇಹಾ ಹಿರೇಮಠ ಹತ್ಯೆ ಪ್ರಕರಣ ಸುದ್ದಿ ಮಾಡುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ನೇಹಾ ಮತ್ತು ಫಯಾಜ್ ಇಬ್ಬರ ರೀಲ್ಸ್ ವೈರಲ್ ಆಗುತ್ತಿದೆ. ಹೌದು ನಿನ್ನೆ ಬಿವಿಪಿ ಕಾಲೇಜಿನ ಆವರಣದಲ್ಲಿ ಆರೋಪಿ ಫಯಾಜ್ ನೇಹಾಳನ್ನು 10 ಬಾರಿ ಇರಿದು ಬೀಗರ ವಾಗಿ ಕೊಲೆ ಮಾಡಿದ್ದಾನೆ. ಇದೀಗ ನೇಹಾ ಮತ್ತು ಫಯಾಜ್ ಒಟ್ಟಿಗೆ ಸಲುಗೆಯಿಂದ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ …

Read More »

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

ಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ ಎಂಬಾತನನ್ನು ಹುಬ್ಬ‍‍ಳ್ಳಿ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದು, ಆರೋಪಿ ಫಯಾಝ್‌ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ ಈ ನಡುವೆ ನೇಹಾ ಕೊಲೆ ಆರೋಪಿ ಫಯಾಝ್ ಬೆಳಗಾವಿ ಜಿಲ್ಲೆಯ ಸವದತ್ತಿಯ ಹತ್ತಿರದ ಮುನವಳ್ಳಿ ನಿವಾಸಿಯಾಗಿದ್ದು, ಅಲ್ಲಿ ಹಿಂದೂ, ಮುಸ್ಲಿಮರು ಜಂಟಿಯಾಗಿ ಹತ್ಯೆ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಸಂಕೇಶ್ವರ – ಸವದತ್ತಿ ಹೆದ್ದಾರಿಯಲ್ಲಿ …

Read More »

ನೇಹಾ ಕೊಲೆ: ಮುನವಳ್ಳಿಯಲ್ಲಿ ತೀವ್ರ ಪ್ರತಿಭಟನೆ; ರಾಜ್ಯ ಹೆದ್ದಾರಿ ಸಂಚಾರ ಸ್ಥಗಿತ

ನೇಹಾ ಕೊಲೆ: ಮುನವಳ್ಳಿಯಲ್ಲಿ ತೀವ್ರ ಪ್ರತಿಭಟನೆ; ರಾಜ್ಯ ಹೆದ್ದಾರಿ ಸಂಚಾರ ಸ್ಥಗಿತ ಮುನವಳ್ಳಿ ; ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಗುರುವಾರ ನಡೆದ ವಿದ್ಯಾರ್ಥಿನಿ ಕೊಲೆ ಖಂಡಿಸಿ, ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುನವಳ್ಳಿಯಲ್ಲಿ ವಿವಿಧ ಸಮುದಾಯಗಳ ನಾಗರಿಕರು, ಬಿಜೆಪಿ, ಕಾಂಗ್ರೆಸ್‌ ಮುಖಂಡರು ಪ್ರತ್ಯೇಕವಾಗಿ ತೀವ್ರ ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ವ್ಯಾಪಾರ ವಹಿವಾಟು, ರಾಜ್ಯ ಹೆದ್ದಾರಿ ಸಂಚಾರ ಬಂದ್‌ ಮಾಡಿದರು. ಎಂಸಿಎ ಓದುತ್ತಿದ್ದ ನೇಹಾ ಹಿರೇಮಠ (25) ಅವರನ್ನು ಸಹಪಾಠಿ ಫಯಾಜ್‌ (27) ಕಾಲೇಜು …

Read More »

ಹುಬ್ಬಳ್ಳಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣದ ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮ : ಸಿಎಂ

ಬೆಂಗಳೂರು : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಎಕ್ಸ್‌ ನಲ್ಲಿ ಬರೆದುಕೊಂಡಿರುವ ಅವರು, “ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ” ಎಂದು ತಿಳಿಸಿದರು.   “ಘಟನೆ ಸಂಬಂಧ ಯಾರೊಬ್ಬರೂ …

Read More »

ನೇಹಾ ಹಿರೇಮಠ ಹತ್ಯೆ ಪ್ರಕರಣ; ಎಬಿವಿಪಿ, ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಭುಗಿಲೆದ್ದ ಪ್ರತಿಭಟನೆ; ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಎಬಿವಿಪಿ ಕಾರ್ಯಕರ್ತರು, ವಿವಿಧ ಕಾಲೇಜು ವಿದ್ಯಾರ್ಥಿಗಳು ನೇಹಾ ಹತ್ಯೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಡೆಸಿದ್ದಾರೆ.   ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಎಬಿವಿಪಿ ಕಾರ್ಯಕರ್ತರು ಹಾಗೂ ಹುಬ್ಬಳ್ಳಿಯ ಬೇರೆ ಬೇರೆ ಕಾಲೇಜು ವಿದ್ಯಾರ್ಥಿಗಳು ಜಮಾವಣೆಗೊಂಡಿದ್ದು, ಕೊಲೆ ಆರೋಪಿ ಫಯಾಜ್ ಗೆ ಕಠಿಣ ಶಿಕ್ಷೆ ನೀಡಿ, ನೇಹಾ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. …

Read More »

ಚುನಾವಣೆ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಕೆ: ವಿಚಾರಣೆ ಏ.20ಕ್ಕೆ ಮುಂದೂಡಿಕೆ

ಶಿವಮೊಗ್ಗ: ಲೋಕಸಭೆ ಚುನಾವಣೆ ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರು ಚುನಾವಣೆ ಪ್ರಚಾರದ ವೇಳೆ ಹಾಗೂ ಸಭೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಕೆ ಮಾಡುವುದನ್ನು ನಿರ್ಬಂಧಿಸುವಂತೆ ಕೋರಿ ಬಿಜೆಪಿ ಜಿಲ್ಲಾ ಘಟಕವು ಹೂಡಿರುವ ದಾವೆಯ ವಿಚಾರಣೆಯನ್ನು ಇಲ್ಲಿನ ಸಿವಿಲ್ ನ್ಯಾಯಾಲಯ ಏಪ್ರಿಲ್ 20ಕ್ಕೆ ಮುಂದೂಡಿದೆ. ದಾವೆ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರ ಪರ ವಕೀಲರು ನ್ಯಾಯಾಲಯಕ್ಕೆ ಗುರುವಾರ ಸಂಜೆ ಪ್ರತಿ ವಾದ ಪತ್ರ ಸಲ್ಲಿಸಿದರು. ದಾವೆಯನ್ನು ವಜಾ ಮಾಡುವಂತೆ …

Read More »

ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

ಧಾರವಾಡ : ಇದೇ ಮೊದಲ ಬಾರಿಗೆ ಕಾವಿ ಧರಿಸಿ ಧಾರವಾಡ ಲೋಕಸಭಾ ಚುನಾವಣಾ ಕಣಕ್ಕಿಳಿದು ರಂಗೇರುವಂತೆ ಮಾಡಿರುವ ಶಿರಹಟ್ಟಿಯ ಫಕ್ಕೀರ ದಿಂಗಾಲೇಶ್ವರರು ಕೋಟ್ಯಧೀಶ್ವರರು..! ಅಷ್ಟೇಯಲ್ಲ, ಕೆಲ ಪ್ರಕರಣಗಳಲ್ಲಿ ಆರೋಪಿ ಕೂಡ. ಹೌದು…ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ತೊಡೆ ತಟ್ಟಿ ಪಕ್ಷೇತರರಾಗಿ ಸ್ಪರ್ಧೆಗೆ ಇಳಿದಿರುವ ದಿಂಗಾಲೇಶ್ವರರು ಕೋಟಿ ಕೋಟಿ ಮೌಲ್ಯದ ಮಠದ ಟ್ರಸ್ಟ್ ಆಸ್ತಿಯನ್ನು ತಮ್ಮ ಹೆಸರಿನಲ್ಲಿ ಹೊಂದಿ ಕೋಟ್ಯಧಿಪತಿಯಾಗಿದ್ದಾರೆ.   ನಾಮಪತ್ರ ಸಲ್ಲಿಸುವ ವೇಳೆ ಸಲ್ಲಿಸಿರುವ ಆಸ್ತಿ ವಿವರದ ಅಫಿಡೆವಿಟ್‌ನಲ್ಲಿ …

Read More »

ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿಯವರಿಗೆ ಚುನಾವಣೆ ವೇಳೆಯಲ್ಲಿ ಬಿಟ್ಟರೆ ಬೇರೆ ಸಮಯದಲ್ಲಿ ನಮ್ಮ ರಾಜ್ಯ ನೆನಪಾಗುವುದೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುರುವಾರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಬಾಗೇಪಲ್ಲಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಮೋದಿ ಪ್ರವಾಹ ಬಂದಾಗಲೂ ಈ ಕಡೆ ತಲೆ ಹಾಕಲಿಲ್ಲ, ಬರಗಾಲ ಬಂದಾಗಲೂ ಬರಲಿಲ್ಲ ಎಂದು ಕಿಡಿಕಾರಿದರು. ಚುನಾವಣೆ ವೇಳೆ ಭ್ರಷ್ಟರನ್ನು ಗೆಲ್ಲಿಸಲು ರಾಜ್ಯಕ್ಕೆ ಮೇಲಿಂದ ಬರುತ್ತಾರೆ ಅಂದರೆ ಅದು ರಾಜ್ಯದ …

Read More »

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

ಹೊಸದಿಲ್ಲಿ: ವಿಶ್ವದ ಖ್ಯಾತ ಆಹಾರೋತ್ಪನ್ನ ಕಂಪೆನಿ ನೆಸ್ಲೆ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಭಾರತದಲ್ಲಿ ವಿತರಿಸುವ ಶಿಶು ಆಹಾರವಾದ ಪ್ರತೀ ಸಿರಿಲ್ಯಾಕ್‌ ಪೊಟ್ಟಣದಲ್ಲಿ ಸಕ್ಕರೆ ಪ್ರಮಾಣವನ್ನು 3 ಗ್ರಾಮ್‌ನಷ್ಟು ಹೆಚ್ಚಿಸಿದೆ ಎಂದು “ಪಬ್ಲಿಕ್‌ ಐ’ ಸಂಸ್ಥೆಯ ವರ ದಿ ಆರೋಪಿಸಿದೆ. ಈ ಅಧ್ಯಯನ ವರದಿಯು ಕೇಂದ್ರ ಆರೋಗ್ಯ ಸಚಿವಾಲಯದ ಕೈಸೇರಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಲಾಗುವುದು ಎಂದು ಸಚಿವಾಲಯ ಹೇಳಿದೆ ಎಂದು ಮೂಲಗಳು ತಿಳಿಸಿವೆ. ಆರೋಪವೇನು? ಭಾರತದಲ್ಲಿ ಮಾರಾಟವಾಗುವ 15 ವಿಧದ …

Read More »