Breaking News
Home / ರಾಜ್ಯ (page 948)

ರಾಜ್ಯ

ಕಾಂಗ್ರೆಸ್​ ನಿದ್ದೆ ಮಾಡುವ ಸಿಂಹವನ್ನು ನಂಬಿದೆ, ನಮ್ಮದು ಘರ್ಜನಾ ರೂಪದ ಸಿಂಹ: ಸಿಎಂ ಬೊಮ್ಮಾಯಿ

ಉಡುಪಿ: ಕಾಂಗ್ರೆಸ್​ನವರು ನಿದ್ದೆ ಮಾಡುವ ಸಿಂಹವನ್ನು ನಂಬಿಕೊಂಡು ಬಂದವರು, ನಮ್ಮದು ಘರ್ಜನಾ ರೂಪದಲ್ಲಿ ಇರಬೇಕಾಗಿರೊ ಸಿಂಹ. ಕಾಂಗ್ರೆಸ್ ನೋಡುವ ದೃಷ್ಟಿಯೇ ಬೇರೆ, ನಾವು ನೋಡುವ ದೃಷ್ಟಿಯೇ ಬೇರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   ಹೊಸ ಸಂಸತ್​ ಭವನದ ಮೇಲೆ ಸ್ಥಾಪಿಸಿರುವ ರಾಷ್ಟ್ರ ಲಾಂಛನವನ್ನು ಸರ್ಕಾರ ಮಾರ್ಪಾಡು ಮಾಡಿದೆ. ಆ ಮೂಲಕ ರಾಷ್ಟ್ರ ಲಾಂಛನದ ಘನತೆಗೆ ಸರ್ಕಾರ ಅವಮಾನ ಮಾಡಿದೆ ಎಂದು ವಿರೋಧ ಪಕ್ಷಗಳು ಟೀಕಿಸಿವೆ. ಮೂಲ ರಾಷ್ಟ್ರ ಲಾಂಛನದಲ್ಲಿರುವಂತೆ …

Read More »

ರಾಜಕೀಯ ನಾಯಕನ‌ ರಂಗಿನಾಟದ ರಹಸ್ಯ ಬಟಾಬಯಲು

ರಾಜಕೀಯ ನಾಯಕರ ರಂಗಿನಾಟದ ವಿಡಿಯೋಗಳು ಕಾಲಕಾಲಕ್ಕೆ ಹೊರಬರುತ್ತಿರುತ್ತವೆ. ಈಗ ಮಹಾರಾಷ್ಟ್ರದ ರಾಜಕಾರಣಿಯೊಬ್ಬರ ವಿಡಿಯೋ ವೈರಲ್ ಆಗಿದೆ.ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ‌ ನಾಯಕರಿಗೆ ಸಂಬಂಧಿಸಿದ್ದಾಗಿದ್ದು, ಮಹಿಳೆಯು ಆತನನ್ನು “ಎಕ್ಸ್‌ಪೋಸ್” ಮಾಡುತ್ತಾರೆ.   ಐಷಾರಾಮಿ ಕೊಠಡಿಯ‌ ಬೆಡ್ ಮೇಲೆ ರಾಜಕಾರಣಿ ಕುಳಿತಿದ್ದು, ಆ ಮಹಿಳೆಯು ಮೊಬೈಲ್ ಕ್ಯಾಮರಾದ ಆನ್ ಮಾಡಿ ಆತನ‌ ಬಂಡವಾಳ ಬಿಚ್ಚಿಡುತ್ತಾಳೆ. ತನ್ನ ಹೆಸರನ್ನು ಹೇಳಿಕೊಂಡು, ಇವನು ನನಗೆ ಮೋಸ ಮಾಡಿದ ವ್ಯಕ್ತಿ. ಅವನು ಅಕ್ರಮ ಸಂಬಂಧ ಹೊಂದಿದ್ದಾನೆ …

Read More »

ಡಿಕೆಶಿ ಜೈಲಿಗೆ ಹೋಗಲು ನೀವೇ ಕಾರಣರಲ್ಲವೇ?: ಸಿದ್ದು ಏಟಿಗೆ ಜೋಶಿ ತಿರುಗೇಟು

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ನಡುವೆ ಟ್ವೀಟ್ ವಾರ್ ಜೋರಾಗಿ ನಡೆದಿದೆ. ಏಟಿಗೆ ಪ್ರತಿಏಟು ಎಂಬಂತೆ ಇಬ್ಬರೂ ಹಿರಿಯ ಮುಖಂಡರ ನಡುವೆ ನಡೆಯುತ್ತಿರುವ ವಾದ-ಪ್ರತಿವಾದಗಳು ಈಗ ತೀಕ್ಷ್ಣ ಸ್ವರೂಪ ಪಡೆದುಕೊಂಡಿವೆ. ಸಿದ್ದರಾಮೋತ್ಸವದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಅವನತಿಯಾಗಲಿದೆ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆಯನ್ನು ಟ್ವಿಟರ್​​ನಲ್ಲಿ ಟೀಕಿಸಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ಖಾತೆ ಸಚಿವ ಪ್ರಹ್ಲಾದ್‌ ಜೋಶಿ ಟ್ವೀಟ್‌ …

Read More »

ಮೊಬೈಲ್​​ ಕೊಡಿಸದಿದ್ದಕ್ಕೆ ಅಪ್ಪನ ಜನ್ಮ ದಿನವೇ ಮಗ ಆತ್ಮಹತ್ಯೆ

ಬೆಳಗಾವಿ: ತಂದೆಯ ಜನ್ಮದಿನದಂದೇ 17 ವರ್ಷದ ಮಗನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪೂರದ ಹಲಕರ್ಣಿ ಗ್ರಾಮದಲ್ಲಿ ನಡೆದಿದೆ‌. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಹಲಕರ್ಣಿ ಗ್ರಾಮದ ಪ್ರಥಮೇಶ ರಾಜು ಕೋಳಿ (17) ಮೃತ ದುರ್ದೈವಿ. ಇವರ ತಂದೆ ರಾಜು ಕೋಳಿ ಮೊಬೈಲ್ ಕೊಡಿಸಲಿಲ್ಲವೆಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ‌. ತಂದೆಗೆ ಮೊಬೈಲ್ ಕೊಡಿಸುವಂತೆ ಖಾನಾಪೂರ ಪಟ್ಟಣದ ಮರಾಠಾ ಮಂಡಳ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಪ್ರಥಮೇಶ ಎರಡು ದಿನಗಳಿಂದ ಹಠ …

Read More »

ಹಿಡಕಲ್‌ ಡ್ಯಾಂಗೆ ಒಂದೇ ದಿನ 8 ಅಡಿ ನೀರು

ಬೆಳಗಾವಿ/ಚಿಕ್ಕೋಡಿ: ಜಿಲ್ಲೆಯಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದೆ. ಅದರೆ ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿಗಳಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಆದರೆ ಜಿಲ್ಲೆಯಲ್ಲಿ ಇನ್ನೂ ಆತಂಕ ಪಡುವಷ್ಟು ಪ್ರವಾಹದ ಸ್ಥಿತಿ ಎದುರಾಗಿಲ್ಲ.   ಮಹಾರಾಷ್ಟ್ರದ ಅಂಬೋಲಿ ಮತ್ತು ಚಂದಗಡ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಇದರಿಂದ ಹಿಡಕಲ್‌ ಜಲಾಶಯದ ನೀರಿನ ಮಟ್ಟ ಒಂದೇ ದಿನದಲ್ಲಿ ಎಂಟು ಅಡಿಗಳಷ್ಟು ಏರಿಕೆಯಾಗಿದೆ. ಘಟಪ್ರಭಾ ನದಿಗೆ ಈಗ …

Read More »

ಖಾನಾಪುರ: ಕಣಕುಂಬಿ ಅರಣ್ಯದಲ್ಲಿ 13 ಸೆಂ.ಮೀ. ಮಳೆ

ಖಾನಾಪುರ: ತಾಲ್ಲೂಕಿನ ಕಣಕುಂಬಿ ಅರಣ್ಯದಲ್ಲಿ ಸೋಮವಾರ ಬೆಳಿಗ್ಗೆಯಿಂದ ಮಂಗಳವಾರ ಬೆಳಿಗ್ಗೆಯವರೆಗೆ 13 ಸೆಂ.ಮೀ. ಮಳೆಯಾಗಿದೆ. ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಮಲಪ್ರಭಾ, ಪಾಂಡರಿ ಮತ್ತು ಮಹದಾಯಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಿದೆ. ಹಬ್ಬನಹಟ್ಟಿಯ ಆಂಜನೇಯ ದೇವಾಲಯ ಮಲಪ್ರಭಾ ನದಿಯಲ್ಲಿ ಬಹುತೇಕ ಮುಳುಗಡೆಯಾಗಿದೆ. ಸತತ ಮಳೆಯ ಕಾರಣ ಕಾನನದಂಚಿನ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.

Read More »

ಚಿಕ್ಕೋಡಿ: ನರಸಿಂಹವಾಡಿ ದತ್ತ ಮಂದಿರ ಜಲಾವೃತ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ನರಸಿಂಹವಾಡಿಯ ದತ್ತಾತ್ರೇಯ ದೇವಸ್ಥಾನ ಮಂಗಳವಾರ ನಸುಕಿನಲ್ಲಿ ಜಲಾವೃತವಾಗಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಕೊಲ್ಹಾಪುರ ಜಿಲ್ಲೆಯ ಶಿರೋಳ ತಾಲ್ಲೂಕಿನಲ್ಲಿ ಕೃಷ್ಣಾ ಮತ್ತು ಪಂಚಗಂಗಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ.   ಈ ಎರಡೂ ನದಿಗಳ ಸಂಗಮ ಸ್ಥಾನವಾದ ನರಸಿಂಹವಾಡಿಯ ದತ್ತ ದೇಗುಲವನ್ನು ನೀರು ಸುತ್ತುವರಿದಿದ್ದು, ಪ್ರವೇಶ ಬಂದಾಗಿದೆ.

Read More »

ಬೆಳಗಾವಿ: ಯಲ್ಲಿ ಧಾರಾಕಾರ ಮಳೆ , ಈವರೆಗೆ 317 ಮನೆಗಳು ಕುಸಿದಿವೆ.

ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಡೀ ಧಾರಾಕಾರ ಮಳೆ ಸುರಿದಿದ್ದು, ಈವರೆಗೆ 317 ಮನೆಗಳು ಕುಸಿದಿವೆ. ಚಿಕ್ಕೋಡಿ ತಾಲ್ಲೂಕಿನಲ್ಲಿ 82, ಚನ್ನಮ್ಮನ ಕಿತ್ತೂರು ತಾಲ್ಲೂಕಿನಲ್ಲಿ 39, ರಾಮದುರ್ಗ ತಾಲ್ಲೂಕಿನಲ್ಲಿ 43, ಸವದತ್ತಿ 35 ಹಾಗೂ ಬೆಳಗಾವಿ ತಾಲ್ಲೂಕಿನಲ್ಲಿ 19 ಮನೆಗಳಿಗೆ ಭಾಗಶಃ ಹಾನಿ ಸಂಭವಿಸಿದೆ.   ಉಳಿದಂತೆ, ಮೂಡಲಗಿ ತಾಲ್ಲೂಕು 22, ಕಾಗವಾಡ 24, ಬೈಲಹೊಂಗಲ 19, ಹುಕ್ಕೇರಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ 14 ಮನೆಗಳ ಗೋಡೆಗಳು ಕುಸಿದಿವೆ. ನಿರಂತರ ಸುರಿಯುತ್ತಿರುವ ಮಳೆಯಿಂದಯಾಗಿ …

Read More »

ಗೋಕಾಕದಲ್ಲಿಂದು ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

  *ಗೋಕಾಕ*: ಪ್ರಸಕ್ತ ಸನ್ನಿವೇಶದಲ್ಲಿ ಪ್ರವಾಹ ಭೀತಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸಂಜೆ ಜರುಗಿದ ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, …

Read More »

ಮಹಿಳಾ ಚಾಲಕರ ತರಬೇತಿ ಕಾರ್ಯಕ್ರಮಕ್ಕೆ ಜಿ.ಪಂ.ಸಿಇಓ ದರ್ಶನ್ ಚಾಲನೆ

ಗ್ರಾಮೀಣ ಪ್ರದೇಶದ ಘನ ಮತ್ತು ದ್ರವ್ಯ ತ್ಯಾಜ್ಯ ಘಟಕದ ನಿರ್ವಹಣೆಯ ವಾಹನಗಳಿಗೆ ಮಹಿಳಾ ಚಾಲಕರಿಗೆ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತಿ ಸಿಇಓ ದರ್ಶನ್ ಎಚ್.ವ್ಹಿ ಅವರು ಚಾಲನೆ ನೀಡಿದರು. ಜಿಲ್ಲಾ ಪಂಚಾಯತಿ, ಸಂಜೀವಿನಿ ಡೇ-ಎನ್‍ಆರ್‍ಎಲ್‍ಎಂ, ಸ್ವಚ್ಛ ಭಾರತ ಮಿಶನ್ ಯೋಜನೆ ಹಾಗೂ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತಿಗಳ ಘನ ಮತ್ತು ದ್ರವ್ಯ ತ್ಯಾಜ್ಯ ನಿರ್ವಹಣೆಗಾಗಿ ಸ್ವ ಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ …

Read More »