Breaking News
Home / ರಾಜ್ಯ (page 953)

ರಾಜ್ಯ

ಈ ‘ಮೇಕೆ’ ಬೆಲೆ ಬರೋಬ್ಬರಿ 77 ಲಕ್ಷ ರೂಪಾಯಿ.. ವಿಶೇಷತೆ ಏನು ಗೊತ್ತಾ!?

ರಾಯ್ಪುರ್​(ಛತ್ತೀಸ್​​ಗಢ): ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್​​ ಆಚರಣೆಗೆ ದಿನಗಣನೇ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಮೇಕೆಗಳ ವ್ಯಾಪಾರ ಬಲು ಜೋರಾಗಿದ್ದು, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವಿಶೇಷತೆ ಹೊಂದಿರುವ ಮೇಕೆಗಳನ್ನ ಖರೀದಿ ಮಾಡಲಾಗುತ್ತಿದೆ. ಇದರ ಮಧ್ಯೆ ಕೆಲವೊಂದು ಮಾರುಕಟ್ಟೆಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೇಕೆಗಳು ಜನರ ಗಮನ ಸೆಳೆಯುತ್ತಿವೆ. ಮಾರುಕಟ್ಟೆಗಳಲ್ಲಿ ಮೇಕೆಗಳಿಗೆ ಇನ್ನಿಲ್ಲದ ಬೇಡಿಕೆಸದ್ಯ ಛತ್ತೀಸ್​​ಗಢದ ರಾಯ್ಪುರ್​​ ಬಕ್ರಿ ಮಂಡಿ ಮಾರುಕಟ್ಟೆಯಲ್ಲಿ ಬರೋಬ್ಬರಿ 70 ಲಕ್ಷ ರೂಪಾಯಿ ಮೇಕೆ ಎಲ್ಲರ ಗಮನ …

Read More »

ಶೀಘ್ರವೇ ಜೆಡಿಎಸ್-ಕಾಂಗ್ರೆಸ್ ನ ಪ್ರಮುಖ ನಾಯಕರು ಬಿಜೆಪಿಗೆ :ಲಕ್ಷ್ಮಣ ಸವದಿ

ಹಾಸನ : ಶೀಘ್ರವೇ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಪ್ರಮುಖ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಸವದಿ ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ತಿಂಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಅನೇಕರು ಬಿಜೆಪಿಗೆ ಸೇರಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಯಾವಾಗ ಮಾಡಬೇಕೆಂಬುದು ರಾಜ್ಯ ಮತ್ತು ಕೇಂದ್ರದ ನಾಯಕರು ನಿರ್ಧರಿಸಲಿದ್ದಾರೆ ಎಂದು ತಿಳಿಸಿದ್ದಾರೆ.   ಸಚಿವ ಉಮೇಶ್ ಕತ್ತಿ ಅವರ ಪ್ರತ್ಯೇಕ …

Read More »

P.S.I. ನೇಮಕಾತಿ ಪ್ರಕರಣ ಅಕ್ರಮ: ಪೌಲ್ ಡೈರಿಯಲ್ಲಿ ಪ್ರಭಾವಿಗಳ ಹೆಸರು

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿಸಲಾಗಿರುವ ಎಡಿಜಿಪಿ ಅಮ್ರಿತ್ ಪೌಲ್‌ ಅವರಿಗೆ ಸೇರಿದ್ದು ಎನ್ನಲಾದ ಡೈರಿಯನ್ನು ಸಿಐಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.   ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಎಡಿಜಿಪಿ ಅಮ್ರಿತ್ ಪೌಲ್, ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ಅಂಶಗಳನ್ನು ಡೈರಿಯಲ್ಲಿ ದಾಖಲಿಸುತ್ತಿದ್ದರೆಂಬ ಮಾಹಿತಿ ಗೊತ್ತಾಗಿದೆ. ಕೆಲವುಅಧಿಕಾರಸ್ಥರು, ರಾಜಕೀಯ ಪಕ್ಷಗಳ ಮುಖಂಡರು, ಐಪಿಎಸ್ ಅಧಿಕಾರಿಗಳು, ಡಿವೈಎಸ್ಪಿಗಳು, ಇನ್‌ಸ್ಪೆಕ್ಟರ್‌ಗಳು ಹಾಗೂ ವಿವಿಧ ಕ್ಷೇತ್ರಗಳ ಪ್ರಭಾವಿಗಳ ಹೆಸರು ಡೈರಿಯಲ್ಲಿರುವುದಾಗಿ ಸಿಐಡಿ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ. ‘ಪೌಲ್ …

Read More »

ಬೆಳಗಾವಿ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಸೇರಿದಂತೆ ಹಲವರಿಗೆ ಸೋಲಿನ ಭಯ ಕಾಂಗ್ರೆಸ್ ಸಮೀಕ್ಷೆಯಲ್ಲಿ ಬಯಲು..

 ರಾಜ್ಯ ವಿಧಾನಸಭಾ ಚುನಾವಣೆ  ಸಮೀಪಿಸುತ್ತಿದ್ದಂತೇ, ಹಲವು ಹಾಲಿ ಕಾಂಗ್ರೆಸ್ ಶಾಸಕರಿಗೆ  ಸೋಲಿನ ಭೀತಿ ಎದುರಾಗಿದೆ. ಹತ್ತಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಸೋಲಿನ ಭೀತಿ ಕಾಡುತ್ತಿದೆ ಎನ್ನಲಾಗಿದೆ. ಇದೆಲ್ಲವೂ ಇತ್ತೀಚಿಗೆ ಕಾಂಗ್ರೆಸ್ ನಡೆಸಿದಂತ ಆಂತರಿಕ ಸಮೀಕ್ಷೆಯಲ್ಲಿ ಬಯಲಾಗಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಕೆಲ ಶಾಸಕರು ಕೂಡ ಚುನಾವಣೆಯ ( Election ) ವೇಳೆಗೆ ಬಂಡಾಯವೇಳಲಿದ್ದು, ಕೈ ಪಕ್ಷಕ್ಕೆ ಬಂಡಾಯದ ಭೀತಿ ಕೂಡ ಎದುರಾಗಲಿದೆ ಎಂದು ಹೇಳಲಾಗುತ್ತಿದೆ. ಹೌದು.. ಕೆಲವರಿಗೆ ಕಾರ್ಯಕರ್ತರ ಜೊತೆಗೆ …

Read More »

ಗ್ರಾಮ ಪಂಚಾಯತ್‌ಗಳಲ್ಲಿ ಪಂಚತಂತ್ರ 2.0 ಕಡ್ಡಾಯ

ಬೆಂಗಳೂರು: ಪಂಚಾಯತ್‌ಗಳ ಆಡಳಿತ, ಯೋಜನೆ ಮತ್ತು ಸೇವೆಗಳನ್ನು ಆನ್‌ಲೈನ್‌ ಮೂಲಕ ಒದಗಿಸುವ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿ ಯಾಗಿಸಲು ಪಂಚತಂತ್ರ 2.0 ತಂತ್ರಾಂಶ ಹಾಗೂ ಬಾಪೂಜಿ ಸೇವಾ ಕೇಂದ್ರ ತಂತ್ರಾಂಶ 2.0 ಅಭಿವೃದ್ಧಿಪಡಿಸಲಾಗಿದ್ದು, ರಾಜ್ಯದ ಎಲ್ಲ ಪಂಚಾಯತ್‌ಗಳಲ್ಲಿ ಇದನ್ನು ಕಡ್ಡಾಯ ಗೊಳಿಸಲಾಗಿದೆ.   ಗ್ರಾಮ ಪಂಚಾಯತ್‌ಗಳ ದೈನಂದಿನ ಕಾರ್ಯಗಳ ಮೇಲ್ವಿಚಾರಣೆ, ಸೇವೆಗಳ ವಿಲೇ ವಾರಿಗೆ ಬೇಕಾದ ಯೋಜನೆಗಳ ಅನುಷ್ಠಾನ ಮತ್ತು ತೀರ್ಮಾನಗಳನ್ನು ಕೈಗೊಳ್ಳಲು 2011ರಿಂದ ಬಳಸಲಾಗುತ್ತಿದ್ದ ಪಂಚತಂತ್ರ 1.0 ತಂತ್ರಾಂಶವನ್ನು ಉನ್ನತೀಕರಿಸಿ ಪಂಚತಂತ್ರ …

Read More »

Bakrid 2022: ‘ಬಕ್ರೀದ್‌’ನ ಸಂದೇಶ

ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನಗಳ ನೆನಪಿನಲ್ಲಿ ಆಚರಿಸುವ ಹಬ್ಬವೇ ‘ಈದುಲ್‌ ಅದ್‌ಹಾ’. ಭಾರತದಲ್ಲಿ ಈ ಹಬ್ಬ ‘ಬಕ್ರೀದ್‌’ ಎಂದೇ ಪ್ರಸಿದ್ಧಿ ಪಡೆದುಕೊಂಡಿದೆ. ದೇಶದಾದ್ಯಂತ ಮುಸ್ಲಿಮರು ಇಂದು (ಜುಲೈ 10) ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.   ‘ರಂಜಾನ್’ ತಿಂಗಳ ಉಪವಾಸದ ಬಳಿಕ ‘ಈದುಲ್‌ ಫಿತ್ರ್’ ಹಬ್ಬ ಆಚರಿಸುವುದಾದರೆ, ಇಸ್ಲಾಮಿಕ್‌ ಕ್ಯಾಲೆಂಡರಿನ ‘ದುಲ್‌ ಹಜ್ಜ್‌’ ತಿಂಗಳ 10ರಂದು ಬಕ್ರೀದ್‌ ಆಚರಣೆ ನಡೆಯುತ್ತದೆ. ನಾಲ್ಕು ಸಾವಿರ ವರ್ಷಗಳಿಗೂ ಹಿಂದೆ ಹುಟ್ಟಿದ್ದ ಪ್ರವಾದಿ ಇಬ್ರಾಹಿಂ ಅವರ …

Read More »

ಬಕ್ರೀದ್‌ಗೆ ಪ್ರಾಣಿ ಬಲಿ ನಿಷೇಧಿಸಿ ಆದೇಶ

ಹೊಸಪೇಟೆ (ವಿಜಯನಗರ): ‘ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರಾಣಿ ಬಲಿ (ಕುರ್ಬಾನಿ) ನಿಷೇಧಿಸಲಾಗಿದೆ’ ಎಂದು ನಗರಸಭೆ ಪೌರಾಯುಕ್ತ ಮನೋಹರ್‌ ತಿಳಿಸಿದ್ದಾರೆ. ‘ಜು. 10ರಂದು ಬಕ್ರೀದ್‌ ಹಬ್ಬ ಆಚರಿಸಲಾಗುತ್ತಿದ್ದು, ಹಬ್ಬದ ದಿನದಿಂದ ಮೂರು ದಿನಗಳ ವರೆಗೆ ಪ್ರಾಣಿ ಬಲಿ ನೀಡಲಾಗುತ್ತದೆ. ಜಿಲ್ಲಾಡಳಿತ ಹಾಗೂ ಸ್ಥಳೀಯ ಆಡಳಿತಗಳು ನಿಗದಿಪಡಿಸಿದ ಸ್ಥಳಗಳಲ್ಲಿ ಅದನ್ನು ಮಾಡತಕ್ಕದ್ದು. ರಸ್ತೆ, ಶಾಲಾ-ಕಾಲೇಜು, ಆಸ್ಪತ್ರೆ ಆವರಣ, ಉದ್ಯಾನವನ ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಮಾಡುವಂತಿಲ್ಲ’ ಎಂದು ಶನಿವಾರ ತಿಳಿಸಿದ್ದಾರೆ. ‘ಎಲ್ಲರೂ …

Read More »

ಜ್ಯೋತಿಷಿಗಳಿಗೆ ಇದು ಸಂಕಷ್ಟಕಾಲ. ಐದು ದಿನಗಳ ಹಿಂದೆ ಚಂದ್ರಶೇಖರ ಗುರೂಜಿ ಹತ್ಯೆ. ಇವತ್ತು ಪ್ರಮೋದ್ ಗುರೂಜಿ ದರೋಡೆ..

ಜ್ಯೋತಿಷಿಗಳಿಗೆ ಇದು ಸಂಕಷ್ಟಕಾಲ. ಐದು ದಿನಗಳ ಹಿಂದೆ ಚಂದ್ರಶೇಖರ ಗುರೂಜಿ ಹತ್ಯೆ. ಇವತ್ತು ಪ್ರಮೋದ್ ಗುರೂಜಿ ದರೋಡೆ.. ಬೆಂಗಳೂರಿನಲ್ಲಿ ಹಾಡಹಗಲೇ ಜ್ಯೋತಿಷಿ ಮನೆ ರಾಬರಿ. ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದು, ಹಲ್ಲೆ ನಡೆಸಿ ದರೋಡೆ.ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದ ಜ್ಯೋತಿಷಿ ಪ್ರಮೋದ್ ಮನೆಯಲ್ಲಿ ದರೋಡೆ. 400 ಗ್ರಾಂ ಚಿನ್ನಾಭರಣ,350 ಗ್ರಾಂ ಬೆಳ್ಳಿ,5 ಲಕ್ಷ ನಗದು ಎಗರಿಸಿ ಎಸ್ಕೇಪ್. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟ‌ನೆ.ಮೂವರು ಅಪರಿಚಿತ ವ್ಯಕ್ತಿಗಳಿಂದ ಪ್ರಮೋದ್ ಎಂಬುವರ …

Read More »

ಬಕ್ರೀದ್:‌ 30 ಲಕ್ಷಕ್ಕೆ ಮಾರಾಟವಾದ ಅಪರೂಪ ತಳಿಯ ಮೇಕೆ!

ಬಕ್ರೀದ್‌ ಹಬ್ಬದ ಪ್ರಯುಕ್ತ ಕುರಿ-ಮೇಕೆಗಳ ಮಾರಾಟ ದೇಶಾದ್ಯಂತ ಭರ್ಜರಿಯಾಗಿ ನಡೆದಿದ್ದು, ಉತ್ತರ ಪ್ರದೇಶದ ಮೀನಾ ಬಜಾರ್‌ ನಲ್ಲಿ ಅಪರೂಪದ ತಳಿಯ ಮೇಕೆಗಳು ದಾಖಲೆ ಮೊತ್ತಕ್ಕೆ ಮಾರಾಟವಾಗಿ ಸುದ್ದಿ ಮಾಡಿವೆ. ದೆಹಲಿಯ ಪ್ರಸಿದ್ದ ಮಾರುಕಟ್ಟೆ ಸ್ಥಳವಾದ ಮೀನಾ ಬಜಾರ್‌ ನಲ್ಲಿ ಅಪರೂಪದ ತಳಿಯ ಒಂದು ಮೇಕೆ 30 ಲಕ್ಷಕ್ಕೆ ಮಾರಾಟವಾಗಿ ದಾಖಲೆ ಬರೆದಿದೆ. ಎರಡು ಮೇಕೆಗಳು ತಮ್ಮ ಹೆಸರಿನಿಂದಲೇ ತಲಾ 15 ಲಕ್ಷ ರೂ.ಗೆ ಮಾರಾಟವಾಗಿ ಗಮನ ಸೆಳೆದಿವೆ. ೩೫ ವರ್ಷ …

Read More »

ಭಾರಿ ಮಳೆ ಹಿನ್ನೆಲೆ ಮನೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿ, ಮತ್ತಿಬ್ಬರು ಗಾಯಗೊಂಡಿದ್ದಾರೆ.

ಕಲಬುರಗಿ: ಕಳೆದ ನಾಲ್ಕು ದಿನಗಳಿಂದ ಎಡಬಿಡದೆ ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಗೆ ಶಿಥಿಲಗೊಂಡಿದ್ದ ಮನೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿ, ಮತ್ತಿಬ್ಬರು ಗಾಯಗೊಂಡ ಘಟನೆ ಚಿತ್ತಾಪೂರ ಪಟ್ಟಣದಲ್ಲಿ ನಡೆದಿದೆ. ಆರೀಫಾ ಬೇಗಂ (60) ಮೃತ ವೃದ್ಧೆ. ಘಟನೆಯಲ್ಲಿ ಆರೀಫಾ ಬೇಗಂ ಪತಿ ಸರ್ಧಾರ್ ಅಲಿ ಹಾಗೂ ಮಗಳು ಯಾಸ್ಮಿನ್ ಬೇಗಂ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ಕು ದಿನಗಳಿಂದ ಸುರಿಯುತ್ತಿರುವ …

Read More »