Home / ರಾಜ್ಯ (page 954)

ರಾಜ್ಯ

ಬೈಕ್ ಹಿಡಿದು ಪೊಲೀಸ್ ಠಾಣೆಗೆ ತಂದು ವಿಮೆ ಮಾಡಿದ್ದಕ್ಕೆ ಸವಾರನೊಬ್ಬ ಪೊಲೀಸರ ಮುಂದೆಯೇ ಕಣ್ಣೀರಿಟ್ಟ

ರಾಯಚೂರು: ಜಿಲ್ಲಾ ಪೊಲೀಸರು ವಿಮೆ ಮಾಡಿಸದೆ ಓಡಿಸುತ್ತಿರುವ ಬೈಕ್ ಹಾಗೂ ಇತರ ವಾಹನಗಳನ್ನು ಹಿಡಿದು ವಿಮೆ ಮಾಡಿಸುತ್ತಿದ್ದಾರೆ. ವಿಮೆ ಇಲ್ಲದ್ದಕ್ಕೆ ಬೈಕ್ ಹಿಡಿದು ಪೊಲೀಸ್ ಠಾಣೆಗೆ ತಂದು ವಿಮೆ ಮಾಡಿದ್ದಕ್ಕೆ ಸವಾರನೊಬ್ಬ ಪೊಲೀಸರ ಮುಂದೆಯೇ ಕಣ್ಣೀರಿಟ್ಟ ಪ್ರಸಂಗ ನಡೆದಿದೆ. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಪೊಲೀಸರು ವಾಹನಗಳ ವಿಮೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈವರೆಗೆ 400ಕ್ಕೂ ಹೆಚ್ಚು ಬೈಕ್‍ಗಳನ್ನು ಜಪ್ತಿ ಮಾಡಿರುವ ಪೊಲೀಸರು ಎಲ್ಲಾ ಬೈಕ್‌ಗಳಿಗೂ ವಿಮೆ ಮಾಡಿಸಿದ್ದಾರೆ. ನಗರದ ಎಸ್‍ಪಿ ಕಚೇರಿ …

Read More »

ಮಂಗಳೂರಿನಲ್ಲಿ ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರುತ್ತಿದ್ದ 12 ವಿದ್ಯಾರ್ಥಿಗಳ ಬಂಧನ

ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಾನೂಫ್ ಅಬ್ದುಲ್ ಗಫೂರ್(21), ಮೊಹಮ್ಮದ್ ರಸೀನ್(22), ಗೋಕುಲ ಕೃಷ್ಣನ್(22), ಶಾರೂನ್ ಆನಂದ(19), ಅನಂತು ಕೆ.ಪಿ(18), ಅಮಲ್(21), ಅಭಿಷೇಕ(21), ನಿದಾಲ್(21), ಶಾಹೀದ್ ಎಂ.ಟಿ.ಪಿ(22), ಫಹಾದ್ ಹಬೀಬ್(22), ಮೊಹಮ್ಮದ್ ರಿಶಿನ್(22), ರಿಜಿನ್ ರಿಯಾಜ್(22) ಬಂಧಿತರು. ಬಂಧಿತ ವಿದ್ಯಾರ್ಥಿಗಳೆಲ್ಲರೂ ಕೇರಳ ರಾಜ್ಯದವರಾಗಿದ್ದಾರೆ. ಆರೋಪಿಗಳ ಪೈಕಿ 9 ಮಂದಿ ವಿದ್ಯಾರ್ಥಿಗಳು ಯೇನೆಪೋಯ …

Read More »

2-3 ದಿನ ಭಾರಿ ಮಳೆ; ಮುನ್ಸೂಚನೆ ನೀಡಿದ ಸಿಎಂ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಮಳೆ ಹಾನಿ ಕುರಿತಾಗಿ ನಿನ್ನೆ ಅಧಿಕಾರಿಗಳ ಜತೆ ಸಭೆ ನಡೆಸಿ ಮುಂಜಾಗೃತಾ ಕ್ರಮ ಹಾಗೂ ಪರಿಹಾರದ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.   ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಇಂದು ಸ್ವಲ್ಪ ಪ್ರಮಾಣದಲ್ಲಿ ಮಳೆ ಕಡಿಮೆಯಾಗಿದೆ. ಆದರೆ ಇನ್ನೂ 2-3 ದಿನಗಳ ಕಾಲ ಹಲವೆಡೆ ಮಳೆಯಾಗಲಿದೆ. ಅದಕ್ಕೆ ಅನುಗುಣವಾಗಿ …

Read More »

ಬಿಎಸ್‌ವೈರಿಂದ ಬೊಮ್ಮಾಯಿವರೆಗೆ; 2023ರ ಚುನಾವಣೆ ಕತೆ ಏನು..?

ಬೆಂಗಳೂರು; ಇದೇ ತಿಂಗಳ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊ೦ಡಿದ್ದರು. ಬೆಂಗಳೂರಿನಲ್ಲಿ ಹಲವು ಯೋಜನೆಗಳನ್ನು ಉದ್ಘಾಟನೆ ಮಾಡಿದರು. ನಂತರ ಅವರು ಮೈಸೂರು ಅರಮನೆಯ ಆವರಣದಲ್ಲಿ ನಡೆದ ವಿಶ್ವಯೋಗಾ ದಿನಾಚರಣೆಯಲ್ಲಿ ಪಾಲ್ಗೊಂಡರು. ಮೋದಿಯವರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ರಾಜ್ಯಪಾಲರು, ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಸೇರಿ ಹಲವು ನಾಯಕರು ಮೋದಿಯವರನ್ನು ಬರಮಾಡಿಕೊಂಡರು. ಈ ವೇಲೆ ಪ್ರಧಾನಿ ಮೋದಿಯವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅತ್ಯಂತ ಆತ್ಮೀಯತೆಯಿಂದ …

Read More »

ಹಿಗ್ಗಿದ ಕೃಷ್ಣೆಯ ಒಡಲು: ಮತ್ತೆ ನೆರೆ ಭೀತಿ

ಬೆಳಗಾವಿ: ಜಿಲ್ಲೆಯ ಗಡಿ ಭಾಗ ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ನದಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಘಟಪ್ರಭಾ ನದಿಗೆ 10 ಸಾವಿರಕ್ಕೂ ಅಧಿಕ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಇದರಿಂದ ಜಿಲ್ಲೆಯ ಪ್ರಮುಖ ಜಲಾಶಯವಾಗಿರುವ ಹಿಡಕಲ್‌ ಜಲಾಶಯಮಟ್ಟದಲ್ಲಿ ಒಂದೇ ದಿನ ಮೂರು ಅಡಿಗಳಷ್ಟು ಏರಿಕೆಯಾಗಿದೆ. ಒಟ್ಟು 2175 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2093 ಅಡಿಗಳಷ್ಟು ನೀರು ಸಂಗ್ರಹವಾಗಿದೆ. …

Read More »

ಕರ್ನಾಟಕ ಸರ್ಕಾರದಿಂದ ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗೆ ಸಹಾಯವಾಣಿ

ಬೆಂಗಳೂರು: ಶುಕ್ರವಾರ ಸಂಜೆ ಅಮರನಾಥ ಗುಹೆಯ ಬಳಿ ಮೇಘ ಸ್ಫೋಟ ಉಂಟಾಗಿದ್ದು, ತೀರ್ಥಯಾತ್ರೆಗೆ ತೆರಳಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಅಮರನಾಥ ಯಾತ್ರೆಗೆ ತೆರಳಿರುವ ಕರ್ನಾಟಕದ ಯಾತ್ರಾರ್ಥಿಗಳು ಸಿಲುಕಿದ್ದು, ಅವರ ಸಹಾಯಕ್ಕೆ ಸರ್ಕಾರ ಸಹಾಯವಾಣಿ ಆರಂಭಿಸಿದೆ.   ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ದಯವಿಟ್ಟು ಕೆಳಗಿನ ಸಂಖ್ಯೆಗೆ ಕರೆ ಮಾಡಿ ಸಂಪರ್ಕ ಮಾಡಿ.‌ 080-1070, 22340676, ಇಮೇಲ್: [email protected] ಮೇಘಸ್ಫೋಟದಿಂದ ಉಂಟಾದ ಭಾರೀ ಪ್ರಮಾಣದ ಪ್ರವಾಹ …

Read More »

ಮಹಾರಾಷ್ಟ್ರ ರಾಜ್ಯಪಾಲರ ನಡೆ ಪ್ರಶ್ನಿಸಿ ಅರ್ಜಿ; ಸುಪ್ರೀಂ ಮೆಟ್ಟಿಲೇರಿದ ಉದ್ಧವ್‌ ಠಾಕ್ರೆ

ಮುಂಬಯಿ: ಶಿವಸೇನೆಯಿಂದ ಬಂಡಾ ಯ ವೆದ್ದು ತನ್ನ ಬೆಂಬಲಿತ ಶಾಸಕ ರೊಂದಿಗೆ ಪಕ್ಷದಿಂದ ಹೊರನಡೆದಿದ್ದ ಏಕ ನಾಥ ಶಿಂಧೆಯವರಿಗೆ ಸರಕಾರ ರಚಿಸು ವಂತೆ ಆಹ್ವಾನ ನೀಡಿದ್ದ ಮಹಾರಾಷ್ಟ್ರದ ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿಯವರ ನಡೆಯನ್ನು ಪ್ರಶ್ನಿಸಿ, ಶಿವಸೇನೆಯ ನಾಯಕ ಉದ್ಧವ್‌ ಠಾಕ್ರೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.   ಸುಪ್ರೀಂ ಕೋರ್ಟ್‌ನ ರಜಾಕಾಲದ ನ್ಯಾಯ ಪೀಠವು ಉದ್ಧವ್‌ ಅವರ ಅರ್ಜಿಯನ್ನು ಸ್ವೀಕರಿಸಿದ್ದು ಅರ್ಜಿಯ ವಿಚಾರಣೆಯನ್ನು ಜು. 11ಕ್ಕೆ ನಿಗದಿಗೊಳಿಸಿದೆ. ಅರ್ಜಿಯಲ್ಲಿ ಠಾಕ್ರೆಯವರು, ಜು. 3 ಮತ್ತು …

Read More »

ಆಂಧ್ರ ಪ್ರದೇಶ: 400 ಅಡಿ ಕೊಳವೆ ಬಾವಿಯಿಂದ ಬಾಲಕನನ್ನು ರಕ್ಷಿಸಿದ ಧೈರ್ಯಶಾಲಿ ಯುವಕ!

ವಿಜಯವಾಡ: ಆಂಧ್ರ ಪ್ರದೇಶದ ದ್ವಾರಕ ತಿರುಮಲದ ಗುಂಡುಗೊಲುಗುಂಟ ಗ್ರಾಮದಲ್ಲಿ 30 ಅಡಿ ಆಳದ ತೆರೆದ ಕೊಳಬೆ ಬಾವಿಗೆ ಬಿದಿದ್ದ 9 ವರ್ಷದ ಬಾಲಕನೊಬ್ಬನನ್ನು ಧೈರ್ಯಶಾಲಿ ಯುವಕನೊಬ್ಬ ಐದು ಗಂಟೆಗಳ ಸಾಹಸ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.   ಬಾಲಕ ಎಸ್. ಜಸ್ವಂತ್ ತನ್ನ ಮನೆ ಬಳಿ ಆಡುತ್ತಿದ್ದಾಗ ಬುಧವಾರ ರಾತ್ರಿ 7 ಗಂಟೆಯ ನಂತರ ನಾಪತ್ತೆಯಾಗಿದ್ದಾನೆ. ಆತನ ಪೋಷಕರು ಹುಡುಕಾಡಿದರೂ ಆತ ಸಿಕ್ಕಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಸಹಾಯಕಕ್ಕಾಗಿ ಕೂಗುತ್ತಿದ್ದ ಬಾಲಕನ ಧ್ವನಿಯನ್ನು …

Read More »

2023ರ ವಿಧಾನಸಭಾ ಚುನಾವಣೆ ನನ್ನ ಕೊನೇ ಚುನಾವಣೆ: ಸಿದ್ದರಾಮಯ್ಯ

ಕೊಳ್ಳೇಗಾಲ: ಮುಂದಿನ ವರ್ಷದ ವಿಧಾನಸಭಾ ಚುನಾವಣೆ ನನಗೆ ಕೊನೆಯ ಚುನಾವಣೆಯಾಗಿದ್ದು, ಬಳಿಕ ರಾಜಕೀಯದಿಂದ ನಿವೃತ್ತಿ ಹೊಂದುವ ಮೂಲಕ ಇತರರಿಗೆ ಅವಕಾಶ ಕಲ್ಪಿಸಿಕೊಡುವುದಾಗಿ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು.   ಪಟ್ಟಣದ ಬಸ್ತೀಪುರ ಬಡಾವಣೆಯಲ್ಲಿ ಆಯೋಜಿಸಿದ್ದ ಸಿದ್ದಪ್ಪಾಜಿ ಕಂಡಾಯ ಮತ್ತು ಕೊಂಡೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದಾವಣಗೆರೆಯಲ್ಲಿ ಆಗಸ್ಟ್‌ 3ರಂದು ನಡೆಯುವ ನನ್ನ 75ನೇ ಜನ್ಮ ದಿನೋತ್ಸವಕ್ಕೆ ಆರೆಸ್ಸೆಸ್‌ನವರು ಸಿದ್ದರಾಮಯ್ಯ ಅವರ ಉತ್ಸವ ಎಂದು ನಾಮಕರಣ …

Read More »

ಪಿಎಸ್‌ಐ ನೇಮಕಾತಿ ಅಕ್ರಮ: ಪ್ರಭಾವಿಗಳ ಹೆಸರು ಬಹಿರಂಗಪಡಿಸಲು ಕಾಂಗ್ರೆಸ್ ಆಗ್ರಹ

ಬೆಂಗಳೂರು: ‘ಪಿಎಸ್‌ಐ ನೇಮಕ ಅಕ್ರಮದಲ್ಲಿ ಬಿಜೆಪಿ ಪ್ರಮುಖರು,ಪ್ರಭಾವಿ ಸಚಿವರು, ನಾಯಕರು ಭಾಗಿಯಾಗಿದ್ದು, ಅವರ ಹೆಸರು ಬಹಿರಂಗಪಡಿಸಬೇಕು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ರಾಜ್ಯ ಕಾಂಗ್ರೆಸ್ ನಾಯಕರು ಹೋರಾಟ ತೀವ್ರಗೊಳಿಸಿದ್ದಾರೆ.   ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಗುರುವಾರ ಪ್ರತಿಭಟನೆ ನಡೆಸಿದ ‘ಕೈ’ ನಾಯಕರು, ‘ಭ್ರಷ್ಟ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ’, ‘ರಕ್ಷಿಸಿ, ರಕ್ಷಿಸಿ ನ್ಯಾಯಾಧೀಶರನ್ನು ರಕ್ಷಿಸಿ’ ಎಂದು ಘೋಷಣೆ ಕೂಗಿದರು. ‘ಮುಖ್ಯಮಂತ್ರಿ ಕಚೇರಿಯಿಂದ ಹಿಡಿದು ಗೃಹ ಸಚಿವಾಲಯ, …

Read More »