Home / ರಾಜ್ಯ (page 955)

ರಾಜ್ಯ

ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ₹ 132 ಕೋಟಿ ಮೊತ್ತದ ಅನುಮೋದನೆ: C.M.ಬೊಮ್ಮಾಯಿ

ಬೆಂಗಳೂರು: ‘ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ₹ 132 ಕೋಟಿ ಮೊತ್ತದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ‘ಸರ್ಕಾರ ಈಗಾಗಲೇ ಸಮವಸ್ತ್ರ ವಿತರಿಸಲು ಅನುಮೋದನೆ ನೀಡಿದೆ. ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಬೇಕಾಗುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ’ ಎಂದು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು. ಭಿಕ್ಷೆ ಬೇಡಿರುವ ಹಣ ಎಲ್ಲಿ? ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೀಡಿರುವ …

Read More »

ಅಬಕಾರಿ ಇಲಾಖೆಯಲ್ಲಿ ಮಿತಿ ಮೀರಿದ ಭ್ರಷ್ಟಾಚಾರ ಆರೋಪ

ವಿಜಯಪುರ: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಮುಖ್ಯಮಂತ್ರಿ ತಕ್ಷಣ ಮಧ್ಯಪ್ರವೇಶಿಸಿ ಕಡಿವಾಣ ಹಾಕಬೇಕು ಎಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ ಆಗ್ರಹಿಸಿದೆ. ವಿಜಯಪುರದಲ್ಲಿ ಶುಕ್ರವಾರ ನಡೆದ ಬೆಳಗಾವಿ ವಿಭಾಗದ ಅಬಕಾರಿ ಸನ್ನದುದಾರರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎಸ್‌.ಗುರುಸ್ವಾಮಿ, ರಾಜ್ಯದಲ್ಲಿ ಅಬಕಾರಿ ಅಧಿಕಾರಿಗಳು ಅಬಕಾರಿ ಕಾಯ್ದೆಯಲ್ಲಿರುವ ಲೋಪದೋಷಗಳ ಲಾಭ ಪಡೆದು ಮಾರಾಟಗಾರರನ್ನು ಹಿಂಸಿಸಿ ‘ಮಾಮೂಲಿ’ (ಲಂಚ) ಹಣವನ್ನು ಬಲತ್ಕಾರವಾಗಿ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.   ಅಧಿಕಾರಿಗಳು …

Read More »

ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಯುವಕರಿಬ್ಬರ ಕುತ್ತಿಗೆ ಭಾಗದ ಮೇಲೆ ಬ್ಲೇಡ್‌ನಿಂದ ಹಲ್ಲೆ

ಸಂಕೇಶ್ವರ : ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ, ವ್ಯಕ್ತಿಯೊಬ್ಬ ಯುವಕರಿಬ್ಬರ ಕುತ್ತಿಗೆ ಭಾಗದ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.   ಇಲ್ಲಿನ ವಡ್ಡರ ಓಣಿಯ ನಿವಾಸಿಗಳಾದ ಸಂತೋಷ ವಡ್ಡರ ಹಾಗೂ ಇವರ ಸಹೋದರ ಲಕ್ಷ್ಮಣ ವಡ್ಡರ ಗಾಯಗೊಂಡವರು. ಆರೋಪಿ ದಿಲೀಪ್‌ ಎಂಬಾತ ಚಪ್ಪಲಿಯ ಚರ್ಮ ಕತ್ತರಿಸುವ ಬ್ಲೇಡ್‌ನಿಂದ ಹಲ್ಲೆ ಮಾಡಿದ್ದಾನೆ. ಜೂಜಾಟವೇ ಗಲಾಟೆಗೆ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ದಿಲೀಪ್‌ಗೆ …

Read More »

ದೇಶದಲ್ಲೇ ಬೆಳಗಾವಿ ಜಿಲ್ಲಾಸ್ಪತ್ರೆ ಎಲ್ಲರಿಗೂ ಮಾದರಿ ಆಗಲಿ: ಶಾಸಕ ಅನಿಲ ಬೆನಕೆ

ಬೆಳಗಾವಿ: ದೇಶದಲ್ಲೇ ಸರ್ಕಾರಿ ಆಸ್ಪತ್ರೆಗಳ ಪೈಕಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಇಂದು 12ನೇ ಸ್ಥಾನದಲ್ಲಿದ್ದು, ಬರುವ ಒಂದು ವರ್ಷದಲ್ಲಿ ಬಿಮ್ಸ್ ಆಸ್ಪತ್ರೆಯನ್ನು 5 ನೇ ಸ್ಥಾನಕ್ಕೆ ತರಲು ಎಲ್ಲ ತರಹದ ಸೌಲಭ್ಯ ಕಲ್ಪಿಸಲು ಶ್ರಮಿಸಲಾಗುವು ಎಂದು ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ‌ ಶುಕ್ರವಾರ ನಗರದ ಬಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸಹಾಯ ವಾಣಿ, ಅನ್ ಲೈನ್ ಪಾವತಿ ಕೌಂಟರ್, ಹೆಲ್ತ ಡೆಸ್ಕ್, ಹಿರಿಯ …

Read More »

ತುಮಕೂರಿನ ರೌಡಿಶೀಟರ್‌ ಮನೆಗಳ ಮೇಲೆ ದಾಳಿ: ಮಾರಕಾಸ್ತ್ರ ವಶಕ್ಕೆ

ತುಮಕೂರು: ನಗರದಲ್ಲಿ ಅಕ್ರಮ ಚಟುವಟಿಕೆ ಹೆಚ್ಚಾಗದಂತೆ ತಡೆಗಟ್ಟಲು ಶುಕ್ರವಾರ ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿ ಅಪಾರ ಮಾರಕಾಸ್ತ್ರ ವಶಪಡಿಸಿಕೊಂಡಿದ್ದಾರೆ. ತುಮಕೂರಿನಲ್ಲಿ ಬಕ್ರೀದ್ ಹಬ್ಬ ಹಾಗೂ ಅಕ್ರಮ ಚಟುವಟಿಕೆ ಹೆಚ್ಚಿದ್ದು, ಈ ಹಿನ್ನಲೆಯಲ್ಲಿ ನಗರದಲ್ಲಿ ಮುಂಜಾನೆ ರೌಡಿಶೀಟರ್‌ ಮನೆಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು. ನಂತರ ನಗರದ ಚಿಲುಮೆ ಸಮುದಾಯ ಭವನದಲ್ಲಿ ಪರೇಡ್ ಮಾಡಲಾಯಿತು. ನಗರ ವ್ಯಾಪ್ತಿಯಲ್ಲಿನ 84 ಜನ …

Read More »

ಬಕ್ರೀದ್ ಹಬ್ಬ: ಕೋವಿಡ್ ಮಾರ್ಗಸೂಚಿ ಕಡ್ಡಾಯ

ಬೆಂಗಳೂರು: ಬಕ್ರೀದ್ ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗದಂತೆ ಖುರ್ಬಾನಿಯನ್ನು (ಪ್ರಾಣಿ ಬಲಿದಾನ) ನೆರವೇರಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮುಸ್ಲಿಮರು ಭಾನುವಾರ ಬಕ್ರೀದ್ ಹಬ್ಬವನ್ನು ರಾಜ್ಯಾದ್ಯಂತ ಆಚರಿಸಲಿದ್ದಾರೆ ಎಂದು ರಾಜ್ಯ ಚಂದ್ರದರ್ಶನ ಸಮಿತಿ ಘೋಷಿಸಿದೆ. ಹಬ್ಬದ ದಿನದಂದು ಮುಸ್ಲಿಮರು ಈದ್ಗಾ ಮೈದಾನ, ಮಸೀದಿಯಲ್ಲಿ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಾರೆ. ಧಾರ್ಮಿಕ ಆಚರಣೆಯ ಪ್ರಯುಕ್ತ ಹಬ್ಬದ ದಿನ ಸೇರಿದಂತೆ …

Read More »

ಮಹಾರಾಷ್ಟ್ರದಲ್ಲಿ ಹೆಚ್ಚಿದ ಮಳೆ: ಚಿಕ್ಕೋಡಿಯ ನಾಲ್ಕು ಸೇತುವೆಗಳು ಮುಳುಗಡೆ

ಬೆಳಗಾವಿ: ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ‌ಮಳೆಯ ಆರ್ಭಟ ‌ಮುಂದುವರದಿದ್ದು ಇದರಿಂದ ಚಿಕ್ಕೋಡಿ ತಾಲೂಕಿನ ನಾಲ್ಕು ಸೇತುವೆಗಳು ‌ಮುಳುಗಡೆಯಾಗಿವೆ. ಕೃಷ್ಣಾ ಹಾಗೂ ಉಪನದಿಗಳಾದ ವೇದಗಂಗಾ, ದೂಧಗಂಗಾ ನದಿಗಳಲ್ಲಿ ಕ್ಷಣಕ್ಷಣಕ್ಕೂ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇದರಿಂದಾಗಿ ಚಿಕ್ಕೋಡಿ ತಾಲೂಕಿನ ಯಡೂರ-ಕಲ್ಲೋಳ, ಮಾಂಜರಿ-ಸೌಂದತ್ತಿ, ಮಲಿಕವಾಡ-ದತ್ತವಾಡ, ಯಕ್ಸಂಬಾ-ದಾನವಾಡದ ಕೆಳಮಟ್ಟದ ಸೇತುವೆಗಳು ಮುಳಗಡೆಯಾಗಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ, ವೇದಗಂಗಾ, ದೂಧಗಂಗಾ ನದಿಗಳಿಗೆ ಒಂದೇ ದಿನದಲ್ಲಿ ಒಂದು ಅಡಿಯಷ್ಟು ನೀರು ಏರಿಕೆಯಾಗಿದ್ದು ನದಿತೀರದ ಜನರಿಗೆ ಮತ್ತೆ …

Read More »

ಪಿಎಸ್‌ಐ ಅಕ್ರಮದ ಕಿಂಗ್ ಪಿನ್: ಪರೋಕ್ಷವಾಗಿ ಸಿಎಂ ಬೊಮ್ಮಾಯಿ ಹೆಸರು ಉಲ್ಲೇಖ

ಕಲಬುರಗಿ, ಜುಲೈ 7: ಪಿಎಸ್‌ಐ ಅಕ್ರಮ ನೇಮಕಾತಿ ವಿಚಾರದಲ್ಲಿ ಎಡಿಜಿಪಿ ಅಮೃತ್ ಪಾಲ್ ಬಂಧನದ ನಂತರ, ವಿರೋಧ ಪಕ್ಷವಾದ ಕಾಂಗ್ರೆಸ್ ಆಡಳಿತ ಪಕ್ಷದ ವಿರುದ್ದ ವಾಗ್ದಾಳಿಯನ್ನು ಇನ್ನಷ್ಟು ತೀವ್ರಗೊಳಿಸಿದೆ. ಕಾಂಗ್ರೆಸ್ ನಾಯಕರು ಸತತ ಸುದ್ದಿಗೋಷ್ಠಿ ನಡೆಸಿ ಮಾಹಿತಿಯನ್ನು ಹೊರಹಾಕುತ್ತಿದ್ದಾರೆ.   ಈ ಭ್ರಷ್ಟಾಚಾರದಲ್ಲಿ ಸರಿಯಾದ ತನಿಖೆ ನಡೆದರೆ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದಿದ್ದ ಕಾಂಗ್ರೆಸ್ ನಾಯಕ ಮತ್ತು ಚಿತ್ತಾಪುರ ಕ್ಷೇತ್ರದ ಶಾಸಕರೂ ಆಗಿರುವ ಪ್ರಿಯಾಂಕ್ ಖರ್ಗೆ, ಪರೋಕ್ಷವಾಗಿ ಈ ಅಕ್ರಮದ …

Read More »

ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ! ದೋಖಾ ದುಡ್ಡಲ್ಲಿ ಈತ ಮಾಡಿರೋ ಶೋಕಿ ಒಂದಾ? ಎರಡಾ? ನೀವೇ ನೋಡಿ

ಬಾಗಲಕೋಟೆ: ಆತ ಓರ್ವ ಸಿಪಾಯಿ (ಪಿಯೂನ್). ಅಧಿಕಾರಿಗಳು ಹೇಳಿದ ಫೈಲ್ (File) ಕೊಡೋದು ತೆಗೆದುಕೊಂಡು ಬರೋದು ಸಹಾಯಕ (Helper) ನಾಗಿ ಇರೋದು ಆತನ ಕೆಲಸ. ಆದರೆ ಆ ಪಿಯೂನ್ (Peon) ಈಗ ಮಾಡಿದ ಕೆಲಸ ಕೇಳಿದರೆ ದಂಗಾಗ್ತಿರಾ. ಬ್ಯಾಂಕ್‌ (Bank) ನಲ್ಲಿ ಪಿಯೂನ್ ಆದೋನು ಬ್ಯಾಂಕ್ ನಲ್ಲಿ ಕೋಟಿ ಕೋಟಿ (Crore) ಲೂಟಿ ಮಾಡಿದ್ದಾನೆ. ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂತ ಬಂದ ಹಣದಲ್ಲಿ ಸಿನಿಮಾ (Movie) , ನಾಟಕ, …

Read More »

ಮನೆ ಹಾನಿಗೆ ₹ 5 ಲಕ್ಷ ಪರಿಹಾರ: ಅಶೋಕ

ಮಂಗಳೂರು: ‘ಮಳೆಯಿಂದ ಪೂರ್ತಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ₹ 5 ಲಕ್ಷ ಪರಿಹಾರ ನೀಡಲಾಗುವುದು. ಈ ಸಂಬಂಧ ಗುರುವಾರ ಮುಖ್ಯಮಂತ್ರಿ ಜತೆ ಚರ್ಚಿಸಲಾಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಉಳ್ಳಾಲ ತಾಲ್ಲೂಕಿನ ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಂಗಳೂರಿಗೆ ಹೋದ ಕೂಡಲೇ ಶೇ 50ರಷ್ಟು ಪರಿಹಾರ ಮೊತ್ತ ಬಿಡುಗಡೆಗೆ ಆದೇಶ ನೀಡುತ್ತೇನೆ. ಕಡಿಮೆ ಪ್ರಮಾಣದ ಹಾನಿ ಆಗಿರುವವರಿಗೆ ಹಾನಿಯ ಪ್ರಮಾಣದ ಆಧಾರದಲ್ಲಿ …

Read More »