ಬೆಳಗಾವಿ: ಸೇವಾ ಭದ್ರತೆ, ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಾಸ್ಟೆಲ್ ಹೊರ ಗುತ್ತಿಗೆ ನೌಕರರು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ ನಲ್ಲಿ ಪ್ರತಿಭಟನೆ ನಡೆಸಿದರು. ಹಾಸ್ಟೆಲ್ ಹೊರ ಗುತ್ತಿಗೆ ನೌಕರರ ಸಂಘದ ಆಶ್ರಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ನೂರಕ್ಕೂ ಅಧಿಕ ಹೊರ ಗುತ್ತಿಗೆ ನೌಕರರು, ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು. ನಮಗೆ ಕನಿಷ್ಠ ವೇತನ ಸಿಗುತ್ತಿಲ್ಲ. ಪಿ ಎಫ್ ಕಟ್ಟುತ್ತಿಲ್ಲ, ಸಾಕಷ್ಟು ಮ್ಯಾನ್ ಪವರ್ …
Read More »ತಮ್ಮ ಪಕ್ಷದ ವಿರುದ್ಧವೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೇಸರ
ಬೆಳಗಾವಿ: ಯಾರೇ ಮಂತ್ರಿಯಾಗಬೇಕಂದರೂ, ಅದಕ್ಕೆ ಜಾದು ಮಾಡ್ಬೇಕು. ನಮಗೆ ಮಂತ್ರಿಯಾಗೋ ಜಾದುವೇ ಗೊತ್ತಿಲ್ಲ. ಇನ್ನು ಮುಖ್ಯಮಂತ್ರಿಯಾಗೋದು ಎಲ್ಲಿಂದ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರೋಕ್ಷವಾಗಿ ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಚರ್ಚೆಯಲ್ಲಿ ಬಿ.ಆರ್. ಪಾಟೀಲ್ ಮಾತನಾಡುತ್ತಾ, ಕೇಂದ್ರ ಸಾರಿಗೆ ಸಚಿವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯ ಕೆಲಸ ಮಾಡುವ ಕನಸುಗಳಿವೆ. ಆದರೆ, ನಿಮ್ಮವರು ಅದನ್ನು ಮಾಡಲು ಬಿಡುತ್ತಿಲ್ಲ. ನನಗೆ ಅನುಕಂಪ ಇದೆ …
Read More »ಬಾಕಿ ಬಿಲ್ ಕೊಡಿ ಇಲ್ಲ ವಿಷ ಕೊಡಿ:
ಬೆಳಗಾವಿ : ಪೂರ್ಣಗೊಂಡ ಕಾಮಗಾರಿಗಳ ಬಾಕಿ ಬಿಲ್ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ್ದ ಗುತ್ತಿಗೆದಾರರು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಸರ್ಕಾರಿ ಗುತ್ತಿಗೆದಾರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರು ಬಾಕಿ ಬಿಲ್ ಕೊಡಿ ಇಲ್ಲವೇ ವಿಷ ಕೊಡಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಬೃಹತ್ ಮತ್ತು ಮಧ್ಯಮ ನೀರಾವರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …
Read More »ರೈತರ ಕಾಳಜಿ ಇದ್ದರೆ ತಕ್ಷಣ ಸರ್ಕಾರ ಕಬ್ಬು ತೂಕದಲ್ಲಿ ಆಗುತ್ತಿರುವ ಮೋಸವನ್ನು ತಡೆಯಬೇಕು: ಶ್ರೀಮಂತ ಪಾಟೀಲ್
ಚಿಕ್ಕೋಡಿ: ವಿಧಾನಸಭೆ ಸದನದಲ್ಲಿ ಕಬ್ಬು ಬೆಳೆಗಾರರ ಕುರಿತು ಒಳ್ಳೆಯ ಚರ್ಚೆಗಳು ನಡೆಯುತ್ತಿವೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡು ಕಾಂಗ್ರೆಸ್ ಸರ್ಕಾರ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ. ರೈತರ ಪರ ಕಾಳಜಿ ಇದ್ದರೆ ತಕ್ಷಣ ಸರ್ಕಾರ ನುಡಿದಂತೆ ನಡೆದು ಕಬ್ಬು ತೂಕದಲ್ಲಿ ಆಗುತ್ತಿರುವ ಮೋಸವನ್ನು ತಡೆಯಬೇಕು ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ್ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗುರುವಾರ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, …
Read More »ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಅವರ ಮಾತು ಕೇಳಿ ಬಿದ್ದು ಬಿದ್ದ ನಕ್ಕ ಸಂತೋಷ ಲಾಡ್
ಬೆಳಗಾವಿ : ವಿವಿಧ ಸಂಘ ಸಂಸ್ಥೆಗಳು ತಮ್ಮ ಬೇಡಿಕೆ ಈಡೇರಿಸುವಂತೆ ಕಳೆದ 9 ದಿನಗಳಿಂದ ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯುತ್ತಿವೆ. ಇಂದು ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು ವಿವಿಧ ಬೇಡಿಕೆ ಮುಂದಿಟ್ಟರು. ಕಾರ್ಮಿಕ ಮಂಡಳಿಯ ಅಡಿ ಮಧ್ಯಪಾನ ಪ್ರಿಯರ ಕಲ್ಯಾಣ ನಿಧಿ ಸ್ಥಾಪಿಸಬೇಕು. ವಾರ್ಷಿಕ ಆದಾಯದಲ್ಲಿ ಶೇ.10ರಷ್ಟು ಕಲ್ಯಾಣ ನಿಧಿಗೆ ವರ್ಗಾಯಿಸಬೇಕು. ಮಧ್ಯಪಾನ …
Read More »ಅರಣ್ಯಭೂಮಿ ಗಡಿ ಗುರುತಿಸಲು ಕಂದಾಯ ಅರಣ್ಯ ಇಲಾಖೆ ಜಂಟಿ ಸರ್ವೆ: ಸಚಿವ ಈಶ್ವರ್ ಖಂಡ್ರೆ
ಬೆಳಗಾವಿ(ಬೆಂಗಳೂರು) :ಅರಣ್ಯ ಭೂಮಿ ಗಡಿ ಗುರುತಿಸಿ ನಿಖರ ನಕ್ಷೆ ಮಾಡುವ ಸಲುವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೆ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಇಂದು ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಹರೀಶ್ ಪೂಂಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಮೀಕ್ಷೆಯನ್ನು ಕಾಲಮಿತಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕರ್ನಾಟಕ ಅರಣ್ಯ ನಿಯಮದ ಪ್ರಕಾರ ಜಿಲ್ಲಾ ಅರಣ್ಯ ಅಥವಾ ರಕ್ಷಿತ ಅರಣ್ಯಕ್ಕೆ ಹೊಂದಿಕೊಂಡಂತೆ ಇರುವ …
Read More »ತಾಲೂಕು ಕೇಂದ್ರಗಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವನೆ: ದಿನೇಶ್ ಗುಂಡೂರಾವ್
ಬೆಂಗಳೂರು/ ಬೆಳಗಾವಿ : ರಾಜ್ಯದಲ್ಲಿ ಘೋಷಣೆಯಾದ ಹೊಸ ತಾಲೂಕು ಕೇಂದ್ರಗಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಯಲ್ಲಿ ಹೇಳಿದ್ದಾರೆ. ಗುರುವಾರ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಹೊಸದಾಗಿ ಘೋಷಣೆಯಾದ ತಾಲೂಕು ಕೇಂದ್ರಗಳ ಬಹಳಷ್ಟು ಆಸ್ಪತ್ರೆಗಳು ತಾಲೂಕು ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ ಏರಿಕೆಯಾಗಿಲ್ಲ. ಇದರೊಂದಿಗೆ ರಾಜ್ಯದಲ್ಲಿ 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಹ …
Read More »ಕೇಂದ್ರದ ಗೃಹ ಸಚಿವ ಹಾಗೂ ಪ್ರಧಾನಿ ಮೋದಿ ಪಾರ್ಲಿಮೆಂಟ್ನಲ್ಲಿ ಆಗಿರುವ ಭದ್ರತಾ ಲೋಪದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಇರುವುದು ಆಶ್ಚರ್ಯ
ಬೆಳಗಾವಿ: ಸಂಸತ್ತಿನ ಇತಿಹಾಸದಲ್ಲಿ ಆಗದೇ ಇರುವ ಭದ್ರತಾ ಲೋಪವನ್ನು ಇಡೀ ವಿಶ್ವವೇ ನೋಡಿದೆ. ಈ ಬಗ್ಗೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ ಹೇಳಿಕೆ ನೀಡದೇ ಇರುವುದು ಆಶ್ಚರ್ಯವಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಕಿಡಿಕಾರಿದ್ದಾರೆ. ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಹೊಸದಾಗಿ ಸಂಸತ್ ನಿರ್ಮಿಸಿದ್ದೇವೆ. ವ್ಯವಸ್ಥಿತ ಹಾಗೂ ವೈಜ್ಞಾನಿಕವಾಗಿ ಮಾಡಿದ್ದೇವೆ ಎಂದು ಹೇಳುವಾಗ ಇಬ್ಬರು ಯುವಕರು ಗ್ಯಾಲರಿಗೆ ಬಂದು, ಅಲ್ಲಿಂದ ಜಿಗಿದು ನೇರವಾಗಿ ಸದನದ …
Read More »ನಾನು ಸಿಎಲ್‌ಪಿ ಸಭೆಗೆ ಹೋಗಿಲ್ಲ, ನಾನು ಡಿಸಿಎಂ ಕರೆದ ಭೋಜನಕೂಟಕ್ಕೆ ಹೋಗಿದ್ದೆ
ಬೆಳಗಾವಿ : ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ. ನಾನು ಡಿಸಿಎಂ ಡಿಕೆ ಶಿವಕುಮಾರ್ ಕರೆದ ಭೋಜನಕೂಟಕ್ಕೆ ಮಾತ್ರ ಹೋಗಿದ್ದು ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ತಿಳಿಸಿದರು. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನಾನು ನಿನ್ನೆ 8 ಗಂಟೆಯಿಂದ 10 ಗಂಟೆ ತನಕ ವಿಜಯೇಂದ್ರ ಜೊತೆಗೆ ಇದ್ದೆ. ನಮ್ಮ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಭೋಜನ ಕೂಟ ಇಟ್ಟುಕೊಂಡಿದ್ದರು. ಅವರ …
Read More »ಗೋಕಾಕ ಜಿಲ್ಲೆಯಾದರೆ ಶಾಂತಿ ಇಲ್ಲವಾದರೆ ಕ್ರಾಂತಿ ,ಗೋಕಾಕ ಜಿಲ್ಲೆಗಾಗಿ ಬೃಹತ್ ಹೋರಾಟ
ಗೋಕಾಕ ಜಿಲ್ಲೆಯಾದರೆ ಶಾಂತಿ ಇಲ್ಲವಾದರೆ ಕ್ರಾಂತಿ ,ಗೋಕಾಕ ಜಿಲ್ಲೆಗಾಗಿ ಬೃಹತ್ ಹೋರಾಟ. ಗೋಕಾಕ: ಆಡಳಿತ ಹಾಗೂ ಅಭಿವೃದ್ದಿ ದೃಷ್ಠಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕನ್ನು ಜಿಲ್ಲಾ ಕೇಂದ್ರವನ್ನಾಗಿ ಪರಿವತರ್ಿಸುವಂತೆ ಆಗ್ರಹಿಸಿ ನಗರದಲ್ಲಿಂದು ನಿಯೋಜಿತ ಗೋಕಾಕ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿಯ ಅಧ್ಯಕ್ಷ ಮುರುಘರಾಜೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯು ಜರುಗಿತು. ಬುಧವಾರದಂದು ನಗರದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ಪ್ರತಿಭಟನೆಯು ಅಪ್ಸರಾ ಕೂಟ, ತಂಬಾಕು ಕೂಟ, …
Read More »
Laxmi News 24×7