Breaking News
Home / ರಾಜ್ಯ (page 960)

ರಾಜ್ಯ

PSI ನೇಮಕಾತಿಅಕ್ರಮ – ಫಸ್ಟ್‌ ರ‍್ಯಾಂಕ್‌ ಅಭ್ಯರ್ಥಿ ಅರೆಸ್ಟ್

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದಲ್ಲಿ ಸೆಲೆಕ್ಷನ್ ಲಿಸ್ಟ್‌ನಲ್ಲಿ ಫಸ್ಟ್ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಪಿಎಸ್‌ಐ ನೇಮಕಾತಿ ಪರೀಕ್ಷೆಯ ಆಯ್ಕೆ ಪಟ್ಟಿಯಲ್ಲಿ ಫಸ್ಟ್‌ ರ‍್ಯಾಂಕ್‌ ಬಂದಿದ್ದ ಮಾಗಡಿ ತಾಲ್ಲೂಕಿನ ನಿವಾಸಿ ಜೆ.ಕುಶಾಲ್‌ಕುಮಾರ್ ನನ್ನು ಪೊಲೀಸರು ಬಂಧಿಸಿದ್ದು, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದಾರೆ. ಬಂಧಿತ ಆರೋಪಿ ಪ್ರಮುಖ ರಾಜಕಾರಣಿಯೊಬ್ಬರ ಮಗ ಎನ್ನಲಾಗಿದೆ. ಈತ 200 ಅಂಕಗಳಿಗೆ 168 ಅಂಕ ಪಡೆಯುವ ಮೂಲಕ 545 ಅಭ್ಯರ್ಥಿಗಳ …

Read More »

ಮಹಾರಾಷ್ಟ್ರದಲ್ಲಿ ಮತ್ತೆ ಕೋವಿಡ್ ಅಟ್ಯಾಕ್, ಬೆಳಗಾವಿ ಜಿಲ್ಲಾಡಳಿತ ಡೋಂಟ್ ಕೇರ್

ಮಹಾರಾಷ್ಟ್ರದಲ್ಲಿ ಮತ್ತೆ ಡೆಡ್ಲಿ ಕೋವಿಡ್ ಅಟ್ಯಾಕ್ ಮಾಡಿದ್ದು, ಮಹಾರಾಷ್ಟ್ರದಲ್ಲಿ ಕೋವಿಡ್ 4ನೇ ಅಲೆಯ ಆತಂಕ ಸೃಷ್ಟಿಯಾಗಿದೆ. ಕಳೆದ 24 ಗಂಟೆಯಲ್ಲಿ 2701 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದರೂ ಕೂಡ ಬೆಳಗಾವಿ ಜಿಲ್ಲಾಡಳಿತ ಡೋಂಟ್ ಕೇರ್ ಎಂದಿದ್ದು. ಬಿಂದಾಸ್ ಆಗಿ ರಾಜ್ಯಕ್ಕೆ ಮಹಾರಾಷ್ಟ್ರ ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಹೌದು ಮಹಾರಾಷ್ಟ್ರದಲ್ಲಿ ಕೋವಿಡ್ ತಾಂಡವವಾಡುತ್ತಿದೆ. ಮುಂಬೈ ಮಹಾನಗರವೊಂದರಲ್ಲೇ 1765 ಪ್ರಕರಣಗಳು ಪತ್ತೆಯಾಗಿವೆ. ಇನ್ನು ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಮತ್ತೆ …

Read More »

ಹಿರೇ ಬಾಗೇವಾಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಪುಂಡರಿಗೆ ಹೆಡೆಮುರಿ ಕಟ್ಟಿದ್ದಾರೆ.

ನಿನ್ನೆ ರಾತ್ರಿ ಹಿರೇ ಬಾಗೇವಾಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಪುಂಡರಿಗೆ ಹೆಡೆಮುರಿ ಕಟ್ಟಿದ್ದಾರೆ. ಹೌದು ಹಿರೇಬಾಗೇವಾಡಿ ಠಾಣೆ ಸಿಪಿಐ ವಿಜಯಕುಮಾರ್ ಸಿನ್ನೂರ್ ಮಾರ್ಗದರ್ಶನದಲ್ಲಿ ಪಿಎಸ್‍ಐ ಶಶಿಕುಮಾರ್ ಕೊರಲೆ ನೇತೃತ್ವದಲ್ಲಿ ಈ ದಾಳಿ ಮಾಡಲಾಗಿದ್ದು. ನಿನ್ನೆ ರಾತ್ರಿ ಸುಮಾರು 2.30ರ ಸುಮಾರಿಗೆ ಹಾಲಗಿಮರಡಿ ಕ್ರಾಸ್ ಮೂಲಕ ಎರಡು ವ್ಯಾನ್‍ಗಳಲ್ಲಿ ಗೋವಾಗೆ ಗೋಮಾಂಸವನ್ನು ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಗೋಮಾಂಸ ಸಮೇತ ಇಬ್ಬರು …

Read More »

ಪೊಲೀಸ ಠಾಣೆ ಮೆಟ್ಟಿಲೇರಿದ ಪದ್ಮಾವತಿ

ಚಂದನವನದ ರಾಣಿ ರಮ್ಯಾ ಇತ್ತೀಚಿನ ದಿನಗಳಲ್ಲಿ ಹೆಚ್ಚೆಚ್ಚು ಸಿನಿಮಾ ಕಾರ್ಯಕ್ರಮಗಳಲ್ಲಿ ಮತ್ತು ಸೋಷಿಯಲ್ ಮೀಡಿಯಾದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದಾರೆ. ತೀರಾ ರಾಜಕೀಯವಾಗಿ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳದೇ ಇದ್ದರೂ, ಸಿನಿಮಾಗಳ ಕಾರ್ಯಕ್ರಮಗಳು, ಟ್ರೈಲರ್, ಟೀಸರ್ ಹೀಗೆ ಒಂದಿಲ್ಲೊಂದು ವಿಷಯವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ಳುತ್ತಾರೆ. ಹೆಚ್ಚೆಚ್ಚು ಸೋಷಿಯಲ್ ಮೀಡಿಯಾದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಅಭಿಮಾನಿಗಳಿಗೆ ಹೊಸ ಹೊಸ ವಿಷಯಗಳನ್ನು ಕೊಡುವ ರಮ್ಯಾ ಅವರಿಗೆ ಕಿಡಿಗೇಡಿಯೊಬ್ಬ ಇನ್ಸ್ಟಾದಲ್ಲಿ ನಿಂದನೆ ಮಾಡಿದ್ದಾನಂತೆ. ಹಾಗಾಗಿ …

Read More »

ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಅವಘಡ 20ಕ್ಕೂ ಹೆಚ್ಚು ಜನರಿಗೆ ಗಾಯ

ಕಾಲೇಜು ಬಸ್ಸಿನ ಹಿಂಬದಿಗೆ ಕೆಎಸ್‌ಆರ್‌ಟಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದ ಬಳಿ ಸಂಭವಿಸಿದೆ.ಜತ್ತ-ಜಾಂಬೋಟಿ ಹೆದ್ದಾರಿ ಸಮೀಪ ಗುರ್ಲಾಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಮೂಡಲಗಿ ಖಾಸಗಿ ಕಾಲೇಜಿಗೆ ತೆರಳುತ್ತಿದ್ದ ಕಾಲೇಜು ಬಸ್‌ನಲ್ಲಿದ್ದ ೧೦ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ೧೦ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು. ಇದರಲ್ಲಿ …

Read More »

ನಾನು ಕಾನೂನು ಪ್ರಕಾರ ಖರೀದಿಸಿದ್ದೇನೆ: ಹೊನ್ಯಾಳ ಜಮೀನು ವಿವಾದ: ನಾಗೇಶ ದೇಸಾಯಿ ಸ್ಪಷ್ಟನೆ

ಬೆಳಗಾವಿ ತಾಲೂಕಿನ ಹೊನ್ಯಾಳ ಗ್ರಾಮದಲ್ಲಿ ದೇವಸ್ಥಾನ ಜಮೀನು ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ನಾಗೇಶ್ ದೇಸಾಯಿ ತಮ್ಮ ಮೇಲಿನ ಆರೋಪ ಸುಳ್ಳು. ನಾನು ಕಾನೂನು ಪ್ರಕಾರವೇ ಆ ಜಮೀನನ್ನು ಖರೀದಿ ಮಾಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಹೊನ್ಯಾಳ ಗ್ರಾಮಸ್ಥರು ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನ ಜಾಗ ದೇವಸ್ಥಾನಕ್ಕೆ ಬಿಟ್ಟು ಕೊಡಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಗ್ರಾಮೀಣ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿರುವ ವಿಚಾರಕ್ಕೆ ಹಾಗೂ ತಮ್ಮ …

Read More »

ಕೊಲೆಗೆ ಹೊಸಪೇಟೆಯ ಕಾನ್ಸ್‌ಟೆಬಲ್‌ ಕೊಟ್ಟ ಸುಪಾರಿ- ಹತ್ಯೆ ಮಾಡಲು ಹೆದರಿದವ ಬಿಟ್ಟ ಬಾಯಿ!

ವಿಜಯನಗರ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್‌ಟೆಬಲ್‌ ಸುಪಾರಿ ಕೊಟ್ಟು ಈಗ ಸಿಕ್ಕಿಬಿದ್ದಿರುವ ಘಟನೆ ವಿಜಯಗರದಲ್ಲಿ ನಡೆದಿದೆ. ಹೊಸಪೇಟೆ ಟ್ರಾಫಿಕ್ ಪೊಲೀಸ್ ಠಾಣೆಯ ಕಾನ್ಸ್‌ಟೆಬಲ್‌ ಪರಶುರಾಮ ನಾಯ್ಕ್ ವಿರುದ್ಧ ದೂರು ದಾಖಲಾಗಿದ್ದು, ಈತ ತಲೆ ಮರೆಸಿಕೊಂಡಿದ್ದಾನೆ.   ಗ್ರಾಮ ಪಂಚಾಯಿತಿಯ ಸದಸ್ಯನ ಕೊಲೆಗೆ 10 ಲಕ್ಷ ರೂಪಾಯಿ ನಗದು ಹಾಗೂ ಹೊಸ ಮನೆ ಕಟ್ಟಿಸಿಕೊಡುವ ಭರವಸೆ ಕೊಟ್ಟು ಸುಪಾರಿ ಕೊಟ್ಟಿದ್ದ ಎನ್ನಲಾಗಿದೆ. ಸುಪಾರಿಗೆ ಕಾರಣವೇನು? ಹಗರಿಬೊಮ್ಮನಹಳ್ಳಿ ತಾಲೂಕಿನ ಮಾದೂರು ಗ್ರಾಮ ಪಂಚಾಯತಿ …

Read More »

ದೇಶದಲ್ಲಿ ಈಗಾಗಲೇ ಕಾಂಗ್ರೆಸ್‌ನವರ ಚಡ್ಡಿ ಬಿಚ್ಚಿ ಕಳಿಸಿದ್ದಾರೆ. ಮುಂದೆ ಕರ್ನಾಟಕದಲ್ಲಿ ಇರುವ ಲಂಗೋಟಿಯನ್ನು ಬಿಚ್ಚಿ ಕಳುಹಿಸಲಿದ್ದಾರೆ : ಆರಗ ಜ್ಞಾನೇಂದ್ರ

ಚಿತ್ರದುರ್ಗ: ದೇಶದಲ್ಲಿ ಈಗಾಗಲೇ ಕಾಂಗ್ರೆಸ್‌ನವರ ಚಡ್ಡಿ ಬಿಚ್ಚಿ ಕಳಿಸಿದ್ದಾರೆ. ಮುಂದೆ ಕರ್ನಾಟಕದಲ್ಲಿ ಇರುವ ಲಂಗೋಟಿಯನ್ನು ಬಿಚ್ಚಿ ಕಳುಹಿಸಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ನವರಿಗೆ ಬೇರೆ ವಿಚಾರಗಳಿಲ್ಲ. ಅವರಿಗೆ ವಿರೋಧ ಪಕ್ಷವಾಗುವ ಅರ್ಹತೆಗಳೂ ಇಲ್ಲ. ಟೀಕೆಗಳು ಆರೋಗ್ಯಪೂರ್ಣವಾಗಿರಬೇಕು ಎಂದು ಚಡ್ಡಿ ಸುಡುವ ಅಭಿಯಾನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.    

Read More »

ರಬಕವಿ-ಬನಹಟ್ಟಿ ಕಸಾಯಿಖಾನೆಗೆ ಅಕ್ರಮ ಗೋವು ಸಾಗಾಟ; ಆರೋಪಿಗಳು ಪೊಲೀಸ್ ವಶಕ್ಕೆ

ರಬಕವಿ-ಬನಹಟ್ಟಿ: ತಾಲೂಕಿನ ಬನಹಟ್ಟಿಯ ಬಿಲಾಲ್ ಮಸೀದಿ ಪಕ್ಕದಲ್ಲಿರುವ ಅನಧಿಕೃತ ಕಸಾಯಿಖಾನೆಯಲ್ಲಿ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಗೋವುಗಳನ್ನು ಕರೆತಂದು ಕಸಾಯಿಖಾನೆಗೆ ಕಳಿಸಲಾಗುತ್ತಿರುವುದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸಾಗಾಟ ಮಾಡುತ್ತಿದ್ದ ಆರೋಪಿಗಳ ಸಮೇತ ಗೋವುಗಳನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.   ಜಮಖಂಡಿಯ ದನದ ಮಾರುಕಟ್ಟೆಯಿಂದ ಅಕ್ರಮವಾಗಿ ಕಸಾಯಿಖಾನೆಗೆ ಗೋವು ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬನಹಟ್ಟಿ ಪಿಎಸ್‌ಐ ಸುರೇಶ ಮಂಟೂರ ಹಾಗು ಕ್ರೈಂ ಪಿಎಸ್‌ಐ ಪುರಂದರ ಪೂಜಾರಿ …

Read More »

ಅಸಮಾಧಾನದ ಹೊಳೆಯಲ್ಲಿ ಗೆಲುವಿಗೆ ಹೆಣಗಾಟ

ಬೆಳಗಾವಿ: ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಹತ್ತಾರು ಸಮಸ್ಯೆಗಳ ನಡುವೆ ಚುನಾವಣೆ ನಡೆಯುತ್ತಿರುವ ವಾಯ ವ್ಯ ಶಿಕ್ಷಕರ ಕ್ಷೇತ್ರದಲ್ಲಿ ಜಾತಿ ಸಮೀಕರಣ ಮತ್ತು ಹಣದ ಪ್ರಭಾವದ ಮಾತು ಜೋರಾಗಿ ಕೇಳಿಬರುತ್ತಿದೆ. ಪಕ್ಷದೊಳಗಿನ ಮನಸ್ತಾಪ ಹಾಗೂ ಮತದಾರರಲ್ಲಿನ ಅಸಮಾಧಾನ ಕಣ ದಲ್ಲಿರುವ ಅಭ್ಯರ್ಥಿಗಳಿಗೆ ತಮ್ಮ ಪ್ರತಿಷ್ಠೆ ಯನ್ನೇ ಪಣಕ್ಕೊಡ್ಡುವ ಪರಿಸ್ಥಿತಿ ನಿರ್ಮಾಣ ಮಾಡಿದೆ.   ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಗೆಲುವಿನ ಸಾಧ್ಯಾಸಾಧ್ಯತೆ ವಿಷಯಕ್ಕಿಂತ ಪಕ್ಷದೊಳಗಿನ ಅಸಮಾಧಾನವೇ ಹೆಚ್ಚು ಸುದ್ದಿಯಾಗುತ್ತಿದೆ. ಇದು ಬಿಜೆಪಿ ಹಾಗೂ ಕಾಂಗ್ರೆಸ್‌ಗಳೆರಡರಲ್ಲೂ ಇದೆ. …

Read More »