ಬೆಂಗಳೂರು: ಇತಿಹಾಸ ಪ್ರಸಿದ್ಧ ಬಸವನಗುಡಿಯ ಕಡಲೆಕಾಯಿ ಪರಿಷೆಯು ಮೂರು ದಿನಗಳ ಕಾಲ ನಡೆಯಲಿದ್ದು, ಅಧಿಕೃತವಾಗಿ ಇಂದು ಚಾಲನೆ ಸಿಗಲಿದೆ. ಬಸವನಗುಡಿ ಸುತ್ತಮುತ್ತ ಪರಿಷೆ ರಂಗೇರಿದೆ. ಭಾನುವಾರ ರಜೆ ಹಿನ್ನೆಲೆ ದೊಡ್ಡ ಗಣೇಶ ಮತ್ತು ದೊಡ್ಡ ಬಸವಣ್ಣ ದೇವಸ್ಥಾನದ ಸುತ್ತಮುತ್ತಲಿನ ಜನ ಸಾಗರವೇ ನೆರೆದಿತ್ತು. ಇಂದು ಅಧಿಕೃತ ಚಾಲನೆ ಸಿಗಲಿದ್ದು, ಈ ಸಂಬಂಧ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಭಾನುವಾರ ಸಿದ್ಧತೆಗಳ ಪರಿಶೀಲನೆ ನಡೆಸಿದರು. ಸಚಿವರು ದೊಡ್ಡ ಗಣೇಶನ ದೇವಸ್ಥಾನಕ್ಕೆ ಆಗಮಿಸಿ ವಿಶೇಷ …
Read More »ಪುನಾರಂಭ ಆಗಲಿರುವ ಅಧಿವೇಶನ ಜಮೀರ್ ವಿವಾದಾತ್ಮಕ ಹೇಳಿಕೆ, ಡಿಕೆಶಿ ಕೇಸ್ ವಾಪಸ್ ವಿಚಾರ; ಹೆಚ್ಚಲಿದೆಯಾ ಸದನ ಕಾದಾಟ?
ಬೆಳಗಾವಿ/ಬೆಂಗಳೂರು: ಚಳಿಗಾಲದ ಅಧಿವೇಶನ ಶುರುವಾಗಿ ಮೊದಲ ಐದು ದಿನ ಕಳೆದಿದ್ದು, ಕಲಾಪ ಇನ್ನು ಐದು ದಿನ ಕಾಲ ಮಾತ್ರ ನಡೆಯಲಿದೆ. ಸೋಮವಾರದಿಂದ ಪುನಾರಂಭ ಆಗಲಿರುವ ಅಧಿವೇಶನದಲ್ಲಿ ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಹಾಗೂ ಡಿಕೆಶಿ ಶಿವಕುಮಾರ್ ಮೇಲಿನ ಸಿಬಿಐ ಕೇಸ್ ಅನುಮತಿ ವಾಪಸ್ ಪಡೆದಿರುವ ವಿಷಯ ಪ್ರಸ್ತಾಪಿಸಲು ಪ್ರತಿಪಕ್ಷ ಬಿಜೆಪಿ ಮುಂದಾಗಿದೆ. ಇದರಿಂದ ಸದನದಲ್ಲಿ ಕದನ ಕಾವೇರುವ ಸಾಧ್ಯತೆ ಇದೆ. ಮೊದಲ ವಾರದ ಐದು ದಿನದ ವಿಧಾನಸಭೆ ಕಲಾಪದಲ್ಲಿ ಬೆಳಗಾವಿ ಬಿಜೆಪಿ …
Read More »ಬೆಳಗಾವಿಯಲ್ಲಿ ನಡೆದ ಜಿಲ್ಲಾಮಟ್ಟದ 64ನೇ ಫಲಪುಷ್ಪ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಕುಟುಂಬ ಸಮೇತ ಕುಂದಾನಗರಿ ಜನ ಆಗಮಿಸಿ ಕಣ್ತುಂಬಿಕೊಂಡರು.
ಬೆಳಗಾವಿ: ನಗರದಲ್ಲಿ ಮೂರು ದಿನ ಕಾಲ ಹಮ್ಮಿಕೊಂಡಿರುವ 64ನೇ ಫಲಪುಷ್ಪ ಪ್ರದರ್ಶನಕ್ಕೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ವೀಕೆಂಡ್ ಇರುವ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಜನ ಆಗಮಿಸಿ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಂಡರು. ಹೌದು, ಬೆಳಗಾವಿ ಹ್ಯೂಮ್ ಪಾರ್ಕ್ನಲ್ಲಿ ಜಿಪಂ, ತೋಟಗಾರಿಕೆ ಇಲಾಖೆ, ಕೃಷಿ , ಗ್ರಾಮೀಣ ಮತ್ತು ಸಣ್ಣ ಉದ್ಯಮ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ 64ನೇ ಫಲಪುಷ್ಪ ಪ್ರದರ್ಶನ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ವಿವಿಧ ಹೂವುಗಳಿಂದ ತಯಾರಿಸಿದ್ದ …
Read More »ಬೆಳಗಾವಿ ಜಿಲ್ಲೆ ವಿಭಜನೆಗೆ ಹೆಚ್ಚಿದ ಕೂಗು; ನಾಳೆ ಅಥಣಿ ಬಂದ್, ಚಿಕ್ಕೋಡಿಯಲ್ಲೂ ಬೃಹತ್ ಪ್ರತಿಭಟನೆ
ಚಿಕ್ಕೋಡಿ: ರಾಜ್ಯದಲ್ಲೇ ಅತಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯನ್ನು ವಿಭಜನೆ ಮಾಡುವಂತೆ ದಶಕಗಳಿಂದ ಹೋರಾಟ ನಡೆಯುತ್ತಿದೆ. ಬೆಳಗಾವಿ ಜಿಲ್ಲೆ ವಿಭಜಿಸಿ 1997ರಲ್ಲಿ ಚಿಕ್ಕೋಡಿಯನ್ನು ಹೊಸ ಜಿಲ್ಲೆಯನ್ನಾಗಿ ಘೋಷಿಸಲು ಸರ್ಕಾರ ನಿರ್ಧರಿಸಿತ್ತು. ಜಿಲ್ಲೆ ವಿಭಜಿಸಿದರೆ ಮರಾಠಿಗರ ಪ್ರಾಬಲ್ಯ ಹೆಚ್ಚಾಗುತ್ತದೆ ಎಂದು ಕನ್ನಡ ಪರ ಸಂಘಟನೆಗಳು ಪ್ರತಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಹೊಸ ಜಿಲ್ಲೆಯನ್ನಾಗಿ ಘೋಷಿಸುವ ನಿರ್ಧಾರದಿಂದ ಸರ್ಕಾರ ಹಿಂದಕ್ಕೆ ಸರಿದಿತ್ತು. ಆದರೆ ಇತ್ತೀಚೆಗೆ ಮತ್ತೆ ಗೋಕಾಕ್ ಮತ್ತು ಅಥಣಿಯನ್ನು ನೂತನ ಜಿಲ್ಲೆಯಾಗಿ ರಚನೆ ಮಾಡಬೇಕೆಂಬ ಕೂಗು …
Read More »ಅಂಬೇಡ್ಕರ್ ಮೈದಾನದಲ್ಲಿ ನಟಿ ಲೀಲಾವತಿ ಪಾರ್ಥಿವ ಶರೀರ: ಸಾರ್ವಜನಿಕರಿಂದ ಅಂತಿಮ ದರ್ಶನ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಶುಕ್ರವಾರ (ನಿನ್ನೆ) ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದು, ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ಲೀಲಾವತಿ ಅವರ ಪಾರ್ಥಿವ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಮತ್ತು ಅವರು ಹಿತೈಷಿಗಳು ಬಂದು ದರ್ಶನ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ 5:30 ರಿಂದ 10:45ರವರೆಗೂ ನೆಲಮಂಗಲದ ಡಾ.ಆರ್.ಅಂಬೇಡ್ಕರ್ ಅವರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿನೋದ್ ರಾಜ್ ಅವರ ಒಪ್ಪಿಗೆ ಮೇರೆಗೆ 11 …
Read More »ಜಮೀನೊಂದರಲ್ಲಿ ರಾತ್ರಿ ಮೆಣಸಿನಕಾಯಿ ಬೆಳೆ ಕಾಯುತ್ತಿದ್ದ ವ್ಯಕ್ತಿಯ ಭೀಕರ ಹತ್ಯೆ
ಗದಗ: ಮೆಣಸಿನಕಾಯಿ ಬೆಳೆ ಕಾಯಲು ಇದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆಗೈದು ರುಂಡ ತೆಗೆದುಕೊಂಡು ಪರಾರಿಯಾಗಿರುವ ಘಟನೆ ನಿನ್ನೆ ರಾತ್ರಿ ಗದಗ ತಾಲೂಕಿನ ತಿಮ್ಮಾಪುರ ಗ್ರಾಮದ ಜಮೀನೊಂದರಲ್ಲಿ ನಡೆದಿದೆ. ಸಣ್ಣ ಹನಮಪ್ಪ ವಜ್ರದ (65) ಕೊಲೆಗೀಡಾದ ವ್ಯಕ್ತಿ. ಬೆಳಗ್ಗೆ ಜಮೀನು ಮಾಲೀಕರು ಬಂದು ನೋಡಿದಾಗ ಈ ದುಷ್ಕೃತ್ಯ ಬೆಳಕಿಗೆ ಬಂದಿದೆ. ಗುಡಿಸಲಿನಲ್ಲಿ ದೇಹ ಮಾತ್ರ ಕಂಡು ಬಂದಿದೆ. ತಕ್ಷಣ ಕೊಲೆಗೆ ಸಂಬಂಧಿಸಿದಂತೆ ಜಮೀನಿನ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ …
Read More »ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿ ಪಾರ್ಥಿವ ಶರೀರ: ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಹುಕಾಲ ಛಾಪು ಮೂಡಿಸಿದ್ದ ಹಿರಿಯ ನಟಿ ಲೀಲಾವತಿ ಅವರು ನಿನ್ನೆ ಸಂಜೆ ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದರು. ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಅಂಬೇಡ್ಕರ್ ಮೈದಾನದಿಂದ ಲೀಲಾವತಿ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ನಟಿಯರಾದ ಸುಧಾರಾಣಿ, ಮಾಳವಿಕಾ ಸೇರಿದಂತೆ ಇನ್ನಿತರರು ಅಂತಿಮ ದರ್ಶನ …
Read More »ಸುವರ್ಣಸೌಧದಲ್ಲಿ ಸ್ಪೀಕರ್, ಸಭಾಪತಿಗಳು ಹಸಿರೀಕರಣಕ್ಕೆ ಪಣ ತೊಟ್ಟಿದ್ದಾರೆ
ಬೆಳಗಾವಿ: ಸುವರ್ಣಸೌಧದಲ್ಲಿ ಪರಿಸರ ಕಾಳಜಿ ಮೆರೆಯುವ ನಿಟ್ಟಿನಲ್ಲಿ ಸ್ಪೀಕರ್ ಯು ಟಿ ಖಾದರ್ ಚಳಿಗಾಲದ ಅಧಿವೇಶನದಲ್ಲಿ ವಿನೂತನ ಪ್ರಯೋಗವೊಂದನ್ನು ಆರಂಭಿಸಿದ್ದಾರೆ. ಸುವರ್ಣಸೌಧದ ಆವರಣದಲ್ಲಿ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರ ಹೆಸರಿನಲ್ಲಿ ಗಿಡ ನೆಡುವ ಮೂಲಕ ಶಾಸಕರ ಹೆಸರನ್ನು ಶಾಶ್ವತವಾಗಿ ಹಸಿರಾಗಿಸಲು ಮುಂದಾಗಿದ್ದಾರೆ. ಸುವರ್ಣ ಸೌಧದ ಪ್ರವೇಶ ರಸ್ತೆಯ ಪಕ್ಕದಲ್ಲಿ ಹಣ್ಣು ಹಂಪಲುಗಳು ಹಾಗೂ ಅಪರೂಪದ ಹೂವು ಬಿಡುವ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಆರಂಭಿಸಿದ್ದಾರೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ ಎಲ್ಲಾ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ಸಮಾಜದಲ್ಲಿ ಬಿರುಕು ಉಂಟು ಮಾಡುವುದಲ್ಲ, ಒಗ್ಗೂಡಿಸುವುದು ನನ್ನ ಕೆಲಸ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್
ಬೆಳಗಾವಿ/ಬೆಂಗಳೂರು: “ನಾನು ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತೇನೆ. ಕಿತ್ತು ಬಿಸಾಡುವುದಲ್ಲ, ಜೋಡಿಸುವುದು ನನ್ನ ಜವಾಬ್ದಾರಿ” ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಸಾವರ್ಕರ್ ಫೋಟೋ ತೆರವು ವಿಚಾರವಾಗಿ ಪರೋಕ್ಷ ಸಂದೇಶ ನೀಡಿದರು. ಸುವರ್ಣಸೌಧದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಜೊತೆ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಾವರ್ಕರ್ ಫೋಟೋ ವಿವಾದ ಸಂಬಂಧ ಪ್ರತಿಕ್ರಿಯಿಸಿ, “ಒಂದು ರಥವನ್ನು ಸಾಧ್ಯವಾದರೆ ಮುಂದಕ್ಕೆ ಎಳೆದುಕೊಂಡು ಹೋಗಿ. ಇಲ್ಲವಾದರೆ ಇದ್ದಲ್ಲೇ ಬಿಡಿ. ಆದರೆ ಹಿಂದಕ್ಕೆ ಎಳೆಯುವಂಥ ಕೆಲಸ ಮಾಡಬೇಡಿ ಎಂದು …
Read More »
Laxmi News 24×7