Breaking News

ರಾಜ್ಯ

ಜಾತಿಗಣತಿ: ಭೀಮ್ ಆರ್ಮಿ ವಿದ್ಯಾರ್ಥಿ ಘಟಕದ ಪ್ರತಿಭಟನೆಗೆ ನಟ ಚೇತನ್ ಬೆಂಬಲ

ಬೆಳಗಾವಿ: ಜಾತಿ ಗಣತಿ ಅಂಕಿಅಂಶಗಳನ್ನು ಸರ್ಕಾರ ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಬೆಳಗಾವಿ ಕೊಂಡಸಕೊಪ್ಪ ಸಮೀಪ ಭೀಮ್ ಆರ್ಮಿ ವಿದ್ಯಾರ್ಥಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚಿತ್ರನಟ ಚೇತನ್ ಆಗಮಿಸಿ ಸಾಥ್ ಕೊಟ್ಟರು. ಸರ್ಕಾರಿ ವಲಯದ ಖಾಸಗೀಕರಣ ನಿಷೇಧಿಸಬೇಕು. ಸಾಚಾರ್ ವರದಿ ಪರಿಶೀಲಿಸಿ ಅಲ್ಪಸಂಖ್ಯಾತರಿಗೆ ಶೇ. 10ರಷ್ಟು ಮೀಸಲಾತಿ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಸ್ಥಳಕ್ಕೆ ಆಗಮಿಸಿದ ಸಚಿವ ಮಧು ಬಂಗಾರಪ್ಪ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. …

Read More »

ಪ್ರೊ ಕಬಡ್ಡಿ 10ನೇ ಆವೃತ್ತಿಯ ನಿನ್ನೆ (ಶುಕ್ರವಾರ) ನಡೆದ ಪಂದ್ಯದಲ್ಲಿ ಯು ಮುಂಬಾ ಮಣಿಸಿ ಪುಣೇರಿ ಪಲ್ಟನ್ ತಂಡವು ಎರಡನೇ ಜಯ ದಾಖಲಿಸಿತು.

ಬೆಂಗಳೂರು: ಯು ಮುಂಬಾ ತಂಡವನ್ನು 43- 32 ಅಂಕಗಳ ಅಂತರದಿಂದ ಸೋಲಿಸುವ ಮೂಲಕ ಪ್ರೊ ಕಬಡ್ಡಿ 10ನೇ ಆವೃತ್ತಿಯಲ್ಲಿ ಪುಣೇರಿ ಪಲ್ಟನ್‌ ತಂಡ ತನ್ನ ಎರಡನೇ ಗೆಲುವು ದಾಖಲಿಸಿದೆ. ಶುಕ್ರವಾರ ಇಲ್ಲಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ 17 ರೈಡಿಂಗ್‌ಗಳಲ್ಲಿ 12 ಅಂಕಗಳನ್ನು ಗಳಿಸಿದ ಮೋಹಿತ್‌ ಗೋಯತ್ ಅವರು, ಪಲ್ಟನ್‌ ತಂಡದ ಅದ್ಭುತ ಜಯಕ್ಕೆ ಕಾರಣರಾದರು. ಯು ಮುಂಬಾ ಮಣಿಸಿ ಎರಡನೇ ಜಯ ದಾಖಲಿಸಿದ ಪುಣೇರಿ ಪಲ್ಟನ್ಈ ಋುತುವಿನ …

Read More »

ಬ್ರಾಂಡ್ ಬೆಂಗಳೂರಿನ ಅಡಿ ಫ್ಲೈಓವರ್​ನ ಪಿಲ್ಲರ್​ಗಳಿಗೆ ಕ್ರಿಕೆಟಿಗರ ಚಿತ್ರ

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಪಾಲಿಕೆಯಿಂದ ಬ್ಯಾಂಡ್ – ಬೆಂಗಳೂರಿನ ಅಡಿ ಸಿಲಿಕಾನ್ ಸಿಟಿಯನ್ನು ಸುಂದರಗೊಳಿಸುವ ಪ್ರಯತ್ನ ನಡೆಯುತ್ತಿದೆ. ಇತ್ತೀಚೆಗೆ ಬೆಂಗಳೂರು ಹಬ್ಬವನ್ನು ಸಹ ಆಚರಿಸಿ ನಗರದ ಹಲವು ರಸ್ತೆಗಳು, ಜಂಕ್ಷನ್ ಕಟ್ಟಡಗಳನ್ನು ಸುಂದರಗೊಳಿಸಿ ವಿದ್ಯುತ್ ಅಲಂಕಾರದಿಂದ ಕಂಗೊಳಿಸುವಂತೆ ಮಾಡಲಾಗಿತ್ತು. ಫ್ಲೈಓವರ್​ನ ಪಿಲ್ಲರ್​ಗಳಿಗೆ ಕ್ರಿಕೆಟಿಗರ ಚಿತ್ರಫ್ಲೈ ಓವರ್ ಪಿಲ್ಲರ್​ಗಳ ಕೆಳಗೆ ಸಹ , ಕುಳಿತುಕೊಳ್ಳಲು ಆಸನಗಳು ಮತ್ತು ಮಕ್ಕಳಿಗೆ ಆಟವಾಡಲು ಅನುವು ಮಾಡಿಕೊಡಲಾಗಿದೆ. ಪಿಲ್ಲರ್​ಗಳಿಗೆ ಹಲವು ಚಿತ್ರಗಳನ್ನು ಸಹ ಬಿಡಿಸಿ ಸ್ಥಳವನ್ನು …

Read More »

ನಟಿ ಲೀಲಾವತಿ ಪಾರ್ಥಿವ ಶರೀರ ಸಾರ್ವಜನಿಕರಿಂದ ಅಂತಿಮ ದರ್ಶನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಶುಕ್ರವಾರ (ನಿನ್ನೆ) ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದು, ನೆಲಮಂಗಲದ ಅಂಬೇಡ್ಕರ್​ ಮೈದಾನದಲ್ಲಿ ಲೀಲಾವತಿ ಅವರ ಪಾರ್ಥಿವ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಮತ್ತು ಅವರು ಹಿತೈಷಿಗಳು ಬಂದು ದರ್ಶನ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ 5:30 ರಿಂದ 10:45ರವರೆಗೂ ನೆಲಮಂಗಲದ ಡಾ.ಆರ್.ಅಂಬೇಡ್ಕರ್ ಅವರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಿನೋದ್ ರಾಜ್ ಅವರ ಒಪ್ಪಿಗೆ ಮೇರೆಗೆ 11 …

Read More »

ಹಿರಿಯ ನಟಿ ಡಾ. ಲೀಲಾವತಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಹಿರಿಯ ನಟಿ ಡಾ. ಲೀಲಾವತಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಗೋಕಾಕ್-ಸ್ಯಾಂಡಲ್ ವುಡ್ ನ ಹಿರಿಯ ನಟಿ ಡಾ. ಲೀಲಾವತಿ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ಲೀಲಾವತಿ ಅವರ ನಿಧನದಿಂದ ಚಿತ್ರೋದ್ಯಮವೂ ಸೇರಿದಂತೆ ಇಡೀ ನಾಡೇ ಬಡವಾಗಿದೆ. ಹಲವು ವರ್ಷಗಳ ಕಾಲ ಕನ್ನಡ ಚಿತ್ರರಂಗವನ್ನು ಆಳಿದ ಅವರು, ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಬಹುಭಾಷೆ ನಟಿಯಾಗಿ ಗುರುತಿಸಿಕೊಂಡಿದ್ದ ಅವರು, ಇತ್ತೀಚೆಗೆ ವಯೋಸಹಜ ಅನಾರೋಗ್ಯದಿಂದ …

Read More »

ಸತತ ಹಾಜರಿ: ಶಾಸಕ ಜನಾರ್ದನ ರೆಡ್ಡಿಗೆ ಉಡುಗೊರೆ

ಗಂಗಾವತಿ: ಕಳೆದ ವಿಧಾನಸಭೆಯ ಅಧಿವೇಶನದ ಕಲಾಪದ ಒಂದು ದಿನವೂ ಗೈರಾಗದೇ ಗಮನ ಸೆಳೆದಿದ್ದ ಗಂಗಾವತಿಯ ಶಾಸಕ ಜಿ. ಜನಾರ್ದನ ರೆಡ್ಡಿಗೆ ಸ್ಪೀಕರ್ ಯು.ಟಿ. ಖಾದರ್ ಉಡುಗೊರೆ ನೀಡುವ ಮೂಲಕ ಅಭಿನಂದಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದ ಬಿಡುವಿನ ಸಂದರ್ಭದಲ್ಲಿ ತಮ್ಮ ಕೊಠಡಿಗೆ ಕರೆಯಿಸಿಕೊಂಡ ಸ್ಪೀಕರ್ ಪುಟ್ಟ ಉಡುಗೊರೆ ನೀಡಿ ಅಭಿನಂದನೆ ಸಲ್ಲಿಸಿದರು.   ವಿಧಾನಸೌಧದಲ್ಲಿ ನಡೆದ ಕಳೆದ ಅಧಿವೇಶನದ 14 ದಿನಗಳ ಎಲ್ಲ ಕಾರ್ಯಕಲಾಪದಲ್ಲಿ ಸಮಯಕ್ಕೆ ಸರಿಯಾಗಿ ಹಾಜರಾಗಿ ದಿನದ …

Read More »

ಬಡ್ಡಿದರಗಳು ಹೆಚ್ಚಾಗುತ್ತವೆಯೋ ಅಥವಾ ಕಡಿಮೆಯಾಗುತ್ತವೆಯೋ ಎಂಬ ಪ್ರಶ್ನೆಗಳಿಗೆ ಇಂದು ಉತ್ತರ ಲಭಿಸಿದೆ.

ನವದೆಹಲಿ: ಬಡ್ಡಿದರಗಳು ಹೆಚ್ಚಾಗುತ್ತವೆಯೋ ಅಥವಾ ಕಡಿಮೆಯಾಗುತ್ತವೆಯೋ ಎಂಬ ಪ್ರಶ್ನೆಗಳಿಗೆ ಇಂದು ಉತ್ತರ ಲಭಿಸಿದೆ. ಮೂರು ದಿನಗಳಿಂದ ಭಾರತೀಯ ರಿಸರ್ವ್ ಬ್ಯಾಂಕ್​ನಿಂದ(ಆರ್‌ಬಿಐ) ನಡೆಯುತ್ತಿರುವ ಸುದೀರ್ಘ ಹಣಕಾಸು ನೀತಿ ಸಮಿತಿ ಸಭೆ ಇಂದು (ಶುಕ್ರವಾರ) ಕೊನೆಗೊಂಡಿದೆ. ಸಭೆಯ ನಂತರ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹಣಕಾಸು ನೀತಿಯನ್ನು ಬಿಡುಗಡೆಗೊಳಿಸಿದ್ದಾರೆ. ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದಕೊಳ್ಳಲಾಗಿದೆ. ರೆಪೊ ದರ ಶೇ 6.5 ಇದೆ. ಜಿಡಿಪಿ ಬೆಳವಣಿಗೆ ಶೇ 7ರಷ್ಟು ಆಗಲಿದೆ ಅಂದಾಜಿಸಿದ್ದಾರೆ. ಹಣದುಬ್ಬರ ಶೇ 5.4ರಷ್ಟಿದೆ …

Read More »

ಯತ್ನಾಳ, ಮೌಲ್ವಿ ಕುಟುಂಬ ಉದ್ಯಮದ ಪಾಲುದಾರರು: ಅಕ್ಕಪಕ್ಕದ ಮನೆಗಳಲ್ಲೇ ವಾಸ

ವಿಜಯಪುರ: ‘ಐಸಿಸ್‌ ಭಯೋತ್ಪಾದಕರೊಂದಿಗೆ ನಂಟಿದೆ’ ಎಂದು ಆರೋಪಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ಆರೋಪಕ್ಕೆ ಒಳಗಾಗಿರುವ ಜಮಾತ್‌ ಎ ಅಹಲೆ ಸುನ್ನತ್‌ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರೂ ಆದ ಮೌಲ್ವಿ ತನ್ವೀರ್‌ ಹಾಶ್ಮಿ ಅವರು ಇಲ್ಲಿನ ಗಾಂಧಿಚೌಕದ ಬಳಿಯಿರುವ ‘ಟೂರಿಸ್ಟ್‌ ಹೋಟೆಲ್‌’ನ ಪಾಲುದಾರರು.   ಅಷ್ಟೇ ಅಲ್ಲ, ನಗರದ ಹೊರವಲಯದ ಮಹಲ್‌ ಐನಾಪುರ ಗ್ರಾಮದಲ್ಲಿ ಹಾದು ಹೋಗಿರುವ ವಿಜಯಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿ ಬಳಿ ಅವರಿಬ್ಬರ ಮನೆಗಳು, ವಾಣಿಜ್ಯ ಮಳಿಗೆಗಳು …

Read More »

ಆರ್​ಎಸ್​ಎಸ್​ ಮ್ಯೂಸಿಯಂಗೆ ದಲಿತರಿಗೆ ಪ್ರವೇಶವಿಲ್ಲ ಅನ್ನೋದು ಹಸಿ ಸುಳ್ಳು: ಮಾಜಿ ಶಾಸಕ ಎನ್​ ಮಹೇಶ್

ಚಾಮರಾಜನಗರ : ಮೌನವಾಗಿ ದೇಶ ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಂಡಿರುವ ಆರ್​ಎಸ್​ಎಸ್​ ಮ್ಯೂಸಿಯಂ ಒಳಗೆ ದಲಿತರಿಗೆ ಪ್ರವೇಶಕ್ಕೆ ಅವಕಾಶವಿಲ್ಲವೆಂಬುದು ಹಸಿ ಸುಳ್ಳು. ಏನಾದರೂ ದಲಿತರಿಗೆ ಅವಕಾಶವಿಲ್ಲ ಎನ್ನುವುದು ನಿಜವಾದರೇ ಅದನ್ನು ಗೂಳಿಹಟ್ಟಿ ಶೇಖರ್ ಸಾಬೀತುಪಡಿಸಲಿ ಎಂದು ಮಾಜಿ ಶಾಸಕ ಎನ್ ಮಹೇಶ್ ಹೇಳಿದ್ದಾರೆ. ಚಾಮರಾಜನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರ ವಾಟ್ಸಪ್​ ಆಡಿಯೋದಲ್ಲಿರುವ ಮಾತುಗಳನ್ನು ಕೇಳಿಸಿಕೊಂಡಿದ್ದೇನೆ. ಸೈಕಾಲಜಿ ವಿದ್ಯಾರ್ಥಿಯಾದ ನನಗೆ ಅವರು ಹೇಳಿರುವುದು ಸುಳ್ಳು ಅನಿಸುತ್ತದೆ. …

Read More »

ಆಸ್ಪತ್ರೆಗೆ ದಾಖಲಾದ ತೆಲಂಗಾಣದ ಮಾಜಿ ಸಿಎಂ

ಹೈದರಾಬಾದ್: ಬಿಆರ್‌ಎಸ್ ನಾಯಕ ಹಾಗೂ ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಎರ್ರವೆಲ್ಲಿಯ ತಮ್ಮ ನಿವಾಸದಲ್ಲಿ ಬಿದ್ದು ಗಾಯಗೊಂಡಿದ್ದರು.   ಈ ಹಿನ್ನೆಲೆಯಲ್ಲಿ ಕಲ್ವಕುಂಟ್ಲ ಚಂದ್ರಶೇಖರ್​ ರಾವ್ ಅವರನ್ನು ಗುರುವಾರ ತಡರಾತ್ರಿ ಸೋಮಾಜಿಗುಡದಲ್ಲಿರುವ ಯಶೋದಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಿದ್ದಿದ್ದರಿಂದ ಅವರ ಸೊಂಟದ ಮೂಳೆ ಮುರಿತವಾಗಿದೆ ಎಂದು ವೈದ್ಯರು ಹೇಳಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡುವ ಸಾಧ್ಯತೆಗಳಿವೆ. ವೈದ್ಯಕೀಯ ಪರೀಕ್ಷೆಗಳ ಬಳಿಕ ವೈದ್ಯರು ಶಸ್ತ್ರಚಿಕಿತ್ಸೆ …

Read More »