Breaking News

ರಾಜ್ಯ

ಮಡಿವಾಳ ಸಮಾಜಕ್ಕೆ ಎಸ್​ಸಿ ಮೀಸಲಾತಿ ನೀಡದಿದ್ದರೆ ಆತ್ಮಹತ್ಯೆ ಎಚ್ಚರಿಕೆ

ಬೆಳಗಾವಿ: ಮಡಿವಾಳ ಸಮಾಜವನ್ನು ಕೂಡಲೇ ಪರಿಶಿಷ್ಟ ಜಾತಿಗೆ ಸೇರಿಸಬೇಕು. ಡಾ ಅನ್ನಪೂರ್ಣಮ್ಮನವರ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿ ಕೂಡಲೇ ಅನುಷ್ಠಾನಕ್ಕೆ ತರಬೇಕು. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಮಡಿವಾಳ ಸಮಾಜ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಉತ್ತರಕರ್ನಾಟಕ ಮಡಿವಾಳರ ಸಂಘದ ಬಾಗಲಕೋಟೆ ಪದಾಧಿಕಾರಿಗಳು ಇಂದು ಬೆಳಗಾವಿಯ ಸುವರ್ಣ ಗಾರ್ಡನ್ ಬಳಿ‌ ಪ್ರತಿಭಟನೆ ನಡೆಸಿದರು. ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸಲು 2008ರಲ್ಲಿ ಅಂದಿನ ಸರ್ಕಾರಕ್ಕೆ ಡಾ‌ ಅನ್ನಪೂರ್ಣಮ್ಮನವರ ನೇತೃತ್ವದ ಸಮಿತಿ ವರದಿ ಸಲ್ಲಿಸಿದೆ‌. …

Read More »

ಪೊಲೀಸ್‌ ಇಲಾಖೆಗೆ ಹೊಸ ವಾಹನಗಳ ಖರೀದಿಗೆ ತೀರ್ಮಾನ

ಬೆಳಗಾವಿ/ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ 1,700ಕ್ಕೂ ಹೆಚ್ಚು ವಾಹನಗಳನ್ನು ಸ್ಕ್ರಾಂಪ್‌ಗೊಳಿಸಲು (ನಿರುಪಯುಕ್ತ) ತೀರ್ಮಾನಿಸಲಾಗಿದ್ದು, ಹಂತಹಂತವಾಗಿ ನಿರುಪಯುಕ್ತಗೊಳಿಸುವುದರ ಜೊತೆಗೆ 100 ಕೋಟಿ ರೂ.ವೆಚ್ಚದಲ್ಲಿ ಹೊಸ ವಾಹನಗಳನ್ನು ಖರೀದಿಸಲು ಉದ್ದೇಶಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಯಲ್ಲಿ ಇಂದು ಹೇಳಿದರು. ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಶ್ರೀನಿವಾಸ ಜಿ.ಎಚ್. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಗ್ನಿಶಾಮಕ ಠಾಣೆ ಮತ್ತು ತುರ್ತು ಸೇವಾ ಇಲಾಖೆಯಲ್ಲಿ 15 ವರ್ಷಗಳ ಹಳೆಯ ವಾಹನಗಳನ್ನು ಅನುಪಯುಕ್ತಗೊಳಿಸುವ ಹಾಗೂ ಬದಲಿಗೆ ಹೊಸ ವಾಹನಗಳನ್ನು …

Read More »

ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡುವ ವಿಧೇಯಕ ಸೇರಿ 3 ವಿಧೇಯಕ ಮಂಡನೆ

ಬೆಳಗಾವಿ: ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡುವ ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ ಸೇರಿದಂತೆ ಮೂರು ವಿಧೇಯಕಗಳನ್ನು ವಿಧಾನಸಭೆ ಕಲಾಪದಲ್ಲಿ ಮಂಡಿಸಲಾಯಿತು.   ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ, ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲಾಯಿತು. ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕವನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಕರ್ನಾಟಕ ಗ್ರಾಮ …

Read More »

ಹುತಾತ್ಮ ಯೋಧ ಪ್ರಾಂಜಲ್ ಮೇಲಿನ ನನ್ನ ಹೇಳಿಕೆಯನ್ನು ತಿರುಚಿದ ಸಂಸದ ತೇಜಸ್ವಿ ಸೂರ್ಯ ಕ್ಷಮೆ ಕೇಳಬೇಕು ಎಂದ ಸಿಎಂ

ಬೆಳಗಾವಿ: ಹುತಾತ್ಮ ಯೋಧ ಪ್ರಾಂಜಲ್ ಮೇಲಿನ ನನ್ನ ಹೇಳಿಕೆಯನ್ನು ತಿರುಚಿದ ಸಂಸದ ತೇಜಸ್ವಿ ಸೂರ್ಯ ಕ್ಷಮೆ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ, ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು ತಿರುಚಿ ಹಂಚಿಕೊಂಡಿರುವ ತೇಜಸ್ವಿ ಸೂರ್ಯ ಅವರು ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ, ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಈ ಸಂಸದನಲ್ಲಿ ಕಿಂಚಿತ್ತು ಮಾನ ಮರ್ಯಾದೆ …

Read More »

ರಾಜ್ಯ ಸರ್ಕಾರ ಶೀಘ್ರವೇ ಮೀಸಲಾತಿ ಕೊಡುತ್ತದೆ ಎನ್ನುವ ಭರವಸೆ ಇದೆ.:ಬಸವಜಯ ಮೃತ್ಯುಂಜಯ ಶ್ರೀ

ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರ ಶೀಘ್ರವೇ ಮೀಸಲಾತಿ ಕೊಡುತ್ತದೆ ಎನ್ನುವ ಭರವಸೆ ಇದೆ. ಎಲ್ಲಾ ಪಕ್ಷಗಳಿಗೂ ಪಂಚಮಸಾಲಿ ಮತಗಳು ಬೇಕು. ಹೀಗಾಗಿ ಲೋಕಸಭೆ ಚುನಾವಣೆಯೊಳಗೆ ಮೀಸಲಾತಿ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಇಂದು ಬೆಳಗಾವಿಯ ಖಾಸಗಿ ಹೋಟೆಲ್​ನಲ್ಲಿ ಸರ್ವಪಕ್ಷಗಳ ಪಂಚಮಸಾಲಿ ಸಮಾಜದ ಹಾಲಿ ಹಾಗೂ ಮಾಜಿ ಶಾಸಕರ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಹೋರಾಟಕ್ಕೆ ಸರಿಯಾದ ನ್ಯಾಯ …

Read More »

ದೇವಸ್ಥಾನ ಪುನರಾಭಿವೃದ್ಧಿ ಯೋಜನೆ ಅನುದಾನ ದುರ್ಬಳಕೆ ಆರೋಪ: ತನಿಖೆಗೆ ಸಚಿವರ ರಾಮಲಿಂಗಾರೆಡ್ಡಿ ಆದೇಶ

ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಮುಜರಾಯಿ ಇಲಾಖೆ ಬಿಡುಗಡೆ ಮಾಡಿದ ಅನುದಾನ ದುರ್ಬಳಕೆಯಾಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಹೇಳಿದರು. ಬೆಳಗಾವಿ: ‘ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಮುಜರಾಯಿ ಇಲಾಖೆ ಬಿಡುಗಡೆ ಮಾಡಿದ ಅನುದಾನ ದುರ್ಬಳಕೆಯಾಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ …

Read More »

ರೈತರ ನೆರವಿಗೆ ರೂ.10 ಸಾವಿರ ಕೋಟಿ ನೀಡಿ: ಸರ್ಕಾರಕ್ಕೆ ಬಿಜೆಪಿ ಎಂಎಲ್ ಸಿ ಪೂಜಾರಿ ಆಗ್ರಹ

ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಅವರು, ರೈತರ ನೆರವಿಗೆ ಕೂಡಲೇ 10 ಸಾವಿರ ಕೋಟಿ ಬರ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಇಲ್ಲವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ. ಬೆಳಗಾವಿ: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಕೋಟ ಶ್ರೀನಿವಾಸ ಪೂಜಾರಿ ಅವರು, ರೈತರ ನೆರವಿಗೆ ಕೂಡಲೇ 10 …

Read More »

ಕರ್ನಾಟಕ-ತಮಿಳುನಾಡು ನಡುವಿನ ರೈಲು ಸಂಚಾರದಲ್ಲಿ ಅಡಚಣೆ

ಮಿಚಾಂಗ್ ಚಂಡಮಾರುತವು ತಮಿಳುನಾಡು-ಕರ್ನಾಟಕದ ನಡುವೆ ಚಲಿಸುವ 40ಕ್ಕೂ ಹೆಚ್ಚು ರೈಲುಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ಬೆಂಗಳೂರು: ಮಿಚಾಂಗ್ ಚಂಡಮಾರುತವು ತಮಿಳುನಾಡು-ಕರ್ನಾಟಕದ ನಡುವೆ ಚಲಿಸುವ 40ಕ್ಕೂ ಹೆಚ್ಚು ರೈಲುಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ಚಂಡಮಾರುತದ ಪರಿಣಾಮ ದಕ್ಷಿಣ ರೈಲ್ವೆ ಒಂಬತ್ತು ರೈಲುಗಳನ್ನು ರದ್ದುಗೊಳಿಸಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. .. ಡಾ ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು-ಚೆನ್ನೈ ಸೆಂಟ್ರಲ್ (ರೈಲು ಸಂಖ್ಯೆ 20607/20608); ಡಾ ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು-ಚೆನ್ನೈ ಸೆಂಟ್ರಲ್ …

Read More »

ಪೊಲೀಸ್ ಠಾಣೆ ಆವರಣದಲ್ಲಿಯೇ ಮದುವೆ

ಧಾರವಾಡ: ಯುವಕ ಮತ್ತು ಯುವತಿ ಮದುವೆ ವಯಸ್ಸಿಗೆ ಬಂದವರಿದ್ದರೇ, ಧರ್ಮ ಜಾತಿ ಯಾವುದೇ ಇರಲಿ, ಪರಸ್ಪರ ಒಪ್ಪಿ ಮದುವೆ (Love Marriage) ಆಗೋದಕ್ಕೆ ಕಾನೂನಿನಲ್ಲಿ ಒಪ್ಪಿಗೆಯೇ ಇದೆ. ಆದರೆ ಈ ರೀತಿ ಆಗಿದ್ದ ಮದುವೆಯೊಂದನ್ನು ಮುರಿದು, ಪ್ರೇಮಿಗಳನ್ನು ಬೇರ್ಪಡಿಸಲು ಮುಂದಾಗಿರೋ ಪೊಲೀಸರ ಮೇಲೆಯೇ ಬಂದಿತ್ತು. ಕೊನೆಗೆ ಠಾಣೆಯಲ್ಲಿಯೇ ಪೊಲೀಸರು (Dharwad Police) ಜೋಡಿಗೆ ಮದುವೆ ಮಾಡಿ ಕಳುಹಿಸಿದ ಘಟನೆಯೊಂದು ಧಾರವಾಡದಲ್ಲಿ ನಡೆದಿದೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಮಂಜುನಾಥ್ ಮಾಯಕಾರ …

Read More »

ಭ್ರಷ್ಟರಿಗೆ ‘ಲೋಕಾಯುಕ್ತ’ ಶಾಕ್ : ರಾಜ್ಯದ ಹಲವೆಡೆ ದಾಳಿ,

ಬೆಂಗಳೂರು : ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ 13 ಸರ್ಕಾರಿ ಅಧಿಕಾರಿಗಳ 63 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮೂರು ಸ್ಥಳಗಳು, ಬೀದರ್ ಎರಡು ಸ್ಥಳಗಳು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ ಮತ್ತು ಧಾರವಾಡದ ತಲಾ ಒಂದು ಸ್ಥಳಗಳ ಮೇಲೆ 200 ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.   ಜಕ್ಕೂರಿನ ಅಮೃತ್ ಹಳ್ಳಿಯಲ್ಲಿರುವ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ …

Read More »