Breaking News

ರಾಜ್ಯ

ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಶಾಸಕಾಂಗ ಸಭೆಗೆ ಹಾಜರಾಗಲ್ಲ: ಯತ್ನಾಳ್

ಬೆಳಗಾವಿ: ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಪಕ್ಷದ ಶಾಸಕಾಂಗ ಸಭೆಗೆ ಹಾಜರಾಗುವುದಿಲ್ಲ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ತಿಳಿಸಿದ್ದಾರೆ. ಸುವರ್ಣಸೌಧದಲ್ಲಿಂದು ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಈ ಭಾಗದವರಿಗೆ ನಾಯಕತ್ವ ನೀಡಿಲ್ಲ. ನಾವು ದ.ಕರ್ನಾಟಕ ಭಾಗದ ನಾಯಕರ ಗುಲಾಮರಲ್ಲ ಎಂದು ಅಸಮಾಧಾನ ಹೊರಹಾಕಿದರು. ದೇಶಕ್ಕೆ ನರೇಂದ್ರ ಮೋದಿಯೇ ಗ್ಯಾರಂಟಿ ಇರುವುದರಿಂದ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಿಕ್ಕಿದೆ. ಈ ಗೆಲುವಿಗೆ ಕಾರಣ ಹಿಂದುತ್ವ, ಅಭಿವೃದ್ಧಿ, ಹೊಂದಾಣಿಕೆ ಇಲ್ಲದ …

Read More »

ಗ್ಯಾರೆಂಟಿ ವರ್ಕೌಟ್ ಆಗದೇ ತೆಲಂಗಾಣದಲ್ಲಿ ಗೆದ್ದೆವಾ?: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಇವತ್ತಿನಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಕೆಲವು ಬಿಲ್​ಗಳು ಇವೆ. ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರ ಕೊಡಲು ನಮ್ಮ ಸರ್ಕಾರ ತಯಾರಿದೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು. ಪಂಚ ರಾಜ್ಯಗಳ ಚುನಾವಣೆಯಲ್ಲಿ ಗ್ಯಾರೆಂಟಿಗಳು ವರ್ಕೌಟ್ ಆಗಲಿಲ್ಲ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಸಿಎಂ, ಗ್ಯಾರೆಂಟಿ ವರ್ಕೌಟ್ ಆಗದೇ ತೆಲಂಗಾಣ …

Read More »

ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವಕೀಲರ ಪ್ರತಿಭಟನೆ

ಚಿಕ್ಕಮಗಳೂರು ವಕೀಲರ ಮೇಲೆ ಪೋಲಿಸರ ಹಲ್ಲೆ ಖಂಡಿಸಿ ಬೆಳಗಾವಿಯಲ್ಲಿ ವಕೀಲರ ಪ್ರತಿಭಟನೆ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವಕೀಲರ ಪ್ರತಿಭಟನೆ ಪ್ರತಿಭಟನೆ ವೇಳೆ ಚಿಕ್ಕೋಡಿ ಎಸಿ. ಹಾಗೂ ವಕೀಲರ ನಡುವೆ ಜಟಾಪಟಿ ಪ್ರತಿಭಟನೆ ವೇಳೆ ಎಸಿ.ವಾಹನ ಒಳಗಡೆ ಬಂದ ಹಿನ್ನಲೆ ರೊಚ್ಚಿಗೆದ್ದ ವಕೀಲರು ಪ್ರತಿಭಟನಾ ಸ್ಥಳದಲ್ಲಿ ಎಸಿ ಜೋತೆಗೆ ವಾಗ್ವಾದ ಎ.ಸಿ.ಯನ್ನ ಕೆಳಗೆ ಇಳಿಸಿ ನಡೆದುಕೊಂಡು ಕಳಿಸಿದ ವಕೀಲರು ವಕೀಲರ ವರ್ತನೆಗೆ ಸ್ಥಳದಲ್ಲಿ ವಾಹನ ಬಿಟ್ಟು ತೆರಳಿದ ಚಿಕ್ಕೋಡಿ ಎ.ಸಿ ಸಂಪಗಾವಿ

Read More »

ಸೂಕ್ತ ಸಮಯಕ್ಕೆ ಬರುವ ಶಾಸಕರಿಗೆ ಕಾಫಿ ಕಪ್ ಗಿಫ್ಟ್,: ಸ್ಪೀಕರ್ ಯುಟಿ ಖಾದರ್

ಇಂದಿನಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದ ಸೂಕ್ತ ಸಮಯಕ್ಕೆ ಬರುವ ಶಾಸಕರುಗಳಿಗೆ ಉಡುಗೊರೆ ಕೊಡಲಾಗುತ್ತಿದೆ. ಇನ್ನು ಈ ಬಗ್ಗೆ ಸ್ಪೀಕರ್ ಯುಟಿ ಖಾದರ್ ಮಾತನಾಡಿದ್ದು, ಅದು ಈ ಕೆಳಗಿನಂತಿದೆ,    ಬೆಳಗಾವಿ, (ಡಿಸೆಂಬರ್ 04) : ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ (Belagavi Session)ಇಂದಿನಿಂದ ಆರಂಭವಾಗಲಿದೆ. ಬೆಳಗ್ಗೆ 11ಗಂಟೆಗೆ ಅಧಿವೇಶನ ಆರಂಭಗೊಳ್ಳಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು,ಇತ್ತ ಸುವರ್ಣಸೌಧದ ಹೊರಗೆ, ಪ್ರತಿಭಟನಾ ಸ್ಥಳ ಸೇರಿದಂತೆ ಎಲ್ಲೆಡೆ ಸಿಸಿಟಿವಿ …

Read More »

ಚಳಿಗಾಲದ ಅಧಿವೇಶನ ಈ ಭಾಗದ ರೈತರಿಗೆ, ಬಡವರಿಗೆ ಅನೂಕೂಲವಾಗಲಿ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಳಗಾವಿ :ಉತ್ತರ ಕರ್ನಾಟಕದ ಹೆಬ್ಬಾಗಿಲು ಬೆಳಗಾವಿ (Belagavi) ಜಿಲ್ಲೆ. ಈ ಭಾಗದ ಬಡವರಿಗೆ, ರೈತರಿಗೆ ಅನುಕೂಲವಾಗಲಿ ಎನ್ನುವ ನಿಟ್ಟಿನಲ್ಲಿ ಸುವರ್ಣಸೌಧ (Suvarna soudha) ಚಿಂತನೆ ಮಾಡಿದ್ದು ಮಾಜಿ ಸಿಎಂ ಯಡಿಯೂರಪ್ಪನವರು (B S Yediyurappa). ಚಳಿಗಾಲದ ಅಧಿವೇಶನ ಈ ಭಾಗದ ರೈತರಿಗೆ, ಬಡವರಿಗೆ ಅನೂಕೂಲವಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ಹೇಳಿದರು. ಸೋಮವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಜನತೆ …

Read More »

ಬರ ವೈಫಲ್ಯ ಬಗ್ಗೆ ವಿಪಕ್ಷಗಳಿಂದ ಮೊದಲ ದಿನವೇ ನಿಲುವಳಿ ನೋಟಿಸ್‌!

ಬೆಂಗಳೂರು: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ (ಡಿ. 4) ಅಧಿವೇಶನ (Belagavi Winter Session) ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ವಿಪಕ್ಷಗಳಿಂದ ನಿಲುವಳಿ ನೋಟಿಸ್ (Adjournment notice) ಜಾರಿಯಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಜಂಟಿ ನೋಟಿಸ್ ನೀಡಿದ್ದು, ಸದನದಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಕುರಿತಂತೆ ರಾಜ್ಯ ಸರ್ಕಾರದ (Congress Government) ವೈಫಲ್ಯ ಚರ್ಚಿಸಲು ಆಗ್ರಹಿಸಿವೆ.   ರಾಜ್ಯವು ಬರಗಾಲಕ್ಕೆ ತುತ್ತಾಗುವ ಸ್ಪಷ್ಟ ಸೂಚನೆ ಇದ್ದರೂ ಬರ ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಬೇಕಾಗಿದ್ದ ಮುಂಜಾಗ್ರತೆ …

Read More »

ಗಸ್ತು ಅರಣ್ಯ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಹತೆ, ಅರ್ಜಿ ಸಲ್ಲಿಕೆ, ವೇತನದ ವಿವರ

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಒಟ್ಟು 540 ಅರಣ್ಯ ಪಾಲಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇವು ಗ್ರೂಪ್​ ಸಿ ಹುದ್ದೆಗಳಾಗಿವೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಧಿಸೂಚನೆಹುದ್ದೆಗಳು- ಎಲ್ಲಿ, ಎಷ್ಟು?: ಬೆಂಗಳೂರು 49 ಬೆಳಗಾವಿ 12 ಬಳ್ಳಾರಿ 29 ಚಾಮರಾಜನಗರ 83 ಚಿಕ್ಕಮಗಳೂರು 52 ಧಾರವಾಡ 5 ಹಾಸನ 18 ಕಲಬುರಗಿ 58 ಕೆನಾರ 33 ಕೊಡಗು 26 ಮಂಗಳೂರು 62 ಮೈಸೂರು 47 ಶಿವಮೊಗ್ಗ 66 ವಿದ್ಯಾರ್ಹತೆ: ಅಧಿಕೃತ …

Read More »

ಹಾವೇರಿ: 7 ಜೀವಂತ ನಾಡ ಬಾಂಬ್‌ ಪತ್ತೆ, ಆರೋಪಿ ಬಂಧನ

ಹಾವೇರಿ: ಹಾನಗಲ್ ತಾಲೂಕಿನ ಆಡೂರು ಪೊಲೀಸರು ಕಾರ್ಯಾಚರಣೆ ನಡೆಸಿ 7 ಜೀವಂತ ನಾಡ ಬಾಂಬ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಾಡ ಬಾಂಬ್ ಇಟ್ಟಿದ್ದ ಆರೋಪದಡಿ ದುರ್ಗಪ್ಪ ತುರಬಿಗುಡ್ಡ (50) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಾಡು ಹಂದಿ ಬೇಟೆಯಾಡುವ ಉದ್ದೇಶದಿಂದ ಕುಸನೂರು ಅರಣ್ಯ ಪ್ರದೇಶದಲ್ಲಿ ಈತ ನಾಡ ಬಾಂಬ್‌ಗಳನ್ನು ಇಟ್ಟಿದ್ದ. ಈ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಪತ್ತೆಯಾದ 7 ಜೀವಂತ ನಾಡಬಾಂಬ್‌ಪ್ರತ್ಯೇಕ ಪ್ರಕರಣ- ಖಾಸಗಿ ಫೋಟೋ ಸೆರೆಹಿಡಿದು …

Read More »

ಬೆಳಗಾವಿಯಲ್ಲಿ ಅಧಿವೇಶನದ ಸಂತಾಪ ಸೂಚನೆ ಮುಗಿಯುತ್ತಿದ್ದಂತೆ ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಹಾಗು ಜೆಡಿಎಸ್ ಸಿದ್ಧ

ಬೆಂಗಳೂರು : ಕುಂದಾನಗರಿ ಬೆಳಗಾವಿಯಲ್ಲಿ ಸೋಮವಾರದಿಂದ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಹಣಿಯಲು ಪ್ರತಿಪಕ್ಷಗಳಾದ ಬಿಜೆಪಿ ಹಾಗು ಜೆಡಿಎಸ್ ಜಂಟಿಯಾಗಿ ಅಖಾಡಕ್ಕೆ ದುಮುಕಲು ಸಿದ್ಧವಾಗಿದ್ದು, ಪರಸ್ಪರ ಸಹಕಾರದಿಂದ ಒಟ್ಟಾಗಿ ಕಾಂಗ್ರೆಸ್ ಎದುರಿಸಲು ಸನ್ನದ್ಧವಾಗಿವೆ.   ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಈಗ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ವೈಫಲ್ಯ ಕಂಡಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಸದನದಲ್ಲಿ ಉಭಯ ಪ್ರತಿಪಕ್ಷಗಳು ಜಂಟಿಯಾಗಿ ವಾಗ್ದಾಳಿ ನಡೆಸಲಿವೆ. …

Read More »

ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.   ನಗರದಲ್ಲಿಂದು ಮಾಧ್ಯಮಗಳೊಂದಿಗೆ ನಾಲ್ಕು ರಾಜ್ಯಗಳ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​ಗಡ್​ದಲ್ಲಿ ಹಿನ್ನಡೆ ಆಗಿದೆ. ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ …

Read More »