ಬಳ್ಳಾರಿ: ಇಲ್ಲಿನಟ್ರಾಮಾ ಕೇರ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ತಮ್ಮ ವಿರುದ್ಧ ಮಾಡಿರುವ ಆರೋಪ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್) ನಿರ್ದೇಶಕ ಗಂಗಾಧರಗೌಡ, ಇದರಲ್ಲಿ ಯಾವುದೇ ಸತ್ಯಾಸತ್ಯತೆ ಇಲ್ಲ. ಕಾನೂನು ಪ್ರಕಾರ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ. ನಾನು ಪೊಲೀಸ್ ತನಿಖೆಗೆ ಸಂಪೂರ್ಣ ಸಹಕರಿಸಲು ಸಿದ್ಧ ಎಂದು ತಿಳಿಸಿದ್ದಾರೆ. ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ …
Read More »ಕನಕದಾಸರು ಸಮಾಜದ ಅಸಮಾನತೆ ತೊಲಗಿಸಲು ಬಯಸಿದ್ದರು: ಸಿಎಂ ಸಿದ್ದರಾಮಯ್ಯ
ಹಾವೇರಿ: ಕನಕದಾಸರು ದಾಸ ಶ್ರೇಷ್ಠರು ಮಾತ್ರ ಅಲ್ಲ,ಸಮಾಜದ ಅಸಮಾನತೆ ತೊಲಗಿಸಲು ಬಯಸಿದ್ದವರು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ನಡೆದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅನಕ್ಷರತೆಯಿಂದ, ಜಾತಿ ವ್ಯವಸ್ಥೆಯಿಂದ ಅಸಮಾನತೆ ಸಮಾಜದಲ್ಲಿ ಬಂದಿದೆ. ಜಾತಿ ವ್ಯವಸ್ಥೆ ಹುಟ್ಟು ಹಾಕಿಕೊಂಡವರು ನಾವೇ, ಯಾವ ಧರ್ಮದಲ್ಲಿಯೂ ಜಾತಿ ಮಾಡಿ ಅಂಥ ಹೇಳಿಲ್ಲ. ಮನುಷ್ಯರನ್ನು ದ್ವೇಷಿಸು ಅಂತ ಹೇಳಿಲ್ಲ. ಮನುಷ್ಯರನ್ನು ಕ್ರೂರವಾಗಿ ನಡೆಸಿಕೊಳ್ಳಬೇಕೆಂದು ಹೇಳಿಲ್ಲ, …
Read More »ಆರೋಗ್ಯ ಸೇವೆಗೆ 262 ಆಂಬ್ಯುಲೆನ್ಸ್ ಸೇರ್ಪಡೆ:ದಿನೇಶ್ ಗುಂಡೂರಾವ್
ಬೆಂಗಳೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಪೂರೈಸಿದೆ. ಆರೋಗ್ಯ ಇಲಾಖೆ ಜವಾಬ್ದಾರಿ ತೆಗೆದುಕೊಂಡ ಬಳಿಕ ಈ ಆರು ತಿಂಗಳ ಅವಧಿಯಲ್ಲಿ ಜನಸಾಮಾನ್ಯರಿಗೆ ತುರ್ತಾಗಿ ಆಗಬೇಕಾದ ಆರೋಗ್ಯ ಸೇವೆಗಳನ್ನು ಸುಧಾರಣೆಯತ್ತ ತರುವ ನಿಟ್ಟಿನಲ್ಲಿ ಹೆಚ್ಚು ಗಮನ ಹರಿಸಿದ್ದೇನೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಕಾಸಸೌಧದಲ್ಲಿ ನಡೆದ ಸದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆಂಬ್ಯುಲೆನ್ಸ್ ಮತ್ತು ಡಯಾಲಿಸಿಸ್. ಈ ಎರಡು ಆರೋಗ್ಯ ಸೇವೆಗಳಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ನಾನು …
Read More »FDA ಪರೀಕ್ಷಾ ಅಕ್ರಮ: ಕಲಬುರಗಿಯಲ್ಲಿ ಇಬ್ಬರು ಪ್ರಾಂಶುಪಾಲರ ಬಂಧನ
ಕಲಬುರಗಿ: ಅಕ್ಟೋಬರ್ 28ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಎಫ್‌ಡಿಎ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬೇಟೆ ಮುಂದುವರೆಸಿದ್ದು, ಬುಧವಾರ ಇಬ್ಬರು ಪ್ರಾಂಶುಪಾಲರನ್ನು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಸರ್ಕಾರಿ ಪಿಯು ಕಾಲೇಜು ಪ್ರಾಂಶುಪಾಲ ಚಂದ್ರಕಾಂತ್ ಬುರಕಲ್ ಮತ್ತು ಅಫಜಲಪುರ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಸಣ್ಣ ಪೂಜಾರಿ ಬಂಧಿತರು. ರಾಯಲ್ ಪಬ್ಲಿಕ್ ಶಾಲೆಯ ಕೆಇಎ ಪರೀಕ್ಷಾ ಕೇಂದ್ರದ ಮುಖ್ಯಸ್ಥರಾಗಿದ್ದ ಚಂದ್ರಕಾಂತ್, ಅಧಿಕೃತ ಅಭ್ಯರ್ಥಿಗಳ …
Read More »ರಾಜ್ಯ ಸರ್ಕಾರದ ಸೊಕ್ಕು ಮುರಿಯುವ ಕೆಲಸ ಅಧಿವೇಶನದಲ್ಲಿ ಮಾಡುತ್ತೇವೆ: ವಿಜಯೇಂದ್ರ
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರ ರೈತರು ಮತ್ತು ಬಡವರ ವಿರೋಧಿಯಾಗಿದೆ. ಈ ಎಲ್ಲಾ ವಿಚಾರಗಳನ್ನು ಅಧಿವೇಶನದಲ್ಲಿ ಮುಂದಿಟ್ಟು ಸರ್ಕಾರದ ಸೊಕ್ಕು ಮುರಿಯುವ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮಕ್ಕೆ ಇಂದು ಆಗಮಿಸಿದ ವಿಜಯೇಂದ್ರ ಅವರಿಗೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಭರ್ಜರಿ ಸ್ವಾಗತ ಕೋರಲಾಯಿತು. ಬೃಹತ್ ಆಕಾರದ ಹೂವಿನ ಹಾರ ಹಾಕಿ, ಘೋಷಣೆಗಳನ್ನು ಕೂಗಲಾಯಿತು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, …
Read More »ತಮ್ಮ ಪತ್ನಿಯರ ಹೆಸರಿನಲ್ಲಿ ಮಳಿಗೆ ಪಡೆದ ಇಬ್ಬರು ಬಿಜೆಪಿ ನಗರ ಸೇವಕರ ಸದಸ್ಯತ್ವ ಅನರ್ಹತೆಗೆ ಸುಜೀತ್ ಮುಳಗುಂದ ಪ್ರಾದೇಶಿಕ ಆಯುಕ್ತರಿಗೆ ಮನವಿ
ಬೆಳಗಾವಿ: ನಗರದ ತಿನಿಸು ಕಟ್ಟೆಯಲ್ಲಿ ತಮ್ಮ ಪತ್ನಿಯರ ಹೆಸರಿನಲ್ಲಿ ಮಳಿಗೆ ಪಡೆದಿರುವ ಇಬ್ಬರು ಬಿಜೆಪಿ ನಗರ ಸೇವಕರ ಸದಸ್ಯತ್ವವನ್ನು ಅನರ್ಹಗೊಳಿಸುವಂತೆ ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ಅವರು ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಪ್ರಾದೇಶಿಕ ಆಯುಕ್ತರು ಜಿಲ್ಲಾಧಿಕಾರಿಗೆ ತನಿಖೆ ನಡೆಸುವಂತೆ ಪತ್ರ ಬರೆದಿದ್ದಾರೆ. ಜಿಲ್ಲಾಧಿಕಾರಿಯವರು ಮಹಾನಗರ ಪಾಲಿಕೆ ಆಯುಕ್ತರಿಗೆ ಈ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ತಿನಿಸು ಕಟ್ಟೆ ವಿವಾದ ಈಗ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಬೆಳಗಾವಿ ಬಸವೇಶ್ವರ …
Read More »ದಾಖಲೆ ಇಲ್ಲದೇ ಸಾಗಿಸುತ್ತಿದ್ದ 8 ಕೋಟಿ ರೂಪಾಯಿಪೊಲೀಸರ ವಶಕ್ಕೆ
ಚಿತ್ರದುರ್ಗ: ಇನ್ನೋವಾ ಕಾರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 8 ಕೋಟಿ ರೂಪಾಯಿ ನಗದನ್ನು ಹೊಳಲ್ಕೆರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕಾರನ್ನು ಮಲ್ಲಾಡಿಹಳ್ಳಿ ಸಮೀಪ ಪರಿಶೀಲಿಸಿದಾಗ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ. ಕಾರು ಚಾಲಕ ಸಚಿನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದು ಚಿತ್ರದುರ್ಗದ ಅಡಿಕೆ ವರ್ತಕರೊಬ್ಬರ ಹಣವಾಗಿದ್ದು, ಶಿವಮೊಗ್ಗದ ಇನ್ನೋರ್ವ ಅಡಿಕೆ ವರ್ತಕರಿಗೆ ನೀಡಲು ಹೊರಟಿದ್ದಾಗಿ ಎಂದು ಚಾಲಕ ಪೊಲೀಸರಿಗೆ ತಿಳಿಸಿದ್ದಾರೆ. ಹಣದ ಬಗ್ಗೆ …
Read More »ಆಸ್ತಿ ವಿವರ ಸಲ್ಲಿಸದ ಜನಪ್ರತಿನಿಧಿಗಳು: ಪತ್ರಿಕಾ ಪ್ರಕಟಣೆ ಹೊರಡಿಸಿದ ಲೋಕಾಯುಕ್ತ
ಬೆಂಗಳೂರು: ಲೋಕಾಯುಕ್ತ ಇಲಾಖೆ ಆಸ್ತಿ ವಿವರ ಸಲ್ಲಿಸದೇ ಇರುವ ಜನಪ್ರತಿನಿಧಿಗಳಿಗೆ ಆಸ್ತಿ ವಿವರ ದಾಖಲಿಸುವಂತೆ ಜನಪ್ರತಿನಿಧಿಗಳ ಹೆಸರು ಸಮೇತ ದಿನಪತ್ರಿಕೆಗಳಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. 2020-22ರ ಸಾಲಿನಲ್ಲಿ ಆಸ್ತಿ ವಿವರ ಸಲ್ಲಿಸದೆ ಜನಪ್ರತಿನಿಧಿಗಳು ಲೋಪವೆಸಗಿದ್ದಾರೆ. ಹಲವು ಬಾರಿ ಆಸ್ತಿ ವಿವರ ಸಲ್ಲಿಸುವಂತೆ ಕಾಲಾವಕಾಶ ನೀಡಿದರೂ ಶಾಸಕ-ಸಚಿವರು ಮಾತ್ರ ಆಸ್ತಿ ಘೋಷಣೆ ವಿವರ ಸಲ್ಲಿಸಿಲ್ಲ. ಹೀಗಾಗಿ ಕಾನೂನು ಪ್ರಕಾರ ದಿನಪತ್ರಿಕೆಗಳಲ್ಲಿ 81 ಮಂದಿ ಜನಪ್ರತಿನಿಧಿಗಳ ಹೆಸರುಗಳ ಸಮೇತ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಜೂನ್ …
Read More »ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಶಿಕ್ಷಣ ಸಂಸ್ಥೆಯಲ್ಲಿ ದಾಸ ಶ್ರೇಷ್ಠರಾದ ಕನಕದಾಸರ ಜಯಂತಿ ಆಚರಣೆ..!
ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಶಿಕ್ಷಣ ಸಂಸ್ಥೆಯಲ್ಲಿ ದಾಸ ಶ್ರೇಷ್ಠರಾದ ಕನಕದಾಸರ ಜಯಂತಿ ಆಚರಣೆ..! ಗೋಕಾಕ : ನಗರದ ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಶಿಕ್ಷಣ ಸಂಸ್ಥೆಯಲ್ಲಿ ಸಂತ ಶ್ರೇಷ್ಠ ಶ್ರೀ ಭಕ್ತ ಕನಕದಾಸರ ಜಯಂತಿ ಆಚರಣೆ ಮಾಡಿದರು. ಈ ಸಮಯದಲ್ಲಿ ವ್ಯವಸ್ಥಾಪಕ ನಿರ್ದೇಶಕರಾದ ಸನತ್ ಜಾರಕಿಹೊಳಿ ಅವರು ಮಾತನಾಡಿ ಕರ್ನಾಟಕ ಕೀರ್ತನಾ ಸಾಹಿತ್ಯದ ಮೂಲಕ ಮನುಜ ಕುಲವನ್ನು ಸನ್ಮಾರ್ಗದತ್ತ ಕೊಂಡೊಯ್ದು, ಸಮ ಸಮಾಜ ನಿರ್ಮಾಣಕ್ಕಾಗಿ ಅರಿವು ಮೂಡಿಸಿದವರು. ಕೀರ್ತನಕಾರರಾಗಿ, ಸಂತರಾಗಿ, ದಾರ್ಶನಿಕರಾಗಿ, …
Read More »ಬೆಂಗಳೂರು: ಪ್ರತಿಷ್ಠಿತ ಬ್ರ್ಯಾಂಡ್ ಹೆಸರಿನಡಿ ನಕಲಿ ಬಟ್ಟೆ ತಯಾರಿಕೆ; ₹1.5 ಕೋಟಿ ಮೌಲ್ಯದ ಮಾಲು ವಶಕ್ಕೆ
ಬೆಂಗಳೂರು: ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತಿಷ್ಠಿತ ಬ್ರ್ಯಾಂಡ್‌ನ ಹೆಸರಿನಡಿ ನಕಲಿ ಬಟ್ಟೆಗಳನ್ನು ತಯಾರಿಸಿ ಮಾರುತ್ತಿದ್ದ ವ್ಯಾಪಾರಸ್ಥರ ಅಂಗಡಿ, ಗೋದಾಮುಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮಾಲು ವಶಕ್ಕೆ ಪಡೆದಿದ್ದಾರೆ. ಅರ್ಮಾನಿ, ಬರ್ಬರಿ, ಗ್ಯಾಂಟ್ ಸೇರಿದಂತೆ ಹೆಸರಾಂತ ಕಂಪನಿಗಳ ಬಟ್ಟೆ ಎಂದು ಗ್ರಾಹಕರನ್ನು ನಂಬಿಸುತ್ತಿದ್ದ ಆರೋಪಿಗಳು ಅಕ್ರಮ ಮಾರಾಟದಲ್ಲಿ ತೊಡಗಿದ್ದರು. ಈ ಕುರಿತ ಖಚಿತ ಮಾಹಿತಿ ಮೇರೆಗೆ ಬೊಮ್ಮನಹಳ್ಳಿಯ ಪಟೇಲ್ ಎಕ್ಸ್‌ಪರ್ಟ್ ಹಾಗೂ ಆರ್‌ಬಿ ಫ್ಯಾಷನ್ ಗೋಡೌನ್‌ಗಳ ಮೇಲೆ ದಾಳಿ …
Read More »
Laxmi News 24×7