Breaking News
Home / ರಾಜ್ಯ (page 982)

ರಾಜ್ಯ

ಅಪರಿಚಿತ ವಾಹನ ಡಿಕ್ಕಿ ಹೊಡೆದು ನವಿಲು ಸ್ಥಳದಲ್ಲೇ ಸಾವನ್ನಪ್ಪಿದೆ.

ಹಿರೇಬಾಗೇವಾಡಿ: ಇಲ್ಲಿನ ಬಡೇಕೊಳ್ಳಮಠ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೋಮವಾರ ಅಪರಿಚಿತ ವಾಹನ ಡಿಕ್ಕಿ ಹೊಡೆದು ನವಿಲು ಸ್ಥಳದಲ್ಲೇ ಸಾವನ್ನಪ್ಪಿದೆ. ಹೆದ್ದಾರಿ ಒಂದು ಬದಿಯಿಂದ ಮತ್ತೊಂದು ಬದಿಗೆ ದಾಟುವಾಗ ನವಿಲಿಗೆ ವಾಹನ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಅರಣ್ಯ ಇಲಾಖೆಯವರಿಗೆ ಮೃತ ನವಿಲು ಒಪ್ಪಿಸಿದರು.

Read More »

ಮಾಧ್ಯಮ ದೂರವಿಟ್ಟು ಕಾಡು ಸುತ್ತಿದ ಅರಣ್ಯ ಸಚಿವ ಉಮೇಶ್ ಕತ್ತಿ

ಚಾಮರಾಜನಗರ, ಜೂನ್ 20: ಅರಣ್ಯ ಸಚಿವ ಉಮೇಶ್ ಕತ್ತಿ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದರಾದರೂ, ಮಾಧ್ಯಮದವರಿಂದ ಅಂತರ ಕಾಯ್ದುಕೊಂಡು ಕಾಡು ಸುತ್ತಿದ್ದಾರೆ. ಜೊತೆಗೆ, ಅಧಿಕಾರಿಗಳ ಸಭೆಯನ್ನು ನಡೆಸಿದ್ದಾರೆ. ಬಿಳಿಗಿರಿರಂಗನ ಬೆಟ್ಟ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಕೆ.ಗುಡಿಯಲ್ಲಿ ವಾಸ್ತವ್ಯ ಹೂಡಿದ್ದ ಅವರು ಭಾನುವಾರ ವನ್ಯಜೀವಿ ಸಫಾರಿ ನಡೆಸಿದ್ದಲ್ಲದೇ, ಮಾನವ ವನ್ಯಜೀವಿ ಸಂಘರ್ಷ ತಡೆಗೆ ರೈಲು ಕಂಬಿಗಳು ಕೊರತೆ ಹಿನ್ನೆಲೆ ಬೇಲಿಗಳನ್ನು ಅಳವಡಿಸಲು ಮುಂದಾಗಿರುವುದಾಗಿ ತಿಳಿದುಬಂದಿದೆ.   ಸಚಿವರ ಖಾಸಗಿ ಭೇಟಿ …

Read More »

ಒಂದಿಲ್ಲ ಒಂದ್ ದಿನ ಸ್ಫೋಟ ಆಗುತ್ತೆ, ಯಾರನ್ಯಾರು ತಡೆಯೋಕಾಗಲ್ಲ; ಲಕ್ಷ್ಮಿ ಹೆಬ್ಬಾಳ್ಕರ್

ದೇಶದ ಪ್ರಧಾನಿ ನರೇಂದ್ರ ಮೋದಿ (PM Narendra Modi) ರಾಜ್ಯಕ್ಕೆ ಬಂದಿದ್ದಾರೆ ಅಂದ್ರೆ ಮರ್ಯಾದೆ ಕೊಡೋದು ಪ್ರತಿಯೊಬ್ಬರ ಕರ್ತವ್ಯ. ಕಾಂಗ್ರೆಸ್ ನವರು (Congress) ಆಗಿರಬಹುದು ಬೇರೆ ಯಾರೋ ಆಗಿರಬಹುದು. ಕಾನೂನು ಸುವ್ಯವಸ್ಥೆ ಹದಗೆಡಬಾರದು ಅಂತಾ ಪೊಲೀಸರು (Police) ಕ್ರಮ ಕೈಗೊಂಡಿರಬಹುದು. ಎಲ್ಲಾ ಕಡೆ ಬೆಂಕಿ ಹಚ್ಚೋದು ಕಲ್ಲು ಒಡೆಯೋದು ನಡೀತಿದೆ ಅದಕ್ಕೋಸ್ಕರ ಮುಂಜಾಗ್ರತೆ ತಗೆದುಕೊಂಡಿರಬಹುದು. ಆದ್ರೆ ಪ್ರತಿಭಟನೆ ಒಂದು ದಿನ ತಡೆಯಬಹುದು, ಎಷ್ಟು ದಿನ ಇರ್ತಾರೆ. ಶಿವಮೊಗ್ಗದಿಂದ (Shivamogga) ಱಪಿಡ್ …

Read More »

ಭವಿಷ್ಯ ಹಾಳ್​ಮಾಡ್ಕೋಬೇಡ್ರಪ್ಪೋ. ಪ್ರತಿಭಟನೆಗೆ ಹೊರಟವರಿಗೆ ತಿಂಡಿ ಕೊಟ್ಟು ಕಳುಹಿಸಿದ ಚಿಕ್ಕೋಡಿ ಪೊಲೀಸರು!

ಚಿಕ್ಕೋಡಿ: ಕೇಂದ್ರ ಸರ್ಕಾರದ ಅಗ್ನಿಪಥ್​ ಯೋಜನೆಯನ್ನು ವಿರೋಧಿಸಿ ಇದಾಗಲೇ ದೇಶದ ವಿವಿಧೆಡೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಕೆಲವು ಕಡೆಗಳಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಹಿಂಸಾಚಾರ, ರೈಲಿಗೆ ಬೆಂಕಿಯನ್ನೂ ಹಚ್ಚಿದ್ದರೆ, ಕೆಲವರು ಶಾಂತಿಯುತ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.   ಚಿಕ್ಕೋಡಿಯಲ್ಲಿಯೂ ಅಗ್ನಿಪಥ್​ ವಿರೋಧಿಸಿ ಕೆಲವು ಯುವಕರ ಗುಂಪು ಪ್ರತಿಭಟನೆಗೆ ಮುಂದಾಗಿತ್ತು. ಬೆಳಗಾವಿಯಲ್ಲಿ ಅತಿ ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಈ ಯುವಕರು ಹೊರಟಿದ್ದರು. ಆದರೆ ಪ್ರತಿಭಟನೆಯಿಂದ ಏನೂ ಪ್ರಯೋಜನವಿಲ್ಲ, ಸುಮ್ಮನೆ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ ಎಂದು …

Read More »

ಬೆಳ್ಳಂಬೆಳಗ್ಗೆ ತುಮಕೂರು ಬಳಿ ಭೀಕರ ಅಪಘಾತ

ತುಮಕೂರು: ಬೆಳ್ಳಂಬೆಳಗ್ಗೆ ಕೆಎಸ್‌ಆರ್​ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ತುಮಕೂರು-ಶಿವಮೊಗ್ಗ ನ್ಯಾಷನಲ್ ಹೆದ್ದಾರಿ 206ರಲ್ಲಿ ಈ ಘಟನೆ ಸಂಭವಿಸಿದೆ. ಗಿರೀಶ್​ (37), ಮಾನ್ಯ (17), ಮೃತ ದುರ್ದೈವಿಗಳು. ಇವರಿಬ್ಬರೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ನಿಟ್ಟೂರು ಕಡೆಯಿಂದ ತುಮಕೂರು ಕಡೆಗೆ ಝೈಲೋ ಕಾರು ಬರುತ್ತಿದ್ದರೆ, …

Read More »

ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ

ರೈತರು ಹಾಗೂ ಗ್ರಾಮೀಣ ಭಾಗದ ಜನರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ವಾಸುದೇವ ಮೇಟಿ ಬಣದಿಂದ ನಡೆದ ಪ್ರತಿಭಟನೆಯಲ್ಲಿ ಬೀಜ, ಗೊಬ್ಬರ ಬೆಲೆ ಹೆಚ್ಚಿಗೆ ಮಾಡಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ತೀವ್ರ …

Read More »

ನಂದಗಡ ರಸ್ತೆಯ ಮಧ್ಯದಲ್ಲಿ ಸುಮಾರು ವರ್ಷಗಳಿಂದ ಉದ್ಘಾಟನೆ ಭಾಗ್ಯ ಇಲ್ಲದೇ ಇದ್ದ ಟ್ರೀ ಪಾರ್ಕ್ ಕೊನೆಗೂ ಉದ್ಘಾಟನೆ

ಖಾನಾಪೂರ- ನಂದಗಡ ರಸ್ತೆಯ ಮಧ್ಯದಲ್ಲಿ ಸುಮಾರು ವರ್ಷಗಳಿಂದ ಉದ್ಘಾಟನೆ ಭಾಗ್ಯ ಇಲ್ಲದೇ ಇದ್ದ ಟ್ರೀ ಪಾರ್ಕ್ ಕೊನೆಗೂ ಉದ್ಘಾಟನೆ ಭಾಗ್ಯ ಕಂಡಿತು. ಅರಣ್ಯ ಇಲಾಖೆಯ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಧೋರಣೆಯಿಂದ ಸುಮಾರು ಎರಡು, ಮೂರು ವರ್ಷಗಳ ಕಾಲ ಇದು ಸಾರ್ವಜನಿಕರ ಸದುಪಯೋಗಕ್ಕೆ ಅನುಕೂಲ ವಾಗದೇ ರೀತಿಯಲ್ಲಿ ಇತ್ತು ಒಳಗಡೆ ಅಂತೂ ಸುವ್ಯವಸ್ಥಿತ ರೀತಿಯಲ್ಲಿ ಚಿಕ್ಕ ಮಕ್ಕಳಿಗೆ ಆಟವಾಡಲು, ಹಿರಿಯರಿಗೆ ವಾಯು ವಿಹಾರಕ್ಕೆ ಸುಂದರವಾದ ವಾತಾವರಣದಿಂದ ಕೂಡಿದೆ ಆದರೆ ಇದನ್ನು ಸಾರ್ವಜನಿಕರಿಗೆ …

Read More »

ಅಗ್ನಿಪಥ್ ಫೈಟ್: ಬೆಳಗಾವಿಯಲ್ಲಿ 150ಕ್ಕೂ ಅಧಿಕ ಸೇನಾ ಆಕಾಂಕ್ಷಿ ವಶಕ್ಕೆ

ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಚಲೋ, ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಚಲೋ, ಬೆಳಗಾವಿ ಬಂದ್‍ಗೆ ಕೆಲವರು ಕರೆ ನೀಡಿರುವ ಹಿನ್ನೆಲೆ ಈವರೆಗೆ ಬೆಳಗಾವಿಯಲ್ಲಿ 150ಕ್ಕೂ ಅಧಿಕ ಸೇನಾ ಆಕಾಂಕ್ಷಿಗಳನ್ನು  ವಶಕ್ಕೆ ಪಡೆದಿದ್ದಾರೆ.ಹೌದು ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಸಂಬಂಧ ಪರ-ವಿರೋಧ ವ್ಯಕ್ತವಾಗುತ್ತಿದೆ. ಬೆಳಗಾವಿ ನಗರದ ವಿವಿಧೆಡೆ ಗುಂಪು ಸೇರಿ ನಿಂತಿದ್ದ 150ಕ್ಕೂ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸೇನಾ ಆಕಾಂಕ್ಷಿಗಳು ಕೇಂದ್ರ …

Read More »

ಬೆಂಗಳೂರಿನ `IISC’ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಇಂದು ಬೆಂಗಳೂರಿಗೆ ಆಗಮಿಸಿದ್ದು, ಪ್ರಧಾನಿ ಮೋದಿ ಅವರು IISc ನ ಮೆದುಳು ಸಂಶೋಧನಾ ಕೇಂದ್ರ (CBR) ಉದ್ಘಾಟಸಿದ್ದಾರೆ. ಇಂದು ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ IISc ನ ಮೆದುಳು ಸಂಶೋಧನಾ ಕೇಂದ್ರ (CBR) ಉದ್ಘಾಟಸಿದ್ದಾರೆ ಮತ್ತು ಬಾಗ್ಚಿ ಪಾರ್ಥಸಾರಥಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಪ್ರಧಾನಿ …

Read More »

ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

    ಮೂಡಲಗಿ* ಮೂಡಲಗಿಯ ಮೂಲ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುವ ರೇವಣಸಿದ್ಧ ಗವಿಮಠದ ಮಹಿಮೆ ಅಪಾರವಾದುದ್ದು. ಮಠದ ಭಕ್ತ ವೃಂದದವರ ಆಶಯದಂತೆ ಮುಖ್ಯ ರಸ್ತೆಯಿಂದ ಗವಿಮಠದವರೆಗೆ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ರೇವಣಸಿದ್ಧೇಶ್ವರ ಗವಿ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಗವಿಮಠವು ಇಲ್ಲಿಯ ಆರಾಧ್ಯದೈವವಾಗಿರುವ ಶಿವಬೋಧರಂಗ ಮಠದಂತೆಯೇ ಪ್ರಸಿದ್ಧಿಯಾಗಿದೆ. ಸಿದ್ಧ ಸಂಸ್ಥಾನಮಠದ ಮೂಲ ಪೀಠಾಧಿಪತಿಗಳು ಮೂಡಲಗಿಯಲ್ಲಿ …

Read More »