Breaking News

ರಾಜ್ಯ

ಬರಗಾಲದ ನಡುವೆ ರಾಜ್ಯದಲ್ಲಿ ಬಿತ್ತನೆಯಾಗಿದ್ದೆಷ್ಟು, ಫಸಲು ನಷ್ಟವಾಗಿದ್ದೆಷ್ಟು?

ಬೆಂಗಳೂರು: ರಾಜ್ಯದಲ್ಲಿ ಹಲವು ವರ್ಷಗಳ ನಂತರ ಮಳೆ ಕೊರತೆಯಿಂದ ಭೀಕರ ಬರಗಾಲ ಎದುರಾಗಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ರಾಜ್ಯದಲ್ಲಿ ಸರಿಯಾಗಿ ಮಳೆಯಾಗದ ಕಾರಣ ಸರ್ಕಾರ ಈ ಮೊದಲು 216 ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿತ್ತು. ನಂತರ 7 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈಗಾಗಲೇ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈಗ ಮತ್ತೂ 7 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಮೂಲಕ …

Read More »

ಹಿಂಡಲಗಾ ಜೈಲಿಗೆ ಗೃಹ ಸಚಿವ‌ ಪರಮೇಶ್ವರ್​ ದಿಢೀರ್ ಭೇಟಿ

ಬೆಳಗಾವಿ: ಬೆಳಗಾವಿಯ ಹಿಂಡಲಗಾದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಜೈಲಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್​ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೈಲು ಅಧಿಕಾರಿಗಳನ್ನು ಈ ವೇಳೆ ತರಾಟೆಗೆ ತೆಗೆದುಕೊಂಡಿದ್ದಾರೆ. ಹಿಂಡಲಗಾ ಜೈಲಿನಲ್ಲಿ ಹಣ ಕೊಟ್ಟರೆ ಕೈದಿಗಳಿಗೆ ಮೊಬೈಲ್ ಫೋನ್ ಸೇರಿ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುತ್ತದೆ. ಇಲ್ಲದಿದ್ದರೆ ಸರಿಯಾದ ಸೌಲಭ್ಯಗಳನ್ನು ನೀಡುವುದಿಲ್ಲ ಎಂಬ ಬಗ್ಗೆ ಸ್ವತಃ ಅಲ್ಲಿನ ಕೈದಿಯೊಬ್ಬ ಜೈಲಿನಿಂದಲೇ ವಿಡಿಯೋ …

Read More »

ವಿಶ್ವಕಪ್ ಫೈನಲ್​​ನಲ್ಲಿ ಭಾರತದ ಸೋಲು: ನಿರಾಸೆಯಿಂದ ಯುವಕ ಸಾವು!

ಗುವಾಹಟಿ(ಅಸ್ಸೋಂ): ನಿನ್ನೆ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲನುಭವಿಸಿದ್ದರಿಂದ ತೀವ್ರ ನಿರಾಸೆಯಿಂದ ಖಿನ್ನತೆಗೆ ಒಳಗಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಗುವಾಹಟಿಯ ಸಾವ್​ಕುಚಿಯಲ್ಲಿ ನಡೆದಿದೆ. ಮೃಣಾಲ್ ಮಜುಂದಾರ್‌(20) ಮೃತ ಯುವಕ. ಮೃತ ಮೃಣಾಲ್ ಕುಟುಂಬಸ್ಥರ ಪ್ರಕಾರ, ಮೃಣಾಲ್ ನಿನ್ನೆ ಭಾರತದ ಸೋಲಿನಿಂದ ನಿರಾಸೆಗೊಂಡು ಊಟ ಸೇವಿಸದೇ ರಾತ್ರಿ 11 ಗಂಟೆಗೆ ಮಲಗಿದ್ದರು. ಮೃಣಾಲ್ ಬೆಳಗ್ಗೆ ಎಷ್ಟೊತ್ತಾದರೂ ಏಳದಿದ್ದಾಗ. ಅನುಮಾನಗೊಂಡ ಕುಟುಂಬಸ್ಥರು, ಮೃಣಾಲ್​ ಮಲಗಿದ್ದ ಕೊಠಡಿಯ ಬಾಗಿಲು ಮುರಿದು …

Read More »

ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಗೆ ಸೂರ್ಯ ನಾಯಕ

ಹೈದರಾಬಾದ್​: ವಿಶ್ವಕಪ್​ಗೂ ಮುನ್ನ ಆರಂಭವಾಗಿದ್ದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯ ಏಕದಿನ ಪಂದ್ಯಗಳು ಮುಗಿದಿವೆ. 5 ಟಿ20 ಪಂದ್ಯಗಳು ಬಾಕಿ ಇದ್ದು, ಇದು ನವೆಂಬರ್​ 23ರಿಂದ ಆರಂಭವಾಗಲಿದೆ. ವಿಶ್ವಕಪ್ ಮುಗಿದ ನಾಲ್ಕು ದಿನಗಳ ಅವಧಿಯ ಅಂತರದಲ್ಲಿ ಸರಣಿ ಆರಂಭವಾಗುತ್ತಿದೆ. ಇದಕ್ಕೆ ಸೂರ್ಯಕುಮಾರ್​ ಯಾದವ್​ ನಾಯಕತ್ವದಲ್ಲಿ 15 ಜನ ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ. ನವೆಂಬರ್ 23 ರಂದು ವಿಶಾಖಪಟ್ಟಣದಲ್ಲಿ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ-20ಸರಣಿ ಡಿಸೆಂಬರ್ 3 ರಂದು …

Read More »

ಹೈಕೋರ್ಟ್​ ಆದೇಶ: ಶಿವಮೂರ್ತಿ ಮುರುಘಾ ಶರಣರ ಬಿಡುಗಡೆ

ದಾವಣಗೆರೆ: ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಜಾರಿ ಮಾಡಿದ್ದ ಜಾಮೀನು ರಹಿತ ವಾರಂಟ್‌ಗೆ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೇ ಶರಣರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲಾಗಿದೆ. ಎರಡನೇ ಫೋಕ್ಸೊ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ವಿಚಾರಣೆ ನಡೆಸಿದ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸ್ವಾಮೀಜಿ ಬಂಧನಕ್ಕೆ ವಾರಂಟ್ ಜಾರಿ ಮಾಡಿತ್ತು. ವಾರಂಟ್ ಪಡೆದ …

Read More »

ಕಾಂಗ್ರೆಸ್ ಮುಖಂಡೆ ವೀಣಾ ಕಾಶಪ್ಪನವರ ಕಾರು ಅಪಘಾತ

ಬಾಗಲಕೋಟೆ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಮುಖಂಡೆ ವೀಣಾ ಕಾಶಪ್ಪನವರ ಕಾರು ಅಪಘಾತವಾಗಿದ್ದು, ಅಪಾಯದಿಂದ ಅವರು ಪಾರಾಗಿದ್ದಾರೆ. ವಿಜಯಪುರ ನಗರದ ಸಿಂದಗಿ ಬೈಪಾಸ್ ಬಳಿ ರಸ್ತೆಯಲ್ಲಿ ಸೋಮವಾರ ಕಾರು ಅಪಘಾತ ಸಂಭವಿಸಿದೆ. ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವೀಣಾ ಕಾಶಪ್ಪನವರ ಅವರಿದ್ದ ಕಾರು ಎದುರುಗಡೆ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಎದುರುಗಡೆ ಕಾರಿನಲ್ಲಿದ್ದ ಪ್ರಯಾಣಿಕರು ಸಹ ಗಾಯಗೊಂಡಿದ್ದಾರೆ. ವೀಣಾ ಕಾಶಪ್ಪನವರಿಗೆ ಚಿಕ್ಕಪುಟ್ಟ ಗಾಯವಾಗಿದ್ದು, ವಿಜಯಪುರ ಸ್ಥಳೀಯ ಆಸ್ಪತ್ರೆಗೆ ವೀಣಾರನ್ನು …

Read More »

ಬೆಳಗಾವಿಯ ಚಳಿಗಾಲ ಅಧಿವೇಶನ ಕೇವಲ ಪ್ರತಿಭಟನೆಯ ಅಧಿವೇಶನ ಆಗಬಾರದು: ಡಾ‌.ಜಿ.ಪರಮೇಶ್ವರ್​

ಬೆಳಗಾವಿ: ಬೆಳಗಾವಿಯ ಚಳಿಗಾಲ ಅಧಿವೇಶನ ಕೇವಲ ಪ್ರತಿಭಟನೆಯ ಅಧಿವೇಶನ ಆಗಬಾರದು. ಈ ಭಾಗದ ನೈಜ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು ಎಂದು ಗೃಹ ಸಚಿವ ಡಾ‌.ಜಿ.ಪರಮೇಶ್ವರ್​ ಹೇಳಿದ್ದಾರೆ. ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪ್ರತಿಭಟನೆಗಳ ಉದ್ದೇಶ ಸರಿ ಇರಬಹುದು. ಆದರೆ, ಇಲ್ಲಿ ಅಧಿವೇಶನ ನಡೆಯೋದೇ ಪ್ರತಿಭಟನೆ ನಡೆಯಲು ಎಂಬ ಅಪಖ್ಯಾತಿಯಿದೆ. ಹಾಗಾಗಿ, ಪ್ರತಿಭಟನೆಗಳನ್ನು ಕಡಿಮೆಗೊಳಿಸಲು ಸಂಬಂಧಿಸಿದ ಇಲಾಖೆಗಳ ಜೊತೆಗೆ ಮಾತನಾಡಿ ಅಧಿವೇಶನದೊಳಗೆ ಅವರ ಸಮಸ್ಯೆ ಬಗೆಹರಿಸಲು …

Read More »

ಅರಭಾವಿ ದುರದುಂಡೀಶ್ವರ ಪುಣ್ಯಾರಣ್ಯ ಮಠದ ಪೀಠಾಧಿಪತಿಯಾಗಿ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ

ಅರಭಾವಿ ದುರದುಂಡೀಶ್ವರ ಪುಣ್ಯಾರಣ್ಯ ಮಠದ ಪೀಠಾಧಿಪತಿಯಾಗಿ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ ಶ್ರೀಮಠದ ಅಭಿವೃದ್ಧಿಗೆ ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳ ಕನಸಿನಂತೆ ಗುರುಬಸವಲಿಂಗ ಮಹಾಸ್ವಾಮಿಗಳು ಶ್ರಮಿಸಲಿ : ನಿಡಸೋಶಿ ಶ್ರೀಗಳು ಮೂಡಲಗಿ : ದುರದುಂಡೀಶ್ವರರ ಆಶೀರ್ವಾದ ಫಲವಾಗಿ ಅರಭಾವಿ ದುರದುಂಡೀಶ್ವರ ಪುಣ್ಯಾರಣ್ಯ ಮಠವು ಧಾರ್ಮಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬೆಳೆದಿದ್ದು, ಹಿಂದಿನ ಪೀಠಾಧಿಪತಿಯಾಗಿದ್ದ ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳ ಕನಸಿನಂತೆ ಶ್ರೀಮಠದ ಅಭಿವೃದ್ಧಿಗಾಗಿ ಮಠದ ನೂತನ ಪೀಠಾಧಿಪತಿಯಾಗಿ ಪೀಠಾರೋಹಣಗೈದಿರುವ ಗುರುಬಸವಲಿಂಗ ಮಹಾಸ್ವಾಮಿಗಳು ಶ್ರಮಿಸಲಿ. ಶ್ರೀಮಠವು ಹೊಸ …

Read More »

ಮತ್ತೆ ಮುರುಘಾ ಶರಣರನ್ನು ಬಂಧಿಸಿದ ಪೊಲೀಸರು

ಚಿತ್ರದುರ್ಗ: ಪೋಕ್ಸೊ ಪ್ರಕರಣ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದ್ದ ಹಿನ್ನೆಲೆ ಮುರುಘಾ ಮಠದ ಡಾ ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದಾರೆ.   ಮುರುಘಾ ಶ್ರೀಗಳ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದಲ್ಲಿ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಕಳೆದ ಶನಿವಾರ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಎರಡನೇ ಪ್ರಕರಣ ಸಂಬಂಧ ನ್ಯಾಯಧೀಶರಾದ ಬಿ ಕೆ ಕೋಮಲಾ ಅವರು ಬಂಧನ ವಾರೆಂಟ್ ಆದೇಶ ಹೊರಡಿಸಿದ್ದರು. ಚಿತ್ರದುರ್ಗದ …

Read More »

ರಾತ್ರೋರಾತ್ರಿ 200 ದಾಳಿಂಬೆ ಗಿಡ ಕತ್ತರಿಸಿದ ಕಿಡಿಗೇಡಿಗಳು, ರೈತನಿಗೆ ಆಘಾತ

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ) : ರೈತರಿಗೆ ಅತಿವೃಷ್ಟಿ, ಅನಾವೃಷ್ಟಿ ಕಾಡುತ್ತಲೇ ಇರುತ್ತವೆ. ಈ ಮಧ್ಯೆ ಕೆಲವರು ಹೇಗಾದರೂ ಮಾಡಿ ಅಲ್ಪ ಸ್ವಲ್ಪ ಬೆಳೆಯನ್ನಾದರೂ ಉಳಿಸಿಕೊಂಡು ಜೀವನ ಬಂಡಿ ಸಾಗಿಸುತ್ತಾರೆ. ಈ ಬಾರಿಯಂತೂ ಬರಗಾಲದ ಹೊಡೆತಕ್ಕೆ ಅನ್ನದಾತರು ನಲುಗಿದ್ದಾರೆ. ಈ ನಡುವೆ ಕಳೆದ ಒಂದು ವರ್ಷದಿಂದ ಕಷ್ಟಪಟ್ಟು ದಾಳಿಂಬೆ ಬೆಳೆಯನ್ನು ಉಳಿಸಿಕೊಂಡಿದ್ದ ರೈತನಿಗೆ ಒಂದೇ ದಿನದಲ್ಲಿ ಆಘಾತ ಉಂಟಾಗಿದೆ. ಇದಕ್ಕೆ ಕಾರಣ ಹುಲುಸಾಗಿ ಬೆಳೆದಿದ್ದ ದಾಳಿಂಬೆ ಗಿಡಗಳನ್ನು ಯಾರೋ ಕಡಿದು ಹಾಕಿರುವುದು. ಹೌದು, …

Read More »