Breaking News

ರಾಷ್ಟ್ರೀಯ

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

ಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಕಾಶ್ಮೀರಿ ಸಂಸದರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ದಾರಿತಪ್ಪಿಸುವ ವಿಷಯವನ್ನು ಹಂಚಿಕೊಂಡಿದ್ದಕ್ಕಾಗಿ ಶ್ರೀನಗರ ಸಂಸದ ಅಗಾ ಸೈಯದ್ ರುಹುಲ್ಲಾ ಮೆಹದಿ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಮತ್ತು ವಿಶ್ವಾದ್ಯಂತ ಶಿಯಾ ಮುಸ್ಲಿಮರು ಆರಾಧಿಸುವ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆ …

Read More »

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

ತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ  ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಮಹತ್ವದ ನಿರ್ಣಯ ತೆಗೆದುಕೊಂಡಿದೆ. ಈ ಬಗ್ಗೆ ಟಿಬಿಟಿ ಅಧ್ಯಕ್ಷ ಕೆ.ಜಯಕುಮಾರ್ ಮಾತನಾಡಿ, ಗರ್ಭ ಧರಿಸುವ ವಯಸ್ಸಿನ ಮಹಿಳೆಯರ ದೇವಾಲಯ ಪ್ರವೇಶ, ಪೂಜೆ ಸಲ್ಲಿಕೆಗೆ ಅವಕಾಶ ಕೊಟ್ಟಿರುವ ಸುಪ್ರೀಂ ಕೋರ್ಟ್‌  2018ರ ತೀರ್ಪನ್ನು ವಿರೋಧಿಸಿ ನಿರ್ಣಯ ತೆಗೆದುಕೊಂಡಿದ್ದೇವೆ ಎಂದರು. ಟಿಡಿಬಿಯು ಶಬರಿಮಲೆ ಪದ್ಧತಿ, ಸಂಪ್ರದಾಯ ಹಾಗೂ ನಂಬಿಕೆಗಳನ್ನು ಕಾಪಾಡಲು ಒತ್ತು ಕೊಡುತ್ತದೆ. ರಾಜ್ಯ ಸರ್ಕಾರವೂ ಇದನ್ನು …

Read More »

ಇಸ್ರೇಲ್‌-ಇರಾನ್‌ ಯುದ್ಧ; ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

ನವದೆಹಲಿ: ಇಸ್ರೇಲ್-ಇರಾನ್ ಯುದ್ಧ  ಹಿನ್ನೆಲೆ ಮಧ್ಯಪ್ರಾಚ್ಯ ಸಂಘರ್ಷದ ಕುರಿತು ಚರ್ಚಿಸಲು ಇಂದು ರಾತ್ರಿ ಪ್ರಧಾನಿ ಮೋದಿ  ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ ನಡೆಯಲಿದೆ. ಸಭೆ ರಾತ್ರಿ 10 ಗಂಟೆಗೆ ನಡೆಯಲಿದೆ. ಎರಡು ದಿನಗಳ ಪ್ರವಾಸದ ನಂತರ ಪ್ರಧಾನಿ ಮೋದಿ ಇಂದು ರಾತ್ರಿ 9:30 ರ ಸುಮಾರಿಗೆ ದೆಹಲಿಗೆ ಆಗಮಿಸುವ ನಿರೀಕ್ಷೆಯಿದೆ. ಬಳಿಕ ರಾತ್ರಿ 10 ಗಂಟೆಗೆ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಇ ಇಸ್ರೇಲ್ ಭಾನುವಾರವೂ ಇರಾನ್ …

Read More »

ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ! ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಸಕ್ಕರೆ ಕಾರ್ಖಾನೆಯಿಂದ ತಮಿಳುನಾಡಿಗೆ ಎಥಿನಾಲ್ ಸಾಗಿಸುತ್ತಿದ್ದ ಬೃಹತ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮಗುಚಿ ಬಿದ್ದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಸೈದಾಪುರ ಕ್ರಾಸ್ ಬಳಿ ಇಂದು ಮುಂಜಾನೆ 16 ಚಕ್ರದ ಬೃಹತ್ ಎಥಿನಾಲ್ ಲಾರಿ …

Read More »

ಪುಲ್ವಾಮಾ ದಾಳಿಗೆ 7 ವರ್ಷ

ಪ್ರತಿ ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು ಮತ್ತೆ ಮತ್ತೆ ನೆನಪಿಗೆ ಬರುತ್ತೆ. ಏಕೆಂದ್ರೆ ಇದೇ ದಿನ ಸರಿಯಾಗಿ 6 ವರ್ಷಗಳ ಹಿಂದೆ ಭಾರತೀಯ ಸೇನೆ  ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್‌ಪಿಎಫ್  ಯೋಧರು ಹುತಾತ್ಮರಾಗಿದ್ದರು. ಇಡೀ ಭಾರತವೇ ಶೋಕಾಚರಣೆ ಆಚರಿಸಿ, ಮರುಕ ವ್ಯಕ್ತಪಡಿಸಿತ್ತು. ಈಗಲೂ ಪ್ರತಿ ವರ್ಷ ಫೆಬ್ರವರಿ 14, ಭಾರತೀಯರ ಪಾಲಿಗೆ ಮರೆಯಲಾಗದ ದಿನ, ಕರಾಳ …

Read More »

ಅಮೇರಿಕಾರದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ 260 ಕೋಟಿ ಪರಿಹಾರ!

ಸಿಯಾಟಲ್: ಅಮೆರಿಕದ ಸಿಯಾಟಲ್‌ನಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲ ಅವರ ಕುಟುಂಬಕ್ಕೆ ಸಿಯಾಟಲ್ ಸ್ಥಳೀಯಾಡಳಿತವು ಭಾರಿ ಮೊತ್ತದ ಪರಿಹಾರ ಘೋಷಿಸಿದೆ. ಸುಮಾರು 29 ಮಿಲಿಯನ್ ಡಾಲರ್ (ಅಂದಾಜು 262 ಕೋಟಿ ರೂಪಾಯಿ) ಹಣವನ್ನು ರಾಜಿ ಒಪ್ಪಂದದ ಭಾಗವಾಗಿ ನೀಡಲು ಸ್ಥಳೀಯಾಡಳಿತ ಒಪ್ಪಿಕೊಂಡಿದೆ. 2023ರಲ್ಲಿ ಸಂಭವಿಸಿದ ಈ ದುರಂತ ಪ್ರಕರಣವು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ವಿಶೇಷವಾಗಿ ಭಾರತೀಯ …

Read More »

ರಾಹುಲ್‌ ಸದಸ್ಯತ್ವ ರದ್ದುಗೊಳಿಸಿ – ಬಿಜೆಪಿಯಿಂದ ಪ್ರಸ್ತಾಪ ಸಲ್ಲಿಕೆ

ನವದೆಹಲಿ: ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದ  ಸಂಬಂಧವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ  ಅವರ ಲೋಕಸಭಾ ಸದಸ್ಯತ್ವ ರದ್ದುಗೊಳಿಸಬೇಕೆಂದು ಆಗ್ರಹಿಸಿದೆ. ಸಂಸದ ನಿಶಿಕಾಂತ್‌ ದುಬೆ  ಅವರು, ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ನಾನು ಪ್ರಸ್ತಾವನೆ ಸಲ್ಲಿಸಿದ್ದೇನೆ. ಆಜೀವ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ನಿಷೇಧ ಹೇರಬೇಕು ಎಂದು ಒತ್ತಾಯಿಸಿ ಅವರ ವಿರುದ್ಧ ಮಹತ್ವದ ನಿರ್ಣಯ ಮಂಡಿಸಿರುವುದಾಗಿ ಹೇಳಿದ್ದಾರೆ. ಇದು ವಿಶೇಷ ಹಕ್ಕುಚ್ಯುತಿ ನೋಟಿಸ್ ಅಲ್ಲ. ನಾನು …

Read More »

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

ನವದೆಹಲಿ: ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್  ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿರುವ ಅವರು, ಕೇಂದ್ರ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಿದ್ದು, ಡಿಪಿಆರ್‌ಗೆ ಅನುಮತಿ ನೀಡಿ ಯೋಜನೆ ಕಾರ್ಯಾರಂಭ ಮಾಡಬೇಕು. ನಾನು ರಾಜ್ಯ ಸರ್ಕಾರಕ್ಕೆ ಭೂಸ್ವಾಧೀನ ಕೈಗೊಳ್ಳಲು ಆಗ್ರಹಿಸಿದ್ದೇನೆ. ಡಿಪಿಆರ್‌ಗೆ ಒಪ್ಪಿಗೆ ನೀಡುವುದರಿಂದ …

Read More »

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

ಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಬಂದ್ ನಡೆಯುತ್ತಿದ್ದು, ರಾಜ್ಯದಲ್ಲೂ ಪ್ರತಿಭಟನೆಗೆ ಕರೆ ನೀಡಲಾಗಿದೆ. ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಎಸ್‌ಇಡಬ್ಲ್ಯೂಎ, ಎಐಸಿಸಿಟಿಯು, ಎಲ್‌ಪಿಎಫ್ ಮತ್ತು ಯುಟಿಯುಸಿ ಸೇರಿದಂತೆ 10 ಕೇಂದ್ರ ಕಾರ್ಮಿಕ ಸಂಘಗಳು ಪ್ರತಿಭಟನೆಯ ಕಹಳೆ ಮೊಳಗಿಸಲಿವೆ. ಈ ಕಾರ್ಮಿಕ ರೈತ ಸಂಘಟನೆಗಳಿಗೆ …

Read More »

ಅಮೆರಿಕ ಜೊತೆ ವ್ಯಾಪಾರ ಒಪ್ಪಂದ| ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ, ನಿಮಗೆ ನಾಚಿಕೆ ಇಲ್ಲ: ಬಿಜೆಪಿ ವಿರುದ್ಧ ರಾಗಾ ವಾಗ್ದಾಳಿ

ನವದೆಹಲಿ: ಭಾರತ ಯಾರಿಂದ ತೈಲ ಖರೀದಿಸಬಹುದು ಅಥವಾ ಖರೀದಿಸಬಾರದು ಎಂದು ಅಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗಿನ ವ್ಯಾಪರ ಒಪ್ಪಂದದ ಮೂಲಕ ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ. ನಿಮಗೆ ನಾಚಿಕೆ ಇಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ  ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅವರು, ಅಮೆರಿಕದೊಂದಿಗೆ ಸಮಾನ ಪ್ರಯೋಜನಗಳನ್ನು ಪಡೆಯದೇ ಒಪ್ಪಂದ ಮಾಡಿಕೊಳ್ಳುವ ಮೂಲಕ ಸರ್ಕಾರ ಸಂಪೂರ್ಣ ಶರಣಾಗಿದೆ ಎಂದು ಆರೋಪಿಸಿದ್ದಾರೆ.  ಈ …

Read More »