ಓದುವಂತೆ ತಂದೆ ಬುದ್ಧಿವಾದ ಹೇಳಿದ್ದಕ್ಕೆ 9 ವರ್ಷದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ದುರಂತ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ಮೃತ ಬಾಲಕಿ ತನ್ನ ರೀಲ್ಸ್ ಮೂಲಕ ʼರೀಲ್ಸ್ ಕ್ವೀನ್ʼ ಎಂಬ ಖ್ಯಾತಿ ಗಳಿಸಿದ್ದಳು. ಪ್ರತೀಕ್ಷಾ ಎಂದು ಗುರುತಿಸಲಾದ 4ನೇ ತರಗತಿಯ ಬಾಲಕಿ ಕಳೆದ ಆರು ತಿಂಗಳಲ್ಲಿ ಸುಮಾರು 70 ರೀಲ್ಗಳನ್ನು ಮಾಡಿದ್ದಳು. ಅವಳನ್ನು ನೆರೆಹೊರೆಯವರು ‘ರೀಲ್ಸ್ ಕ್ವೀನ್’ ಎಂದು ಕರೆಯುತ್ತಿದ್ದರು. ಮಂಗಳವಾರ ರಾತ್ರಿ 8 ಗಂಟೆಯ ಸುಮಾರಿಗೆ …
Read More »ಬರೆದಿಟ್ಟುಕೊಳ್ಳಿ ನೂರಕ್ಕೆ ನೂರರಷ್ಟು ನಾವೇ ಅಧಿಕಾರಕ್ಕೆ ಬರುತ್ತೇವೆ
ಮುಂಬರುವ ವಿಧಾನಸಭಾ ಚುನಾವಣೆಗೆ ಈಗಾಗಲೇ ಕಾವೇರಿದ್ದು, ದಿನಾಂಕ ನಿಗದಿಯಾದ ಬಳಿಕ ಇದು ಮತ್ತಷ್ಟು ಚುರುಕುಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು ಮೇ 13ರಂದು ಫಲಿತಾಂಶ ಹೊರಬೀಳಲಿದೆ. ಇದರ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರೆದಿಟ್ಟುಕೊಳ್ಳಿ ನೂರಕ್ಕೆ ನೂರರಷ್ಟು ನಾವೇ …
Read More »ರಾಜ್ಯಾದ್ಯಂತ ಚುನಾವಣಾ ಅಧಿಕಾರಿಗಳ ಭರ್ಜರಿ 17 ಕೆಜಿ ಚಿನ್ನ ಹಾಗೂ ಬೆಳ್ಳಿಯನ್ನ ವಶಕ್ಕೆ ಪಡೆದ ಪೊಲೀಸರು
ಅತ್ತ ಬಣ್ಣ ಬಣ್ಣದ ಗಿಫ್ಟ್ಗಳನ್ನ ನೀಡಿ ಜನನಾಯಕರು ಮತಬೇಟೆಗೆ ಸಜ್ಜಾಗಿದ್ರೆ ಇತ್ತ ಪೊಲೀಸರು ಅವರನ್ನೇ ಬೇಟೆಯಾಡ್ತಿದ್ದಾರೆ. ರಾಜ್ಯದ ಎಂಟು ದಿಕ್ಕುಗಳ ಮೇಲೂ ಕಣ್ಣಿಟ್ಟಿರೋ ಚುನಾವಣಾ ಆಯೋಗ ಅಕ್ರಮಗಳಿಗೆ ಕಡಿವಾಣಹಾಕಿ ಕೋಟಿ ಕೋಟಿ ಹಣವನ್ನ ಸೀಜ್ ಮಾಡ್ತಿದೆ. ರಾಜ್ಯದ ಅಷ್ಠ ದಿಕ್ಕುಗಳಲ್ಲೂ ವಿಧಾನ ಸಭಾ ಚುನಾವಣೆಯ ಕಾವು ಹಬ್ಬಿದೆ. ಮತದಾರರ ಮನವೊಲಿಸಿ ಮತಬೇಟೆಯಾಡಲು ನಾಯಕರು ಗಿಫ್ಟ್ ಅಸ್ತ್ರದ ಮೊರೆಹೋಗ್ತಿದ್ದಾರೆ. ಹೀಗಾಗಿ ಜನಪ್ರತಿನಿಧಿಗಳ ಗಿಫ್ಟ್ ದರ್ಬಾರ್ಗೆ ಬ್ರೇಕ್ ಹಾಕಿ ಚುನಾವಣಾ ಆಯೋಗ …
Read More »ತ್ರಿವಿಧ ದಾಸೋಹಿ ಲಿ. ಶಿವಕುಮಾರ ಶ್ರೀಗಳ 116 ನೇ ಜಯಂತಿ: ಸಿದ್ಧಗಂಗಾ ಮಠದಲ್ಲಿ ವಿಶೇಷ ಪೂಜೆ
ತುಮಕೂರು: ಇಂದು ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಜಯಂತಿ ನಡೆಯಲಿದೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಲಿಂಗೈಕ್ಯ ಶಿವಕುಮಾರ ಶ್ರೀಗಳ 116ನೇ ಜಯಂತಿ ಹಿನ್ನೆಲೆಯಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗುವುದು. ಇಂದು ರುದ್ರಾಕ್ಷಿ ಮಂಟಪದಲ್ಲಿ ಶ್ರೀಗಳ ಪ್ರತಿಮೆ ಇಟ್ಟು ಮೆರವಣಿಗೆ ನಡೆಸಲಾಗುತ್ತದೆ. ಬೆಳಗ್ಗೆ 11 ಗಂಟೆಗೆ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು, ಸುತ್ತೂರು ಮಠದ …
Read More »BJPಯಿಂದ ಜೆಡಿಎಸ್ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ;
ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಶಾಲು ಹಾಕುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಖೂಬಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಜೆ.ಪಿ.ನಗರದಲ್ಲಿರುವ ಕುಮಾರಸ್ವಾಮಿ ಅವರ ನಿವಾಸದಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಖೂಬಾ ಅವರು ಈ ಹಿಂದೆ ಕೂಡಾ ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಜೆಡಿಎಸ್ ಪಕ್ಷದಿಂದ ಬಸವ ಕಲ್ಯಾಣ ಕ್ಷೇತ್ರವನ್ನು …
Read More »ಮನೆಯ ಕೋಣೆಯಲ್ಲೇ ನೇತಾಡುತ್ತಿತ್ತು ಪತ್ನಿಯ ಶವ; ಪತಿಯ ವಿರುದ್ಧ ಆರೋಪ
ಬೆಂಗಳೂರು: ಮಹಿಳೆಯೊಬ್ಬಳು ತನ್ನ ಮನೆಯ ಕೋಣೆಯಲ್ಲಿ ಶವವಾಗಿ ನೇತಾಡುತ್ತಿದ್ದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದು, ಪತಿಯ ವಿರುದ್ಧ ಆರೋಪ ಹೊರಿಸಲಾಗಿದೆ. ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ರಶ್ಮಿ (32) ಸಾವಿಗೀಡಾದ ಮಹಿಳೆ. ಬೆಂಗಳೂರಿನ ಪೂರ್ಣಪ್ರಜ್ಞಾ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಈಕೆ ತಾನು ವಾಸವಿದ್ದ ಮನೆಯ ಕೋಣೆಯಲ್ಲಿ ಶವವಾಗಿ ನೇತಾಡುತ್ತಿದ್ದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದಾಳೆ. ಈಕೆ ಖಾಸಗಿ ಕಂಪನಿಯ ಇಂಜಿನಿಯರ್ ಅರವಿಂದ್ ಎಂಬಾತನ ಪತ್ನಿ. ಮಂಡ್ಯ ಮೂಲದ …
Read More »ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮೇ 29ರಿಂದ ತರಗತಿಗಳು ಆರಂಭವಾಗಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುತ್ತಿದ್ದು, ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಈ ಮಾರ್ಗಸೂಚಿಯಲ್ಲಿ ವಾರ್ಷಿಕ/ಮಾಹೆವಾರು ಪಾಠ ಹಂಚಿಕೆ, ಪಠ್ಯೇತರ …
Read More »ದಶಪಥ ಹೆದ್ದಾರಿ ವಾಹನರರಿಗೆ ಮತ್ತೊಮ್ಮೆ ಬರೆ ಸವಾರಿ ಇನ್ನಷ್ಟು ದುಬಾರಿ!
ಬೆಂಗಳೂರು: ದಶಪಥ ಹೆದ್ದಾರಿ ವಾಹನರರಿಗೆ ಮತ್ತೊಮ್ಮೆ ಬರೆ ಬಿದ್ದಿದೆ. ಮೈಸೂರು ಬೆಂಗಳೂರು ಎಕ್ಸ್ಪ್ರೆಸ್ ಹೈವೆ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು ಟೋಲ್ ಸಂಗ್ರಹ ಆರಂಭವಾದ 17 ದಿನದಲ್ಲೇ ಮತ್ತೆ ಟೋಲ್ ದರ ಹೆಚ್ಚಳವಾಗಿದೆ. ನಾಳೆಯಿಂದ ಶೇಕಡಾ 22ರಷ್ಟು ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ಪ್ರಕಾರ ಟೋಲ್ ದರ ಹೆಚ್ಚಳವಾಗಲಿದೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 1. ಕಾರು/ವ್ಯಾನ್/ಜೀಪ್: ಏಕಮುಖ ಸಂಚಾರ 165 ರೂ(30ರೂ ಹೆಚ್ಚಳ). ದ್ವಿಮುಖ ಸಂಚಾರ – 250 …
Read More »ಸಿಎಂ ಕಾರನ್ನು ಬಿಡದ ಚುನಾವಣಾ ಅಧಿಕಾರಿಗಳು
ದೊಡ್ಡಬಳ್ಳಾಪುರ : ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಚುನಾವಣಾ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರನ್ನೂ ತಪಾಸಣೆ ಮಾಡಿದ್ದಾರೆ. ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಬಸವರಾಜ ಬೊಮ್ಮಾಯಿ ಅವರು ಬರುತ್ತಿದ್ದರು. ಈ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹುಡ್ಯ ಗ್ರಾಮದ ಚೆಕ್ ಪೋಸ್ಟ್ ಬಳಿ ಸಿಎಂ ಕಾರು ತಪಾಸಣೆ ಮಾಡಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಘಾಟಿ ದೇವಾಲಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ವರುಣಾದಲ್ಲಿ ನಾವು ಖಂಡಿತವಾಗಿ ಪ್ರಭಲವಾದ ಪೈಪೋಟಿ ನೀಡುತ್ತೇವೆ. …
Read More »ಎಸ್ಎಸ್ಎಲ್ಸಿ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ!
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗಳು ಇಂದಿನಿಂದ ಆರಂಭಗೊಂಡಿದ್ದು, ಪರೀಕ್ಷೆ ಪ್ರಾರಂಭವಾದ ಮೊದಲ ದಿನವೇ ಕನ್ನಡ ಭಾಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಪ್ರಥಮ ಭಾಷೆ ಕನ್ನಡ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಕಿಡಿಗೇಡಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಯಾಗಿರುವ ಬಗ್ಗೆ ಶಿಕ್ಷಣ ಇಲಾಖೆ ಹಾಗೂ ಯಾವುದೇ ಅಧಿಕಾರಿಗಳು ಖಚಿತಪಡಿಸಿಲ್ಲ. ಪರೀಕ್ಷೆಯು ಬೆಳಿಗ್ಗೆ 10.30 ರಿಂದ ಆರಂಭವಾಗಿದ್ದು, ಮಧ್ಯಾಹ್ನ 1.30 ರವರೆಗೆ ನಡೆಯಲಿದೆ. ಇಂದಿನಿಂದ ಆರಂಭವಾದ ಪರೀಕ್ಷೆಗಳು ಏಪ್ರಿಲ್ …
Read More »