Breaking News

ರಾಷ್ಟ್ರೀಯ

ಧಾರವಾಡದಲ್ಲಿ ತಡ ರಾತ್ರಿ ವರುಣನ ಆರ್ಭಟ, ಗಾಳಿ‌ಮಳೆಗೆ ನೆಲ್ಲಕುರುಳಿದ ಬಿದ್ದ ಮರ…ಧಾರವಾಡ ಉಪ್ಪಿನ ಬೆಟಗೇರಿ ರಸ್ತೆಯ ಘಟನೆ, ತಡರಾತ್ರಿ ವಾಹನ ಸವಾರರ ಪರದಾಟ

ಧಾರವಾಡದಲ್ಲಿ ತಡ ರಾತ್ರಿ ವರುಣನ ಆರ್ಭಟ, ಗಾಳಿ‌ಮಳೆಗೆ ನೆಲ್ಲಕುರುಳಿದ ಬಿದ್ದ ಮರ…ಧಾರವಾಡ ಉಪ್ಪಿನ ಬೆಟಗೇರಿ ರಸ್ತೆಯ ಘಟನೆ, ತಡರಾತ್ರಿ ವಾಹನ ಸವಾರರ ಪರದಾಟ ಧಾರವಾಡದಲ್ಲಿ ತಡ ರಾತ್ರಿ ವರುಣನ‌ ರಾಯ ಅರ್ಭಟ ತೋರಿದ್ದು, ರೈತರ ಮೊಗದಲ್ಲಿ ಮಳೆರಾಯ ಮಂದಹಾಸ ಮೂಡಿಸಿದ್ರೆ ವಾಹನ ಸವಾರರು ಕೆಲಕಾಲ‌ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ‌ಬಿರುಗಾಳಿ ಸಮೇತ ಮಳೆಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು, ವಾಹನ ಸವಾರರು ಪರದಾಡಿದ್ದಾರೆ.‌ ಹೌದು ಕಳೆದ ಭಾನುವಾರ ತಡ ರಾತ್ರಿ …

Read More »

ಶಾಸಕ ಬಸನಗೌಡ ಪಾಟೀಲ, ಯತ್ನಾಳ ವಿರುದ್ಧ ಒಮ್ಮೆ ಸ್ಪರ್ಧಿಸುವ ಇರಾದೆ ಇದೆ:ಸಚಿವ ಶಿವಾನಂದ ಪಾಟೀಲ

ಶಾಸಕ ಬಸನಗೌಡ ಪಾಟೀಲ, ಯತ್ನಾಳ ವಿರುದ್ಧ ಒಮ್ಮೆ ಸ್ಪರ್ಧಿಸುವ ಇರಾದೆ ಇದೆ:ಸಚಿವ ಶಿವಾನಂದ ಪಾಟೀಲ ವಿಜಯಪುರ : ಕೆಲ ದಿನಗಳ ಹಿಂದೆ ಅಣ್ಣ ಬಸವಣ್ಣನವರ ಕುರಿತು ಅಪಮಾನಕರ ರೀತಿ ಮಾತನಾಡಿದ್ದ ಹುಚ್ಚು ಮನಸ್ಥಿತಿಯ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಇದೀಗ ಇಸ್ಲಾಂ ಧರ್ಮೀಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತೆ ಪ್ರವಾದಿ ಮಹಮ್ಮದ್ ಪೈಗಂಭರ ಕುರಿತು ಅವಮಾನಕರ ಮಾತನಾಡಿದ್ದಾರೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ …

Read More »

ಹೊಲದಲ್ಲಿ ಪೂಜೆಗೆ ತೆರಳಿದ್ದ ಮಗ ಸಿಡಿಲಿಗೆ ಬಲಿ

ರಾಯಚೂರು: ಸಿಡಿಲು ಬಡಿದು‌ ಮಗ ಸಾವನ್ನಪ್ಪಿ, ತಾಯಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಕೆ.ಗುಡದಿನ್ನಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಸಾಯಣ್ಣ(55) ಸಿಡಿಲಿಗೆ ಬಲಿಯಾದ ವ್ಯಕ್ತಿಯೆಂದು ಗುರುತಿಸಲಾಗಿದೆ. ಅವರ ತಾಯಿ ಲಕ್ಷ್ಮಮ್ಮ ಗಾಯಗೊಂಡಿದ್ದಾರೆ. ಅಮಾವಾಸ್ಯೆ ಹಿನ್ನೆಲೆಯಲ್ಲಿ ತಾಯಿ, ಮಗ ಜಮೀನಿನಲ್ಲಿನ ತಾಯಮ್ಮನ ಗುಡಿಗೆ ಪೂಜೆ ಸಲ್ಲಿಸಲು ಹೋಗಿದ್ದರು. ಈ ಸಮಯದಲ್ಲಿ ಸಿಡಿಲು ಅಪ್ಪಳಿಸಿ ಸಾಯಣ್ಣ ಗುಡಿಯಲ್ಲೇ ಸಾವನ್ನಪ್ಪಿದ್ದಾರೆ. ತಾಯಿ 70 ವರ್ಷದ ಲಕ್ಷ್ಮಮ್ಮಗೆ ಗಂಭೀರ ಗಾಯಗಳಾಗಿದ್ದು, ಮಾನ್ವಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. …

Read More »

ರಿಕ್ಕಿ ರೈ ಮೇಲಿನ ಗುಂಡಿನ ದಾಳಿ: ವಿಚಾರಣೆಗೆ ಹಾಜರಾದ ಮುತ್ತಪ್ಪ ರೈ ಎರಡನೇ ಪತ್ನಿ

ರಾಮನಗರ: ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣದ ಎರಡನೇ ಆರೋಪಿಯಾಗಿರುವ ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧ ಅವರು ವಿಚಾರಣೆಗಾಗಿ ಬಿಡದಿ ಪೊಲೀಸ್ ಠಾಣೆಗೆ ಭಾನುವಾರ ಹಾಜರಾಗಿದ್ದರು. ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣದಲ್ಲಿ ಅನುರಾಧ ಅವರು ಎ2 ಆರೋಪಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಭಾನುವಾರ ತಮ್ಮ ವಕೀಲರ ಜೊತೆ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಬಿಡದಿ …

Read More »

ಗೋಕಾಕ : ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವಕನಿಗೆ ಥಳಿತ…

ಗೋಕಾಕ : ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವಕನಿಗೆ ಥಳಿತ….. ಪಿಎಸ್ಐ ವಿರುದ್ಧ ಎಸ್ಪಿಗೆ ದೂರು ನೀಡಿದ ಯುವಕ… ಪೆಹಲ್ಗಾಂ ಘಟನೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವಕನನ್ನು ಥಳಿಸಿದ್ದರಿಂದ ಪಿಎಸ್ಐ ವಿರುದ್ಧ ಯುವಕ ಎಸ್ ಪಿ ಗೆ ದೂರು ನೀಡಿದ್ದಾನೆ ಪಹಲ್ಗಾಂನಲ್ಲಿ ಗುಂಡಿನ ದಾಳಿಯ ನಂತರ ಸ್ಥಳೀಯ ಮುಸ್ಲಿಮರು ಹತ್ಯೆಯಾದವರ ಕುಟುಂಬ ಸದಸ್ಯರಿಗೆ ಸಹಾಯ ಸಹಕಾರ ನೀಡಿದ್ದರು. ಈ ಹಿನ್ನೆಲೆಯಲ್ಲಿ ಗೋಕಾಕ್ ನಿವಾಸಿ ಶಾನುಲ್ ಸೌದಾಗರ ಎಂಬ …

Read More »

ತ್ರಯಂಬಕೇಶವದಿಂದ ಕಾಲ್ನಡಿಗೆಯಲ್ಲಿ ವಿಜಯಪುರಕ್ಕೆ ಆಗಮಿಸಿದ ಬಸವ ಜ್ಯೋತಿ

ತ್ರಯಂಬಕೇಶವದಿಂದ ಕಾಲ್ನಡಿಗೆಯಲ್ಲಿ ವಿಜಯಪುರಕ್ಕೆ ಆಗಮಿಸಿದ ಬಸವ ಜ್ಯೋತಿ ಬಸವ ಜಯಂತಿ ಹಿನ್ನೆಲೆಯಲ್ಲಿ ವಿಜಯಪುರ ನಗರಕ್ಕೆ ಬಸವೇಶ್ವರ ಜ್ಯೋತಿ ಯಾತ್ರೆ ಆಗಮಿಸಿತು. ಚಿಕ್ಕೋಡಿ ತಾಲ್ಲೂಕಿನ ಮುಗಳಿ ಗ್ರಾಮದ ಬಸವೇಶ್ವರ ದೇವಸ್ಥಾನ ಯುವ ಕಮಿಟಿಯ 50 ಜನ ಮಹಾರಾಷ್ಟ್ರದ ತೃಯಂಭಕೇಶವ ಕ್ಷೇತ್ರದಿಂದ “ಬಸವ ಜ್ಯೋತಿ” ಯನ್ನು ಕಾಲ್ನಡಿಗೆ ಮುಖಾಂತರ ಜ್ಞಾನ ಯೋಗಾಶ್ರಮಕ್ಕೆ ಆಗಮಿಸಿದರು‌. ಪೂಜ್ಯ ಬಸವಲಿಂಗ ಸ್ವಾಮೀಜಿಗಳು ಜ್ಯೋತಿಯನ್ನು ಸ್ವಾಗತಿಸಿ ಯುವಕರಿಗೆ ಬಸವೇಶ್ವರ ವಚನ ಸಾಹಿತ್ಯದ ಸಂದೇಶ ನೀಡಿದರು.ಈ ಸಂದರ್ಭದಲ್ಲಿ ಅಖಿಲ ಭಾರತ …

Read More »

ಪತಿಗೆ ಚಾಕುವಿನಿಂದ ಇರಿದ ಪತ್ನಿ

ವಿಜಯಪುರ, ಏಪ್ರಿಲ್​ 27: ನಿವೃತ್ತ ಡಿಜಿಪಿ ಓಂಪ್ರಕಾಶ ಅವರನ್ನು ಅವರ ಪತ್ನಿಯೇ (wife) ಚಾಕುವಿನಿಂದ ಇರಿದು ಕೊಲೆ ಮಾಡಿರುವ ಸುದ್ದಿ ಇನ್ನೂ ತಣ್ಣಗಾಗಿಲ್ಲ. ಈ ಮಧ್ಯೆ ಅದೇ ಮಾದರಿಯಲ್ಲಿ ವಿಜಯಪುರ ನಗರದಲ್ಲಿ ಪತ್ನಿಯೇ ಪತಿ (husband) ಕತ್ತಿಗೆ ಚಾಕು ಹಾಕಿ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಇಂದು ನಸುಕಿನ ಜಾವ ನಗರದ ಆಲಕುಂಟೆ ನಗರದಲ್ಲಿರುವ ಮನೆಯಲ್ಲಿ ಪತ್ನಿ ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್​ ನನ್ನು ಕೊಲೆ ಮಾಡಲು ಮುಂದಾಗಿದ್ದಾಳೆ. ಪತಿ ಗಾಢ ನಿದ್ರೆಯಲ್ಲಿದ್ದಾಗ …

Read More »

ಏಳುವರೆ ವರ್ಷದ ಬಾಲಕಿ ಮೇಲೆ 60 ವರ್ಷದ ವೃದ್ಧನಿಂದ ಲೈಂಗಿಕ ದೌರ್ಜನ್ಯ ಆರೋಪ

ಹಾವೇರಿ: ಮನೆ ಮುಂದೆ ಆಟವಾಡುತ್ತಿದ್ದ ಏಳೂವರೆ ವರ್ಷದ ಬಾಲಕಿಯ ಮೇಲೆ 60 ವರ್ಷದ ವೃದ್ಧನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಶಿಗ್ಗಾವಿ ತಾಲೂಕು ಹುಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಘಟನೆ ನಡೆದಿದೆ. ಬಾಲಕಿಗೆ ಮಾವಿನಹಣ್ಣು ಕೊಡುವುದಾಗಿ ಆಮಿಷವೊಡ್ಡಿರುವ ಆರೋಪಿ, ಆಕೆಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ನೀಡಲಾಗಿದೆ. ಹುಲಗೂರು ಪೊಲೀಸ್ ಠಾಣೆಯಲ್ಲಿ ಶನಿವಾರ …

Read More »

ತಂದೆಯ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಮಗ ಆತ್ಮಹತ್ಯೆ

ವಿಜಯಪುರ, ಏಪ್ರಿಲ್ 25: ಪಿಸ್ತೂಲ್​ನಿಂದ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ನಗರದ ಶಿಕಾರಿ ಖಾನೆ ಏರಿಯಾದಲ್ಲಿ ನಡೆದಿದೆ. ಅಶನಾಮ್ ಪ್ರಕಾಶ್​ ಮಿರ್ಜಿ(22) ಆತ್ಮಹತ್ಯೆ ಮಾಡಿಕೊಂಡ ಯುವಕ (boy). ಅಶನಾಮ್ ತಂದೆ ಮಾಜಿ ಪಾಲಿಕೆ ಸದಸ್ಯ ಪ್ರಕಾಶ್​ ಮಿರ್ಜಿ ಹೆಸರಿನಲ್ಲಿ ಪಿಸ್ತೂಲ್ ಲೈಸೆನ್ಸ್​ ಇದೆ. ತಂದೆ, ತಾಯಿ ಮತ್ತು ಸಂಬಂಧಿಗಳು ಮನೆಯಲ್ಲಿದ್ದಾಗಲೇ ಬೆಡ್​​ ರೂಂನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಅಶನಂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. …

Read More »

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಲಕ್ಷ ಸಸಿ ನೆಡುವ ಯೋಜನೆ ವಿಫಲ: ನಿರ್ವಹಣೆ ಇಲ್ಲದೇ ಒಣಗಿ ಹೋದ ಸಾವಿರಾರು ಗಿಡಗಳು

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಳೆದ ವರ್ಷ ಉದ್ದೇಶಿಸಿದ್ದ ಒಂದು ಲಕ್ಷ ಗಿಡ ನೆಡುವ ಯೋಜನೆ ಸಂಪೂರ್ಣವಾಗಿ ವಿಫಲವಾಗಿದೆ. ಪಾಲಿಕೆ ಲಕ್ಷ ಸಸಿ ನೆಡುವ ಗುರಿ ಇಟ್ಟುಕೊಂಡಿತ್ತು. ಆದರೆ ಏಳೇ ಸಾವಿರ ಗಿಡಗಳನ್ನು ನೆಟ್ಟಿದ್ದು, ಅವುಗಳು ಕೂಡ ಸೂಕ್ತ ನಿರ್ವಹಣೆ ಇಲ್ಲದೆ ಒಣಗಿ ಹೋಗಿವೆ. ಎಲೆಲ್ಲಿ ಸಸಿ ನೆಡಲು ಉದ್ದೇಶಿಸಲಾಗಿತ್ತು?: ಕಳೆದ ವರ್ಷ ಮಳೆಗಾಲದ ಅವಧಿಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ 575 ಉದ್ಯಾನಗಳ ಖಾಲಿ ಜಾಗ, ಪಾಲಿಕೆ ಒಡೆತನದ ಖಾಲಿ ಜಾಗ, ರಸ್ತೆ …

Read More »