ಮಧುರೈ: ಪೊಂಗಲ್ ಹಬ್ಬದ ಪ್ರಯುಕ್ತ ತಮಿಳುನಾಡಿನ ಅವನಿಯಪುರಂನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ವೀಕ್ಷಿಸಿದರು. ಪೊಂಗಲ್ ಹಬ್ಬದಲ್ಲಿ ಪಾಲ್ಗೊಳ್ಳಲೆಂದು ತಮಿಳುನಾಡಿಗೆ ಆಗಮಿಸಿದ ರಾಹುಲ್ ಗಾಂಧಿ ಜಲ್ಲಿಕಟ್ಟು ವೀಕ್ಷಿಸಿದರು. ಈ ವೇಳೆ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ರಾಹುಲ್ ಗಾಂಧಿಗೆ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ತಮಿಳು ಭಾಷೆ, ಸಂಸ್ಕೃತಿಯನ್ನು ಬದಿಗಿರಿಸಿ, ತಮಿಳುನಾಡು ಜನರ ಮೇಲೆ …
Read More »ವಿವಾಹೇತರ ಸಂಬಂಧ ಬಯಲಿಗೆ ಬರುತ್ತಿದ್ದಂತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜತೆ ಆತ್ಮಹತ್ಯೆ
ಕಾಚಿಗುಡ: ವಿವಾಹೇತರ ಸಂಬಂಧ ಬಯಲಿಗೆ ಬರುತ್ತಿದ್ದಂತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನ ಕಾಚಿಗುಡದಲ್ಲಿ ನಡೆದಿದೆ. ಕಾಚಿಗುಡದ ಚಪ್ಪಲ್ ಬಜಾರ್ನಲ್ಲಿ ವಾಸವಿದ್ದ ಕರ್ನಾಟಕ ಮೂಲದ ಆಟೋ ಚಾಲಕ ಹನಮಂತು (23) ಮತ್ತು ಅದೇ ಏರಿಯಾದಲ್ಲಿ ವಾಸವಿದ್ದ ಮಹಾರಾಷ್ಟ್ರದ ಲಾತುರ್ ಮೂಲದ 23 ವರ್ಷದ ಮಹಿಳೆ ಮೃತ ದುರ್ದೈವಿಗಳು.ಕೆಲವು ದಿನಗಳಿಂದ ಹನುಮಂತು ಜತೆ ಮಹಿಳೆ ವಿವಾಹೇತರ ಸಂಬಂಧ ಇಟ್ಟುಕೊಂಡಿದ್ದಳು. ಈ ವಿಚಾರ ಮಹಿಳೆಯ ಪತಿಗೆ ತಿಳಿದು ಇಬ್ಬರ ನಡುವೆ …
Read More »ದೆಹಲಿಯ ಜನತೆಗೆ ನಾವು ಕೋವಿಡ್ 19 ಲಸಿಕೆ ಉಚಿತವಾಗಿ ನೀಡುತ್ತೇವೆ: ಕೇಜ್ರಿವಾಲ್
ನವದೆಹಲಿ : ಆಮ್ ಆದ್ಮಿ ಸರ್ಕಾರ ದೆಹಲಿ ಜನರಿಗೆ ಕೋವಿಡ್ 19 ಲಸಿಕೆ ಉಚಿತವಾಗಿ ನೀಡಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಉಚಿತ ವ್ಯಾಕ್ಸಿನೇಷನ್ ಮಾಡಬೇಕೆಂದು ಈಗಾಗಲೇ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಕೇಂದ್ರವು ಏನು ಮಾಡುತ್ತದೆ ಎಂಬುದನ್ನು ನಾವು ನೋಡುತ್ತೇವೆ. ಅಗತ್ಯವಿದ್ದರೆ, ಕೇಂದ್ರವು ಲಸಿಕೆಯನ್ನು ಉಚಿತವಾಗಿ ನೀಡದಿದ್ದರೆ, ನಾವು ಲಸಿಕೆಯನ್ನು ದೆಹಲಿ …
Read More »ಮಕ್ಕಳ ಎದುರೇ ಪತ್ನಿ, ಅತ್ತೆಯನ್ನು ಹತ್ಯೆ ಮಾಡಿದ ಭೂಪ
ಗುವಾಹತಿ : ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಅತ್ತೆಯನ್ನು ಕೊಂದಿದ್ದಲ್ಲದೆ ಕೋಳಿ ಮಾಂಸ ಕಟ್ ಮಾಡುವ ಹಾಗೆ ಅವರಿಬ್ಬರನ್ನು ತುಂಡರಿಸಿದ್ದಾನೆ. ತ್ರಿಪುರಾದಧಲೈ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಘಟನೆಯ ಬಳಿಕ ಆತ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಾವು ಆರೋಪಿಯನ್ನು ಬಂಧಿಸಿದ್ದೇವೆ. ಆತನಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದೇವೆ. ಆತನ ದೇಹದಲ್ಲಿ ವಿಷಾಂಶ ಪತ್ತೆಯಾಗಿದೆ. ಆತ ಅಪಾಯದಿಂದ ಪಾರಾಗಿದ್ದಾನೆ. ಆತನನ್ನು ವಿಚಾರಣೆಗೆ ಒಳಪಡಿಸಲು …
Read More »ಬೇಟಿ ಬಚಾವೊ’, ‘ಮಿಷನ್ ಶಕ್ತಿ’ ಪೊಳ್ಳು ಘೋಷಣೆ: ಪ್ರಿಯಾಂಕಾ ಗಾಂಧಿ ವಾದ್ರಾ
ಹೊಸದಿಲ್ಲಿ, : ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರಕಾರ ಮಹಿಳೆಯರ ಭದ್ರತೆ ಕುರಿತು ಪ್ರಚಾರ ನಡೆಸಲು ಕೋಟ್ಯಾಂತರ ರೂಪಾಯಿ ವೆಚ್ಚ ಮಾಡುತ್ತದೆ. ಆದರೆ, ತಳ ಮಟ್ಟದಲ್ಲಿ ಈ ವಿಷಯದ ಬಗ್ಗೆ ನಿರ್ಲಕ್ಷ್ಯದ ಮನೋಭಾವ ಹೊಂದಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಹಿಂದಿ ಪೋಸ್ಟ್‌ನಲ್ಲಿ ಪ್ರಿಯಾಂಕಾ ಗಾಂಧಿ, ಉತ್ತರಪ್ರದೇಶದಲ್ಲಿ ಮಹಿಳೆಯರ ಮೇಲೆ ನಡೆದ ಅಪರಾಧದ ಕುರಿತ ಇತ್ತೀಚೆಗಿನ ವರದಿಯನ್ನು ಉಲ್ಲೇಖಿಸಿದ್ದಾರೆ. ”ಬೇಟಿ ಬಚಾವೊ” …
Read More »ಲಕ್ಷ್ಮೀ ಹೆಬಾಳ್ಕರ್ ದರ್ಬಾರ್, ಅಂಗ ರಕ್ಷಕನ ಕೈಯಲ್ಲಿ ವೆನಿಟಿ ಬ್ಯಾಗ್.
ಹುಬ್ಬಳ್ಳಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬಾಳ್ಕರ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಪೊಲೀಸ್ ಇಲಾಖೆಯಿಂದ ನಿಯೋಜನೆಗೊಂಡ ಅಂಗ ರಕ್ಷಕನನ್ನು ಮನೆಗೆಲಸದವರಂತೆ ಬಳಕೆ ಮಾಡಿಕೊಳ್ಳುತ್ತಿರುವದು ಬಹಿರಂಗಗೊಂಡಿದೆ. ಹೌದು. ನಗರದಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿದ್ದ ಶಾಸಕಿ ಗನ್ ಮ್ಯಾನ್ ಕೈಯಲ್ಲಿ ವ್ಯಾನಿಟಿ ಬ್ಯಾಗ್ ನೀಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಾಸಕಿಯೊಬ್ಬರು ಪೊಲೀಸ್ ಇಲಾಖೆಗೆ ಸೇರಿದ ಗನ್ ಮ್ಯಾನ್ ಕೈಯಲ್ಲಿ ಮಹಿಳೆಯಾಗಿ …
Read More »ಉಮೇಶ ಕತ್ತಿ ಸೇರಿ ಏಳು ಜನರಿಗೆ ಸಚಿವ ಭಾಗ್ಯ
ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ನೂತನ ಸಚಿವರ ಪಟ್ಟಿ ರಾಜಭವನ ತಲುಪಿದ್ದು, ಕತ್ತಿ ಅವರೊಂದಿಗೆ ಎಂಟಿಬಿ ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಎಸ್.ಅಂಗಾರ, ಮುರುಗೇಶ ನಿರಾಣಿ, ಸಿ.ಪಿ.ಯೋಗೇಶ್ವರ ಸಚಿವರಾಗುತ್ತಿದ್ದಾರೆ. ಇನ್ನೂ ಒಂದೆರಡು ಬದಲಾವಣೆ ನಿರೀಕ್ಷಿಸಲಾಗಿದೆ. ಬಿಜೆಪಿ ಸರ್ಕಾರದಲ್ಲಿ ನೂತನವಾಗಿ ಸಂಪುಟ ಸೇರುವ ಸಚಿವರ ಮಾಹಿತಿ. 1- ಉಮೇಶ ಕತ್ತಿ 2- ಎಂಟಿಬಿ ನಾಗರಾಜ 3- ಆರ್.ಶಂಕರ 4- ಎಸ್.ಅಂಗಾರ 5- …
Read More »ಮಹೇಶ ಫೌಂಡೇಶನ್ ನೂತನ ವೆಬ್‌ಸೈಟ್ ಗೆ ಚಾಲನೆ ನೀಡಿದ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ
ಬೆಳಗಾವಿ: ಮಹೇಶ ಫೌಂಡೇಶನ ಸಂಸ್ಥೆಯ ‘ಪ್ರಯತ್ನ’ ಎಂಬ ನೂತನ ವೆಬ್‌ಸೈಟ್ ಅನ್ನು ಸತೀಶ ಶುಗರ್ಸ್ ನಿರ್ದೇಶಕರಾದ ರಾಹುಲ್ ಹಾಗೂ ಪ್ರಿಯಾಂಕ್ ಜಾರಕಿಹೊಳಿ ಬಿಡುಗಡೆಗೊಳಿಸಿದರು. ಇಲ್ಲಿನ ಕಣಬರ್ಗಿ ಮಹೇಶ ಪೌಂಡೇಶನ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಯುವ ದಿನಾಚರಣೆ, ಸ್ವಾಮಿ ವಿವೇಕಾನಂದ ಜಯಂತೋತ್ಸವ ಕಾರ್ಯಕ್ರಮದಲ್ಲಿ ಸಂಸ್ಥೆಯ ನೂತನ ವೆಬ್ ಸೈಟ್ ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ರಾಹುಲ್ ಜಾರಕಿಹೊಳಿ, ಸಮಾಜದ ಸೌಲಭ್ಯ ವಂಚಿತ ಸಮುದಾಯಗಳನ್ನು ಬೆಂಬಲಿಸುವ ಉದ್ದೇಶದಿಂದ …
Read More »ಗೋಹತ್ಯೆ ನಿಷೇಧ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ
ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಕುರಿತಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದ್ದು, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಹಾಗೂ ಸಚಿನ್ ಶಂಕರ್ ಮಗುದಂ ಅವರನ್ನೊಳಗೊಂಡ ಪೀಠ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಪಿಳ್ಳಣ್ಣ ಗಾರ್ಡನ್ ನಿವಾಸಿ ಮೊಹಮ್ಮದ್ ಆರಿಫ್ ಜಮೀಲ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಗೋಹತ್ಯೆ ನಿಷೇಧದಿಂದ ಭಾರತದ ಸಂವಿಧಾನದ 19 (ಜಿ) ವಿಧಿ ಖಾತರಿಪಡಿಸಿದ …
Read More »BIG BREAKING : ನಾಳೆ 3.50ಕ್ಕೆ ನೂತನ ಸಚಿವರ ಪ್ರಮಾಣವಚನ : 8 ಶಾಸಕರು ಸಂಪುಟ ಸೇರ್ಪಡೆ – ಸಿಎಂ ಯಡಿಯೂರಪ್ಪ
ಬೆಂಗಳೂರು : 7 ರಿಂದ 8 ಶಾಸಕರನ್ನು ಮಂತ್ರಿ ಮಂಡಲಕ್ಕೆ ತೆಗೆದುಕೊಳ್ಳುವ ಬಗ್ಗೆ ನಾಳೆ 3.50 ಗಂಟೆಗೆ ತೀರ್ಮಾನ ಕೈಗೊಳ್ಳಲಾಗುವುದು. ನಾಳೆ 7 ರಿಂದ 8 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಾಗುತ್ತದೆ. ಒಬ್ಬರನ್ನು ಕೈಬಿಡುವ ಚರ್ಚೆ ಕೂಡ ನಡೆದಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಯಡಿಯೂರಪ್ಪ ಅವರು, ನಾಳೆ ಸಂಜೆ 3.50ಕ್ಕೆ ನೂತನ ಸಚಿವರು ಸಂಪುಟ ಸೇರ್ವಡೆಗೊಳ್ಳಲಿದ್ದಾರೆ. 7 ರಿಂದ …
Read More »
Laxmi News 24×7