ಭೂತರಾಮನಹಟ್ಟಿ, ಹಿರೇಬಾಗೇವಾಡಿ ಎರಡು ಕಡೆ ವಿವಿ ಕಾರ್ಯಚಟುವಟಿಕೆ ಹೆಚ್ಚುವರಿ ಕಟ್ಟಡಕ್ಕಾಗಿ ಹಿರೇಬಾಗೇವಾಡಿಗೆ ಸ್ಥಳಾಂತರ ಅಭಿವೃದ್ದಿ ದೃಷ್ಠಿಯಿಂದ ಈ ನಿರ್ಧಾರ ಬೆಳಗಾವಿ: ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ ಹಿರೇಬಾಗೇವಾಡಗೆ ಸ್ಥಳಾಂತರ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಯಾವುದೇ ರೀತಿಯ ಧಕ್ಕೆಯಾಗುವುದಿಲ್ಲ. ಸದ್ಯ ಭೂತರಾಮನಹಟ್ಟಿಯಲ್ಲಿರುವ ವಿಶ್ವ ವಿದ್ಯಾಲಯ ಅರಣ್ಯ ಪ್ರದೇಶದ ಜಾಗದ ಅಧೀನದಲ್ಲಿರುವುದಿಂದ ಹೆಚ್ಚುವರಿ ಕಟ್ಟಡ, ಮತ್ತೀತರ ಚಟುವಟಿಕೆ ನಡೆಸಲು ಸಾಧ್ಯವಾಗುತ್ತಿಲ್ಲ. …
Read More »ಯುವತಿಯರಿಬ್ಬರು ಮದುವೆ ಆಗುವ ಮೂಲಕ ಪೋಷಕರಿಗೆ ಶಾಕ್
ಪಾಟ್ನಾ: ಯುವತಿಯರಿಬ್ಬರು ಮದುವೆ ಆಗುವ ಮೂಲಕ ಪೋಷಕರಿಗೆ ಶಾಕ್ ನೀಡಿರುವ ಘಟನೆ ಬಿಹಾರದ ಬೇತಿಯಾ ಜಿಲ್ಲೆಯಲ್ಲಿ ನಡೆದಿದೆ. ಒಂದೇ ಲಿಂಗದವರು ಮದುವೆಗಳು ನಗರ ಪ್ರದೇಶಗಳಲ್ಲಿ ನಡೆದಿರೋದು ಆಗಾಗ್ಗೆ ವರದಿಯಾಗುತ್ತಿದ್ದವು. ಗ್ರಾಮೀಣ ಭಾಗದಲ್ಲಿ ಸಲಿಂಗಿಗಳ ಮದುವೆ ನೋಡಿ ಗ್ರಾಮಸ್ಥರು ಆಶ್ಚರ್ಯ ಚಕಿತರಾಗಿದ್ದಾರೆ. ಬೇತಿಯಾ ನಗರದ ಇಶರತ್ (ಪತ್ನಿ), ರಾಮನಗರದ ನಿವಾಸಿ ನಗ್ಮಾ ಖಾತೂನ್ (ಪತಿ) ಮದುವೆಯಾದ ಜೋಡಿ. ಆದ್ರೆ ಕುಟುಂಬಸ್ಥರು ಇಬ್ಬರ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. …
Read More »T20: ಡೇವಿಡ್ ಮಾಲನ್ ನಂ.1 ಬ್ಯಾಟ್ಸ್‌ಮನ್
ದುಬಾೖ: ಇಂಗ್ಲೆಂಡಿನ ಡೇವಿಡ್ ಮಾಲನ್ ಟಿ20 ಕ್ರಿಕೆಟಿನ ನೂತನ ನಂಬರ್ ವನ್ ಬ್ಯಾಟ್ಸ್‌ಮನ್ ಆಗಿ ಮೂಡಿಬಂದಿದ್ದಾರೆ. ಆಸ್ಟ್ರೇಲಿಯ ವಿರುದ್ಧದ ಸರಣಿಯಲ್ಲಿ ಮಿಂಚಿದ ಮಾಲನ್ 4 ಸ್ಥಾನ ಮೇಲೇರಿ ಮೊದಲ ಸಲ ಅಗ್ರಸ್ಥಾನದ ಗೌರವ ಸಂಪಾದಿಸಿದರು. ಕಳೆದ ನವೆಂಬರ್‌ನಲ್ಲಿ ನಂ.2 ಎನಿಸಿದ್ದು ಮಾಲನ್ ಅವರ ಈವರೆಗಿನ ಅತ್ಯುತ್ತಮ ರ್‍ಯಾಂಕಿಂಗ್ ಆಗಿತ್ತು. ಇದರಿಂದ ಪಾಕಿಸ್ಥಾನದ ಬಾಬರ್ ಆಜಂ ಅವರಿಗೆ ನಂ.1 ಸ್ಥಾನ ನಷ್ಟವಾಯಿತು. ಅವರೀಗ ದ್ವಿತೀಯ ಸ್ಥಾನಕ್ಕೆ ಇಳಿದಿದ್ದಾರೆ. ದ್ವಿತೀಯ ಸ್ಥಾನದಲ್ಲಿದ್ದ ಕೆ.ಎಲ್. ರಾಹುಲ್ …
Read More »ಗೆದ್ದು ನಂ.1 ಸ್ಥಾನ ಮರಳಿ ಪಡೆದ ಆಸೀಸ್
ಸೌತಾಂಪ್ಟನ್: ಇಂಗ್ಲೆಂಡ್ ಎದುರಿನ ಅಂತಿಮ ಟಿ20 ಪಂದ್ಯವನ್ನು 5 ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಆಸ್ಟ್ರೇಲಿಯ ತನ್ನ ಸರಣಿ ಸೋಲಿನ ಅಂತರವನ್ನು 1-2ಕ್ಕೆ ಇಳಿಸಿಕೊಂಡಿತು. ಜತೆಗೆ ನಂ.1 ಗೌರವವನ್ನೂ ಮರಳಿ ಸಂಪಾದಿಸಿತು. ಸತತ 2 ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡ ಬಳಿಕ ಇಂಗ್ಲೆಂಡ್ ಟಿ20 ತಂಡ ರ್‍ಯಾಂಕಿಂಗ್‌ನಲ್ಲಿ ಆಸ್ಟ್ರೇಲಿಯವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೆ ನೆಗೆದಿತ್ತು. ಆದರೀಗ 3ನೇ ಪಂದ್ಯವನ್ನು ಜಯಿಸುವ ಮೂಲಕ ಕಾಂಗರೂ ಪಡೆ ಮತ್ತೆ ನಂ.1 ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಯಿತು. ಸರಣಿಯನ್ನು ಕ್ಲೀನ್‌ಸ್ವೀಪ್ …
Read More »2016ರ ಬಳಿಕ ಆರ್‌ಸಿಬಿ ತಂಡ ಸಮತೋಲಿತವಾಗಿದೆ: ವಿರಾಟ್ ಕೊಹ್ಲಿ
ದುಬೈ: ಐಪಿಎಲ್ 2016ರ ಬಳಿಕ ಪ್ರಸ್ತುತ ಬೆಂಗಳೂರು ತಂಡ ಅತ್ಯಂತ ಸಮತೋಲಿತ ತಂಡವಾಗಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಬೆಂಗಳೂರು ತಂಡ 2016ರ ಫೈನಲ್ ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲು ಕಂಡಿತ್ತು. ಈ ಬಾರಿ ಯುವ ಮತ್ತು ಅನುಭವಿ ಆಟಗಾರರ ಉತ್ತಮ ಸಂಯೋಜನೆ ಇದ್ದು, ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಬೇಕಾದ ಕೌಶಲ್ಯಗಳನ್ನು ಹೊಂದಿದ್ದಾರೆ ಎಂದು ವಿರಾಟ್ ಆರ್‌ಸಿಬಿ ಟಿವಿಗೆ ತಿಳಿಸಿದರು. ತಂಡದ ಯುವ …
Read More »ಹೆಸ್ಕಾಂ ಅಕ್ರಮ-ಸಕ್ರಮ ಯೋಜನೆಯನ್ನು ರೈತರು ಸದ್ಭಳಕೆ ಮಾಡಿಕೊಳ್ಳಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ವ್ಯಾಪ್ತಿಯ ರೈತರು ತಮ್ಮ ಪಂಪ್ ಸೆಟ್‍ಗಳಿಗೆ ಮೂಲ ಸೌಕರ್ಯಗಳು ಅಗತ್ಯವಿದ್ದಲ್ಲಿ ಶುಲ್ಕ ಮತ್ತು ಭದ್ರತಾ ಠೇವಣಿಯನ್ನು ಹೆಸ್ಕಾಂಗೆ ಪಾವತಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ರೈತರಲ್ಲಿ ಮನವಿ ಮಾಡಿದ್ದಾರೆ. ಅಕ್ರಮ-ಸಕ್ರಮ ಯೋಜನೆಯಡಿ ಆರ್ ಆರ್ ಸಂಖ್ಯೆಗಳನ್ನು ಪಡೆದು 50 ರೂ. ನೋಂದಣಿ ಶುಲ್ಕ ಪಾವತಿಸಿದ ರೈತರು ತಮ್ಮ ಅನುಕೂಲದ ಪ್ರಕಾರ ಸರ್ವಿಸ್ ವೈರ್ ಗಳ ಮೂಲಕ ವಿದ್ಯುತ್ …
Read More »ದಾಯಾದಿಗಳ ಜಗಳ ಕೊಲೆಯಲ್ಲಿ ಅಂತ್ಯ
ಬೆಂಗಳೂರು, ಕ್ಷುಲ್ಲಕ ಕಾರಣಕ್ಕೆ ಅಣ್ಣ ತಮ್ಮಂದಿರ ನಡುವೆ ಹೊಡೆದಾಟವಾಗಿದ್ದು, ತಮ್ಮ ಕೊಲೆಯಾಗಿರುವ ಘಟನೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ತಮ್ಮ ಸಲೀಂಪಾಷಾ (28)ಕೊಲೆಯಾಗಿದ್ದು, ಅಣ್ಣ ಅಪ್ಸರ್‍ಪಾಷಾ(32)ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ-ತಮ್ಮಂದಿರಿಬ್ಬರು ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ 8ಗಂಟೆಗೆ ಅಣ್ಣ-ತಮ್ಮಂದಿರ ನಡುವೆ ಜಗಳವಾಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಅಪ್ಸರ್‍ಪಾಷಾ ದೊಣ್ಣೆಯಿಂದ ಹಲ್ಲೆ ನಡೆಸಿದ್ದು, ಸಲೀಂಪಾಷಾನ ಮೂಗು, ಬಾಯಿಯಲ್ಲಿ ರಕ್ತ ಬಂದಿದೆ. ಕೂಡಲೇ ಗಾಯಾಳುವನ್ನು ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ …
Read More »ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಹಿರೇಬಾಗೇವಾಡಿಗೆ ಶಿಫ್ಟ್
ಬೆಳಗಾವಿ: ಜಿಲ್ಲೆಯ ಪ್ರತಿಷ್ಠಿತ ವಿಶ್ವವಿದ್ಯಾಲಯವನ್ನು ಭೂತರಾಮಟ್ಟಿಯಿಂದ ಹಿರೇಬಾಗೇವಾಡಿಗೆ ಸ್ಥಳಾಂತರಿಸಲಾಗಿದ್ದು, ಹಿರೇಬಾಗೇವಾಡಿ ಗ್ರಾಮಸ್ಥರು ಗ್ರಾಮದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಇನ್ನು ಕ್ಯಾಬಿನೆಟ್ ಅನುಮೋದನೆ ಅಷ್ಟೇ ಬಾಕಿ ಉಳಿದಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸಂಭ್ರಮಾಚರಣೆ ಮಾಡಿದ್ದಾರೆ.
Read More »ಹಾಡಹಗಲೇ ಗ್ರಾಮದೊಳಗೆ ನುಗ್ಗಿದ ಕಾಡಾನೆ
ಸಕಲೇಶಪುರ: ತಾಲ್ಲೂಕಿನ ಮಠಸಾಗರ ಗ್ರಾಮಕ್ಕೆ ಬುಧವಾರ ಬೆಳಿಗ್ಗೆ ನುಗ್ಗಿದ ಕಾಡಾನೆ ಗ್ರಾಮಸ್ಥರಲ್ಲಿ ಭಯ ಉಂಟುಮಾಡಿತು. ಬೆಳಿಗ್ಗೆ 7.30ರ ಸುಮಾರಿಗೆ ಗ್ರಾಮದ ಮನೆಗಳ ಅಂಗಳಕ್ಕೆ ಬಂದ ಕಾಡಾನೆ ಕಂಡು ಗ್ರಾಮಸ್ಥರು ಕೂಗಿಕೊಂಡರು. ಜಾಗೃತಗೊಂಡ ಸ್ಥಳೀಯರು ಬಳಿಕ ಮನೆಯಿಂದ ಹೊರ ಬರಲಿಲ್ಲ. ಸುಮಾರು 15 ನಿಮಿಷಗಳ ಕಾಲ ಗ್ರಾಮದಲ್ಲಿ ಗಾಬರಿಯಿಂದ ಓಡಾಡುತ್ತಿದ್ದ ಆನೆ ನಂತರ ಪಕ್ಕದ ಕಾಫಿ ತೋಟದತ್ತ ತೆರಳಿತು. ಯಾವುದೇ ಪ್ರಾಣಹಾನಿ ಉಂಟಾಗಲಿಲ್ಲ. 10 ದಿನಗಳ ಹಿಂದೆ ಇದೇ ಗ್ರಾಮದಿಂದ ಕೂಗಳತೆ ದೂರದಲ್ಲಿ …
Read More »ಕೊರೊನಾ ಸಂಕಷ್ಟದಲ್ಲೂ ರಿಲಾಯನ್ಸ್‌ಗೆ ಹಣದ ಹೊಳೆ, ಸಿಲ್ವರ್ ಲೇಕ್‍ನಿಂದ 7,500 ಕೋಟಿ ರೂ. ಹೂಡಿಕೆ..!
ನವದೆಹಲಿ, -ಕೊರೊನಾ ವೈರಸ್ ಹಾವಳಿಯಿಂದ ದೇಶದ ಅನೇಕ ಸಂಸ್ಥೆಗಳು ತೀವ್ರ ಸಂಕಷ್ಟಕ್ಕೆ ಒಳಗಾಗಿ ಅಸ್ವಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದರೆ, ಭಾರತದ ಪ್ರತಿಷ್ಠಿತ ರಿಲಾಯನ್ಸ್ ಸಂಸ್ಥೆಗೆ ನಿರಂತರವಾಗಿ ಹಣದ ಹೊಳೆ ಹರಿದುಬರುತ್ತಿದೆ. ಅಮೆರಿಕದ ಖಾಸಗಿ ಈಕ್ವಿಟಿ ಸಂಸ್ಥೆ ಸಿಲ್ವರ್ ಲೇಕ್ ಪಾರ್ಟ್‍ನರ್ಸ್, ಹೆಸರಾಂತ ಉದ್ಯಮಿ ಮುಕೇಶ್ ಅಂಬಾನಿ ಒಡೆತನದ ರಿಲಾಯನ್ಸ್ ಇಂಡಸ್ಟ್ರೀಸ್‍ನ ರಿಲಾಯನ್ಸ್ ರಿಟೈಲ್‍ನಲ್ಲಿ 7,500 ಕೋಟಿ ರೂ.ಗಳ ಬಂಡವಾಳ ಹೂಡಿಕೆ ಮಾಡಿ ಶೇ.1.75ರಷ್ಟು ಪಾಲು ಪಡೆದಿದೆ. ಸಿಲ್ವರ್ ಲೇಕ್ ಕಂಪನಿಯು ರಿಲಾ …
Read More »