Breaking News
Home / ರಾಷ್ಟ್ರೀಯ (page 1030)

ರಾಷ್ಟ್ರೀಯ

ಮಗನಿಗೆ ಕೊರೊನಾ ಸೋಂಕು- ಹೃದಯಾಘಾತದಿಂದ ತಾಯಿ ಸಾವು…….

ಬಾಗಲಕೋಟೆ: ಮಗನಿಗೆ ಕೊರೊನಾ ಸೋಂಕಿರುವ ವಿಷಯ ತಿಳಿಯುತ್ತಿದ್ದಂತೆ ರೋಗಿ ನಂ.381 ಅವರ 70 ವರ್ಷದ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಂಯ ಜಮಖಂಡಿಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ನಿವಾಸಿಯಾಗಿರುವ ಸೋಂಕಿತ ತಾಯಿ, ಹೃದಯಸಂಬಂಧಿ ಖಾಯಿಲೆ, ರಕ್ತದೊತ್ತಡದಿಂದ ಬಳಲುತ್ತಿದ್ದರು. ಇತ್ತೀಚೆಗೆ ಜಮಖಂಡಿ ಖಾಸಗಿ ಆಸ್ಪತ್ರೆಯಲ್ಲಿ ಒಂದು ದಿನ ದಾಖಲಾಗಿ ಡಿಸ್ಚಾರ್ಜ್ ಆಗಿದ್ದರು. ಮನೆಯಲ್ಲಿ ಕುಟುಂಬದ ಜೊತೆಗಿದ್ದರು. ಇಂದು ಮಗನಿಗೆ ಕೊರೊನಾ ಸೋಂಕಿರುವುದು ದೃಢವಾಗಿತ್ತು. ಇದರಿಂದ ಶಾಕ್‍ಗೆ …

Read More »

ದಿಯಾ ಸಿನಿಮಾ ಮೆಚ್ಚಿದ ಸಮಂತಾ, ತೆಲುಗಿಗೆ ರಿಮೇಕ್ ಮಾಡಲು ಚಿಂತನೆ….

ಹೈದರಾಬಾದ್: ಟಾಲಿವುಡ್ ಕ್ಯೂಟ್ ಬೆಡಗಿ ಸಮಂತಾ ಅಕ್ಕಿನೇನಿ ರಿಮೇಕ್ ಸಿನಿಮಾಗಳತ್ತ ಹೆಚ್ಚು ಒಲವು ತೋರುತ್ತಿದ್ದು, ಕೆಲ ರಿಮೇಕ್ ಸಿನಿಮಾಗಳೂ ಅವರಿಗೆ ಯಶಸ್ಸು ಹಾಗೂ ಹೆಸರನ್ನು ತಂದುಕೊಟ್ಟಿವೆ. ಅದೇ ರೀತಿ ಇದೀಗ ಕನ್ನಡದ ಸಿನಿಮಾವೊಂದರ ಮೇಲೆ ಸಮಂತಾ ಕಣ್ಣು ಹಾಕಿದ್ದಾರೆ. ಕೇವಲ ನಟಿಸುವುದು ಮಾತ್ರವಲ್ಲ, ಅವರೇ ನಿರ್ಮಿಸುವುದಕ್ಕೂ ಮುಂದಾಗಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ಇತ್ತೀಚೆಗೆ ಸಮಂತಾ ಕನ್ನಡದ ಈ ಸಿನಿಮಾ ನೋಡಿದ್ದು, ತುಂಬಾ ಇಷ್ಟವಾಗಿದೆಯಂತೆ. ಹೀಗಾಗಿ ಈ ಸಿನಿಮಾವನ್ನು ತೆಲುಗಿನಲ್ಲಿ …

Read More »

ಸರ್ಕಾರದ ಮುಂದಿನ ಆದೇಶದವರೆಗೂ ಖಾಸಗಿ ಶಾಲೆಗಳು ಶುಲ್ಕ ವಸೂಲಿ ಮಾಡುವಂತಿಲ್ಲ

ಬೆಂಗಳೂರು,ಏ.18- ಖಾಸಗಿ ಶಾಲೆಗಳಲ್ಲಿ 2020-21ನೇ ಸಾಲಿನ ದಾಖಲಾತಿ ಪ್ರಕ್ರಿಯೆ ಮತ್ತು ಶುಲ್ಕ ವಸೂಲಿ ಮಾಡುವುದನ್ನು ಮುಂದಿನ ಆದೇಶದವರೆಗೆ ಮುಂದೂಡುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. 2019-20ನೇ ಸಾಲಿನಲ್ಲಿ ವ್ಯಾಸಂಗ ಮಾಡಿ ತೇರ್ಗಡೆಗೊಂಡು ಅದೇ ಶಾಲೆಯಲ್ಲಿ ಮುಂದಿನ ತರಗತಿಗೆ ದಾಖಲಾಗುವ ವಿದ್ಯಾರ್ಥಿಗಳಿಂದ ಖಾಸಗಿ ಶಾಲೆಗಳು ಆನ್‍ಲೈನ್ ಮೂಲಕ ಬೋಧನಾ ಶುಲ್ಕ ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು ಮುಂದಿನ ಆದೇಶದವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಖಾಸಗಿ ಶಾಲೆಗಳವರು ಆನ್‍ಲೈನ್ ಮೂಲಕ …

Read More »

ಕೂಲಿ ಕಾರ್ಮಿಕರ ಮಗಳ ಹುಟ್ಟುಹಬ್ಬ ಆಚರಿಸಿದ ಪೊಲೀಸ್……..

ನವದೆಹಲಿ: ಹೆಮ್ಮಾರಿ ಕೊರೊನಾ ವೈರಸ್‍ನಿಂದಾಗಿ ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಏಕಾಏಕಿ ಲಾಕ್‍ಡೌನ್ ಜಾರಿಗೆ ಬಂದಿದೆ. ಇಂತಹ ಸಮಯದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಂದ ಅನೇಕ ಹೃದಯ ಸ್ಪರ್ಶಿಸು ಪ್ರಸಂಗಗಳು ನಡೆದಿವೆ. ಅಂತೆ ಪೊಲೀಸರ ಪುಟ್ಟ ಸಹಾಯದಿಂದ ಶನಿವಾರ ಕೂಲಿ ಕಾರ್ಮಿಕರ ನಾಲ್ಕು ವರ್ಷದ ಬಾಲಕಿಯೊಬ್ಬಳು ತನ್ನ ಜನ್ಮದಿನವನ್ನು ಆಚರಿಸಿಕೊಳ್ಳಲು ಸಾಧ್ಯವಾಯಿತು. ಫತೇಪುರಿ ಬೇರಿಯ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು …

Read More »

BIG-BREAKINGಸಾರ್ವಜನಿಕರ ಆಕ್ರೋಶಕ್ಕೆ ತಲೆಬಾಗಿದ ಸರ್ಕಾರ,ಬೈಕ್ ಸಂಚಾರ ಆದೇಶ ವಾಪಸ್,

ಬೆಂಗಳೂರು: ಏಪ್ರಿಲ್ 20ರ ನಂತರ ಬೈಕ್ ಸಂಚಾರಕ್ಕೆ ನೀಡಿದ್ದ ಅವಕಾಶವನ್ನು ಸರ್ಕಾರ ವಾಪಸ್ ತೆಗೆದುಕೊಂಡಿದೆ. ಸಾರ್ವಜನಿಕರ ಆಕ್ರೋಶಕ್ಕೆ ಸರ್ಕಾರ ಕೊನೆಗೂ ತಲೆಬಾಗಿದೆ. ಈ ಕುರಿತು ಅಧಿಕೃತ ಪ್ರಕಟನೆ ಹೊರಡಿಸಿರುವ ಸರ್ಕಾರ ತನ್ನ ನಿರ್ಧಾರವನ್ನು ವಿಮರ್ಶಿಸಿಕೊಂಡಿದೆ. ಜನಾಭಿಪ್ರಾಯದ ಹಿನ್ನೆಲೆಯಲ್ಲಿ, ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಈ ಕೆಳಕಂಡ ನಿರ್ಣಯಗಳನ್ನು ಪುನರ್ ವಿಮರ್ಶೆ ಮಾಡಿ ಸರ್ಕಾರ ಈ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. 1. ದ್ವಿ-ಚಕ್ರ ವಾಹನಗಳ (Two-Wheeler) ಮುಕ್ತ ಸಂಚಾರಕ್ಕೆ ಅವಕಾಶ ಕೊಡುತ್ತೇವೆಂಬ …

Read More »

ಪುತ್ತೂರು ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ 8 ಅಡಿ ಆಳದಿಂದ ಚಿಮ್ಮಿದ ಜಲಧಾರೆ- ಪವಾಡ ಎಂದ ಭಕ್ತರು

ಮಂಗಳೂರು: ದೇಶವೇ ಕೊರೊನಾ ಭೀತಿಯಿಂದ ಲಾಕ್‍ಡೌನ್ ಆಗಿದೆ. ಆದರೆ ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಾಲಿಂಗೇಶ್ವರ ಆವರಣದಲ್ಲಿ ಕೇವಲ 8 ಅಡಿಯಲ್ಲಿ ನೀರು ಸಿಕ್ಕಿ ಅಚ್ಚರಿ ಘಟನೆ ನಡೆದಿದೆ. ಪುತ್ತೂರು ಮಹಾಲಿಂಗೇಶ್ವರನ ಜಾತ್ರೆ ಅಂದ್ರೆ ಜಿಲ್ಲೆಯ ದೊಡ್ಡ ಜಾತ್ರೆ. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್‍ನಿಂದ ಭಕ್ತರಿಗೆ ಪ್ರವೇಶ ಇಲ್ಲದೆ ಶಾಸ್ತ್ರೋಕ್ತವಾಗಿ ಜಾತ್ರೆ ನಡೆಯುತ್ತಿದೆ. ಜಾತ್ರಾ ಸಂದರ್ಭದ ದೇಗುಲದ ಆವರಣದ ಅಯ್ಯಪ್ಪಸ್ವಾಮಿ ಗುಡಿ ಬಳಿ, ದೇವರ ಅವಭೃತ …

Read More »

ಗ್ರೀನ್ ಝೋನ್‍ನಲ್ಲಿದ್ದರೂ ರಾಯಚೂರಿನ ಬಡಾವಣೆಗಳೆಲ್ಲ ಸೀಲ್‍ಡೌನ್

ರಾಯಚೂರು: ಕೊರೊನಾ ವೈರಸ್ ಸೋಂಕು ತಡೆಗಟ್ಟುವ ಹಿನ್ನೆಲೆ ರಾಯಚೂರು ಜಿಲ್ಲೆಯಾದ್ಯಂತ ಲಾಕ್‍ಡೌನ್ ಬಿಗಿಗೊಳಿಸಲಾಗಿದೆ. ಒಂದು ಬಡಾವಣೆಯಿಂದ ಇನ್ನೊಂದು ಬಡಾವಣೆಗೆ ಹೋಗದಂತೆ ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳಲ್ಲಿ ಒಟ್ಟು 4000 ಕಡೆ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. ಈ ಮೂಲಕ ಅನಾವಶ್ಯಕವಾಗಿ ಜನ ಒಂದೆಡೆಯಿಂದ ಇನ್ನೊಂದೆಡೆಗೆ ತಿರುಗಾಡದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಆಸ್ಪತ್ರೆಗಳಿಗೆ ಮತ್ತು ಸರ್ಕಾರಿ ಕೆಲಸಕ್ಕೆ ಹೋಗುವವರು ಪಾಸ್ ತೋರಿಸಿದಲ್ಲಿ ಮಾತ್ರ ಬಿಡಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು …

Read More »

ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳಾ ಕಾರ್ಮಿಕರು ಸಾವು

ಚಿಕ್ಕಮಗಳೂರು: ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳಾ ಕಾರ್ಮಿಕರು ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಕಳಸದ ಬಾಳೆಹೊಳೆ ಸಮೀಪದ ಹಿತ್ಲುಮಕ್ಕಿ ಗ್ರಾಮದಲ್ಲಿ ಶನಿವಾರ ನಡೆದಿದೆ. ತಮಿಳುನಾಡು ಮೂಲದ ಜ್ಯೋತಿ (28), ಮಾದಮ್ಮ(65), ಮಾರಿ (27) ಮೃತ ತೋಟದ ಕಾರ್ಮಿಕರು. ಮಾದಮ್ಮ ಹಾಗೂ ಜ್ಯೋತಿ ತಾಯಿ ಮಗಳಾಗಿದ್ದು, ಮಾರಿ ಸಂಬಂಧಿ ಎಂದು ತಿಳಿದು ಬಂದಿದೆ. ತಮಿಳುನಾಡಿನ ಸೇಲಂ ಧರ್ಮಪುರಿ ಜಿಲ್ಲೆಯ ಪಾಪರೆಟ್ಟಿ ತಾಲೂಕಿನ 14 ಕಾರ್ಮಿಕರು ಕಳೆದ ಕೆಲ ತಿಂಗಳ …

Read More »

ಈ ವೇಳೆ ವಿಪಕ್ಷ ಹೇಗಿರಬೇಕೆಂದು ರಾಹುಲ್ ಗಾಂಧಿ ತೋರಿಸಿದ್ದಾರೆ: ಶಿವಸೇನೆ

ಮುಂಬೈ: ದೇಶ ಸಂಕಷ್ಟಕ್ಕೆ ಸಿಲುಕಿರುವ ಈ ಸಮಯದಲ್ಲಿ ವಿರೋಧ ಪಕ್ಷ ಹೇಗೆ ವರ್ತಿಸಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೋರಿಸಿಕೊಟ್ಟಿದ್ದಾರೆ ಎಂದು ರಾಹುಲ್ ನಡೆಯನ್ನು ಶಿವಸೇನೆ ಮೆಚ್ಚಿಕೊಂಡಿದೆ. ಈ ವಿಚಾರವಾಗಿ ಪಕ್ಷದ ಮುಖವಾಣಿ ಸಾಮ್ನಾದಲ್ಲಿ ದೇಶದ ಹಿತಾಸಕ್ತಿಗಾಗಿ ರಾಹುಲ್ ಗಾಂಧಿ ಅವರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು, ಕೊರೊನಾ ಸಾಂಕ್ರಾಮಿಕ ರೋಗದ ಬಗ್ಗೆ ಕುಳಿತು ಚರ್ಚಿಸಬೇಕು. ರಾಹುಲ್ ಗಾಂಧಿ ಮತ್ತು ಮೋದಿ ಅವರ ರಾಜಕೀಯ ಹಿತಾಸಕ್ತಿಗಳು ಬೇರೆ ಇರಬಹುದು. …

Read More »

ಅಕ್ಷಯ ಪಾತ್ರೆ ಮೂಲಕ ನಟಿ ರವೀನಾ ಟಂಡನ್ ಸಹಾಯ

ನವದೆಹಲಿ: ಕೆಜಿಎಫ್-2 ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಹೆಚ್ಚು ಸುದ್ದಿಯಾಗುತ್ತಿರುವ ಬಾಲಿವುಡ್ ನಟಿ ರವೀನಾ ಟಂಡನ್, ತಮ್ಮ ವಿವಿಧ ಕೆಲಸಗಳ ಮೂಲಕ ಸಹ ಇತರರಿಗೆ ಮಾದರಿಯಾಗಿದ್ದಾರೆ. ಇದೀಗ ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭದಲ್ಲಿಯೂ ಸಹಾಯ ಹಸ್ತ ಚಾಚಿದ್ದು, ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಟಿ ರವೀನಾ ಟಂಡನ್ ಲಾಕ್‍ಡೌನ್ ದಿನಗಳನ್ನು ಕುಟುಂಬದೊಂದಿಗೆ ಎಂಜಾಯ್ ಮಾಡುತ್ತಿದ್ದು, ಮೊಮ್ಮಕ್ಕಳೊಂದಿಗೆ ಆಟವಾಡುವ ಮೂಲಕ ಕಾಲ ಕಳೆಯುತ್ತಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿಯೂ ಹಂಚಿಕೊಂಡಿದ್ದಾರೆ. ರವೀನಾ ತಮ್ಮ ಚಟುವಟಿಕೆಗಳ ಕುರಿತು …

Read More »