Breaking News

ರಾಷ್ಟ್ರೀಯ

ಸಾಲ ಮರುಪಾವತಿ 2 ವರ್ಷ ವಿಸ್ತರಣೆ ಸಾಧ್ಯ: ಸುಪ್ರೀಂ ಕೋರ್ಟ್‌ಗೆ ಆರ್‌ಬಿಐ ಹೇಳಿಕೆ

ನವದೆಹಲಿ: ಕೋವಿಡ್‌ ಪಿಡುಗಿನಿಂದಾದ ಆರ್ಥಿಕ ಹಿನ್ನಡೆಗೆ ಪರಿಹಾರವಾಗಿ ಪ್ರಕಟಿಸಲಾದ ಸಾಲ ಮರು‍ಪಾವತಿ ಮುಂದೂಡಿಕೆಯನ್ನು ಎರಡು ವರ್ಷಗಳವರೆಗೆ ವಿಸ್ತರಿಸಲು ಅವಕಾಶ ಇದೆ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)‌ ತಿಳಿಸಿವೆ. ಆದರೆ, ವಿವಿಧ ಕ್ಷೇತ್ರಗಳು ಎದುರಿಸುತ್ತಿರುವ ಸಮಸ್ಯೆಗಳು ಭಿನ್ನವಾಗಿವೆ. ಹಾಗಾಗಿ, ಏಕರೂಪದ ಪರಿಹಾರವೊಂದನ್ನು ಒದಗಿಸುವುದು ಕೇಂದ್ರ ಸರ್ಕಾರಕ್ಕೆ ಸಾಧ್ಯ ಇಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಲಾಗಿದೆ. ಒಟ್ಟು ಆಂತರಿಕ ಉತ್ಪನ್ನವು ಶೇ 23ರಷ್ಟು ಕುಸಿದಿದೆ. ಯಾವ …

Read More »

ಮತ್ತೆ ನೂರು ವಿಶೇಷ ರೈಲುಗಳ ಸಂಚಾರ

ನವದೆಹಲಿ: ಅನ್ಲಾಕ್ನ ನಾಲ್ಕನೇ ಹಂತದಲ್ಲಿ, ಭಾರತೀಯ ರೈಲ್ವೆ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳ ಒಪ್ಪಿಗೆಯೊಂದಿಗೆ ಹೆಚ್ಚಿನ ವಿಶೇಷ ರೈಲುಗಳನ್ನು ಪರಿಚಯಿಸಲು ಯೋಜಿಸುತ್ತಿದೆ. ಆದರೆ ಸಾಮಾನ್ಯ ಸೇವೆಗಳನ್ನು ಪೂರ್ಣವಾಗಿ ಪುನರಾರಂಭಿಸುವುದು ಇನ್ನೂ ಬಹಳ ದೂರ ಎನ್ನಲಾಗುತ್ತಿದೆ. ಕೆಲವು ರಾಜ್ಯಗಳು, ವಿಶೇಷವಾಗಿ ಬಿಜೆಪಿಯೇತರ ಅಧಿಕಾರದಲ್ಲಿರುವ ಸರ್ಕಾರಗಳು ಅಂತರರಾಜ್ಯ ರೈಲುಗಳ ಪ್ರಯಾಣವನ್ನು ವಿರೋಧ ವ್ಯಕ್ತಪಡಿಸಿದ್ದಾವೆ. ತಮಿಳುನಾಡು, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾದಂತಹ ರಾಜ್ಯಗಳು ಹೆಚ್ಚಿನ ರೈಲುಗಳನ್ನು ಪರಿಚಯಿಸಲು ಹೆಚ್ಚು ಆಸಕ್ತಿ ಹೊಂದಿಲ್ಲ ಎನ್ನಲಾಗಿದೆ. ಸಾಂಕ್ರಾಮಿಕ …

Read More »

ವೈಜನಾಥ ಪಾಟೀಲ ಸಂಸ್ಮರಣ ಗ್ರಂಥ ಪ್ರಕಟಿಸಲು ನಿರ್ಧಾರ

ಕಲಬುರ್ಗಿ: ‘371 (ಜೆ) ತಿದ್ದುಪಡಿ ಹೋರಾಟದ ರೂವಾರಿ, ಮಾಜಿ ಸಚಿವ ವೈಜನಾಥ ಪಾಟೀಲ ಅವರ ಪ್ರಥಮ ಪುಣ್ಯಸ್ಮರಣೆ ಅಂಗವಾಗಿ ಸಂಸ್ಮರಣ ಗ್ರಂಥ ಹೊರತರಲು ನಿರ್ಧರಿಸಲಾಗಿದೆ. ಈ ಬಗ್ಗೆ ಸಂಪಾದಕೀಯ ಸಮಿತಿ ರಚನೆ ಮಾಡಲಾಗಿದೆ’ ಎಂದು ವೈಜನಾಥ ಪಾಟೀಲರ ಸಂಸ್ಮರಣಾ ಸಂಚಿಕೆ ಸಮಿತಿ ಸಂಚಾಲಕ ಎಂ.ಬಿ.ಅಂಬಲಗಿ ಮತ್ತು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಗೌತಮ ಪಾಟೀಲ ತಿಳಿಸಿದರು. ನಗರದಲ್ಲಿ ಮಂಗಳವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ‘ವೈಜನಾಥ …

Read More »

ಅಪಾಯದ‌ ಅಂಚಿನಲ್ಲಿದೆ ಪಣಜಿ – ಕೊಚ್ಚಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಕಿರು‌ಸೇತುವೆ

ಮಂಗಳೂರು : ಪಣಜಿ- ಕೊಚ್ಚಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ಮಂಗಳೂರು ಹೊರವಲಯದ ಕೆ.ಸಿ.ರೋಡ್ ಎಂಬಲ್ಲಿರುವ ಸೇತುವೆಯೊಂದು ಅಪಾಯಕ್ಕೆ ಮುನ್ಸೂಚನೆ ನೀಡುತ್ತಿದೆ. ಇತ್ತೀಚೆಗೆ ಈ ಸೇತುವೆಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸೇತುವೆಯ ತಡೆಗೋಡೆಯು ಸಂಪೂರ್ಣ ಹಾನಿಗೊಳಗಾಗಿದೆ. ಇದರಿಂದಾಗಿ ತಡೆಗೋಡೆ ಇಲ್ಲದ ಪರಿಣಾಮ ಹಾಗೂ ಅತ್ಯಂತ ಇಕ್ಕಟ್ಟಾಗಿರುವ ಸೇತುವೆಯಿಂದಾಗಿ ಇದರ ಮೇಲೆ ಸಂಚರಿಸುವ ವಾಹನಗಳಿಗೆ ಅಪಾಯ ಎದುರಾಗಿದೆ. ದಿನನಿತ್ಯ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಈ ಸೇತುವೆಯ ಮೂಲಕವೇ ಹಾದು ಹೋಗುತ್ತಿದ್ದು, …

Read More »

ಹೆಗ್ಗೋಡಿನ ಚರಕಕ್ಕೆ ಕೋವಿಡ್ 19 ಹೊಡೆತ: ‘ದಿವಾಳಿ’ ಘೋಷಣೆ

ಸಾಗರ: ‘ಆತ್ಮನಿರ್ಭರ ಭಾರತ’, ‘ವೋಕಲ್‌ ಫಾರ್‌ ಲೋಕಲ್‌’ ಘೋಷಣೆ ಮೊಳಗುತ್ತಿರುವ ಬೆನ್ನಲ್ಲೇ ರಾಷ್ಟ್ರವ್ಯಾಪಿ ಹೆಸರುವಾಸಿಯಾಗಿರುವ ಹೆಗ್ಗೋಡಿನ ಚರಕ ಕೈಮಗ್ಗ ನೇಕಾರಿಕೆ ಸಂಸ್ಥೆಯು ಕೋವಿಡ್ 19 ಹೊಡೆತಕ್ಕೆ ಸಿಲುಕಿ ಸದ್ದಿಲ್ಲದೆ ಕಣ್ಣು ಮುಚ್ಚಿದೆ. ಆರ್ಥಿಕ ಹಿಂಜರಿತ, ಕೋವಿಡ್ 19 ಸಂಕಷ್ಟದಲ್ಲೂ ಚಟುವಟಿಕೆ ಮುಂದುವರಿಸಿದ್ದ ಸಂಸ್ಥೆಯು ಕಳೆದ ಒಂದೂವರೆ ವರ್ಷದಲ್ಲಿ ಎರಡೂವರೆ ಲಕ್ಷ ಮೀಟರ್‌ ಬಟ್ಟೆ ನೇಯ್ದಿತ್ತು. ಸಿದ್ಧ ಉಡುಪು ತಯಾರಿಸುವ ಕಾಯಕವನ್ನೂ ಮುಂದುವರಿಸಿತ್ತು. 800ಕ್ಕೂ ಹೆಚ್ಚು ಗ್ರಾಮೀಣ ಮಹಿಳೆಯರಿಗೆ ಪೂರ್ಣ ವೇತನ ನೀಡಿತ್ತು. …

Read More »

ರಾಯಚೂರು ಮಾರುಕಟ್ಟೆಗೆ ದಾಖಲೆ ಪ್ರಮಾಣದಲ್ಲಿ ಬಂದ ಈರುಳ್ಳಿ; ದರ ಕುಸಿತಕ್ಕೆ ಕಂಗಾಲಾದ ರೈತ

ರಾಯಚೂರು : ರೈತನಿಗೆ ಒಂದಿಲ್ಲ ಒಂದು ಸಂಕಷ್ಟ ತಪ್ಪಿದ್ದಲ್ಲ, ಕಳೆದ ಬಾರಿ ದುಬಾರಿ ದರದಲ್ಲಿ ಮಾರಾಟವಾಗಿದ್ದ ಈರುಳ್ಳಿ ಈ ಬಾರಿ ಆರಂಭದಲ್ಲಿಯೇ ಪಾತಾಳಕ್ಕಿಳಿದಿದೆ. ಈರುಳ್ಳಿ ಬೆಳೆದ ರೈತ ಈಗ ದರ ಇಲ್ಲದೆ ಕಂಗಾಲಾಗಿದ್ದಾನೆ. ಒಂದು ಕಡೆ ಈರುಳ್ಳಿ ಇಟ್ಟುಕೊಳ್ಳಲು ಆಗದೆ ಮಾರಾಟ ಮಾಡಲು ಆಗದೆ ದಿಕ್ಕು ತೋಚದಂತಾಗಿದ್ದಾನೆ. ಒಂದು ಕೊರೋನಾದಿಂದ ಉದ್ಯೋಗವಿಲ್ಲದೇ ಕೃಷಿಯತ್ತ ಮುಖ ಮಾಡಿದ ರೈತರ, ಕಷ್ಟ ಪಟ್ಟು ಈರುಳ್ಳಿಯನ್ನು ಬೆಳೆದು ಮಾರುಕಟ್ಟೆಗೆ ತಂದರೆ ಈರುಳ್ಳಿ ದರ ಪಾತಾಳಕ್ಕಿಳಿದಿದೆ. …

Read More »

ಬೆಂಗಳೂರು ಗಲಭೆ ಕೇಸ್‌: ಎಸ್‌ಡಿಪಿಐ ಕಚೇರಿಯಲ್ಲಿ ಮತ್ತೆ ಮಾರಕಾಸ್ತ್ರ ವಶ

ಬೆಂಗಳೂರು  : ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣ ಸಂಬಂಧ ಎಸ್‌ಡಿಪಿಐ ಪಕ್ಷದ 3 ಕಚೇರಿಗಳ ಮೇಲೆ ಮಂಗಳವಾರ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮಹತ್ವದ ದಾಖಲೆಗಳು ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಿದ್ದಾರೆ. ಮಾರಕಾಸ್ತ್ರ ಜಪ್ತಿ ಆಗುತ್ತಿರುವುದು 2ನೇ ಸಲ. ಹಲಸೂರು ಗೇಟ್‌, ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ) ಹಾಗೂ ಕೆ.ಜಿ.ಹಳ್ಳಿಯಲ್ಲಿರುವ ಎಸ್‌ಡಿಪಿಐ ಕಚೇರಿಗಳಲ್ಲಿ ಶೋಧ ನಡೆದಿದೆ. ಈ ವೇಳೆ ಲ್ಯಾಪ್‌ಟಾಪ್‌, ಹಾರ್ಡ್‌ ಡಿಸ್ಕ್‌ಗಳು ಸೇರಿದಂತೆ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಕೆ.ಜಿ.ಹಳ್ಳಿ …

Read More »

ಮಗನ ನಾಮಕರಣ ಮಾಡಿದ ರಾಕಿಂಗ್ ಸ್ಟಾರ್ ಯಶ್ – ರಾಧಿಕಾ ದಂಪತಿ : ಹೆಸರೇನು ಗೊತ್ತಾ?

ಬೆಂಗಳೂರು : ಸ್ಯಾಂಡಲ್ ವುಡ್ ನ ಜನಪ್ರಿಯ ತಾರಾ ಜೋಡಿಗಳಾದ ‘ರಾಕಿಂಗ್ ಸ್ಟಾರ್‌’ ಯಶ್ ಮತ್ತು ರಾಧಿಕಾ ಪಂಡಿತ್‌ ದಂಪತಿ ಎರಡನೇ ಮಗು ಹುಟ್ಟಿ ಹತ್ತು ತಿಂಗಳ ಬಳಿಕ ಇದೀಗ ಸರಳವಾಗಿ ನಾಮಕರಣವನ್ನು ಮಾಡಿ ಯಥರ್ವ್ ಯಶ್ ಎಂದು ಹೆಸರನ್ನಿಟ್ಟಿದ್ದಾರೆ. ಕೆಲ ದಿನಗಳ ಹಿಂದಷ್ಟೇ, ಶೀಘ್ರದಲ್ಲೇ ಮಗನ ಹೆಸರನ್ನು ಬಹಿರಂಗಪಡಿಸಲಾಗುವುದು’ ಎಂದು ರಾಧಿಕಾ ತಿಳಿಸಿದ್ದರು. ಇದೀಗ ಅಧಿಕೃತವಾಗಿ ‘ಯಥರ್ವ್ ಯಶ್’ ಎಂಬ ಹೆಸರನ್ನು ಘೋಷಣೆ ಮಾಡಿದ್ದಾರೆ. ಸರಳ ಸಮಾರಂಭದಲ್ಲಿ ಶಾಸ್ತ್ರೋಕ್ತವಾಗಿ …

Read More »

ಕರ್ನಾಟಕದಲ್ಲಿ ಅಬ್ಬರಿಸಿ ಬೊಬ್ಬಿರಿದ ಕೊರೋನಾ ವೈರಸ್

ಬೆಂಗಳೂರು,    : ರಾಜ್ಯದಲ್ಲಿ ಇಂದು (ಮಂಗಳವಾರ) 9058 ಕೊರೋನಾ ಕೇಸ್ ಪತ್ತೆಯಾಗಿದ್ದು, 135 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 5159 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 2,54,626 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪ್ರಪಂಚದ ವಿವಿಧ ದೇಶಗಳಲ್ಲಿ ಕೊರೋನಾ ಅಬ್ಬರ ಹೇಗಿದೆ? ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,51,481 ಕ್ಕೆ ಏರಿಕೆಯಾಗಿದ್ದು, 5837 ಜನ ಸಾವನ್ನಪ್ಪಿದ್ದಾರೆ. ಇನ್ನು ಪ್ರಸ್ತುತ 90999 ಸಕ್ರಿಯ ಪ್ರಕರಣಗಳಿವೆ. ಈ …

Read More »

ಕೊಡಗಿನಲ್ಲಿ ಬೈಕ್​​ಗೆ ಟಿಪ್ಪರ್​​ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರು ಸವಾರರು ದುರ್ಮರಣ

ಕೊಡಗು : ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ವಿರಾಜಪೇಟೆಯ ನಿವಾಸಿ ಭರತ್ ಮತ್ತು ಕುಶಾಲನಗರದ ನಿವಾಸಿ ಕುಟ್ಟನ್ ಮೃತಪ್ಪವರು ಎಂದು ಗುರುತಿಸಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ರಾಮನಗರದಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೆಕ್ ಚಾಲಕ ಭರತ್ ಎಂಬುವರ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನು, ಗಂಭೀರವಾಗಿ …

Read More »