ನವದೆಹಲಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೆಪ್ಟೆಂಬರ್ 17ಕ್ಕೆ 70 ವರ್ಷಗಳನ್ನು ಪೂರೈಸಲಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರಿಗೆ ಅಂದು ವಿಶೇಷ ದಿನ. ಈ ದಿನವನ್ನು ವಿಶೇಷವಾಗಿ ಮಹತ್ವಪೂರ್ಣವಾಗಿ ಆಚರಿಸಲು ಉದ್ದೇಶಿಸಿರುವ ಭಾರತೀಯ ಜನತಾ ಪಾರ್ಟಿ ಸೆಪ್ಟೆಂಬರ್ 14ರಿಂದ 20ರವರೆಗೆ ಸೇವಾ ಸಪ್ತಾಹವನ್ನು ಆಚರಿಸಲು ನಿರ್ಧರಿಸಿದೆ. ನರೇಂದ್ರ ದಾಮೋದರದಾಸ್ ಮೋದಿ ಸೆಪ್ಟೆಂಬರ್ 17, 1950ರಂದು ಗುಜರಾತ್ ನ ವಡಾನಗರದಲ್ಲಿ ಜನಿಸಿದ್ದರು. ಆ ಸಮಯದಲ್ಲಿ ಅದು ಬಾಂಬೆ ಪ್ರಾಂತ್ಯಕ್ಕೆ ಸೇರಿತ್ತು. ನಂತರ …
Read More »ಬೆಳಗಾವಿಯಲ್ಲಿ 12ಸಾವಿರದ ಗಡಿ ದಾಡಿದ ಸೋಂಕಿತರ ಸಂಖ್ಯೆ
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 357 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ, ಇಲ್ಲಿನ ಸೋಂಕಿತರ ಸಂಖ್ಯೆ 12ಸಾವಿರದ (12,090) ಗಡಿ ದಾಡಿದೆ. ತಾಲ್ಲೂಕಿನ ಸಾಂಬ್ರಾ ಏರ್‌ಮನ್ ತರಬೇತಿ ಶಾಲೆ (ಎಟಿಎಸ್)ಯಲ್ಲಿ ಒಂದೇ ದಿನ 69 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು (ರಾಮದುರ್ಗ, ಬೈಲಹೊಂಗಲ, ಹುಕ್ಕೇರಿ ಮತ್ತು ಬೆಳಗಾವಿ ತಾಲ್ಲೂಕಿನ ತಲಾ ಒಬ್ಬರು) ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ …
Read More »ಮುಖ್ಯಮಂತ್ರಿಯಿಂದ ‘ಪ್ರಕೃತಿ ವಂದನಾ’
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ನಿವಾಸ ‘ಕಾವೇರಿ’ಯಲ್ಲಿ ಭಾನುವಾರ ಬೆಳಿಗ್ಗೆ ಪ್ರಕೃತಿ ವಂದನಾ ಕಾರ್ಯಕ್ರಮ ನಡೆಯಿತು. ಯಡಿಯೂರಪ್ಪ ಅವರು ಬಿಲ್ವ ಸಸಿ ನೆಟ್ಟು ಪೂಜೆ ಸಲ್ಲಿಸಿದರು. ಬಳಿಕ ವೃಕ್ಷಕ್ಕೆ ರಾಖಿ ಕಟ್ಟಿದರು. ಪ್ರಕೃತಿಯನ್ನು ಪೂಜಿಸುವ ಅಭಿಯಾನಕ್ಕೆ ಶುಭ ಹಾರೈಸಿ ಮಾತನಾಡಿದ ಯಡಿಯೂರಪ್ಪ, ‘ಮನೆ ಮನೆಗಳಲ್ಲಿ ಹಿತ್ತಲಲ್ಲಿ ಸಸಿ ನೆಟ್ಟು ರಕ್ಷಣೆ ಮಾಡಬೇಕು’ ಎಂದು ನಾಡಿನ ಜನರಿಗೆ ಮನವಿ ಮಾಡಿದರು. ಈ ವೇಳೆ ಉಪಸ್ಥಿತರಿದ್ದ ಕರ್ನಾಟಕ ಜೀವ ವೈವಿಧ್ಯ ಮಂಡಳಿ …
Read More »ಹುಬ್ಬಳ್ಳಿಯ ಹುಡುಗನ ಜೊತೆಗೆ ಶಾಸಕಿ ಲಕ್ಷ್ಮೀ ಹಬ್ಬಾಳ್ಕರ್ ಪುತ್ರಿಯ ನಿಶ್ಚಿತಾರ್ಥ
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರಿಗೊಂದಿಗೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರಿಯ ವಿವಾಹ ನಿಶ್ಚಿತಾರ್ಥ ನೆರವೇರಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಮುಖಂಡ ದಿವಂಗತ ವಿಶ್ವಪ್ರಕಾಶ್ ಉಳ್ಳಾಗಡ್ಡಿಮಠದ ಪುತ್ರ, ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಅವರೊಂದಿಗೆ ನನ್ನ ಪುತ್ರಿಯ ಮದುವೆ ನಿಶ್ಚಿತಾರ್ಥ ನೆರವೇರಿಸಲಾಗಿದೆ. ರಜತ ನನ್ನ ಅಳಿಯನಲ್ಲ, …
Read More »ಬೆಂಗ್ಳೂರಿಂದ ಸೊಲ್ಲಾಪುರಕ್ಕೆ ಇಂದಿನಿಂದ ರೋ ರೋ ರೈಲು
ಬೆಂಗಳೂರು : ನೈಋುತ್ಯ ರೈಲ್ವೆಯು ಬೆಂಗಳೂರು ಸಮೀಪದ ನೆಲಮಂಗಲದಿಂದ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಬಾಳೆಗೆ ಆರಂಭಿಸಿರುವ ‘ರೋಲ್ ಆನ್ ರೋಲ್ ಆಫ್’ (ರೋ ರೋ) ಎಂಬ ಸರಕು ತುಂಬಿದ ಟ್ರಕ್ ಅಥವಾ ಲಾರಿಗಳ ಸಾಗಣೆಯ ರೈಲು ಸೇವೆಯ ಪ್ರಾಯೋಗಿಕ ಸಂಚಾರಕ್ಕೆ ಇಂದು(ಭಾನುವಾರ) ಚಾಲನೆ ನೀಡಲಾಗುತ್ತಿದೆ. ಈ ಮೂಲಕ ನೈಋುತ್ಯ ರೈಲ್ವೆ ವಲಯ ಪ್ರಥಮ ಬಾರಿಗೆ ಈ ಸೇವೆ ಆರಂಭಿಸುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಳಗ್ಗೆ 9.15ಕ್ಕೆ ವೀಡಿಯೋ ಲಿಂಕ್ ಮೂಲಕ …
Read More »ಕೋಲಾರದ ಚಿನ್ನದ ಗಣಿಯಲ್ಲಿ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪಿಸಲು ನಿರ್ಧಾರ; ಸಚಿವ ಜಗದೀಶ್ ಶೆಟ್ಟರ್ ಮಾಹಿತಿ
ಕೋಲಾರ : ಕೋಲಾರ ಜಿಲ್ಲೆಯ ಕೆಜಿಎಫ್ನ ಬಿಜಿಎಂಎಲ್ನ ಕೋಲಾರ ಗೋಲ್ಡ್ ಫೀಲ್ಡ್ಸ್ ಒಡೆತನದ ಬಳಕೆಯಾಗದ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲು ಮುಂದಾಗಿದೆ. ಚಿನ್ನದ ಗಣಿಯು 12 ಸಾವಿರ ಎಕರೆ ವಿಶಾಲವಾದ ಪ್ರದೇಶದಲ್ಲಿದ್ದು, ಇಲ್ಲಿ ಇದುವರೆಗೂ ಬಳಸದ 3,200 ಎಕರೆ ಜಾಗದಲ್ಲಿ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ, ಈ ಸ್ಥಳ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿ ಇರುವುದರಿಂದ ಕೇಂದ್ರದ ಸಮ್ಮತಿ ಅತ್ಯಗತ್ಯವಾಗಿದೆ. ಶನಿವಾರ ಬೃಹತ್ ಕೈಗಾರಿಕಾ ಸಚಿವ ಜಗದೀಶ್ …
Read More »ಅಂಗನವಾಡಿ- ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 13 ಅಂಗನವಾಡಿ ಕಾರ್ಯಕರ್ತೆ ಹಾಗೂ 50 ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಹತೆ, ವಯೋಮಿತಿಯನ್ನು ಹೊಂದಿರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕಡೆ ದಿನ 05.09.2020 ಆಗಿದ್ದು, ಹೆಚ್ಚಿನ ಮಾಹಿತಿಗೆ anganwadirecruit.kar.nic.inಗೆ ಸಂಪರ್ಕಿಸಬಹುದು.
Read More »ಬೆಂಗಳೂರು ಉಗ್ರ ಡಾ| ಶಬೀಲ್ ದಿಲ್ಲಿಯಲ್ಲಿ ಬಂಧನ!
ನವದೆಹಲಿ : 2007ರಲ್ಲಿ ನಡೆದಿದ್ದ ಬ್ರಿಟನ್‌ನ ಗ್ಲಾಸ್ಗೋ ಏರ್‌ಪೋರ್ಟ್ ದಾಳಿಯಲ್ಲಿ ಪಾತ್ರ ವಹಿಸಿದ್ದ ಬೆಂಗಳೂರು ಮೂಲದ ಲಷ್ಕರ್ ಎ ತೊಯ್ಬಾ ಭಯೋತ್ಪಾದಕನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ. 2010-11ರಲ್ಲಿ ಬೆಂಗಳೂರಿನಿಂದ ಸೌದಿ ಅರೇಬಿಯಾಗೆ ಪರಾರಿಯಾಗಿದ್ದ ಈತನನ್ನು ಸ್ವದೇಶಕ್ಕೆ ವಾಪಸ್ ಕರೆಸಿಕೊಂಡು ಬಂಧಿಸಲಾಗಿದೆ. ಶಬೀಲ್ ಅಹ್ಮದ್ ಎಂಬಾತನೇ ಬಂಧಿತ. ಶುಕ್ರವಾರ ರಾತ್ರಿ ಭಾರತಕ್ಕೆ ಮರಳಿದ ನಂತರ ಈತನನ್ನು ಎನ್‌ಐಎ ತನ್ನ ವಶಕ್ಕೆ ತೆಗೆದುಕೊಂಡಿದೆ. ವೈದ್ಯಕೀಯ ಪದವೀಧರನಾಗಿರುವ ಶಬೀಲ್ ಅಹ್ಮದ್, ಗ್ಲಾಸ್ಗೋ …
Read More »ಆಫ್‌ಲೈನ್ ಪರೀಕ್ಷೆ ಕುರಿತು ಸ್ಪಷ್ಟನೆ ನೀಡಿ: ಕೃಷಿ ವಿವಿಗೆ ಹೈಕೋರ್ಟ್ ಸೂಚನೆ
ಬೆಂಗಳೂರು : ತನ್ನ ವ್ಯಾಪ್ತಿಯ ಕೃಷಿ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‌ಗಳಿಗೆ ‘ಆನ್‌ಲೈನ್ ಪರೀಕ್ಷೆ’ಗಳ ಬದಲಿಗೆ ‘ಆಫ್‌ಲೈನ್ ಪರೀಕ್ಷೆ’ ನಡೆಸುವ ಕುರಿತು ವಿವರವಾಗಿ ಸ್ಪಷ್ಟಪಡಿಸುವಂತೆ ಬೆಂಗಳೂರು ಕೃಷಿ ವಿವಿಗೆ ಹೈಕೋರ್ಟ್ ಸೂಚಿಸಿದೆ. ಕೃಷಿ ವಿಶ್ವವಿದ್ಯಾಲಯದ ಬಿಎಸ್‌ಸಿ (ಕೃಷಿ) ಕೋರ್ಸ್‌ನ ಸದಾನಂದ ಮತ್ತಿತರ ವಿದ್ಯಾರ್ಥಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ, ಕೃಷಿ …
Read More »536 ಮಂದಿ ಗುಣಮುಖ
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 276 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಡಳಿತ ಶನಿವಾರ ತಿಳಿಸಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. 536 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.
Read More »