ಸವದತ್ತಿ : ಇಂದು ತಾಲೂಕಿನಾದ್ಯಂತ ಸುರಿದ ಗುಡುಗು ಸಹಿತ ಸಿಡಿಲು ಭಾರಿ ಮಳೆಗೆ ನವಿಲುತೀರ್ಥ ಡ್ಯಾಮ್ ಹತ್ತಿರ ಸಿಡಿಲು ಬಡಿದು ಕುರಿಗಾರರ 45 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಸ್ಥಳಕ್ಕೆ ಶಾಸಕ ಹಾಗೂ ವಿಧಾನಸಭೆಯ ಉಪಸಭಾದ್ಯಕ್ಷ ಆನಂದ ಮಾಮನಿ ಹಾಗೂ ತಾಲೂಕು ದಂಡಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ನಂತರ ಕುರಿಗಾರರಿಗೆ ಸೂಕ್ತ ಪರಿಹಾರ ನೀಡುವಂತೆ ತಾಲೂಕು ದಂಡಾಧಿಕಾರಿಗಳಿಗೆ ಆನಂದ ಮಾಮನಿ ಸೂಚಿಸಿದರು.
Read More »ವಿಶ್ವದ ಎಲ್ಲಾ ರಾಷ್ಟ್ರಗಳಿಗೂ ಕೊರೊನಾ ಲಸಿಕೆ ಲಭ್ಯವಾಗುವಂತೆ ಮಾಡಲು ಈಗಿನಿಂದಲೇಸಿದ್ಧತಾ ಕಾರ್ಯ:W.H.O.
ವಿಶ್ವಸಂಸ್ಥೆ, ಅ.20- ಕಿಲ್ಲರ್ ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ಸಹಕಾರ ನೀಡುತ್ತಿರುವ ವಿಶ್ವಸಂಸ್ಥೆಯ ಪ್ರಮುಖ ಅಂಗ ಸಂಸ್ಥೆಗಳಲ್ಲಿ ಒಂದಾದ ಯೂನಿಸೆಫ್ (ಸಂಯುಕ್ತ ರಾಷ್ಟ್ರಗಳ ಮಕ್ಕಳ ನಿಧಿ) ವರ್ಷಾಂತ್ಯದ ವೇಳೆಗೆ ಕೋವಿಡ್-19 ಲಸಿಕೆಗೆ ಪೂರ್ವಭಾವಿಯಾಗಿ 52 ಕೋಟಿ ಸಿರಿಂಜ್‍ಗಳನ್ನು ಸಿದ್ಧವಾಗಿಟ್ಟುಕೊಳ್ಳಲಿದೆ.ಮುಂದಿನ ವರ್ಷದ ಆರಂಭದಲ್ಲಿ ಕೊರೊನಾ ಲಸಿಕೆ ಮತ್ತು ಔಷಧಿಗಳು ಲಭ್ಯವಾಗಲಿದ್ದು, ಇವುಗಳ ಪೂರೈಕೆ ಮತ್ತು ನಿರ್ವಹಣೆಯಲ್ಲಿ ಯಾವುದೇ ರೀತಿಯ ಅಡಚಣೆಯಾಗದಂತೆ ಈ ವರ್ಷದ ಅಂತ್ಯದ ವೇಳೆಗೆ 52 ದಶಲಕ್ಷ ಸಿರಿಂಜ್‍ಗಳನ್ನು ದಾಸ್ತಾನು …
Read More »ಯಡಿಯೂರಪ್ಪ ಸಿಎಂ ಆಗಿರಲ್ಲ ಎಂಬ ಮಾತು ಸದ್ಯ ಹೆಚ್ಚಾಗಿ ಕೇಳಿ ಬರುತ್ತಿದೆ. ಶಾಸಕ ಯತ್ನಾಳ ಹೇಳಿಕೆಗೆ ಬಾದಾಮಿಯಲ್ಲಿ ಪ್ರತಿಕ್ರಿಯೆ
ಬಾಗಲಕೋಟೆ : ನಾವಂತೂ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ. ಒಂದು ವೇಳೆ ಅವರ ತಿಕ್ಕಾಟದಿಂದಲೇ ಸರ್ಕಾರ ಬಿದ್ದು ಹೋದರೆ ನಾವು ಚುನಾವಣೆ ಎದುರಿಸಲು ಸಿದ್ದರಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಶಾಸಕ ಯತ್ನಾಳ ಹೇಳಿಕೆಗೆ ಬಾದಾಮಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಹಳ ದಿನ ಯಡಿಯೂರಪ್ಪ ಸಿಎಂ ಆಗಿರಲ್ಲ ಎಂಬ ಮಾತು ಸದ್ಯ ಹೆಚ್ಚಾಗಿ ಕೇಳಿ ಬರುತ್ತಿದೆ. ಯಡಿಯೂರಪ್ಪನವರನ್ನು ತೆಗೆಯಬೇಕೆಂದು ಬಹಳ ದೊಡ್ಡ ಚರ್ಚೆ ನಡೆದಿದೆ. ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸುವ …
Read More »ಸಿದ್ದರಾಮಯ್ಯ ಭೇಟಿ ಕೊಟ್ಟ ವೇಳೆ ಅವರ ಎದುರು ಪ್ರವಾಹ ಸಂತ್ರಸ್ತೆಯೊಬ್ಬರು ತಮ್ಮ ಅಳಲು ತೋಡಿಕೊಳ್ಳಲು ಮುಂದಾದರು.
ಬಾಗಲಕೋಟೆ: ತಾವು ಪ್ರತಿನಿಧಿಸುವ ಬಾದಾಮಿ ವಿಧಾನಸಭಾ ಕ್ಷೇತ್ರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ಕೊಟ್ಟ ವೇಳೆ ಅವರ ಎದುರು ಪ್ರವಾಹ ಸಂತ್ರಸ್ತೆಯೊಬ್ಬರು ತಮ್ಮ ಅಳಲು ತೋಡಿಕೊಳ್ಳಲು ಮುಂದಾದರು. ತಮಗೊಂದು ಸೂರಿಗಾಗಿ ಸಿದ್ದರಾಮಯ್ಯ ಕಚೇರಿಗೆ ಅರ್ಜಿ ಸಲ್ಲಿಸಲು ಬಾದಾಮಿ ತಾಲೂಕಿನ ನೆಲವಿಗಿ ಗ್ರಾಮದ ಯಲ್ಲವ್ವ ಹನಮಂತಪ್ಪ ಗಾರವಾಡ ಬಂದಿದ್ದರು. ಆ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಸರಿಯಾಗಿ ಸ್ಪಂದಿಸಲಿಲ್ಲ ಎಂದು ಅವರು ತಮ್ಮ ಆಕ್ರೋಶ ಹೊರಹಾಕಿದರು. ಇದ್ದವರು ಸರ್ಕಾರದಿಂದ ಎರಡೆರಡು ಮನೆ ಹಾಕಿಸಿಕೊಂಡಾರ. …
Read More »ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ಸಿದ್ದರಾಮಯ್ಯ
ಬೆಂಗಳೂರು: ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ ಎಂದು ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುವ ವೇಳೆ ಹೇಳಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾರಂಭವೊಂದರಲ್ಲಿ ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ಹೇಳಿದ್ದರು. ಈ ಹೇಳಿಕೆ ಸಂಬಂಧಿಸಿ ಪ್ರತಿಕ್ರಿಯೆಸಿರುವ ಸಿದ್ದು ಈ ರೀತಿ ಹೇಳಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಶಾಸಕ …
Read More »ಭೀಮಾ ನದಿ ಪ್ರವಾಹ ಮುಂದುವರೆದಿದೆ.
ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹ ಮುಂದುವರೆದಿದೆ. ಪ್ರವಾಹದಲ್ಲಿ ಜನರ ಬದುಕೇ ಕೊಚ್ಚಿ ಹೋಗಿದೆ. ಮನೆಗಳ ಹಾನಿಯ ಜೊತೆ ಅಂಗಡಿಗಳಲ್ಲಿಯೂ ಅಪಾರ ಹಾನಿ ಸಂಭವಿಸಿದೆ. ಭೀಮಾ ನದಿ ಪ್ರವಾಹಕ್ಕೆ ಕಲಬುರ್ಗಿ ಜಿಲ್ಲೆ ಜನತೆ ತತ್ತರಿಸಿ ಹೋಗಿದ್ದಾರೆ. ಅಫಜಲಪುರ ತಾಲೂಕಿನಲ್ಲಿ ಪ್ರವಾಹ ಒಂದಷ್ಟು ಇಳಿಮುಖವಾಗಿದೆ. ಆದರೆ ಕಲಬುರ್ಗಿ, ಜೇವರ್ಗಿ, ಶಹಾಬಾದ್ ಹಾಗು ಚಿತ್ತಾಪುರ ತಾಲೂಕುಗಳಲ್ಲಿ ಪ್ರವಾಹ ಮುಂದುವರಿದಿದೆ. ಭಾರಿ ಪ್ರವಾಹದಲ್ಲಿ ಜನರ ಬದುಕೇ ಕೊಚ್ಚಿ ಹೋಗಿದೆ. ಕಲಬುರ್ಗಿ ತಾಲೂಕಿನ ಸರಡಗಿ …
Read More »ಕೊರೊನಾ ವಾರಿಯರ್ಸ್‍ಗಳಿಗೆ ಕೇಂದ್ರ ಸರ್ಕಾರ 50 ಲಕ್ಷ ವಿಮಾ ಸೌಲಭ್ಯವನ್ನು ಮತ್ತೆ ಆರು ತಿಂಗಳಿಗೆ ವಿಸ್ತರಿಸಲಾಗಿದೆ.
ಬೆಂಗಳೂರು,- ಕೋವಿಡ್ -19 ಸಂದರ್ಭದಲ್ಲಿ ಆಕಸ್ಮಿಕವಾಗಿ ಮೃತಪಟ್ಟ ಇಲ್ಲವೇ ಅಪಘಾತಕ್ಕೆ ತುತ್ತಾದ ಕೊರೊನಾ ವಾರಿಯರ್ಸ್‍ಗಳಿಗೆ ಕೇಂದ್ರ ಸರ್ಕಾರ 50 ಲಕ್ಷ ವಿಮಾ ಸೌಲಭ್ಯವನ್ನು ಮತ್ತೆ ಆರು ತಿಂಗಳಿಗೆ ವಿಸ್ತರಿಸಲಾಗಿದೆ. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಈ ಯೋಜನೆಯ ಸೌಲಭ್ಯ ಒದಗಿಸಲಾಗಿದ್ದು, ಮತ್ತೆ ಈ ಸೌಲಭ್ಯವನ್ನು 6 ತಿಂಗಳಿಗೆ ವಿಸ್ತರಿಸಲಾಗಿದೆ. ರೋಗಿಗಳೊಂದಿಗೆ ನೇರ ಸಂಪರ್ಕ …
Read More »ಈ ನಿರ್ಧಾರವನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರು : ಬೊಂಬೆ ತಯಾರಕರಿಗೆ ಬಿಐಎಸ್ (ಭಾರತೀಯ ಮಾನಕ ಬ್ಯೂರೋ) ಸಂಸ್ಥೆ ನೀಡುವ ಐಎಸ್‌ಐ ಮಾರ್ಕ್ ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರ ಸಾಂಪ್ರದಾಯಿಕ ಕಲೆ ಅವಲಂಬಿಸಿರುವ ಬೊಂಬೆ ತಯಾರಕರ ಮೇಲೆ ಗದಾಪ್ರಹಾರ ಮಾಡಿದ್ದು, ಈ ನಿರ್ಧಾರವನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಬಿಐಎಸ್ ಪ್ರಮಾಣಪತ್ರ ಪಡೆಯಲು ಸಾವಿರಾರು ರೂ. ವೆಚ್ಚ ಸಣ್ಣ ಬೊಂಬೆಗಳ ತಯಾರಕರಿಗೆ ದುಬಾರಿ ಆಗಲಿದ್ದು, ದೇಶೀಯ ಬೊಂಬೆ ಉತ್ಪಾದಕರ ಭವಿಷ್ಯಕ್ಕೆ ಮಾರಕವಾಗಲಿದೆ. ಕೇಂದ್ರದ ಈ …
Read More »ಸಾವಿರ ಜನರು ಪರಿಹಾರ ಕೇಂದ್ರದಲ್ಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.
ಬೆಳಗಾವಿ : ಕಳೆದ ನಾಲ್ಕೈದು ದಿನದ ವರದಿ ಪ್ರಕಾರ ರಾಜ್ಯದಲ್ಲಿ ಮಳೆಯಿಂದ ಸುಮಾರು 3000 ಕೋಟಿ ರು. ಹಾನಿಯಾಗಿದೆ. 10 ಜನ, ನೂರಕ್ಕೂ ಹೆಚ್ಚು ಜಾನುವಾರು ಮೃತಪಟ್ಟಿದ್ದು, ಸುಮಾರು 8 ಸಾವಿರ ಜನರು ಪರಿಹಾರ ಕೇಂದ್ರದಲ್ಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೊರೋನಾ ಇರುವುದರಿಂದ ಅಲ್ಲಿರುವವರಿಗೆ ಮಾಸ್ಕ್, ಸ್ಯಾನಿಟೈಸರ್ ನೀಡಬೇಕೆಂದು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಕೊರೋನಾ ಹಾಗೂ ಪ್ರವಾಹ …
Read More »ಕಂದಾಯ ಸಚಿವ ಆರ್. ಅಶೋಕ್ ಅವರು ರೈತರ ಸಮಸ್ಯೆ ಆಲಿಸದೆ ಕೃಷ್ಣಾ ನದಿಯಲ್ಲಿ ಬೋಟಿನಲ್ಲಿ ಸುತ್ತಾಡಿ ಹೋದರು.
ಬೆಳಗಾವಿ: ಅತಿವೃಷ್ಟಿಯಿಂದ ಹಾನಿಗೊಳಗಾದ ಚಿಕ್ಕೋಡಿ ತಾಲ್ಲೂಕಿಗೆ ಸೋಮವಾರ ಭೇಟಿ ನೀಡಿದ್ದ ಕಂದಾಯ ಸಚಿವ ಆರ್. ಅಶೋಕ್ ಅವರು ರೈತರ ಸಮಸ್ಯೆ ಆಲಿಸದೆ ಕೃಷ್ಣಾ ನದಿಯಲ್ಲಿ ಬೋಟಿನಲ್ಲಿ ಸುತ್ತಾಡಿ ಹೋದರು. ಇದು ಸಂತ್ರಸ್ತರು ಹಾಗೂ ರೈತರ ಅಸಮಾಧಾನಕ್ಕೆ ಕಾರಣವಾಯಿತು. ಯಡೂರ, ಯಡೂರವಾಡಿ, ಮಾಂಜರಿ, ಇಂಗಳಿ ಗ್ರಾಮಗಳಲ್ಲಿ ಬೆಳೆ ಹಾನಿ ಪರಿಶೀಲನೆ ನಡೆಸುತ್ತಾರೆಂದು ರೈತರು ನಿರೀಕ್ಷಿಸಿದ್ದರು. ತಮ್ಮ ಸಮಸ್ಯೆ ಆಲಿಸುತ್ತಾರೆಂದು ಕಾದಿದ್ದರು. ಆದರೆ, ಸಚಿವರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಚಿಕ್ಕೋಡಿ ಸಂಸದ …
Read More »
Laxmi News 24×7