Breaking News

ರಾಷ್ಟ್ರೀಯ

ಮುಸುಕಿನ ಜೋಳ ಬೆಳೆದು ಆರ್ಥಿಕ ಸಂಕಷ್ಟಕೊಳಗಾದ ರೈತರು

ಹಾಸನ : ಕೋವಿಡ್‌-19ನ ಲಾಕ್‌ಡೌನ್‌ ಸಮಸ್ಯೆಯಿಂದ ಮುಸುಕಿನ ಜೋಳ ಬೆಳೆದು ಆರ್ಥಿಕ ಸಂಕಷ್ಟಕೊಳಗಾದ ಪ್ರತಿ ರೈತರಿಗೆ ನೇರವಾಗಿ 5,000 ರು.ಗಳನ್ನು ನೇರ ನಗದು ವರ್ಗಾವಣೆ ಮಾಡುವ ಯೋಜನೆಯಾಗಿದ್ದು, ಹಾಸನ ಜಿಲ್ಲೆಯಲ್ಲಿ ಒಟ್ಟು 48,255 ರೈತರಿಗೆ ನೇರ ನಗದು ವರ್ಗಾವಣೆ ಮಾಡಿರುವುದಾಗಿ ಸಚಿವ ಗೋಪಾಲಯ್ಯ ಹೇಳಿದರು. ಜಿಲ್ಲಾ ಪಂಚಾಯತ್‌ ವತಿಯಿಂದ ಒಟ್ಟು 22 ಇಲಾಖೆಗಳಿಗೆ ಈಗಾಗಲೇ 112 ಕೋಟಿ ರು. ಬಿಡುಗಡೆಯಾಗಿದ್ದು, 105 ಕೋಟಿ ರು. ವೆಚ್ಚ ಮಾಡಲಾಗಿದೆ. 2019-20ನೇ ಸಾಲಿನಲ್ಲಿ …

Read More »

ಗೌರಿ, ಗಣೇಶ ಹಬ್ಬಕ್ಕೆ ಕೆಎಂಎಫ್‌ ನಿಂದ ಬಂಪರ್‌ ಕೊಡುಗೆ

ಬೆಂಗಳೂರು : ಕೆಎಂಎಫ್‌ ಸ್ವಾತಂತ್ರ್ಯ ದಿನಾಚರಣೆ, ಗಣೇಶ, ಗೌರಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಬಂಪರ್‌ ಕೊಡುಗೆ ನೀಡಿದೆ. ಇಂದಿನಿಂದ ಆ.30ರವರೆಗೆ ನಡೆಯಲಿರುವ ‘ನಂದಿನಿ ಸಿಹಿ ಉತ್ಸವ’ದಲ್ಲಿ ಶೇ.10 ರಷ್ಟುರಿಯಾಯಿತಿಯಲ್ಲಿ ನಂದಿನಿ ಉತ್ಪನ್ನಗಳ ಮಾರಾಟ ನಡೆಯಲಿದೆ. ಶನಿವಾರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಹಾಲಿನ ಗುಣಮಟ್ಟಕಾಯ್ದುಕೊಂಡು ಗ್ರಾಹಕರಿಗೆ ಸದಾ ಕಾಲ ಉತ್ತಮ ಹಾಲು ಮತ್ತು …

Read More »

ಬೆಂಗಳೂರು ಗಲಭೆ ಪ್ರಕರಣ: ಮತ್ತೆ 35 ಆರೋಪಿಗಳ ಬಂಧನ, ಬಂಧಿತರ ಸಂಖ್ಯೆ 340ಕ್ಕೆ ಏರಿಕೆ

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಮತ್ತೆ 35 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಆ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 340ಕ್ಕೆ ಏರಿಕೆಯಾಗಿದೆ. ಕಳೆದ ಆಗಸ್ಟ್ 11ರಂದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿದ್ದ ಪೋಸ್ಟ್ ಗೆ ಸಂಬಂಧಿಸಿದಂತೆ ಪ್ರತಿಭಟನೆ ಹೆಸರಲ್ಲಿ ಗಲಭೆ ನಡೆಸಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿವಿಧ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಗೊಂಡಿದ್ದು, ಈ ವರೆಗೂ 340 ಮಂದಿಯನ್ನು ಬಂಧಿಸಿದ್ದಾರೆ. …

Read More »

ಸತೀಶ ಶುಗರ್ಸ್ ಕಾರ್ಖಾನೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

ಗೋಕಾಕ: ಭಾರತದ ಇತಿಹಾಸದಲ್ಲಿ ಮೈಲುಗಲ್ಲನ್ನು ಸೃಷ್ಟಿಸಿದ ದಿನ ಮತು ಭಾರತ ದೇಶದ ಎಲ್ಲ ಪ್ರಜೆಗಳು ಸಂಭ್ರಮ ಪಡುವ ದಿನ ಅದುವೇ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಸುದಿನ ಅಗಸ್ಟ 15. ದಿನಾಂಕ 15.08.2020 ರಂದು ಬೆಳಿಗ್ಗೆ 7.45ಕ್ಕೆ ಸತೀಶ ಶುಗರ್ಸ ಕಾರ್ಖಾನೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕಾರ್ಖಾನೆಗೆ ಅತಿ ಹೆಚ್ಚು ಕಬ್ಬು ಪೂರೈಸಿದ  ರೈತರುಗಳಾದ ಯಲ್ಲಪ್ಪಾ ರಂಗಪ್ಪಾ ಮಳಲಿ ಸಾ.ಮಲ್ಲಾಪೂರ ,ಈರಪ್ಪಾ ಸಿದ್ದಪ್ಪಾ ಕಿತ್ತೂರ ಇವರಿಂದ 74 ನೇಯ ಸ್ವಾತಂತ್ರ್ಯ …

Read More »

ರಾಜ್ಯದಲ್ಲಿ ಒಂದೇ ದಿನ 8818 ಜನರಿಗೆ ಕೊರೊನಾ ಸೋಂಕು ಪತ್ತೆ!!

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ದಾಖಲೆಯ 8818 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 2,19,976 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 6629 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 1,34,811 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ನಿನ್ನೆ 114 ಮಂದಿ ಮೃತಪಟ್ಟಿದ್ದು ಇದುವರೆಗೆ 3831 ಜನರು ಸಾವನ್ನಪ್ಪಿದ್ದಾರೆ. 81,276 ಸಕ್ರಿಯ ಪ್ರಕರಣಗಳಿದ್ದು, 716 ಜನ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ 3495 …

Read More »

ಮುಂದುವರೆದ ಕೊರೊ‌ನಾ ಕಾಟ: ಮತ್ತೆ 61 ಜನರಿಗೆ ಸೋಂಕು

ಗೋಕಾಕ: ಮೂಡಲಗಿ ಮತ್ತು ಗೋಕಾಕ ತಾಲೂಕಿನಲ್ಲಿ ರವಿವಾರದಂದು 61 ಜನರಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ಮಾಹಿತಿ ನೀಡಿದ್ದಾರೆ. ಗೋಕಾಕ ನಗರದಲ್ಲಿ 43, ಅಂಕಲಗಿ ಗ್ರಾಮದಲ್ಲಿ 4 , ದೂಪಧಾಳ 3, ಮಲ್ಲಾಪೂರ ಪಿ.ಜಿ2 , ಶಿಂಧಿಕೂರಬೇಟ, ಮದವಾಲ,ಮಲ್ಲಾಪೂರ, ಅವರಾಧಿ, ಕೌಜಲಗಿ, ತುಕ್ಕಾನಟ್ಟಿ, ಗಣೇಶವಾಡಿ, ಗೋಕಾಕ ಫಾಲ್ಸ, ಪಂಚನಾಯಕನಹಟ್ಟಿ ಗ್ರಾಮಗಳಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ದೃಡಪಟ್ಟಿದೆ.

Read More »

ಎಸ್‌ಪಿಬಿ ಆರೋಗ್ಯ ಇನ್ನೂ ಗಂಭೀರ

ಚೆನ್ನೈ: ಕೋವಿಡ್‌-19 ಬಳಲುತ್ತಿರುವ ಖ್ಯಾತ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಗಂಭೀರವಾಗಿದ್ದು, ಜೀವರಕ್ಷಕ ವ್ಯವಸ್ಥೆಯೊಂದಿಗೆ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ. ಕೊರೊನಾ ಸೋಂಕು ದೃಢಪಟ್ಟ ಕಾರಣದಿಂದ ಆಗಸ್ಟ್‌ 5ರಂದು ಅವರನ್ನು ಎಂಜಿಎಂ ಹೆಲ್ತ್‌ಕೇರ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಬಾಲಸುಬ್ರಹ್ಮಣ್ಯಂ ಅವರಿಗೆ ತೀವ್ರ ನಿಗಾ ಘಟಕ(ಐಸಿಯು)ದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ’ ಎಂದು ಆಸ್ಪತ್ರೆಯ ವೈದ್ಯಕೀಯ ಸೇವೆಯ ಸಹಾಯಕ ನಿರ್ದೇಶಕಿ ಡಾ.ಅನುರಾಧ ಭಾಸ್ಕರನ್‌ …

Read More »

ಕ್ರಿಕೆಟ್ ಅಭಿಮಾನಿಗಳಿಗೆ ಡಬಲ್ ಶಾಕ್ ➤ ಎಂಎಸ್ ಧೋನಿ ಮತ್ತು ರೈನಾ ನಿವೃತ್ತಿ

ನವದೆಹಲಿ: ಕ್ಯಾಪ್ಟನ್ ಕೂಲ್ ಎಂದೇ ಖ್ಯಾತರಾಗಿದ್ದ ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ಅಭಿಮಾನಿಗಳಿಗೆ ಆಘಾತ ನೀಡಿದ್ದಾರೆ. ಐಪಿಎಲ್ ಟೂರ್ನಿ ಆರಂಭವಾಗುವ ಹೊಸ್ತಿಲಿನಲ್ಲಿಯೇ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆದರೆ ಐಪಿಎಲ್‌ನಲ್ಲಿ ಅವರು ಮುಂದುವರಿಯಲಿದ್ದಾರೆ. ಧೋನಿ ಅವರೊಂದಿಗೆ ಭಾರತೀಯ ಕ್ರಿಕೆಟ್ ತಂಡಕ್ಕೆ ಅತ್ಯುತ್ತಮ ಕೊಡುಗೆ ನೀಡಿದ್ದ ಸುರೇಶ್ ರೈನಾ ಕೂಡ ನಿವೃತ್ತಿ ಘೋಷಿಸಿದ್ದಾರೆ. ಭಾರತ ಕ್ರಿಕೆಟ್‌ನ ಹೀರೋಗಳಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ, 15 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕನ್ನು …

Read More »

ಕೇರಳದಲ್ಲಿ ಇಂದಿನಿಂದ ಬ್ಯಾಂಕಿಂಗ್ ಸಮಯ ಬದಲಾವಣೆ.

  ಕಾಸರಗೋಡು,: ಕೊರೋನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಇಂದಿನಿಂದ ಕೇರಳದಲ್ಲಿ ಬ್ಯಾಂಕಿಂಗ್ ಸಮಯಗಳಲ್ಲಿ ಬದಲಾವಣೆ ಮಾಡಲಾಗಿದೆ. ಓಣಂ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ಗಳಲ್ಲಿ ಗ್ರಾಹಕರ ದಟ್ಟಣೆ ಹೆಚ್ಚುವ ಸಂಭವವಿದ್ದು, ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬ್ಯಾಂಕಿಂಗ್ ಸಮಯಗಳಲ್ಲಿ ಬದಲಾವಣೆ ತರಲಾಗಿದೆ. 0, 1, 2,3 ಎಂಬಿ ಅಕೌಂಟ್ ನಂಬರ್ ಗಳಲ್ಲಿ ಕೊನೆಗೊಳ್ಳುವ ಬ್ಯಾಂಕ್ ಖಾತೆಯ ಗ್ರಾಹಕರಿಗೆ ಬೆಳಿಗ್ಗೆ 10 ರಿಂದ 12 ಗಂಟೆ ತನಕ , …

Read More »

ಧೋನಿ ವಿದಾಯಕ್ಕೆ ಭಾವನಾತ್ಮಕವಾಗಿ ಶುಭ ಕೋರಿದ ವಿರಾಟ್ ಕೊಹ್ಲಿ..!

ನವದೆಹಲಿ: ಕ್ಯಾಪ್ಟನ್ ಕೂಲ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶದ ಮೂಲಕ ಶುಭ ಕೋರಿದ್ದಾರೆ. ಪ್ರತಿಯೊಬ್ಬ ಕ್ರಿಕೆಟಿಗನೂ ಒಂದಲ್ಲ ಒಂದು ದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಲೇ ಬೇಕು. ಆದರೆ ತುಂಬ ಹತ್ತಿರವಿದ್ದವರೂ ವಿದಾಯ ಹೇಳಿದಾಗ ಮನಸ್ಸು ಭಾರವಾಗುತ್ತದೆ. ನೀವು ದೇಶಕ್ಕಾಗಿ ಏನೆಲ್ಲಾ ಸಾಧಿಸಿದ್ದೀರೋ ಅದು ಪ್ರತಿಯೊಬ್ಬರ ಹೃದಯಲ್ಲಿ ಚಿರಸ್ಥಾಯಿಯಾಗಿ ಉಳಿದಿರುತ್ತೆ. …

Read More »