Breaking News

ರಾಷ್ಟ್ರೀಯ

BSY ಸರ್ಕಾರಕ್ಕೆ ಬೇಳೂರು ಗೋಪಾಲಕೃಷ್ಣ ಸವಾಲ್ : ಸರ್ವನಾಶದ ಎಚ್ಚರಿಕೆ

ಶಿವಮೊಗ್ಗ : ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ನಿರ್ಬಂಧ ಹೇರಲು ಚಿಂತನೆ ನಡೆಸಿರುವ ರಾಜ್ಯ ಸರ್ಕಾರದ ನಿಲುವನ್ನು ವಿರೋಧಿಸಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಒಂದು ವೇಳೆ ಕಡಿವಾಣ ಹಾಕಲು ಮುಂದಾದಲ್ಲಿ ಗಣಪತಿಯ ಶಾಪ ತಟ್ಟಿಯಡಿಯೂರಪ್ಪ ನೇತೃತ್ವದ ಸರ್ಕಾರ ಸರ್ವನಾಶ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನಂತೂ ಗಣಪತಿ ಹಬ್ಬ ಅದ್ದೂರಿಯಾಗಿ ಆಚರಣೆ ಮಾಡಿಯೇ ಮಾಡುತ್ತೇನೆ. ಯಾರು ಬಂದು ತಡೆಯುತ್ತಾರೋ ನೋಡೋಣ ಎಂದು ತಿಳಿಸಿದರು. …

Read More »

ಕೊಯ್ನಾ, ನವಿಲುತೀರ್ಥ ಡ್ಯಾಂಗಳಿಂದ ನೀರು ಬಿಡುಗಡೆ: ನದಿ ತೀರದ ಜನರಿಗೆ ಎಚ್ಚರಿಕೆ

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಕೊಯ್ನಾ ಜಲಾಶಯ ಭರ್ತಿಯಾಗಿದ್ದು ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಒಟ್ಟು 105 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 86.93 ಟಿಎಂಸಿ ನೀರು ಸಂಗ್ರಹವಾಗಿದೆ. ಕೊಯ್ನಾ ಜಲಾಶಯದ 6 ಗೇಟ್​​​ಗಳ ಮೂಲಕ 9,360 ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಹಾಗೂ ವಿದ್ಯುತ್ ಉತ್ಪಾದನೆಗೆ 1050 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಈ ನೀರಿನಿಂದ ಕರ್ನಾಟಕದಲ್ಲಿ ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಳವಾಗುವ ಸಾಧ್ಯತೆ …

Read More »

ಕೋವಿಡ್: 404 ಮಂದಿ ಗುಣಮುಖ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 358 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಇವರಲ್ಲಿ ನಾಲ್ವರು ಬೆಳಗಾವಿ ಹಾಗೂ ಒಬ್ಬರು ಗೋಕಾಕ ತಾಲ್ಲೂಕಿನವರು. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು’ ಎಂದು ಜಿಲ್ಲಾಡಳಿತ ತಿಳಿಸಿದೆ. ‘ಜಿಲ್ಲೆಯಲ್ಲಿ ಮಾದರಿ ಸಂಗ್ರಹ ಸಂಖ್ಯೆ 61,752ರ ಗಡಿ ದಾಟಿದೆ. ಈ ಪೈಕಿ 52,779 ಮಂದಿಯ ವರದಿ ನೆಗೆಟಿವ್ ಬಂದಿದೆ. ಇನ್ನೂ 818 …

Read More »

ಬೆಳಗಾವಿ | ಕುಸಿದ ಹಳೆ ಮನೆ: 12 ಮಂದಿ ರಕ್ಷಣೆ

ಬೆಳಗಾವಿ: ಇಲ್ಲಿನ ಗೊಂದಳಿ ಗಲ್ಲಿಯಲ್ಲಿ ಶನಿವಾರ ರಾತ್ರಿ ಹಳೆ ಮನೆಯೊಂದು ಪಕ್ಕದ ಮನೆಯ ಮೇಲೆ ದಿಢೀರ್‌ ಕುಸಿದು ಬಿದ್ದಿದ್ದರಿಂದ, ಒಳಗೆ ಸಿಲುಕಿದ್ದ ಬಾಲಕ ಮತ್ತು ಬಾಲಕಿ ಸೇರಿದಂತೆ 12 ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಿಂದಾಗಿ ಸುತ್ತಮುತ್ತಲಿನ ಮನೆಗಳವರು ಆತಂಕಗೊಂಡಿದ್ದರು. ಡಾ.ಕೋಟೂರು ಎನ್ನುವವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ. ಹಳೆಯದಾಗಿದ್ದ ಆ ಕಟ್ಟಡ ಸತತ ಮಳೆಯಿಂದಾಗಿ ಮತ್ತಷ್ಟು ಶಿಥಿಲಗೊಂಡಿತ್ತು. ಅದಕ್ಕೆ ಹೊಂದಿಕೊಂಡಂತೆ ಇದ್ದ ಗೋಡೆಯು ನಗರಪಾಲಿಕೆ ಮಾಜಿ ಸದಸ್ಯೆ ಶಶಿಕಲಾ ಸುರೇಕರ ಅವರ ಮನೆಯ …

Read More »

ಸೋಂಕಿತರಿಗೆ ಊಟ ನೀಡುವ ಸ್ಥಳದಲ್ಲಿಯೇ ಮೃತದೇಹವನ್ನ ಪ್ಯಾಕ್ ಮಾಡಿ ಇಡಲಾಗಿತ್ತು

ರಾಯಚೂರು: ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹವನ್ನ ಕೂಡಲೇ ಶವಾಗಾರಕ್ಕೆ ಸಾಗಿಸಬೇಕು. ಆದರೆ ರಾಯಚೂರಿನ ಕೋವಿಡ್ ಆಸ್ಪತ್ರೆಯಲ್ಲಿ ಸುಮಾರು ಗಂಟೆಗಳ ಕಾಲ ಸೋಂಕಿತರ ಪಕ್ಕದಲ್ಲೇ ಶವವನ್ನು ಇಡಲಾಗಿತ್ತು. ಸೋಂಕಿತರಿಗೆ ಊಟ ನೀಡುವ ಸ್ಥಳದಲ್ಲಿಯೇ ಮೃತದೇಹವನ್ನ ಪ್ಯಾಕ್ ಮಾಡಿ ಇಡಲಾಗಿತ್ತು. ಹೀಗಾಗಿ ಊಟ ತೆಗೆದುಕೊಂಡು ಹೋಗಲು, ಬರುವ ಪ್ರತಿಯೊಬ್ಬರು ಮೃತದೇಹದ ಪಕ್ಕದಲ್ಲೇ ನಿಂತುಕೊಂಡು ಊಟ ತೆಗೆದುಕೊಳ್ಳಬೇಕಾದ ಅವ್ಯವಸ್ಥೆಗೆ ಜನರನ್ನು ಹೈರಾಣಾಗಿಸಿದೆ.   ಸಾಮಾಜಿಕ ಅಂತರ ಕಾಪಾಡಲು ಹೇಳುವ ವೈದ್ಯರೇ ಈ ರೀತಿಯ …

Read More »

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಮಹೇಂದ್ರ ಸಿಂಗ್‌ ಧೋನಿ ನೀವೃತ್ತಿ

ಭಾರತದ ಕ್ರಿಕೆಟ್‌ ಕಂಡ ಅತ್ಯಂತ ಯಶಸ್ವಿ ನಾಯಕರಲ್ಲೊಬ್ಬರಾದ ಮಹೇಂದ್ರ ಸಿಂಗ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನೀವೃತ್ತಿಯಾಗಿದ್ದಾರೆ. 90 ಟೆಸ್ಟ್‌, 350 ಏಕದಿನ ಪಂದ್ಯಗಳು ಮತ್ತು 98 ಟಿ20 ಪಂದ್ಯಗಳನ್ನಾಡಿರುವ ಮಾಹೀ, ತಮ್ಮ ನಾಯಕತ್ವದಲ್ಲಿ ಟಿ20 ವಿಶ್ವಕಪ್‌, ಏಕದಿನ ವಿಶ್ವಕಪ್‌ ಹಾಗೂ ಚಾಂಪಿಯನ್ಸ್‌ ಟ್ರೋಫಿ ಗೆದ್ದಿದ್ದಾರೆ. ಟೆಸ್ಟ್‌ನಲ್ಲೂ ಭಾರತ ನಂಬರ್‌ ಒನ್‌ ಱಂಕ್‌ ಆದಾಗ ಧೋನಿಯೇ ನಾಯಕರಾಗಿದ್ದರು. ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕನಾಗಿ ಮೂರು ಬಾರಿ ಐಪಿಎಲ್‌ ಟ್ರೋಫಿ …

Read More »

‘ಲಾಕ್‌ಡೌನ್‌ನಿಂದ ಜನರ ಪ್ರಾಣ ರಕ್ಷಣೆ’

ಸವದತ್ತಿ: ‘ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಲಾಕ್‌ಡೌನ್ ಘೋಷಿಸಿದ್ದರಿಂದಾಗಿ ಜನರ ಜೀವ ರಕ್ಷಿಸಲು ಸಾಧ್ಯವಾಯಿತು’ ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು. ತಾಲ್ಲೂಕು ಆಡಳಿತದಿಂದ ಇಲ್ಲಿನ ಎಸ್‌ಕೆ ಪ್ರೌಢಶಾಲೆ ಮೈದಾನದಲ್ಲಿ ಶನಿವಾರ ನಡೆದ 74ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ‘ಲಾಕ್‌ಡೌನ್‌ದಿಂದ ಜನಸಾಮಾನ್ಯರು ಸೇರಿದಂತೆ ಸರ್ಕಾರದ ರಾಜಸ್ವ ಸಂಗ್ರಹಕ್ಕೂ ತೊಂದರೆಯಾಗಿದೆ. ಆದರೂ ಸರ್ಕಾರಗಳು ಎದೆಗುಂದಿಲ್ಲ. ನಿರಂತರ ಸಭೆ ನಡೆಸಿ ಕೋವಿಡ್ ಹತೋಟಿಯಲ್ಲಿಡಲಾಗಿತ್ತು. ದುರ್ದೈವದಿಂದ ಸಮುದಾಯಕ್ಕೆ ಹರಡಿದ್ದು …

Read More »

ನವೀನ್ ತಲೆಗೆ 51 ಲಕ್ಷ ಘೋಷಿಸಿದ್ದ ಮುಸ್ಲಿಂ ನಾಯಕ ಅರೆಸ್ಟ್

ಲಕ್ನೋ: ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ನವೀನ್ ತಲೆಗೆ 51 ಲಕ್ಷ ಘೋಷಣೆ ಮಾಡಿದ್ದ ಮುಸ್ಲಿಂ ನಾಯಕನನ್ನು ಮೀರತ್ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಶಹಜೀಬ್ ರಿಜ್ವಿ ಸಮಾಜವಾದಿ ಪಕ್ಷದ ಮಾಜಿ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತನಾಗಿದ್ದು, ಈತನನ್ನು ಮೀರತ್ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮೀರತ್ ನ ಫಲ್ವಾಡಾ ಪಟ್ಟಣದ ರಸೂಲ್‍ಪುರ ಗ್ರಾಮದ ನಿವಾಸಿಯಾಗಿರುವ ರಿಜ್ವಿ, ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದನು. …

Read More »

ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ………..

ನವದೆಹಲಿ: ಇಂದು 74 ಸ್ವಾತಂತ್ರ್ಯ ದಿನಾಚರಣೆ. ಕೊರೊನಾ ಭೀತಿ ನಡುವೆ ಮುನ್ನೆಚ್ಚರಿಕೆ ವಹಿಸಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಅವರು ಧ್ವಜಾರೋಹಣ ಮಾಡಿದ್ದಾರೆ. ಈ ಬಾರಿ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಕೆಂಪುಕೋಟೆಯನ್ನು ಮದುವಣಗಿತ್ತಿಯಂತೆ ಶೃಂಗಾರ ಮಾಡಲಾಗಿದೆ. ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಮಹಾತ್ಮ ಗಾಂಧಿ ಸಮಾಧಿ ರಾಜ್‍ಘಾಟ್‍ಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ನಂತರ ಕೆಂಪು ಕೋಟೆಯ ಮುಖ್ಯ ದ್ವಾರಕ್ಕೆ ಆಗಮಿಸುತ್ತಿದ್ದಂತೆ ಮೂರು …

Read More »

ಇಲ್ಲಿದೆ ‘ರಾಷ್ಟ್ರ ಧ್ವಜ’ದ ಇತಿಹಾಸ ಮತ್ತದರ ಮಹತ್ವ

ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲ ತಯಾರಿ ನಡೆಯುತ್ತಿದೆ. ಈ ಬಾರಿ 74 ನೇ ಸ್ವಾತಂತ್ರ್ಯ ದಿನವನ್ನು ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುವುದು. 1947, ಆಗಸ್ಟ್ 15 ರಂದು 200 ವರ್ಷಗಳ ಬ್ರಿಟಿಷ್ ಗುಲಾಮಗಿರಿಯಿಂದ ಭಾರತೀಯರಿಗೆ ಸ್ವಾತಂತ್ರ್ಯ ಸಿಕ್ಕಿತ್ತು. ಬ್ರಿಟಿಷರ ವಿರುದ್ಧ ಹೋರಾಡಲು, ದೇಶದ ಜನರನ್ನು ಒಂದು ಮಾಡಲು ಧ್ವಜದ ಅಗತ್ಯವುಂಟಾಗಿತ್ತು. ಈ ಧ್ವಜ ಈಗ ರಾಷ್ಟ್ರೀಯತೆಯ ಸಂಕೇತವಾಗಿದೆ. ದೇಶದ ಏಕತೆ, ಸಮಗ್ರತೆ ಮತ್ತು ರಾಷ್ಟ್ರದ ಗುರುತು ಧ್ವಜವಾಗಿದೆ. ಇಡೀ …

Read More »