ಬೆಳಗಾವಿ: ಪ್ರವಾಹಕ್ಕೆ ನಲುಗಿ ಒಂದು ವರ್ಷ ಕಳೆದರೂ ಜಿಲ್ಲೆಯ ಎಲ್ಲ ಸಂತ್ರಸ್ತರಿಗೆ ಇನ್ನೂ ಪರಿಹಾರ ದೊರೆತಿಲ್ಲ. ಪರಿಹಾರ ಕೊಡುವಂತೆ ಒತ್ತಾಯಿಸಿ, ಈಗಲೂ ಅಲ್ಲೊಂದು, ಇಲ್ಲೊಂದು ಪ್ರತಿಭಟನೆಗಳು ನಡೆಯುತ್ತಲೇ ಇವೆ. ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ ಸೇರಿದಂತೆ ಬಹುತೇಕ ಎಲ್ಲ ನದಿಗಳಲ್ಲಿ ಪ್ರವಾಹ ಕಾಣಿಸಿಕೊಂಡಿತ್ತು. ಇದರ ಜೊತೆ ಅತಿವೃಷ್ಟಿಯೂ ಕೂಡಿಕೊಂಡು ಅಪಾರ ಹಾನಿಯನ್ನುಂಟು ಮಾಡಿತ್ತು. ಬೆಳಗಾವಿ, ಖಾನಾಪುರ, ಚಿಕ್ಕೋಡಿ, ಅಥಣಿ, ಗೋಕಾಕ, ರಾಮದುರ್ಗ, ಸವದತ್ತಿ, ರಾಯಬಾಗ, ಹುಕ್ಕೇರಿ …
Read More »ಬುಡರಕಟ್ಟಿಯಲ್ಲಿ ಬಸವೇಶ್ವರ ಮೂರ್ತಿ ಲೋಕಾರ್ಪಣೆ
ಬೈಲಹೊಂಗಲ: ಬುಡರಕಟ್ಟಿ ಗ್ರಾಮದಲ್ಲಿ ಗುರುವಾರ ಜಗಜ್ಯೋತಿ ಬಸವೇಶ್ವರರ ಆಶ್ವಾರೂಢ ಕಂಚಿನ ಪುತ್ಥಳಿ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಶ್ವಾರೂಢ ಬಸವೇಶ್ವರರ ಮೂರ್ತಿ ಮೆರವಣಿಗೆ ಮಾಡಿ ಗ್ರಾಮದ ಬಸವ ವೃತ್ತದಲ್ಲಿ ನಾಡಿನ ಹಲವು ಶ್ರೀಗಳು, ಗಣ್ಯರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ನಂತರ ನಡೆದ ಕಾರ್ಯಕ್ರಮದಲ್ಲಿ ಗದಗ-ಡಂಬಳದ ತೋಂಟದಾರ್ಯ ಮಠದ ತೋಂಟದ ಡಾ. ಸಿದ್ಧರಾಮ ಶ್ರೀಗಳು ಮಾತನಾಡಿ, ಅಸಮಾನತೆ, ಮೌಡ್ಯತೆ, ಶೋಷಣೆಯಿಂದ ನಲುಗಿದ್ದ ಸಮಾಜಕ್ಕೆ ಬೆಳಕಾಗಿ ಬಂದವರು ಬಸವೇಶ್ವರರು. …
Read More »ಕೃಷಿ ಇಲಾಖೆಯಿಂದ ಮೊಬೈಲ್ ಆಯಪ್ | ಬೆಳೆ ಸಮೀಕ್ಷೆ; ರೈತರಿಗೇ ಜವಾಬ್ದಾರಿ
ಚಾಮರಾಜನಗರ: ಕೃಷಿ ಇಲಾಖೆಯು 2020-21ನೇ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಮಾಡುವ ಜಾವಾಬ್ದಾರಿಯನ್ನು ರೈತರಿಗೇ ನೀಡಿದೆ. ಇದೇ ಉದ್ದೇಶಕ್ಕಾಗಿ ಕೃಷಿ ಇಲಾಖೆಯು ಬೆಳೆ ‘ಸಮೀಕ್ಷೆ ಆಯಪ್ (farmers crop survey app 2020-21) ಅನ್ನು ಅಭಿವೃದ್ಧಿ ಪಡಿಸಿದ್ದು, ಆಯಂಡ್ರಾಯ್ಡ್ ಸ್ಮಾರ್ಟ್‌ಗಳಲ್ಲಿ ಲಭ್ಯವಿದೆ. ಈ ಯೋಜನೆ ಅಡಿಯಲ್ಲಿ ರೈತರು, ಈ ಆಯಪ್ ಮೂಲಕ ತಾವು ಬೆಳೆದಿರುವ ಬೆಳೆಗಳ ಮಾಹಿತಿ, ಚಿತ್ರಗಳನ್ನು ಅಪ್‌ಲೋಡ್ ಮಾಡಬೇಕು. ಆಗಸ್ಟ್ 10ರಂದು ಈ ಯೋಜನೆಗೆ ಚಾಲನೆ ಸಿಕ್ಕಿದ್ದು, ಸಮೀಕ್ಷೆ …
Read More »ಚಾಮರಾಜನಗರ | ಕೊರೊನಾ ಸೈನಿಕ ಎಎಸ್‌ಐ ಸಾವು
ಚಾಮರಾಜನಗರ: ಜಿಲ್ಲೆಯ ಠಾಣೆಯೊಂದರ ಎಎಸ್‌ಐಯೊಬ್ಬರು ಸೇರಿದಂತೆ ಇಬ್ಬರು ಕೋವಿಡ್ ಸೋಂಕಿತರು ಗುರುವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೈನಿಕರೊಬ್ಬರು ಮೃತಪಟ್ಟ ಮೊದಲ ಪ್ರಕರಣ ಇದು. ಗುರುವಾರ ವರದಿಯಾದ ಎರಡೂ ಸಾವಿನ ಪ್ರಕರಣಗಳನ್ನು ಜಿಲ್ಲಾಡಳಿತವು ಕೋವಿಡ್‌ಯೇತರ ಕಾರಣದಿಂದ ಮೃತಪಟ್ಟವರ ಪಟ್ಟಿಗೆ ಸೇರಿಸಿದೆ. 56 ವರ್ಷದ ಎಎಸ್‌ಐ ಅವರು (ರೋಗಿಸಂಖ್ಯೆ 1,35,728) ಜುಲೈ 30ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. 15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಟೈಫಾಯ್ಡ್‌ನಿಂದಲೂ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಐಸಿಯುನಲ್ಲಿ …
Read More »ಬೆಳಗಾವಿ | 288 ಮಂದಿಗೆ ಕೋವಿಡ್ ದೃಢ
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 288 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕಿತರ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಬಿಮ್ಸ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಹುಕ್ಕೇರಿ ತಾಲ್ಲೂಕಿನ ಮೂವರು, ರಾಯಬಾಗದ ಒಬ್ಬರು ಹಾಗೂ ಬೆಳಗಾವಿ ತಾಲ್ಲೂಕಿನ ಇಬ್ಬರು ಸೇರಿ ಆರು ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಇತ್ತು ಎಂದು ಜಿಲ್ಲಾಡಳಿತ ತಿಳಿಸಿದೆ. 140 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. …
Read More »ಬೆಳಗಾವಿ: ಸಚಿವ ಶ್ರೀಮಂತ ಕ್ಷಮೆ ಯಾಚನೆಗೆ ಆಗ್ರಹ
ಮೋಳೆ/ಕಾಗವಾಡ: ‘ಸಮಸ್ಯೆಗಳನ್ನು ಮುಂದಿಟ್ಟುಕೊಂಡು ತಮ್ಮನ್ನು ತರಾಟೆಗೆ ತೆಗೆದುಕೊಂಡ ನೆರೆ ಸಂತ್ರಸ್ತರ ಬಗ್ಗೆ ಜವಳಿ ಸಚಿವ ಶ್ರೀಮಂತ ಪಾಟೀಲ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಜನರನ್ನು ಅವಮಾನಿಸಿದ್ದಾರೆ’ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಮುಖಂಡರು ಕಾಗವಾಡದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ತಹಶೀಲ್ದಾರ್ ಪರಿಮಳಾ ದೇಶಪಾಂಡೆ ಅವರಿಗೆ ಮನವಿ ಸಲ್ಲಿಸಿದರು. ‘ಸಚಿವರು ತಕ್ಷಣವೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಅವರನ್ನು ಸಚಿವ ಸ್ಥಾನದಿಂದ ಕೆಳಗಿಸಳಿಸಬೇಕು’ ಎಂದು ಒತ್ತಾಯಿಸಿದರು. ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಬಸನಗೌಡ …
Read More »ರಾಜ್ಯದಲ್ಲಿ ಎರಡು ಲಕ್ಷದ ಗಡಿ ದಾಟಿದ ಮಹಾಮಾರಿ! ಇವರಿಂದ ಪ್ರಕಟಿಸಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಎರಡು ಲಕ್ಷದ ಗಡಿ ದಾಟಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 6,706 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2,03,200ಕ್ಕೆ ಏರಿಕೆ ಕಂಡಿದೆ. ಈ ಪೈಕಿ 78,337 ಸಕ್ರೀಯ ಪ್ರಕರಣಗಳಿವೆ. ಅಲ್ಲದೇ, ಇಂದು ಕೂಡ 103 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನೂ 727 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಂಗಳೂರು ನಗರದಲ್ಲಿ 1,893 ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ, …
Read More »ಬೆಳಗಾವಿ | ಬೆಂಗಳೂರು ಗಲಭೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
ಬೆಳಗಾವಿ: ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಮತ್ತು ಕಾವಲ್‌ಭೈರಸಂದ್ರದಲ್ಲಿ ನಡೆದ ಗಲಭೆ ಖಂಡಿಸಿ ವಿಶ್ವ ಹಿಂದೂ ಪರಿಷತ್-ಬಜರಂಗ ದಳ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟಿಸಿದರು. ‘ಕಿಡಿಗೇಡಿಗಳು ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ. ಅಮಾಯಕರಿಗೆ ತೊಂದರೆ ಕೊಟ್ಟಿದ್ದಾರೆ. ಪೊಲೀಸ್ ಠಾಣೆ ಹಾಗೂ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಇದು ಪೂರ್ವಯೋಜಿತ ಹಾಗೂ ಅತ್ಯಂತ ವ್ಯವಸ್ಥಿತವಾಗಿ ನಡೆದ ಘಟನೆಯಾಗಿದೆ. ಇದರಿಂದ ಸಮಾಜಕ್ಕೆ ಅಪಾರ ನಷ್ಟವಾಗಿದೆ. ಘಟನೆಗೆ ಕಾರಣವಾದ ಸಂಘಟನೆಗಳನ್ನು ಕೂಡಲೇ …
Read More »ಸ್ವದೇಶಿ ಎಂದರೆ ಎಲ್ಲ ವಿದೇಶಿ ಉತ್ಪನ್ನಗಳ ಬಹಿಷ್ಕಾರವಲ್ಲ; ಭಾಗವತ್ ಸ್ಪಷ್ಟನೆ
ಹೊಸದಿಲ್ಲಿ: ಸ್ವದೇಶಿ ಎಂದರೆ ಪ್ರತಿಯೊಂದು ವಿದೇಶಿ ಉತ್ಪನ್ನವನ್ನು ಬಹಿಷ್ಕರಿಸುವುದಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಜೀ ಭಾಗವತ್ ಸ್ಪಷ್ಟಪಡಿಸಿದ್ದಾರೆ. ಎಲ್ಲ ವಿದೇಶಿ ವಸ್ತುಗಳನ್ನು ಬಹಿಷ್ಕರಿಸುವುದ ರಲ್ಲಿ ಅರ್ಥವಿಲ್ಲ. ದೇಶದಲ್ಲಿ ಸಾಂಪ್ರದಾಯಿಕ ಕೊರತೆ ಇರುವ, ಸ್ಥಳೀಯವಾಗಿ ಲಭ್ಯ ವಿಲ್ಲದ ತಂತ್ರ ಜ್ಞಾನಗಳು ಅಥವಾ ವಸ್ತುಗಳನ್ನು ಮಾತ್ರ ಆಮದು ಮಾಡಿಕೊಳ್ಳಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Read More »ಕೇಂದ್ರದ ಮೂಲಕವೇ ಲಸಿಕೆ ಸಂಗ್ರಹ, ಪೂರೈಕೆ
ಹೊಸದಿಲ್ಲಿ: ಲಸಿಕೆ ಸಂಶೋಧನೆಗಳು ಬಹುತೇಕ ಮುಕ್ತಾಯ ಹಂತಕ್ಕೆ ಬಂದು ತಲುಪಿವೆ. ಈ ಲಸಿಕೆಗಳು ಲಭ್ಯವಾದ ಬಳಿಕ ಕೇಂದ್ರದ ಮೂಲಕವೇ ಸಂಗ್ರಹ ಕಾರ್ಯ, ಎಲ್ಲ ರಾಜ್ಯಗಳಿಗೆ ಪೂರೈಕೆ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ನೀತಿ ಆಯೋಗದ ಕಾಯಂ ಸದಸ್ಯ, ಆರೋಗ್ಯ ಸಚಿವಾಲಯದ ಕಾರ್ಯದರ್ಶಿಯೂ ಆಗಿರುವ ಡಾ| ವಿ.ಕೆ. ಪಾಲ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ಜರುಗಿತು. ಲಸಿಕೆ ವಿತರಣೆಯಲ್ಲಿ ಗೊಂದಲಕ್ಕೆ ಅವಕಾಶ ನೀಡದೆ, ಲಸಿಕೆ ಸಂಗ್ರಹಕ್ಕೆ ಪ್ರತ್ಯೇಕ ಮಾರ್ಗ ಕಂಡುಕೊಳ್ಳದಂತೆ ಎಲ್ಲ …
Read More »