ಬಂಗಾರಪೇಟೆ: ಕೋವಿಡ್ ಪಾಸಿಟಿವ್ ಇದ್ದರೂ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ. ಜಿಲ್ಲೆಯಲ್ಲಿ ಇದುವರೆಗೂ 850ಕ್ಕೂ ಹೆಚ್ಚು ಜನರು ಗುಣಮುಖರಾಗಿ ಮನೆಗಳಿಗೆ ತೆರಳಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಸೋಂಕಿತರಿಗೆ ಧೈರ್ಯ ತುಂಬಿದರು. ತಾಲೂಕಿನ ಬೂದಿಕೋಟೆ ಹೋಬಳಿಯ ಎಳೇಸಂದ್ರ ವಸತಿ ಶಾಲೆಯಲ್ಲಿ ಪ್ರಾರಂಭಿಸಲಾದ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರ ಜೊತೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ ಪಾಸಿಟಿವ್ ಬಂದ ಮೇಲೆ ಮರಣ ಗ್ಯಾರಂಟಿ ಎನ್ನುವುದನ್ನು ತಮ್ಮ ಮನಸ್ಸಿನಿಂದ …
Read More »ಮೈದುಂಬಿ ಹರಿಯುತ್ತಿವೆ..ಗೋಕಾಕ್..ಗೋಡಚಿನಮಲ್ಕಿ ಫಾಲ್ಸ..ಪ್ರವಾಸಿಗರ ಕೈ ಬೀಸಿ ಕರೆಯುತ್ತಿವೆ..!
ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗಡಿ ಜಿಲ್ಲೆ ಬೆಳಗಾವಿಯ ನದಿಗಳು ತುಂಬಿ ಹರಿಯುತ್ತಿದ್ದು. ಮತ್ತೆ ಪ್ರವಾಹಭೀತಿ ಎದುರಾಗಿದೆ. ಅಷ್ಟೇ ಅಲ್ಲದೇ ರಾಜ್ಯದ ಎರಡನೇ ಅತೀ ದೊಡ್ಡ ಜಲಪಾತ ಎಂದು ಕರೆಯುವ ಗೋಕಾಕ್ ಫಾಲ್ಸ್ ಮತ್ತು ಗೋಡಚಿನಮಲ್ಕಿ ಫಾಲ್ಸ ಕೂಡ ನಯನಮನೋಹರವಾಗಿ ಹರಿಯುತ್ತಿದೆ. ಮತ್ತು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಹೌದು 180ಅಡಿಯಷ್ಟು ಎತ್ತರದಿಂದ ನೀರು ಧುಮ್ಮುಕ್ಕಿ ಬೀಳುತ್ತಿರುವ ಗೋಕಾಕ ಜಲಪಾತ ಈಗ ನೋಡುವುದೇ ಕಣ್ಣಿಗೆ ಹಬ್ಬ. ಮಳೆಗಾಲದ …
Read More »ರಸ್ತೆಗೆ ನುಗ್ಗಿದ ಕಬಿನಿ ನೀರು; ಮೈಸೂರು ಊಟಿ ಹೆದ್ದಾರಿ ಬಂದ್
ಮೈಸೂರು: ಕಬಿನಿ ನೀರು ಹೆದ್ದಾರಿಗೆ ಮೈಸೂರು ಊಟಿ ಹೆದ್ದಾರಿ ನುಗ್ಗಿದ ಹಿನ್ನೆಲೆಯಲ್ಲಿ ಪೊಲೀಸರು ಈ ಹೆದ್ದಾರಿಯನ್ನು ಬಂದ್ ಮಾಡಿದ್ದಾರೆ. ಕಬಿನಿಜಲಾಶಯದಿಂದ ಹೆಚ್ಚಿನ ಪ್ರಮಾನದಲ್ಲಿ ನೀರನ್ನು ಬಿಡುಗಡೆ ಮಾಡಲಾಗಿದ್ದು, ಆ ನೀರು ಹೆದ್ದಾರಿಗೆ ನುಗ್ಗಿದೆ. ಇದರಿಂದಾಗಿ ನಂಜನಗೂಡಿನ ಮೂಲೆ ಮಠದ ಬಳಿ ಸಂಚಾರ ಅಸ್ತವ್ಯಸ್ತ ಗೊಂಡಿತ್ತು, ಊಟಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕೆರೆಯಂತಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ನಂಜನಗೂಡು ಮೈಸೂರು ನಡುವೆ ಮಾರ್ಗ ಬದಲಾವಣೆ ಮಾಡಿ ಆ ಹೆದ್ದಾರಿ ಬಂದ್ …
Read More »ಪ್ರವಾಹ ನಿಯಂತ್ರಣಕ್ಕೆ 5 ಪರಿಹಾರ ಕೇಂದ್ರಗಳ ಪ್ರಾರಂಭ, 25 ಬೋಟ್ ವ್ಯವಸ್ಥೆ: ಬೆಳಗಾವಿ ಡಿ.ಸಿ
ಬೆಳಗಾವಿ: ಕಳೆದ ಬಾರಿ ಪ್ರವಾಹದ ಹಿನ್ನೆಲೆ ನಮಗೆ ಅನುಭವ ಇದೆ. ಹೀಗಾಗಿ ಈ ಬಾರಿ ಪ್ರವಾಹ ನಿಯಂತ್ರಣಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ್ ತಿಳಿಸಿದ್ದಾರೆ. ಗ್ರಾಮ, ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ. ಸದ್ಯ ಕೃಷ್ಣಾ ನದಿಯಲ್ಲಿ 1 ಲಕ್ಷ 55 ಸಾವಿರ ಕ್ಯೂಸೆಕ್ ಒಳಹರಿವು ಇದ್ದು, ಅದು 2.5ಲಕ್ಷ ಕ್ಯೂಸೆಕ್ಗೆ ಏರಿಕೆಯಾದ್ರೆ ಮಾತ್ರ ಜಮೀನು- ಮನೆಗೆ ನೀರು ನುಗ್ಗುವ ಆತಂಕ ಇದೆ. …
Read More »20 ಅಡಿ ಎತ್ತರದಿಂದ ಬಿದ್ದ ಕಾರು: ಮೂವರ ಸ್ಥಿತಿ ಗಂಭೀರ, ಎಲ್ಲಿ?
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಚಲಿಸುತ್ತಿದ್ದ ಕಾರು ಕೆಳಗೆ ಬಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಹಾರೂಗೇರಿಯಿಂದ ಬೆಳಗಾವಿಗೆ ಹೊರಟಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಕೆಳಗೆ ಬಿದ್ದಿದೆ. ಇದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಮೂವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Read More »ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ: ರಮೇಶ್ ಜಾರಕಿಹೊಳಿ
ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಮುಖ್ಯವಾಗಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನದಿಗಳ ಪ್ರಕೋಪ ಹೆಚ್ಚಿದ್ದು ಅನೇಕ ಸಣ್ಣ ಸೇತುವೆಗಳು ಮುಳುಗಡೆಯಾಗಿದೆ. ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಇದೇ ವೇಳೆ ಕಾವೇರಿ ಅಣೆಕಟ್ಟೆಗಳಿಂದ ಹೆಚ್ಚುವರಿ ನೀರು ಹರಿದ ಪರಿಣಾಮ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಸುಪ್ರಸಿದ್ಧ ರಂಗನತಿಟ್ಟು ಪಕ್ಷಧಾಮಕ್ಕೆ ಸಹಾ ನೀರು ನುಗ್ಗಿ …
Read More »ರಾಜ್ಯದಲ್ಲಿ 48 ಗಂಟೆಗಳಲ್ಲಿ ಭಾರಿ ಮಳೆ !
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ರಾಜ್ಯದಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ಕರ್ನಾಟಕದಲ್ಲಿ ಹಲವು ಪ್ರದೇಶಗಳಲ್ಲಿ ಮಳೆಯಾಗಲಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆಗಸ್ಟ್ 7 ರಂದು ಕರವಾಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯಕ್ಕೆ ಮುಂಗಾರು ಪ್ರವೇಶ, ಮೊದಲ ದಿನವೇ 4 …
Read More »ತುರ್ತು ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಬದ್ಧ : ಜೊಲ್ಲೆ
: ಚಿಕ್ಕೋಡಿ: ಕೊಂಕಣ ಭಾಗದಲ್ಲಿ ಅತಿಯಾದ ಮಳೆಯಿಂದ ಉಂಟಾಗುವ ಪ್ರವಾಹ ನಿಯಂತ್ರಿಸಲು ಜಿಲ್ಲಾಡಳಿತ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ. ಶೀಘ್ರ ಕೊಲ್ಲಾಪುರ ಜಿಲ್ಲೆಯ ನೀರಾವರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಹಾರಾಷ್ಟ್ರದ ಜಲಾಶಯಗಳಿಂದ ಬೀಡುವ ನೀರಿನ ಪ್ರಮಾಣದ ಕುರಿತು ಮಾಹಿತಿ ಪಡೆಯಲಾಗುತ್ತದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಶುಕ್ರವಾರ ಸದಲಗಾ ಪಟ್ಟಣದ ದೂಧಗಂಗಾ ನದಿಯ ಸಂಭವನೀಯ ಪ್ರವಾಹ ಅವಲೋಕಿಸಿ ಮಾತನಾಡಿ, ಉಕ್ಕಿ ಹರಿಯುತ್ತಿರುವ ದೂಧಗಂಗಾ ನದಿ ನೀರಿನಿಂದ ಜನಸಾಮಾನ್ಯರಿಗೆ ಯಾವುದೇ ರೀತಿಯ …
Read More »ಕಾರ್ಕಳದ ಕೆರ್ವಾಶೆ ಬಳಿ ಅತ್ಯಧಿಕ ಮಳೆ ದಾಖಲು : 24 ಗಂಟೆಯಲ್ಲಿ ಘಟಪ್ರಭೆಗೆ ಹರಿದು ಬಂತು 4 ಟಿಎಂಸಿ ನೀರು..!
ಬೆಂಗಳೂರು/ಉಡುಪಿ/ಬೆಳಗಾವಿ : ರಾಜ್ಯದಲ್ಲಿ ಮಳೆರಾಯನ ಅಬ್ಬರ ಕೊಂಚ ಕಡಿಮೆಯಾಗಿದ್ದರೂ ಘಟ್ಟಪ್ರದೇಶಗಳಲ್ಲಿ ಈಗಲೂ ಧಾರಾಕಾರ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆ ಕಾರ್ಕಳದ ಕೆರ್ವಾಶೆ ಬಳಿ ಅತ್ಯಧಿಕ 208.5 ಮಿಮೀ ನಷ್ಟು ಮಳೆ ದಾಖಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಇದು ರಾಜ್ಯದಲ್ಲೇ ಅತ್ಯಂತ ಹೆಚ್ಚು ಮಳೆಯಾದ ಪ್ರದೇಶವಾಗಿದೆ. …
Read More »8 ಐಪಿಎಸ್ ಅಧಿಕಾರಿಗಳ ಟ್ರಾನ್ಸ್ ಫರ್; ಡಿವೈಎಸ್‌ಪಿಗಳಿಗೆ ಮುಂಬಡ್ತಿ ನೀಡಿ ವರ್ಗಾವಣೆ
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಡಿವೈಎಸ್‌ಪಿ (ಸಿವಿಲ್) ವೃಂದದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳಿಗೆ ಎಸ್.ಪಿ. (ಸಿವಿಲ್, ನಾನ್ ಐಪಿಎಸ್) ವೃಂದಕ್ಕೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಎಸ್.ಟಿ.ಸಿದ್ದಲಿಂಗಪ್ಪ ಅವರನ್ನು ರಾಜ್ಯ ಗುಪ್ತವಾರ್ತೆ ಪೊಲೀಸ್ ಅಧೀಕ್ಷಕರಾಗಿ, ಮುಹಮ್ಮದ್ ಹುಸೇನ್ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ, ಬಸಪ್ಪ ಎಸ್.ಅಂಗಡಿ ಅವರನ್ನು ಬೆಂಗಳೂರು ನಗರ ಅಪರಾಧ-2ರ ಉಪ ಪೊಲೀಸ್ ಆಯುಕ್ತರಾಗಿ ವರ್ಗಾಯಿಸಲಾಗಿದೆ. ಬಿ.ಎಲ್.ವೇಣುಗೋಪಾಲ್ ಅವರನ್ನು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ, ಗುರುನಾಥ್ ಬಿ.ಮತ್ತೂರು ಅವರನ್ನು ಬಳ್ಳಾರಿ ಭ್ರಷ್ಟಾಚಾರ …
Read More »