ಚಿಕ್ಕಮಗಳೂರು : ಮಲೆನಾಡಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಿಕ್ಕಮಗಳೂರಿನಲ್ಲಿ ತುಂಗಾ, ಭದ್ರಾ, ಹೇಮಾವತಿ ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದ ಮಲೆನಾಡಿಗರ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಾಲ್ಕು ದಿನದ ಮಳೆಗೆ ಸುಸ್ತಾಗಿರುವ ಮಲೆನಾಡಿಗರು ಪ್ರವಾಹದ ಭೀತಿಯಲ್ಲಿದ್ದಾರೆ. ನಿನ್ನೆ ರಾತ್ರಿಯೂ ಚಿಕ್ಕಮಗಳೂರಿನಲ್ಲಿ ಎಡಬಿಡದೆ ಮಳೆ ಸುರಿದಿದೆ. ಹಲವು ಕಡೆ ರಸ್ತೆಗಳಿಗೆ ನದಿ ನೀರು ನುಗ್ಗಿದೆ. ಭದ್ರಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ರಾತ್ರಿಯಿಡೀ ಸುರಿದ ಮಳೆಗೆ ಜನ ಹೈರಾಣಾಗಿದ್ದಾರೆ. ಈಗಾಗಲೇ ಮಲೆನಾಡಿನ …
Read More »ಕೊಡಗಿನಲ್ಲಿ ವರುಣನ ಆರ್ಭಟ: ಕುಶಾಲನಗರದ ಬಡವಾಣೆಗಳು ಜಲಾವೃತ
ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಜನ ತತ್ತರಿಸಿದ್ದಾರೆ. ಧಾರಾಕಾರ ಮಳೆಯಿಂದಾಗಿ, ಕುಶಾಲನಗರದ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಲ್ಲಿನ ಕುವೆಂಪು ಬಡಾವಣೆ, ಸಾಯಿ ಬಡಾವಣೆ ಹಾಗೂ ಮುಳುಸೋಗೆ ಬಡಾವಣೆಗಳಲ್ಲಿ ಸುಮಾರು 10 ಅಡಿ ಎತ್ತರದಷ್ಟು ನೀರು ನಿಂತಿದೆ. ಮನೆಗಳ ಮೊದಲ ಮಹಡಿವೆರೆಗಿನ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಹಾರಂಗಿ ಜಲಾಶಯದ ಹೊರಹರಿವು ಹೆಚ್ಚಾಗಿದ್ದು, ಕಾವೇರಿ ನದಿಯ ನೀರು ಅಪಾಯ ಮಟ್ಟ ಮೀರಿ ಹರಿಯುತ್ತಿದೆ.
Read More »ವರುಣನ ಆರ್ಭಟದಿಂದ ಕೊರೊನಾ ನಿಯಂತ್ರಣವನ್ನು ಮರೆತುಬಿಡ್ತಾ ರಾಜ್ಯ ಸರ್ಕಾರ..?
ಬೆಂಗಳೂರು: ರಾಜ್ಯದ ನಾನಾ ಭಾಗಗಳಲ್ಲಿ ವ್ಯಾಪಕ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ನಿರ್ಮಾಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೊರೊನಾ ಸೋಂಕಿನ ನಿಯಂತ್ರಣವನ್ನು ಮರೆತಂತಿದೆ. ಸೋಂಕಿನ ನಿಯಂತ್ರಣದಲ್ಲಿದ್ದ ರಾಜ್ಯ ಸರ್ಕಾರಕ್ಕೆ ಸದ್ಯ ಪ್ರವಾಹ ಮತ್ತೊಂದು ಹೊಡೆತವನ್ನು ನೀಡಿದೆ. ರಾಜ್ಯದ ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕೆಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಮೊದಲು ಜನ ಮತ್ತು ಜಾನುವಾರಗಳನ್ನು ರಕ್ಷಿಸುವುದು …
Read More »ಬೆಳಗಾವಿ: ಮತ್ತೆ 392 ಮಂದಿಗೆ ಕೋವಿಡ್ ದೃಢ
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 392 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,498ಕ್ಕೆ ಏರಿದೆ. ಇಲ್ಲಿನ ವಿವಿಧ ಬಡಾವಣೆಗಳು ಮತ್ತು ತಾಲ್ಲೂಕಿನಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ನಗರದ ಗುರುಪ್ರಸಾದ ಕಾಲೊನಿ, ವಿಶ್ವಕರ್ಮ ಕಾಲೊನಿ, ತಾಲ್ಲೂಕಿನ ಕೆಎಸ್‌ಆರ್‌ಪಿ ಮಚ್ಚೆ, ಸಾಂಬ್ರಾದ ಏರ್‌ಮನ್ ತರಬೇತಿ ಶಾಲೆ, ರಾಮದುರ್ಗ, ಗೋಕಾಕ, ಅಥಣಿ, ರಾಯಬಾಗ, ಖಾನಾಪುರ, ಸವದತ್ತಿ, ಬೈಲಹೊಂಗಲ ತಾಲ್ಲೂಕುಗಳಲ್ಲಿ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ. ಅಂಕಲಗಿ ಪೊಲೀಸ್ ಠಾಣೆಯ ಮೂವರಿಗೆ ದೃಢಪಟ್ಟಿದೆ. …
Read More »ಬೆಳಗಾವಿ: ಪ್ರಾಣಾಪಾಯಕ್ಕೆ ಸಿಲುಕಿದ ಶ್ವಾನಗಳು
ಬೆಳಗಾವಿ: ಸತತ ಮಳೆಯಿಂದಾಗಿ ಇಲ್ಲಿನ ಬಳ್ಳಾರಿ ನಾಲಾ (ದೊಡ್ಡ ಚರಂಡಿ) ಉಕ್ಕಿ ಹರಿಯುತ್ತಿರುವುದರಿಂದ ತಾಲ್ಲೂಕಿನ ಹಲಗಾ ಸಮೀಪದ ಗದ್ದೆಯೊಂದರಲ್ಲಿನ ಶೆಡ್ ಜಲಾವೃತವಾಗಿದ್ದು, ಅಲ್ಲಿದ್ದ 45ಕ್ಕೂ ಹೆಚ್ಚಿನ ನಾಯಿಗಳಿಗೆ ಪ್ರಾಣಾಪಾಯ ಎದುರಾಗಿದೆ. ನಗರದ ಪ್ರಾಣಿ ಪ್ರೇಮಿಗಳಾದ ಶಂಕರ ಹಾಗೂ ಅವರ ಪುತ್ರಿ ಶ್ವೇತಾ ದೊಡ್ಡಮನಿ ಅವರು ಬೀದಿ ನಾಯಿಗಳನ್ನು ಹಿದಿಡು ತಂದು ಅಲ್ಲಿ ಸಾಕುತ್ತಿದ್ದರು. ಈಚೆಗೆ ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಅನ್ನ-ಆಹಾರ ಸಿಗದೆ ಕಂಗಾಲಾಗಿದ್ದ ಕೆಲವು ನಾಯಿಗಳನ್ನು ಕೂಡ ಅಲ್ಲಿ ತಂದು …
Read More »ತಬ್ಲೀಗ್ ಸಮಾವೇಶ: 9 ವಿದೇಶಿಯರಿಗೆ 10 ವರ್ಷ ನಿರ್ಬಂಧ
ಬೆಂಗಳೂರು: ತಬ್ಲೀಗ್ ಜಮಾತ್ ಸಮಾವೇಶದ ಅಂಗವಾಗಿ ರಾಜ್ಯದಲ್ಲಿದ್ದ ಒಂಬತ್ತು ವಿದೇಶಿಯರ(ದಕ್ಷಿಣ ಆಫ್ರಿಕಾ ಮತ್ತು ಇಂಡೋನೇಷ್ಯಾದವರು) ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು ಪಡಿಸಿರುವ ಹೈಕೋರ್ಟ್, ಮುಂದಿನ 10 ವರ್ಷ ಭಾರತಕ್ಕೆ ಭೇಟಿ ನೀಡುವುದಿಲ್ಲ ಎಂಬ ಪ್ರಮಾಣ ಪತ್ರ ಸಲ್ಲಿಸುವಂತೆ ನಿರ್ದೇಶಿಸಿದೆ. ಸಂಬಂಧಪಟ್ಟ ಪ್ರಾಧಿಕಾರ ವಿಧಿಸುವ ದಂಡದ ಮೊತ್ತ ಪಾವತಿಸಿ, ಮುಂದಿನ ಹತ್ತು ವರ್ಷಗಳವರೆಗೆ ಭಾರತಕ್ಕೆ ಭೇಟಿ ನೀಡುವುದಿಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸಿದ ಬಳಿಕ ನಿರ್ಗಮನ ಪರವಾನಗಿ ನೀಡುವಂತೆ ವಿದೇಶಿಯರ ಪ್ರಾದೇಶಿಕ ನೋಂದಣಿ …
Read More »ಸಂಪಾದಕೀಯ | ಆರ್‌ಬಿಐ ಹೊಸ ತೀರ್ಮಾನ ಹಣದ ಹರಿವಿಗೆ ಉತ್ತೇಜನ
ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಭಾರತೀಯ ರಿಸರ್ವ್ ಬ್ಯಾಂಕಿನ (ಆರ್‌ಬಿಐ) ಹಣಕಾಸು ನೀತಿ ಸಮಿತಿಯ (ಎಂಪಿಸಿ) ಸದಸ್ಯರು ಒಕ್ಕೊರಲಿನಿಂದ ತೀರ್ಮಾನಿಸಿದ್ದಾರೆ. ಈ ವರ್ಷದ ಫೆಬ್ರುವರಿಯ ನಂತರ ಆರ್‌ಬಿಐ, ರೆಪೊ ದರವನ್ನು ಶೇಕಡ 1.15ರಷ್ಟು ತಗ್ಗಿಸಿದೆ. ಹೀಗಾಗಿ, ಕೆಲವು ಅರ್ಥಶಾಸ್ತ್ರಜ್ಞರು ಮತ್ತು ಕಾರ್ಪೊರೇಟ್ ವಲಯದ ಕೆಲವರು ದರ ಕಡಿತದ ಪರ ಮಾತನಾಡಿದ್ದರೂ ಆ ತೀರ್ಮಾನ ಕೈಗೊಳ್ಳಲು ಆರ್‌ಬಿಐ ಮುಂದಾಗಿಲ್ಲ. ಕೇಂದ್ರೀಯ ಬ್ಯಾಂಕ್‌ನ ಈ ತೀರ್ಮಾನವನ್ನು ಷೇರು ಮಾರುಕಟ್ಟೆ ತಕ್ಷಣಕ್ಕೆ ಸ್ವಾಗತಿಸಿರುವುದನ್ನು …
Read More »ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ ಪಾಕಿಸ್ತಾನ : ಆರು ನಾಗರಿಕರಿಗೆ ಗಾಯ
ಶ್ರೀನಗರ: ಜಮ್ಮು ಕಾಶ್ಮೀರ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ 6 ನಾಗರೀಕರು ಗಾಯಗೊಂಡಿದ್ದಾರೆ. ಕುಪ್ವಾರದ ನೌಗಾಮ್ ಮತ್ತು ಟ್ಯಾಂಗ್ದರ್ ಸೆಕ್ಟರ್ ನಲ್ಲಿ ಎಲ್ ಒಸಿಯಲ್ಲಿ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಮಾರ್ಟರ್ ದಾಳಿಯಲ್ಲಿ 6 ಮಂದಿ ನಾಗರೀಕರು ಗಾಯಗೊಂಡಿದ್ದಾರೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ. ಪಾಕಿಸ್ತಾನ ಸೇನೆಯ …
Read More »ಪಾಕಿಸ್ತಾನದ ಟೀಕೆಗೆ ಭಾರತ ಖಡಕ್ ವಾರ್ನಿಂಗ್…………..
ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬುಧವಾರ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದ್ದು, ಈ ಕುರಿತು ಪಾಕಿಸ್ತಾನದ ಟೀಕೆಗೆ ಭಾರತ ಖಡಕ್ ವಾರ್ನಿಂಗ್ ನೀಡಿದೆ. ದೇಶದ ಆಂತರಿಕ ವಿಚಾರದಲ್ಲಿ ನೀವು ತಲೆ ಹಾಕಬೇಡಿ ಎಂದು ಭಾರತ ಎಚ್ಚರಿಸಿದೆ. ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಪ್ರತಿಕ್ರಿಯಿಸಿ, ಭಾರತದ ಆಂತರಿಕ ವಿಷಯದ ಬಗ್ಗೆ ‘ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ’ದ ಪತ್ರಿಕಾ ಹೇಳಿಕೆ ಗಮನಕ್ಕೆ ಬಂದಿದೆ. ಪಾಕಿಸ್ತಾನವು ಭಾರತದ …
Read More »ಗಣಿ ಕಾರ್ಮಿಕನಿಗೆ ಸಿಕ್ತು 35 ಲಕ್ಷ ಮೌಲ್ಯದ ವಜ್ರ…………..
ಭೋಪಾಲ್: ಕಾರ್ಮಿಕರೊಬ್ಬನಿಗೆ 35 ಲಕ್ಷ ಮೌಲ್ಯದ ವಜ್ರಗಳು ಸಿಕ್ಕಿರುವ ಘಟನೆ ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ವಜ್ರ ಗಣಿಯೊಂದರಲ್ಲಿ ನಡೆದಿದೆ. ಪನ್ನಾ ವಜ್ರ ಗಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸುಬಲ್ ಎಂಬವರಿಗೆ ಅಂದಾಜು 30 ಲಕ್ಷದಿಂದ 35 ಲಕ್ಷ ಮೌಲ್ಯದ ಮೂರು ವಜ್ರಗಳನ್ನು ಸಿಕ್ಕಿವೆ. 7.5 ಕ್ಯಾರೆಟ್ ನಿವ್ವಳ ತೂಕದ ಮೂರು ವಜ್ರಗಳನ್ನು ಗಣಿಯಲ್ಲಿ ಸಿಕ್ಕಿವೆ ಎಂದು ಪನ್ನಾ ಜಿಲ್ಲೆಯ ವಜ್ರಾಧಿಕಾರಿ ಆರ್.ಕೆ.ಪಾಂಡೆ ತಿಳಿಸಿದ್ದಾರೆ. ಈ ವಜ್ರಗಳನ್ನು ಕಾರ್ಮಿಕರ ಸುಬಲ್ …
Read More »