Breaking News

ರಾಷ್ಟ್ರೀಯ

ಹೊಸ ಮೊಬೈಲ್ ಖರೀದಿಸಬೇಕೆಂದುಕೊಂಡವರಿಗೆ ಗುಡ್ ನ್ಯೂಸ್

ನವದೆಹಲಿ: ಭಾರತಕ್ಕೆ ಮೊಬೈಲ್ ಕಂಪನಿಗಳು ಲಗ್ಗೆ ಇಡಲು ಸಜ್ಜಾಗಿವೆ. 11 ಲಕ್ಷ ಕೋಟಿ ರೂ. ಮೌಲ್ಯದ ಮೊಬೈಲ್ ಫೋನ್ ಗಳ ಉತ್ಪಾದನೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಮುಂದಿನ ಐದು ವರ್ಷದಲ್ಲಿ 22 ದೇಶಿ ಮತ್ತು ವಿದೇಶಿ ಕಂಪನಿಗಳು ಭಾರತದಲ್ಲಿ 11 ಲಕ್ಷ ಕೋಟಿ ರೂ. ಮೌಲ್ಯದ ಮೊಬೈಲ್ ಫೋನ್ ಗಳನ್ನು ಉತ್ಪಾದಿಸುವ ಪ್ರಸ್ತಾಪ ಮಾಡಿರುವುದಾಗಿ ಕೇಂದ್ರ ಟೆಲಿಕಾಂ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಸ್ಯಾಮ್ಸಂಗ್, ರೈಸಿಂಗ್ ಸ್ಟಾರ್, ಫಾಕ್ಸ್ ಕಾರ್ನ್ ಮೊದಲಾದ ಅಂತಾರಾಷ್ಟ್ರೀಯ …

Read More »

ಲಾಕ್‌ಡೌನ್‌ನಲ್ಲೂ 100 ಯಶಸ್ವಿ ಡಯಾಲಿಸಿಸ್‌

ಬೆಳಗಾವಿ: ಇಲ್ಲಿನ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ರೋಟರಿ-ಕೆಎಲ್‌ಇ ಡಯಾಲಿಸಿಸ್ ಕೇಂದ್ರದಲ್ಲಿ ಲಾಕ್‌ಡೌನ್‌ ಸಂದರ್ಭದಲ್ಲೂ 100 ಮೂತ್ರಪಿಂಡ ರೋಗಿಗಳಿಗೆ ಡಯಾಲಿಸಿಸ್‌ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಈಚೆಗೆ ವೈದ್ಯರ ತಂಡಕ್ಕೆ ಶುಭ ಹಾರೈಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಮೂತ್ರಪಿಂಡ ತಜ್ಞ ಡಾ.ವಿಜಯಕುಮಾರ ಪಾಟೀಲ, ‘ಮೂತ್ರಪಿಂಡ ಕಾಯಿಲೆ ಇರುವ ರೋಗಿಗಳಿಗೆ ಡಯಾಲಿಸಿಸ್‌ ಕಡ್ಡಾಯವಾಗಿ ಬೇಕಾಗಿರುವ ಚಿಕಿತ್ಸೆಯಾಗಿದೆ. ಕೊರೊನಾ ಸೋಂಕಿನ ಭೀತಿಯ ಸಂದರ್ಭದಲ್ಲಿ ರೋಗಿಗಳು ಹೆದರುವ ಅಗತ್ಯವಿಲ್ಲ. ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಾ ಧೈರ್ಯವಾಗಿ ಆಸ್ಪತ್ರೆಗೆ …

Read More »

ಕರಾವಳಿಯಲ್ಲಿ ಉತ್ತಮ ಮಳೆ

ಬೆಂಗಳೂರು: ಕರಾವಳಿ ಭಾಗದ ಜಿಲ್ಲೆಗಳು ಹಾಗೂ ಬೆಳಗಾವಿ, ಧಾರವಾಡ ಜಿಲ್ಲೆಗಳ ಕೆಲವೆಡೆ ಶನಿವಾರ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬೆಳಿಗ್ಗೆ ಉತ್ತಮ, ಮಧ್ಯಾಹ್ನದ ನಂತರ ತುಂತುರು ಮಳೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಒಟ್ಟಾರೆ 5 ಸೆಂ.ಮೀ. ದಾಖಲಾಗಿದೆ. ಹವಾಮಾನ ಇಲಾಖೆಯು ಸಮುದ್ರದಲ್ಲಿ ಗಾಳಿ ಅಬ್ಬರ ಹೆಚ್ಚಿರಲಿದೆ ಎಂದು ಎಚ್ಚರಿಸಿದೆ. ಚಿಕ್ಕಮಗಳೂರಿನ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಮಳೆಯಾಗಿದೆ. …

Read More »

ಮಂತ್ರಿಗಿರಿ ಉಳಿಸಿಕೊಳ್ಳಲು ಸಚಿವೆ ಜೊಲ್ಲೆ ಯತ್ನ.? : ರಮೇಶ್ ಜಾರಕಿಹೊಳಿ ಭೇಟಿಯಾದ ಶಶಿಕಲಾ..!

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎನ್ನುವ ಸುದ್ದಿಯ ನಡುವೆಯೇ ಹಲವು ಸಚಿವರನ್ನು ಸಂಪುಟದಿಂದ ಕೈ ಬಿಡಲಾಗುತ್ತಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಅದರಲ್ಲೂ ರಾಜ್ಯದ ಏಕೈಕ ಮಹಿಳಾ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊಕ್ ಕೊಡಲಾಗುತ್ತದೆ ಎನ್ನುವ ಮಾಹಿತಿ ಇದೆ. ಹೀಗಾಗಿ ಸಚಿವೆ ಶಶಿಕಲಾ ಜೊಲ್ಲೆ ತಮ್ಮ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ ಮುಂದುವರಿಸಿದ್ದಾರೆ. 2 ದಿನಗಳ ಹಿಂದೆಯಷ್ಟೇ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿ ಬಂದಿರುವ ಜೊಲ್ಲೆ ಇಂದು ಜಲಸಂಪನ್ಮೂಲ …

Read More »

ಸದ್ಯ 3456 ಸೋಂಕಿತರು…..

ಬೆಳಗಾವಿ: ಕೋವಿಡ್ ಮಹಾಮಾರಿ ದಿನದಿಂದ ದಿನಕ್ಕೂ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ ಮತ್ತೆ ದ್ವಿಶತಕ ದಾಟಿದೆ. 219 ಸೋಂಕು ಪ್ರಕರಣ ದೃಢಪಟ್ಟಿವೆ. ಒಟ್ಟಾರೆ 3456 ಸೋಂಕಿತರು ಇದ್ದು, ಜತೆಗೆ ನಾಲ್ವರು ಕೋವಿಡ್ ಗೆ ಬಲಿಯಾಗಿದ್ದಾರೆ. ಕೋವಿಡ್ ಸೋಂಕಿತರ ಏರಿಕೆ ಪ್ರಮಾಣ ಹೆಚ್ಚುತ್ತಲೇ ಹೊರಟಿದ್ದು, ಕಳೆದ ಒಂದು ವಾರದಿಂದ ದಿನನಿತ್ಯ 200ರ ಗಡಿ ದಾಟುತ್ತಲೇ ಸಾಗಿದೆ. ಸಾವಿನ ಸಂಖ್ಯೆಯೂ ಇಳಿಕೆ ಆಗಿಲ್ಲ. ಹೆಚ್ಚಿನ ಸೋಂಕಿತರು ಹಳ್ಳಿಗಳಲ್ಲಿ ಪತ್ತೆಯಾಗುತ್ತಿದ್ದಾರೆ. ರಾಯಬಾಗದ 60 ವರ್ಷದ ವ್ಯಕ್ತಿ, …

Read More »

ಬೆಳಗಾವಿ: ಕೆರೆಗೆ ಜಿಗಿದು ಪ್ರಾಣಬಿಟ್ಟ ಯುವತಿ

ಬೆಳಗಾವಿ:ಕೆರೆಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಗಾವಿ ತಾಲೂಕಿನ ಯಳ್ಳೂರ ಹತ್ತಿರ ಅರವಳಿಯಲ್ಲಿ ನಡೆದಿದೆ. ಇಲ್ಲಿನ ಭಾಗ್ಯನಗರದ ಸೋನಾಲಿ ಸಂಜಯ ಸುರೇಕರ (19) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮಧ್ಯಾಹ್ನ ತಮ್ಮ ತಂದೆಯ ದ್ವಿಚಕ್ರ ವಾಹನ ತೆಗೆದುಕೊಂಡು ಯಳ್ಳೂರ ಹತ್ತಿರ ಇರುವ ಅರವಳಿ ಕೆರೆಗೆ ತೆರಳಿದ್ದಾಳೆ. ತನ್ನೊಂದಿಗೆ ತೆಗೆದುಕೊಂಡು ಹೋಗಿದ್ದ ಮೊಬೈಲ್‌ ಅನ್ನು ದ್ವಿಚಕ್ರ ವಾಹನದಲ್ಲಿಟ್ಟು ಕೆರೆಗೆ ಹಾರಿದ್ದಾಳೆ. ಈ ಘಟನೆಯನ್ನು ಸ್ಥಳೀಯರು ಪ್ರತ್ಯಕ್ಷವಾಗಿ ನೋಡಿದ್ದರಿಂದ ತಕ್ಷಣ ಘಟನಾ …

Read More »

ಮರಾಠಿಯಲ್ಲಿ ಮಾತನಾಡಿದ ಸಚಿವ ಶ್ರೀಮಂತ ಪಾಟೀಲ!

ಅಥಣಿ: ತಾಲ್ಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಸಕ್ಕರೆ ಕಾರ್ಖಾನೆ ಶನಿವಾರ ನಡೆದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದ ಜವಳಿ ಸಚಿವ ಶ್ರೀಮಂತ ಪಾಟೀಲ ಮರಾಠಿಯಲ್ಲಿ ಮಾತನಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.   ‘ನಮ್ಮ ಭಾಗದಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಾಣವಾಗುತ್ತಿರುವುದು ತುಂಬಾ ಖುಷಿಯಾಗಿದೆ. ಕಾರ್ಖಾನೆಯ ಶೇ 75 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ನೀಡಬೇಕು’ ಎಂದು ಮರಾಠಿಯಲ್ಲಿ ಮನವಿ ಮಾಡಿದ್ದರು. …

Read More »

ಬಕ್ರೀದ್‌; ಸರಳವಾಗಿ ಆಚರಿಸಿದ ಮುಸ್ಲಿಂ ಬಾಂಧವರು

ಬೆಳಗಾವಿ: ಕೋವಿಡ್‌ ಸೋಂಕಿನ ಹಿನ್ನೆಲೆಯಲ್ಲಿ ಶನಿವಾರ ಮುಸ್ಲಿಂ ಬಾಂಧವರು ಬಕ್ರೀದ್‌ ಹಬ್ಬವನ್ನು ಸರಳವಾಗಿ ಆಚರಿಸಿದರು. ಪ್ರತಿವರ್ಷ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗುತ್ತಿತ್ತು. ಆದರೆ, ಈ ಸಲ ಕೋವಿಡ್‌ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ಬಂಧಿಸಲಾಗಿತ್ತು. ಹಾಗಾಗಿ, ಮಸೀದಿಗಳಲ್ಲಿ ಹಾಗೂ ಮನೆಗಳಲ್ಲಿ ಪರಸ್ಪರ ಅಂತರ ಕಾಪಾಡಿಕೊಂಡು ಪ್ರಾರ್ಥನೆ ಸಲ್ಲಿಸಿದರು. ಅಡುಗೆ ಕೂಡ ಸರಳವಾಗಿತ್ತು. ಪ್ರತಿವರ್ಷ ಹೊಸ ಉಡುಗೆ ತೊಟ್ಟು ಹಬ್ಬ ಆಚರಿಸುತ್ತಿದ್ದ ಆ ಸಂಭ್ರಮ ಕಾಣಲಿಲ್ಲ. ಪ್ರತಿ ವರ್ಷ ತಮ್ಮ ನೆಂಟರು ಹಾಗೂ …

Read More »

​ ತಿಂಗಳ ಪ್ರಯಾಣಿಕರ ಸಂಖ್ಯೆಯಲ್ಲಿ 2ನೇ ಸ್ಥಾನಕ್ಕೇರಿದ ಬೆಳಗಾವಿ ವಿಮಾನ ನಿಲ್ದಾಣ

ಬೆಳಗಾವಿ: ಜೂನ್ ತಿಂಗಳ ವಿಮಾನ ಪ್ರಯಾಣದ ಮಾಹಿತಿಯನ್ನ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ರಾಜ್ಯದಲ್ಲಿನ ಪ್ರಯಾಣಿಕರ ಸಂಖ್ಯೆಯ ವಿಚಾರದಲ್ಲಿ ಬೆಳಗಾವಿ ವಿಮಾನ ನಿಲ್ದಾಣ 2ನೇ ಸ್ಥಾನಕ್ಕೇರಿದೆ ಈ ಮೂಲಕ ಬೆಳಗಾವಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನೇ ಹಿಂದಿಕ್ಕಿದೆ. ಬೆಂಗಳೂರು ಮೊದಲನೇ ಸ್ಥಾನದಲ್ಲಿದ್ದು ನಂತರದ ಸ್ಥಾನವನ್ನ ಬೆಳಗಾವಿ ಪಡೆದುಕೊಂಡಿದೆ. ಜೂನ್ ತಿಂಗಳಲ್ಲಿ ಬೆಳಗಾವಿಯಿಂದ 391 ವಿಮಾನಗಳ ಹಾರಾಟವಾಗಿದ್ದು, ಒಟ್ಟು 10,224 ಪ್ರಯಾಣಿಕರು ಸಂಚಾರ ಮಾಡಿದ್ದಾರೆ. ಇನ್ನು …

Read More »

ಕರೊನಾ ಕೇಸ್​: ಸಕ್ರಾ ಸೇರಿ ಐದು ಆಸ್ಪತ್ರೆಗಳ ವಿರದ್ಧ ಎಫ್​ಐಆರ್

ಬೆಂಗಳೂರು: ಸರ್ಕಾಋದ ಆದೇಶದಂತೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಶೇಕಡ 50 ಹಾಸಿಗೆ ಒದಗಿಸದ ಐದು ಖಾಸಗಿ ಆಸ್ಪತ್ರೆಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ನೃಪತುಂಗಾ ರಸ್ತೆಯಲ್ಲಿರುವ ಸೇಂಟ್ ಮಾರ್ಥಾಸ್ ಆಸ್ಪತ್ರೆ, ಶಂಕರಪುರದ ರಂಗದೊರೆ ಮೆಮೋರಿಯಲ್ ಆಸ್ಪತ್ರೆ, ಕ್ವೀನ್ಸ್ ರಸ್ತೆಯ ಶಿಫಾ ಆಸ್ಪತ್ರೆ, ಕನ್ನಿಂಗ್​ಹ್ಯಾಂ ರಸ್ತೆಯ ಫೋರ್ಟಿಸ್ ಆಸ್ಪತ್ರೆ ಹಾಗೂ ದೇವರಬೀಸನಹಳ್ಳಿಯ ಸಕ್ರಾ ಆಸ್ಪತ್ರೆ ವಿರುದ್ಧ ದೂರು ದಾಖಲಾಗಿರುವಂಥದ್ದು.   ಕರೊನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಮೀಸಲಿರಿಸಿದ ಬೆಡ್​ಗಳ ಕುರಿತು ಐಎಎಸ್ ಅಧಿಕಾರಿಗಳಿಗೆ …

Read More »