ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಪ್ರತೀನಿತ್ಯ ಕರ್ನಾಟಕ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿದೆ. ರಾಜ್ಯದಲ್ಲಿ ಸೋಂಕಿನ ಸರಾಸರಿ ಪಾಸಿಟಿವಿಟಿ ಪ್ರಮಾಣ ದುಪ್ಪಟ್ಟಾಗಿದೆ. ಕಳೆದ ಜು.10ರವರೆಗೆ ಪ್ರತಿ 100 ಪರೀಕ್ಷೆಗಳಲ್ಲಿ ಸರಾಸರಿ ಶೇ.4.18ರಷ್ಟಿದ್ದ ಪಾಸಿಟಿವಿಟಿ ದರ ಇದೀಗ ಶೇ.8.60ಕ್ಕೆ ಏರಿಕೆಯಾಗಿದೆ. ಅಲ್ಲದೆ, ಕಳೆದ 18 ದಿನಗಳಲ್ಲಿ ಪ್ರತಿ 100 ಪರೀಕ್ಷೆಗಳಲ್ಲಿ ಸರಾಸರಿ ಶೇ.16.88 ಮಂದಿಗೆ ಸೋಂಕು ದೃಢಪಡುವ ಮೂಲಕ ಆತಂಕ ಹೆಚ್ಚಾಗುವಂತೆ ಮಾಡಿದೆ. ರಾಜ್ಯದಲ್ಲಿ ಜು.10ರವರೆಗೆ ಪಾಸಿಟಿವಿಟಿ …
Read More »ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನಾ ವರದಿ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ ನೀಡಿದ ಸರ್ಕಾರ
ಬೆಳಗಾವಿ: ಉತ್ತರ ಕರ್ನಾಟಕದ ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಒಪ್ಪಿಗೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ ನದಿಗೆ ಅಣೆಕಟ್ಟು ನಿರ್ಮಾಣ ಮಾಡಿ. ಕಾಲುವೆ ಮುಖಾಂತರ 1.72 ಟಿಎಂಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನೆರಸೆ ಗ್ರಾಮದ ಬಳಿ ಬಂಡೂರ …
Read More »ಕೋವಿಡ್ ಸೋಂಕಿತರಿಗೆ ದಿನಬಳಕೆ-ಮೆಡಿಕಲ್ ಕಿಟ್ ವಿತರಣೆ
ಗೋಕಾಕ: ಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ಚಾಚುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ ಎಂದು ಹಿರಿಯ ತಜ್ಞ ವೈದ್ಯ ಡಾ| ಆರ್.ಎಸ್. ಬೆಣಚಿನಮರಡಿ ಹೇಳಿದರು. ಮಂಗಳವಾರ ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊರೊನಾ ರೋಗಿಗಳಿಗೆ ಕೊಡಮಾಡಿದ ದಿನಬಳಕೆಯ ಮತ್ತು ಮೆಡಿಕಲ್ ಕಿಟ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಲಾಕ್‌ಡೌನ್ ಸಮಯದಲ್ಲಿ ಅರಭಾವಿ ಕ್ಷೇತ್ರದ ಪ್ರತಿ ಕುಟುಂಬಕ್ಕೆ ದಿನಸಿ ಕಿಟ್ ವಿತರಿಸಿದ್ದ ಶಾಸಕರು ಈಗ …
Read More »ಇಂದು ಹಾಪ್ ಸೆಂಚುರಿ ಬಾರಿಸಿದ ಕೊರೋನಾ: ನಗರದ ಒಂದೇ ಕುಟುಂಬದ ಹತ್ತು ಜನರಿಗೆ ತಗುಲಿದ ಸೋಂಕು
ಗೋಕಾಕ: ಗೋಕಾಕ ತಾಲೂಕಿನಲ್ಲಿ ಮಾರಣಾಂತಿಕ ಕೊರೋನಾ ಸೋಂಕು ಪ್ರಥಮ ಬಾರಿಗೆ ಹಾಪ್ ಸೆಂಚುರಿ ಬಾರಿಸಿದ್ದು ಒಂದೇ ಕುಟುಂಬದ 10 ಜನರಿಗೆ ಕೊರೋನಾ ಧೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯ ಅಧಿಕಾರಿ ಜಗದೀಶ ಜಿಂಗಿ ಮಾಹಿತಿ ನೀಡಿದ್ದಾರೆ. ಗೋಕಾಕ ತಾಲೂಕಿನಲ್ಲಿ ಇಂದು ಒಟ್ಟು 57 ಪ್ರಕರಣಗಳು ವರದಿಯಾಗಿದ್ದು ಗೋಕಾಕ ನಗರದಲ್ಲಿಯೆ 24 ಸೋಂಕಿತರು ಪತ್ತೆಯಾಗಿದ್ದಾರೆ. ನಗರದ ವಿದ್ಯಾನಗರದ ಒಂದೇ ಕುಟುಂಬದ 10 ಜನರಿಗೆ ಕೊರೋನಾ ತಗುಲಿದ್ದು ಆತಂಕ ಹೆಚ್ಚಿಸಿದೆ. ಉಳಿದಂತೆ ಗೋಕಾಕ …
Read More »ಪಂಜಾಬ್ ಸರ್ಕಾರ ಶೀಘ್ರದಲ್ಲೇ 11 ಮತ್ತು 12ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್ ವಿತರಿಸಲಿದೆ.
ಚಂಡೀಗಡ: ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಸರ್ಕಾರ ಶೀಘ್ರದಲ್ಲೇ 11 ಮತ್ತು 12ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್‌ಫೋನ್ ವಿತರಿಸಲಿದೆ. ಈಗಾಗಲೇ ಒಟ್ಟು 50 ಸಾವಿರ ಸ್ಮಾರ್ಟ್‌ಫೋನ್‌ಗಳು ಪಂಜಾಬಿಗೆ ಆಗಮಿಸಿದ್ದು, ಯಾರ ಬಳಿ ಫೋನ್ ಇಲ್ಲವೋ ಆ ವಿದ್ಯಾರ್ಥಿನಿಯರಿಗೆ ಈ ಫೋನ್‌ಗಳನ್ನು ನೀಡಲಾಗುವುದು. ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಈ ಫೋನ್‌ಗಳು ಸಹಾಯವಾಗಲಿದೆ ಎಂದು ಸಿಎಂ ಅಮರಿಂದರ್ ಸಿಂಗ್ ತಿಳಿಸಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಜನತೆಗೆ …
Read More »ಖಾತೆಯಲ್ಲಿಯ 15 ಕೋಟಿ ಹೋಗಿದ್ದು ಯಾರ ಖಾತೆಗೆ?ಪಂಚ ಸವಾಲುಗಳಿಗೆ ಉತ್ತರ ಬೇಕೆಂದ ಸುಶಾಂತ್ ತಂದೆ
ಮುಂಬೈ/ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ದಿನದಿಂದ ದಿನ ಜಟಿಲವಾಗುತ್ತಾ ಹೋಗ್ತಿದೆ. ಸುಶಾಂತ್ ತಂದೆ ಕೆಕೆ ಸಿಂಗ್ ನಟಿ ರಿಯಾ ಚಕ್ರವರ್ತಿ ಮತ್ತು ಇಂದ್ರಜಿತ್ ಚಕ್ರವರ್ತಿ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೆಕೆ ಸಿಂಗ್ ದೂರಿನಲ್ಲಿ ತಮಗೆ ಐದು ಪ್ರಶ್ನೆಗಳಿಗೆ ಉತ್ತರ ಬೇಕಂದಿದ್ದಾರೆ. ಪಂಚ ಸವಾಲುಗಳು: 1. 2019ಕ್ಕಿಂತ ಮೊದಲು ನನ್ನ ಮಗನಿಗೆ ಯಾವುದೇ ಸಮಸ್ಯೆ ಇರಲಿಲ್ಲ. ರಿಯಾಳ ಸಂಪರ್ಕಕ್ಕೆ …
Read More »ಪತಿಯೊಬ್ಬ ಪತ್ನಿಯನ್ನು ಕೊಂದು ನಂತರ ಕುತ್ತಿಗೆ ಕೊಯ್ದುಕೊಂಡು ತಾನೂ ಆತ್ಮಹತ್ಯೆಗೆ
ಹೈದರಾಬಾದ್: ಪತಿಯೊಬ್ಬ ಪತ್ನಿಯನ್ನು ಕೊಂದು ನಂತರ ಕುತ್ತಿಗೆ ಕೊಯ್ದುಕೊಂಡು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಅರುಣಾ (29) ಕೊಲೆಯಾದ ಪತ್ನಿ. ಆರೋಪಿ ಪತಿ ಪ್ರಭಾಕರ್ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಭಾಕರ್ ಎಂಟು ವರ್ಷಗಳ ಹಿಂದೆ ಕರ್ನಾಟಕದ ಕೋಲಾರ ಮೂಲದ ಅರುಣಾ ಜೊತೆ ಮದುವೆಯಾಗಿದ್ದನು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರಭಾಕರ್ ಕುರಿಗಳನ್ನು ಸಾಕುತ್ತಾ ಕುಟುಂಬವನ್ನು ನೋಡಿಕೊಳ್ಳುತ್ತಿದ್ದನು. ಇತ್ತೀಚೆಗೆ …
Read More »ಮನೆಯಲ್ಲಿ ಜೂಜಾಟ ವಾಡುವಾಗ ಸಿಕ್ಕಿಬಿದ್ದ ಖ್ಯಾತ ನಟ.
ಚೆನ್ನೈ: ಕೊರೊನಾ ನಿಯಂತ್ರಣಕ್ಕಾಗಿ ವಿಧಿಸಿರುವ ಲಾಕ್‍ಡೌನ್ ನಿಯಮವನ್ನು ಉಲ್ಲಂಘನೆ ಮಾಡಿ ಮನೆಯಲ್ಲಿಯೇ ಜೂಜಾಟ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಭಾರತದ ಖ್ಯಾತ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಖ್ಯಾತ ನಟ ಶ್ಯಾಮ್ ನುಂಗಂಬಕ್ಕಂ ಪ್ರದೇಶದ ಸಮೀಪವಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಜೂಜಾಟ ಆಡುತ್ತಿದ್ದರು. ಅಲ್ಲದೇ ಈ ಜೂಜಾಟದಲ್ಲಿ ತಮಿಳು ನಟರೊಬ್ಬರು ಹಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ನಟನ ಅಪಾರ್ಟ್‌ಮೆಂಟ್ ಮೇಲೆ ದಾಳಿ ಮಾಡಿದ್ದಾರೆ. …
Read More »ಗೆಳೆಯನ ಜೊತೆ ಎಂಗೇಜ್ ಆದ ಹಾಟ್ ಬೆಡಗಿ ಪೂನಂ ಪಾಂಡೆ
ಮುಂಬೈ: ನಟಿ ಮತ್ತು ರೂಪದರ್ಶಿ ಪೂನಂ ಪಾಂಡೆ ತನ್ನ ಬಾಯ್ ಫ್ರೆಂಡ್ ಸ್ಯಾಮ್ ಬಾಂಬೆ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತನ್ನ ನಿಶ್ಚಿತಾರ್ಥದ ವಿಚಾರವಾಗಿ ಪೂನಂ ಪಾಂಡೆ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಆದರೆ ತಮ್ಮ ನಿಶ್ಚಿತಾರ್ಥದ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಾಕಿಕೊಂಡಿರುವ ಸ್ಯಾಮ್ ಬಾಂಬೆ ಕೊನೆಗೂ ನಾವು ನಿಶ್ಚಿತಾರ್ಥ ಮಾಡಿಕೊಂಡೆವು ಎಂದು ಬರೆದುಕೊಂಡಿದ್ದಾರೆ. ಸ್ಯಾಮ್ ಮತ್ತು ಪೂನಂ ಕಳೆದ ಕೆಲದಿನಗಳಿಂದ ಪ್ರೀತಿಸುತ್ತಿದ್ದರು ಸ್ಯಾಮ್ ಹಂಚಿಕೊಂಡಿರುವ ಫೋಟೋದಲ್ಲಿ ಇಬ್ಬರು ಬೆರಳುಗಳಲ್ಲಿ …
Read More »ಸಂಜಯ್ ದತ್ ವಿರುದ್ಧ ಹೈಕೋರ್ಟ್‌ಗೆ ಹೋದ ರಾಜೀವ್‌ಗಾಂಧಿ ಹಂತಕ!
ಮುಂಬೈ: ಬಾಲಿವುಡ್ ನಟ ಸಂಜಯ್ ದತ್‌ಗೆ ನಾಳೆ 60ನೇ ಹುಟ್ಟುಹಬ್ಬದ ಸಂಭ್ರಮ. ಆದರೆ ಅದರ ಮುನ್ನಾದಿನವೇ ಅವರಿಗೆ ಶಾಕ್ ಆಗುವಂಥ ವಿಚಾರವೊಂದು ನಡೆದಿದೆ. ಅದೇನೆಂದರೆ ಅವರ ವಿರುದ್ಧ ಇಂದು ಬಾಂಬೆ ಹೈಕೋರ್ಟ್‌ಗೆ ಕೇಸೊಂದು ದಾಖಲಾಗಿದೆ. ಈ ಕೇಸ್ ದಾಖಲು ಮಾಡಿರುವವರು ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜಿ ಪೆರರಿವಾಲನ್. ಅಷ್ಟಕ್ಕೂ ಈತನಿಗೂ, ಸಂಜಯ್ ದತ್‌ಗೂ ಸಂಬಂಧ ಏನೆಂದರೆ, ರಾಜೀವಗಾಂಧಿ ಹತ್ಯೆ ಪ್ರಕರಣದಲ್ಲಿ ಅವರನ್ನು ಹತ್ಯೆ ಮಾಡಲು …
Read More »