ಗೋಕಾಕ ಜಲಪಾತಕ್ಕೆ ಶಾಶ್ವತವಾಗಿರೋ ಸ್ಟಿಲ್ ಬ್ಯಾರಿಕೇಡ್(ರಕ್ಷಾಗೋಡೆ) ನಿರ್ಮೀಸಿದ ಗೋಕಾಕ ಪೊಲೀಸರು ಗೋಕಾಕ ಫಾಲ್ಸ್ ನಲ್ಲಿ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಿರುವುದನ್ನು ಮನಗಂಡು ಎಸ್ಪಿ ಬೆಳಗಾವಿಯವರ ಮಾರ್ಗದರ್ಶನದಂತೆ ಇಂದು ಗೋಕಾಕ ಪೊಲೀಸರು ಗೋಕಾಕ ಜಲಪಾತಕ್ಕೆ ಶಾಶ್ವತವಾಗಿರೋ ಸ್ಟಿಲ್ ಬ್ಯಾರಿಕೇಡ್(ರಕ್ಷಾಗೋಡೆ) ನಿರ್ಮೀಸಿದರು ಪ್ರತಿಬಾರಿಯೂ ಮಳೆ ಬಂದಾಗ ನೀರು ಹೆಚ್ಚಾದ ಸಮಯದಲ್ಲಿ ಪ್ರವಾಸಿಗರು ಜಲಪಾತದ ತುದಿಗೆ ಹೋಗಿ ಹುಚ್ಚಾಟ ಮೆರೆಯುತ್ತಿದ್ದನ್ನು ಮನಗಂಡು ಗೋಕಾಕ ಜಲಪಾತಕ್ಕೆ ಶಾಶ್ವತ ಬ್ಯಾರಿಕೇಡ್ ವ್ಯವಸ್ಥೆಯನ್ನು ಪೊಲೀಸರು ಮಾಡಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ …
Read More »ರಾಜ್ಯದಲ್ಲಿ ರಮ್, ವಿಸ್ಕಿ,ಬ್ರಾಂಡಿ ಕೊರತೆ
ಬೆಂಗಳೂರು:ಪ್ರೀಮಿಯಂ ಮದ್ಯದ ದರ ಇಳಿಸಿದ ಬೆನ್ನಲ್ಲೇ ರಮ್, ವಿಸ್ಕಿ,ಬ್ರಾಂಡಿ ಮದ್ಯಗಳ ಕೊರತೆಯಾಗಿದೆ. ರಾಜ್ಯದಲ್ಲಿ 32ಗಿಂತ ಅಧಿಕ ಮದ್ಯ ತಯಾರಿಕಾ ಕಂಪನಿಗಳಿವೆ.ಪ್ರತಿ ನಿತ್ಯ ಆಯಾ ಕಂಪನಿಗಳು ತಮ್ಮ ಬ್ರ್ಯಾಂಡ್ ಅಡಿ ಮದ್ಯ ತಯಾರಿಸಿ ಸರ್ಕಾರಕ್ಕೆ ತೆರಿಗೆ ಪಾವತಿಸಿ ಮದ್ಯ ಮಾರಾಟ ಮಾಡುತ್ತಿವೆ. ಆದರೆ, ಪ್ರೀಮಿಯಂ ಮದ್ಯದ ದರ ಇಳಿಸಿದ ಬೆನ್ನಲ್ಲೇ ಕೆಲ ತಯಾರಿಕಾ ಕಂಪನಿಗಳು ಸೂಕ್ತವಾಗಿ ಮದ್ಯವನ್ನು ಉತ್ಪಾದಿಸುತ್ತಿಲ್ಲ. ಇದರಿಂದಾಗಿ ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತದಲ್ಲಿ (ಕೆಎಸ್ಬಿಸಿಎಲ್) ಸೂಕ್ತ ಮದ್ಯ …
Read More »ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂಡೂಡಿದೆ. ರಾಜ್ಯಪಾಲರ ನಡೆ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯಪೀಠ, ಉಭಯ ವಕೀಲರ ಸುದೀರ್ಘ ವಾದ-ಪ್ರತಿವಾದವನ್ನು ಆಲಿಸಿತು. ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಹಾಗೂ ರವಿವರ್ಮ ಕುಮಾರ್ ವಾದ …
Read More »ರಾಜ್ಯಪಾಲರ ಕಚೇರಿ ಬಳಸಿಕೊಂಡು, ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಹುನ್ನಾರ:CM&DCM
ಬೆಂಗಳೂರು, ಆಗಸ್ಟ್ 31: ರಾಜ್ಯಪಾಲರ ಕಚೇರಿ ಬಳಸಿಕೊಂಡು, ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಹುನ್ನಾರ ಮಾಡಲಾಗುತ್ತಿದೆ. ಕರ್ನಾಟಕ ತಾನು ಬೆಳೆದು ಅನೇಕ ರಾಜ್ಯಗಳ ಬೆಳವಣಿಗೆಗೂ ಸಹಾಯ ಮಾಡುತ್ತಿದೆ. ಇಂತಹ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ರಾಜ್ಯಪಾಲರ ಕಚೇರಿಯಿಂದ ಆಗಬಾರದು ಎಂಬುದಷ್ಟೇ ನಮ್ಮ ಕಾಳಜಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ …
Read More »ಅನಾರೋಗ್ಯದಿಂದ ಬಳಲುತ್ತಿರುವ ಹುಲಿಯನ್ನು ದತ್ತು ಪಡೆದ ನಟಿ ಸಂಯುಕ್ತ ಹೊರನಾಡು
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಸಂಯುಕ್ತ ಹೊರನಾಡು ಅವರು ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹುಲಿಯನ್ನು ದತ್ತು ಪಡೆದಿದ್ದಾರೆ. ಈ ಸುದ್ದಿಯನ್ನು ಸೋಶಿಯಲ್ ಮೀಡಿಯಾ ಮೂಲಕವಾಗಿ ಹಂಚಿಕೊಂಡಿದ್ದಾರೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿರುವ 28 ತಿಂಗಳ ಸಿಂಚನ ಎಂಬ ಹೆಣ್ಣು ಹುಲಿ ಮರಿಯನ್ನು ನಟಿ ಸಂಯುಕ್ತಾ ಹೊರನಾಡ್ ದತ್ತು ಪಡೆದಿದ್ದಾರೆ. ಈ ಹುಲಿ ನರದೌರ್ಬಲ್ಯ ಸಮಸ್ಯೆ ಎದುರಿಸುತ್ತಿರುವುದರಿಂದ ಕಾಡಿನಲ್ಲಿ ವಾಸಿಸಲು ಆಗದ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಂರಕ್ಷಣಾ ಕೇಂದ್ರದಲ್ಲಿ ಆರೈಕೆ ಮಾಡಲಾಗುತ್ತಿದೆ. ಪ್ರಾಣ …
Read More »ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಉದ್ದು, ಸೋಯಾಬೀನ್ ಗೂ ಬೆಂಬಲ ಬೆಲೆ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಮತ್ತೆರಡು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಲಾಗಿದೆ. ಬೆಂಬಲ ಬೆಲೆ ಯೋಜನೆ ಅಡಿ ಉದ್ದು, ಸೋಯಾಬೀನ್ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜೊತೆಗೆ ಉದ್ದು ಮತ್ತು ಸೋಯಾಬೀನ್ ಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶನ ನೀಡಿದೆ. ರಾಜ್ಯದಲ್ಲಿ 2024 -25ರ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆ ಅಡಿ 19,760 ಮೆಟ್ರಿಕ್ …
Read More »ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ : ಇಂದು ಹೈಕೋರ್ಟ್ ನಲ್ಲಿ ‘ಸಿಎಂ ಸಿದ್ದರಾಮಯ್ಯ’ ಭವಿಷ್ಯ ನಿರ್ಧಾರ..!
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಡೆ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ನಡೆಸಲಿದ್ದು, ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರವಾಗಲಿದೆ . ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆಗಸ್ಟ್ 29 ರಂದು ನಡೆದಿದ್ದು, ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಸುದೀರ್ಘ ವಾದ ಮಂಡನೆ ಮಾಡಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಡುಮ್ಮ – ಉರಬಿಹಟ್ಟಿ ಗ್ರಾಮದ ಶ್ರೀ ಬಸವೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …
Read More »ಮಣ್ಣಿನ ಗಣೇಶ ಮೂರ್ತಿ ವಿಸರ್ಜನೆ ಮಾಡುವ ಮುಚ್ಚಳಿಕೆ ಬರೆಸಿದ್ರೆ ಮಾತ್ರ ಪೆಂಡಾಲ್ ಗೆ ಅನುಮತಿ : ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು : ಗಣೇಶ ಪರಿಸರ ಮತ್ತು ಪ್ರಕೃತಿಯಿಂದಲೇ ಹುಟ್ಟಿದ ದೇವರಾಗಿದ್ದು, ಗಣಪತಿಯ ಪೂಜಿಸುವ ನಾವು ಪ್ರಕೃತಿ, ಪರಿಸರವನ್ನೂ ಉಳಿಸಬೇಕು, ಈ ಬಾರಿ ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ. ಸಂದೇಶದಲ್ಲಿ ಅವರು, ಈ ವರ್ಷ ದೇಶಾದ್ಯಂತ ಸುರಿದ ಧಾರಾಕಾರ ಮಳೆಯಿಂದ ಹಲವು ಕಡೆ ಭೂ ಕುಸಿತ ಉಂಟಾಗಿ …
Read More »ಸಿಇಟಿ, ನೀಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದಲೇ ಪ್ರವೇಶ ಪ್ರಕ್ರಿಯೆ ಆರಂಭ
ಬೆಂಗಳೂರು: ಸಿಇಟಿ, ನೀಟ್ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ಶುಕ್ರವಾರ ಪ್ರಕಟಿಸಲಾಗಿದೆ. ಆಗಸ್ಟ್ 31 ರಿಂದಲೇ ಪ್ರವೇಶ ಪ್ರಕ್ರಿಯೆ ಆರಂಭವಾಗಲಿವೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಇಂಜಿನಿಯರಿಂಗ್, ವಾಸ್ತುಶಿಲ್ಪ ಶಾಸ್ತ್ರ, ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಬಿ ಫಾರ್ಮಾ, ಬಿಎಸ್ಸಿ ನರ್ಸಿಂಗ್, ಯೋಗ ಮತ್ತು ನ್ಯಾಚುರೋಪತಿ ಇತರೆ ಕೋರ್ಸುಗಳ ಅಭ್ಯರ್ಥಿಗಳು ಪೋಷಕರೊಂದಿಗೆ ಚರ್ಚಿಸಿ ವಿವರಗಳನ್ನು ಅರ್ಥೈಸಿಕೊಂಡು ನಾಲ್ಕು ಚಾಯ್ಸ್ ಗಳಲ್ಲಿ ಸೂಕ್ತವಾದ ಕಾಲೇಜು …
Read More »