Breaking News

ರಾಷ್ಟ್ರೀಯ

ಸೊಸೆ, ಮೊಮ್ಮಗಳು ಡಿಸ್ಚಾರ್ಜ್ ಖುಷಿಯಿಂದ ಕಣ್ಣೀರಿಟ್ಟ ಬಿಗ್ ಬಿ

ಮುಂಬೈ: ಸೊಸೆ ಐಶ್ವರ್ಯಾ ರೈ ಮತ್ತು ಮೊಮ್ಮಗಳು ಆರಾಧ್ಯ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸಂತಸದ ವಿಷಯ ಕೇಳಿ ಬಿಗ್ ಬಿ ಅಮಿತಾಬ್ ಬಚ್ಚನ್ ಕಣ್ಣೀರಿಟ್ಟಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅಮಿತಾಬ್ ಬಚ್ಚನ್, ಮೊಮ್ಮಗಳು ಮತ್ತು ಸೊಸೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸುದ್ದಿ ಕೇಳಿದ ಕೂಡಲೇ ಕಣ್ಣಂಚಲಿ ನೀರು ಬಂತು. ಓ ದೇವರೆ ನಿನ್ನ ಕೃಪೆ ಹೀಗೆ ಇರಲಿ ಎಂದು ಭಾವನಾತ್ಮಕವಾಗಿ ಕೆಲ ಸಾಲುಗಳನ್ನು ಬರೆದುಕೊಂಡಿದ್ದಾರೆ.ಸೋಮವಾರ ಸಂಜೆ ಪುತ್ರಿ …

Read More »

ಸುಮಾರು 780 ಕೆ.ಜಿ. ತೂಕದ ಅಪರೂಪದ ಮೀನೊಂದು ಸಿಕ್ಕಿದೆ.

ಕೋಲ್ಕತ್ತಾ: ಸುಮಾರು 780 ಕೆ.ಜಿ. ತೂಕದ ಅಪರೂಪದ ಮೀನೊಂದು ಪಶ್ಚಿಮ ಬಂಗಾಳದ ದಿಘಾದಲ್ಲಿ ಸಿಕ್ಕಿದೆ. ಚಿಲ್‍ಶಂಕರ್ ಮೀನು ಎಂದು ಕರೆಯಲಾಗುತ್ತದೆ. ಇದು ಸುಮಾರು 780 ಕೆ.ಜಿ ತೂಕ ಇದೆ. ಚಿಲ್‍ಶಂಕರ್ ಮೀನು ಅಪರೂಪದ ಜಾತಿಯಾಗಿದ್ದು, ಟ್ರಾಲರ್ ಬೋಟ್‍ನಲ್ಲಿ ಈ ಮೀನು ಸಿಕ್ಕಿದೆ. ಈ ಮೊದಲು ಇಂತಹ ಮೀನನ್ನು ನೋಡಿಲ್ಲ ಎಂದು ಮೀನುಗಾರರು ಹೇಳಿದ್ದಾರೆ. ಸೋಮವಾರ ಒರಿಸ್ಸಾದ ವ್ಯಕ್ತಿಯೊಬ್ಬನ ಒಡೆತನದ ಟ್ರಾಲರ್ ಬೋಟ್‍ನಲ್ಲಿ ಈ ಮೀನು ಸೆರೆ ಸಿಕ್ಕಿದೆ. ಅದರಲ್ಲೂ ಪಶ್ಚಿಮ …

Read More »

800 ಕಿ.ಮೀ ನಡ್ಕೊಂಡೇ ಅಯೋಧ್ಯೆ ಭೂಮಿ ಪೂಜೆಗೆ ಹೊರಟ ಫಯಾಜ್ ಖಾನ್!

ರಾಯ್ಪುರ್: ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು 800 ಕಿ.ಮೀ ನಡೆದುಕೊಂಡೇ ತೆರಳಲು ನಿರ್ಧರಿಸಿ ಹೊರಟಿದ್ದಾರೆ. ಗಮನಾರ್ಹ ವಿಷಯವೆಂದರೆ ಭಗವಾನ್ ರಾಮನ ತಾಯಿ ಕೌಸಲ್ಯೆ ಹುಟ್ಟಿದ್ದು ಛತ್ತೀಸ್‍ಗಢದ ಚಂದ್ಖುರಿಯಲ್ಲಿ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಇದೇ ಗ್ರಾಮದ ನಿವಾಸಿ ಮೊಹಮ್ಮದ್ ಫಯಾಝ್ ಖಾನ್ ಅವರು ಶ್ರೀರಾಮನ ಪರಮ ಭಕ್ತನಾಗಿದ್ದಾರೆ. ಮಧ್ಯಪ್ರದೇಶಕ್ಕೆ ತಲುಪಿದೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಫಯಾಜ್ ಖಾನ್, ನನ್ನ ಹೆಸರು …

Read More »

ಬೆಳಗಾವಿ | ಆರ್‌ಟಿಇ; ಶೇ 50ಕ್ಕಿಂತಲೂ ಕಡಿಮೆ ಅರ್ಜಿ ಸಲ್ಲಿಕೆ!…

ಬೆಳಗಾವಿ: ಶಿಕ್ಷಣ ಹಕ್ಕು ಕಾಯ್ದೆಗೆ (ಆರ್‌ಟಿಇ) ತಿದ್ದುಪಡಿ ತಂದ ನಂತರ ಜಿಲ್ಲೆಯಲ್ಲಿರುವ ‌ಅನುದಾನಿತ ಹಾಗೂ ಅನುದಾನ ರಹಿತ (ಖಾಸಗಿ) ಶಾಲೆಗಳಲ್ಲಿರುವ ಸೀಟುಗಳ ಬೇಡಿಕೆ ತೀವ್ರ ಕುಸಿತ ಕಂಡುಬಂದಿದೆ. ಪ್ರಸಕ್ತ ಸಾಲಿನಲ್ಲಿ ಶೇ 50ಕ್ಕಿಂತಲೂ ಕಡಿಮೆ ಬೇಡಿಕೆ ಕಂಡುಬಂದಿದೆ. ಒಟ್ಟು 1966 ಸೀಟುಗಳ ಪೈಕಿ ಕೇವಲ 883 ಸೀಟುಗಳಿಗೆ ಮಾತ್ರ ಅರ್ಜಿ ಸಲ್ಲಿಕೆಯಾಗಿರುವುದೇ ಇದಕ್ಕೆ ಸಾಕ್ಷಿ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 40 ಅನುದಾನಿತ ಹಾಗೂ 5 ಅನುದಾನ ರಹಿತ ಶಾಲೆಗಳು ಆರ್‌ಟಿಇ ವ್ಯಾಪ್ತಿ …

Read More »

ಹೈಕಮಾಂಡ್ ನಾಯಕರಿಗೆ ಶಾಕ್ ಕೊಟ್ಟ B.S.Y……….

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಏರಿಕೆ ಒಂದು ವರ್ಷದ ಸಂಭ್ರಮದಲ್ಲಿರುವಾಗಲೇ ಹೈಕಮಾಂಡ್‌ ನಾಯಕರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಶಾಕ್‌ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್, ರಾಜ್ಯ ಬಿಜೆಪಿ ಘಟಕಕ್ಕೆ ಗೊತ್ತಿಲ್ಲದೆ ನಿಗಮ ಮಂಡಳಿಗೆ ಶಾಸಕರನ್ನು ಯಡಿಯೂರಪ್ಪ ನೇಮಕ ಮಾಡಿದ್ದಾರೆ. ಈಗ ಪಕ್ಷ, ಸಂಘದ ನಿಷ್ಠಾವಂತ ಕಾರ್ಯಕರ್ತರಿಗೂ ಮಣೆ ಹಾಕದೇ ನೇಮಿಸಿದ್ದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಘಟಕ ಅಸಮಾಧಾನ ವ್ಯಕ್ತಪಡಿಸಿದೆ. ಪಕ್ಷಕ್ಕೆ ಸಂಬಂಧಿಸಿದ ಯಾವುದೇ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮುನ್ನ ಪಕ್ಷದ ನಾಯಕರ …

Read More »

ಐಶ್ವರ್ಯಾ ರೈ, ಪುತ್ರಿಗೆ ಕೊರೊನಾ ನೆಗೆಟಿವ್- ಆಸ್ಪತ್ರೆಯಿಂದ ಡಿಸ್ಚಾರ್ಜ್

ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇತ್ತೀಚೆಗಷ್ಟೆ ನಟಿ ಐಶ್ವರ್ಯಾ ರೈ ಮತ್ತು ಆರಾಧ್ಯ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೀಗ ಅವರು ಕೋವಿಡ್ ಡೆಸ್ಟ್ ಮಾಡಿಸಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ. ಅಲ್ಲದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಕೂಡ ಆಗಿದ್ದಾರೆ. ಈ ಬಗ್ಗೆ ಅಭಿಷೇಕ್ ಬಚ್ಚನ್ ಟ್ವಿಟ್ಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. ನಿಮ್ಮ ನಿರಂತರ ಪ್ರಾರ್ಥನೆ …

Read More »

ಸಿಬ್ಬಂದಿ ಸೋಂಕು: ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿ ಸೀಲ್ ಡೌನ್!

ಚಿಕ್ಕೋಡಿ, ಜುಲೈ.27: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಚಿಕ್ಕೋಡಿಯ ಉಪ ವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೇರಿದಂತೆ ಮಿನಿ ವಿಧಾನಸೌಧದಲ್ಲಿ 10ಕ್ಕೂ ಹೆಚ್ಚು ಕಚೇರಿಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕೊರೊನಾ ಭಯ: ಚಿಕ್ಕೋಡಿಯಲ್ಲಿ ಸ್ವಯಂ …

Read More »

ಖಾದಿ ಮಂಡಳಿಗೆ ನೇಮಕ ನಿರೀಕ್ಷಿಸಿರಲಿಲ್ಲ, ಖುಷಿಯಾಗಿದೆ: ದುರ್ಯೋಧನ ಐಹೊಳೆ…?

ಬೆಳಗಾವಿ: ‘ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷನಾಗಿ ನೇಮಕಗೊಂಡಿರುವುದಕ್ಕೆ ಖುಷಿಯಾಗಿದೆ. ನಾನು ಈ ಹುದ್ದೆ ನಿರೀಕ್ಷಿಸಿರಲಿಲ್ಲ’ ಎಂದು ರಾಯಬಾಗದ ಶಾಸಕ ದುರ್ಯೋಧನ ಐಹೊಳೆ ಪ್ರತಿಕ್ರಿಯಿಸಿದರು. ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶ್ರಾವಣ ಸೋಮವಾರದ ದಿನ ಒಳ್ಳೆಯ ಕೊಡುಗೆ ನೀಡಿದ್ದಾರೆ. ಮಂಡಳಿಯಲ್ಲಿ ಕೆಲಸ ಮಾಡಲು ಬಹಳಷ್ಟು ಅವಕಾಶವಿದೆ. ಅದನ್ನು ಬಳಸಿಕೊಳ್ಳುತ್ತೇನೆ’ ಎಂದರು. ‘ಜಿಲ್ಲಾ ನಾಯಕರ ಸಹಕಾರ ಮತ್ತು ರಾಜಕಾರಣದಲ್ಲಿ ನನ್ನ ಗಾಡ್‌ಫಾದರ್‌ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ …

Read More »

ಪೊಲೀಸರಿಂದ ತಪ್ಪಿಸಿಕೊಳ್ಳಲು ಪತ್ನಿಯ ಪೆಟಿಕೋಟನ್ನೇ ಮಾಸ್ಕ್ ಮಾಡ್ಕೊಂಡ!

ಭೋಪಾಲ್: ಚೀನಿ ವೈರಸ್ ಕೋವಿಡ್ 19 ನಮ್ಮ ದೇಶಕ್ಕೂ ಒಕ್ಕರಿಸಿದ ಬಳಿಕ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯ ಮಾಡಲಾಗಿದೆ. ಮಾಸ್ಕ್ ಧರಿಸದೆ ಮನೆಯಿಂದ ಹೊರಗೆ ಕಾಲಿಟ್ಟರೆ ದಂಡ ಕೂಡ ಬೀಳುತ್ತದೆ. ಅಂತೆಯೇ ಮಾಸ್ಕ್ ಧರಿಸದೇ ಬಂದ ವ್ಯಕ್ತಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ತನ್ನ ಪತ್ನಿಯ ಪೆಟಿಕೋಟನ್ನೇ ಮಾಸ್ಕ್ ಮಾಡಿಕೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕರ್ನಾಟಕದಂತೆ ಮಧ್ಯಪ್ರದೇಶದಲ್ಲೂ ಭಾನುವಾರ ಕಟ್ಟುನಿಟ್ಟಿನ ಲಾಕ್‍ಡೌನ್ ಹೇರಲಾಗಿತ್ತು. ಕೊರೊನಾ ಚೈನ್ ಬ್ರೇಕ್ ಮಾಡಲು ಲಾಕ್‍ಡೌನ್ ಒಂದೇ …

Read More »

ಲಾಕ್‍ಡೌನ್ ಸಂಕಷ್ಟದಲ್ಲೂ ಸರ್ಕಾರಿ ನೌಕರರ ಹಿತ ಕಾದಿದೆ ಬಿಎಸ್‍ವೈ ಸರ್ಕಾರ: ಸವದಿ

ನವದೆಹಲಿ: ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲೂ ಸರ್ಕಾರಿ ಸೇರಿದಂತೆ ಸಾರಿಗೆ ನೌಕರರ ಹಿತ ಕಾಯುವ ಕೆಲಸವನ್ನು ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮಾಡಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಸರ್ಕಾರಕ್ಕೆ ಒಂದು ವರ್ಷ ಪೂರ್ಣವಾದ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಸುದ್ದಿಗೋಷ್ಢಿ ನಡೆಸಿ ಮಾತನಾಡಿದ ಅವರು, ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸಾಲು ಸಾಲು ಸವಾಲುಗಳನ್ನು ಎದುರಿಸುತ್ತಿದ್ದೇವೆ. ಆರಂಭದಲ್ಲಿ ಅತಿವೃಷ್ಠಿ-ಅನಾವೃಷ್ಠಿ ಕಾಡಿದ್ದು, ರಾಜ್ಯದ 20 ಜಿಲ್ಲೆಗಳು ಸಂಕಷ್ಟದಲ್ಲಿದ್ದವು. ಅದೆಲ್ಲ ಸಮಸ್ಯೆ ನಿಭಾಯಿಸುವ …

Read More »