Breaking News

ರಾಷ್ಟ್ರೀಯ

ಶಿರಾ ಕ್ಷೇತ್ರ ಉಪಚುನಾವಣೆ ನವೆಂಬರ್ 3 ರಂದು

ತುಮಕೂರು: ಶಿರಾ ಕ್ಷೇತ್ರ ಉಪಚುನಾವಣೆ ಘೋಷಣೆ ಮಾಡಲಾಗಿದೆ. ನವೆಂಬರ್ 3 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 9 ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿದುಬಂದಿದೆ. ಹೀಗಾಗಿ ಬಿಜೆಪಿಯಲ್ಲಿ 4, ಜೆಡಿಎಸ್​ನಲ್ಲಿ ಇಬ್ಬರು ಟಿಕೆಟ್​ ಆಕಾಂಕ್ಷಿಗಳ ಪಟ್ಟಿ ಸಿದ್ಧವಾಗಿದೆ. ಬಿಜೆಪಿ ಟಿಕೆಟ್​ಗಾಗಿ ಎಸ್.ಆರ್.ಗೌಡ, ಬಿ.ಕೆ.ಮಂಜುನಾಥ, ಡಾ.ರಾಜೇಶ್ ಗೌಡ, ಡಾ.ಶಿವಕುಮಾರ್ ನಡುವೆ ಪೈಪೋಟಿ ಇದ್ರೆ. ಜೆಡಿಎಸ್​ನಲ್ಲಿ ದಿವಂಗತ ಸತ್ಯನಾರಾಯಣ ಪುತ್ರ‌ ಸತ್ಯಪ್ರಕಾಶ್, ಕಲ್ಕೆರೆ ರವಿಕುಮಾರ್ ನಡುವೆ ಟಿಕೆಟ್​ಗಾಗಿ ಪೈಪೋಟಿ ಇದೆ. ಹಾಗೂ ಕಾಂಗ್ರೆಸ್ ಪಕ್ಷದಿಂದ …

Read More »

ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ: ಬಾಲಚಂದ್ರ ಜಾರಕಿಹೊಳಿಯವರು ಕಂಬನಿ ಮಿಡಿದರು

ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ.ಕೆ ಎಮ್ ಎಫ್ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿ ಅವರ ಮತ್ತು ಕುಟುಂಬಕ್ಕೂ  ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಸದರಿಯವರ ನಿಧನಕ್ಕೆ ಶ್ರೀ ಬಾಲಚಂದ್ರ ಜಾರಕಿಹೊಳಿ ಮತ್ತು ಎನ್ ಎಸ್ ಎಫ್ ಕಚೇರಿಯವರು ತೀವ್ರ …

Read More »

ಸನ್‍ರೈಸರ್ಸ್ ಹೈದರಾಬಾದ್ ತಂಡ ತನ್ನ ಮೊದಲ ಗೆಲುವನ್ನು ದಾಖಲಿಸಿದೆ.

ಅಬುಧಾಬಿ: ಮ್ಯಾಜಿಕಲ್ ಸ್ಪಿನ್ ಬೌಲರ್ ರಶೀದ್ ಖಾನ್ ಅವರ ಮಾರಕ ದಾಳಿಗೆ ನಲುಗಿದ ಡೆಲ್ಲಿ ಐಪಿಎಲ್-2020ಯ 11ನೇ ಪಂದ್ಯದಲ್ಲಿ ಸೋಲುಂಡಿದೆ. ಈ ಮೂಲಕ ಸನ್‍ರೈಸರ್ಸ್ ಹೈದರಾಬಾದ್ ತಂಡ ತನ್ನ ಮೊದಲ ಗೆಲುವನ್ನು ದಾಖಲಿಸಿದೆ. ಇಂದು ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲ ಬ್ಯಾಟ್ ಮಾಡಿದ ಹೈದರಾಬಾದ್ ತಂಡ ಕೇನ್ ವಿಲಿಯಮ್ಸನ್ ಜಾನಿ ಬೈರ್‌ಸ್ಟೋವ್ ಅವರ ಉತ್ತಮ ಬ್ಯಾಟಿಂಗ್‍ನಿಂದ ನಿಗದಿತ 20 ಓವರಿನಲ್ಲಿ 162 ರನ್ ಗಳಿಸಿತ್ತು. ಈ ಗುರಿಯನ್ನು …

Read More »

ಸ್ಥಳೀಯ ಪುಂಡರು, ಅಧಿಕಾರಿಗಳಿಗೆ ಹೆದರಿ ದಯಾಮರಣಕ್ಕೆ ಮುಂದಾದ ಮಾಜಿ ಸೈನಿಕ

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸುರ ಗ್ರಾಮದ ಯೋಧನೋರ್ವ 17 ವರ್ಷಗಳ ದೇಶಸೇವೆ ಮಾಡಿ ಸದ್ಯ ನಿವೃತ್ತಿ ಹೊಂದಿದ್ದಾರೆ. ನಿವೃತ್ತಿ ಬಳಿಕ ಯೋಧನಿಗೆ ಏನಾದ್ರೂ ಸಮಾಜಮುಖಿ ಕೆಲಸ ಮಾಡಬೇಕೆಂಬ ಹಂಬಲ. ಸೇನೆಗೆ ಸೇರಬೇಕೆಂಬ ಹಂಬಲವಿರುವ ಬಡ ಮಕ್ಕಳಿಗೆ ಉಚಿತ ಸೈನಿಕ ತರಬೇತಿ ಕೇಂದ್ರ ಕಟ್ಟಡ ಕಟ್ಟಲು ಸ್ಥಳೀಯ ಅಧಿಕಾರಿಗಳು ಹಾಗೂ ಪುಡಿ ರೌಡಿಗಳ ದೌರ್ಜನ್ಯಕ್ಕೆ ಬೇಸತ್ತಿದ್ದಾನೆ. ಸೇನೆಯಲ್ಲಿ ವೈರಿಗಳಿಗೆ, ನಕ್ಸಲ್‍ಗಳಿಗೆ ಹೆದರದ ಸೈನಿಕ, ಸ್ಥಳೀಯ ಪುಂಡರ ಜೀವ ಬೆದರಿಕೆಗೆ ಬೇಸತ್ತು …

Read More »

ಭಾರೀ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತ

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಮಧ್ಯಾಹ್ನದಿಂದ ಬಿಟ್ಟು ಬಿಟ್ಟು ಭಾರೀ ಮಳೆ ಆಗ್ತಿದೆ. ಮಳೆಯಿಂದಾಗಿ ನಗರದ ಜನಜೀವನ ಅಸ್ತವ್ಯಸ್ತ ಆಗಿದೆ. ಟ್ರಾಫಿಕ್ ನಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು. ಶಿವನಾಂದ ವೃತ್ತದ ರೈಲ್ವೇ ಅಂಡರ್ ಪಾಸ್‍ನಲ್ಲಿ ಪರಿಸ್ಥಿತಿ ಕೆಟ್ಟದಾಗಿತ್ತು. ಬೈಕ್ ಸವಾರರೊಬ್ರು ದಾರಿ ಗೊತ್ತಾಗದೇ ಕೆಳಗೆ ಬಿದ್ದರು. ಆಟೋವೊಂದು ಕೆಟ್ಟು, ಚಾಲಕ ತಳ್ಳಿಕೊಂಡು ಹೋದರು. ಮಧ್ಯಾಹ್ನದ ಮೂರು ಗಂಟೆಯ ಬಳಿಕ ಬಿಡುವು ನೀಡಿದ ವರುಣರಾಯ ರಾತ್ರಿ ಮತ್ತೆ ಸುರಿಯಲಾರಂಭಿಸಿದನು. ಕೆಲಸ ಮುಗಿಸಿ …

Read More »

ಬಿಜೆಪಿಗೆ ಬಿಗ್‌ ಡೇ – ಇಂದು ಬಾಬ್ರಿ ಮಸೀದಿ ಧ್ವಂಸ ತೀರ್ಪು ಪ್ರಕಟ……

ಲಕ್ನೋ: 28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು ಇಂದು ಸಿಬಿಐ ವಿಶೇಷ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ. ತೀರ್ಪು ನೀಡುವ ದಿನದಂದು ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾ.ಸುರೇಂದ್ರ ಕುಮಾರ್ ಯಾದವ್‌ ಸೆ.16 ರಂದು ಸೂಚಿಸಿದ್ದರು. ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ 32 ಮಂದಿ …

Read More »

ಕಟೀಲ್ ರಾಜ್ಯ ಬಿಜೆಪಿಯ ಕಾಮಿಡಿ ಆ್ಯಕ್ಟರ್: ಕಾಂಗ್ರೆಸ್ ಟ್ವೀಟ್

ಬೆಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯ ಬಿಜೆಪಿಯ ಕಾಮಿಡಿ ಆ್ಯಕ್ಟರ್ ಎಂದು ವ್ಯಂಗ್ಯವಾಡಿ ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಕಾಂಗ್ರೆಸ್ ಟ್ವೀಟ್‍ಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾಮಿಡಿ ಮಾಡುವ ವ್ಯಕ್ತಿ ಯಾರು ಮತ್ತು ಕಾಮಿಡಿಯಾದ ಪಕ್ಷ ಯಾವುದು ಎಂದು ದೇಶದ ಜನತೆಗೆ ಗೊತ್ತು ಎಂದು ಟ್ವೀಟ್ ಮಾಡಿದ್ದಾರೆ. ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ಬಗ್ಗೆ ಕಾಂಗ್ರೆಸ್ ರಾಜ್ಯದ ರೈತರನ್ನು ದಿಕ್ಕು …

Read More »

ರಸ್ತೆ ಬದಿಯ ಹಳ್ಳಕ್ಕೆ ಕಾರು ಪಲ್ಟಿ – ವಾರಕ್ಕೊಂದು ಗಾಡಿ ಪಲ್ಟಿಯಾದ್ರೂ ಸರ್ಕಾರ ಡೋಂಟ್ ಕೇರ್

ಚಿಕ್ಕಮಗಳೂರು: ರಸ್ತೆ ತಿರುವಿನಲ್ಲಿ ತಡೆಗೋಡೆಗಳಿಲ್ಲದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಶಿಫ್ಟ್ ಕಾರೊಂದು ರಸ್ತೆ ಬದಿಯ ಹಳ್ಳಕ್ಕೆ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾವಳಿ ಸಮೀಪದ ಮೂಲೆಮನೆ ಗ್ರಾಮದಲ್ಲಿ ನಡೆದಿದೆ. ಶಿಫ್ಟ್ ಕಾರಿನಲ್ಲಿ ನಾಲ್ವರು ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಹೋಗುತ್ತಿದ್ದರು. ಬೆಳಗಿನ ಜಾವ ಸುಮಾರು 4 ಗಂಟೆಗೆ ಮೂಲೆಮನೆ ಗ್ರಾಮದ ಬಳಿ ರಸ್ತೆ ತಿರುವಿನಲ್ಲಿ ಕಾರು ಹಳ್ಳಕ್ಕೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ವಾರಕ್ಕೊಂದು ಅಪಘಾತ: …

Read More »

ರಾಗಿಣಿ, ಸಂಜನಾಗೆ ಬಿಗ್ ಶಾಕ್ – ಮೊಬೈಲ್‍ನಲ್ಲಿ ಸಿಕ್ಕಿದೆ ಸ್ಫೋಟಕ ಸಾಕ್ಷ್ಯ!

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಸೇರಿರುವ ಮಾದಕ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಬಿಗ್ ಶಾಕಿಂಗ್ ನ್ಯೂಸ್ ಒಂದು ಇದೀಗ ಹೊರಬಿದ್ದಿದೆ. ಡ್ರಗ್ಸ್ ಕೇಸ್ ಬೆನ್ನು ಹತ್ತಿರೋ ಪೊಲೀಸರಿಗೆ ಸಿನಿಲೋಕದ ಡ್ರಗ್ಸ್ ಕೇಸ್‍ಗೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ನಟಿ ರಾಗಿಣಿ, ಸಂಜನಾ ಮೊಬೈಲ್‍ನಲ್ಲಿ ಸ್ಫೋಟಕ ಸಾಕ್ಷ್ಯ ದೊರೆತಿದೆ. ಅದೇನೆಂದರೆ ಡ್ರಗ್ಸ್ ಕೇಸ್‍ನಲ್ಲಿ ಬಂಧಿತರಾಗಿರುವ ಆರೋಪಿಗಳಿಂದ ಸೆಕ್ಸ್ ದಂಧೆ ನಡೆಯುತ್ತಿರುವ ಶಂಕೆ ವ್ಯಕ್ತವಾಗಿದೆ. …

Read More »

ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಕರೆ

ಬೆಳಗಾವಿ: ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಕರೆ ಬಂದಿದೆ.  ಈ ಬಗ್ಗೆ ಖಾಸಗಿ ಮಾಧ್ಯಮದ ಜೊತೆ ಮಾತನಾಡಿದ ನಿಜಗುಣಾನಂದ ಸ್ವಾಮೀಜಿ ಜನರ ಜಾಗೃತಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಯಾರೋ ಈ ರೀತಿ ಬೆದರಿಕೆಯೊಡ್ಡುತ್ತಿದ್ದಾರೆ ಅಂತಾ ಹೇಳಿದ್ದಾರೆ. ಯಾರು ಏನು ಎಂಬುದರ ಬಗ್ಗೆ ಯಾವುದೇ ಮಾಹಿತಿ ತಿಳಿಯುತ್ತಿಲ್ಲ. ಸಮಾಜದಲ್ಲಿ ನಿಜ ಹೇಳುವವರೆಗೆ ಈ ರೀತಿ ಸಮಸ್ಯೆ ಆಗುತ್ತದೆ. ಮೊದಲು ಆತ್ಮಸ್ಥೈರ್ಯ ಕುಗ್ಗಿಸಲು ಯತ್ನಿಸುತ್ತಾರೆ. ಕುಗ್ಗದಿದ್ದಾಗ ದೈಹಿಕವಾಗಿ ಕುಗ್ಗಿಸಲು ಯತ್ನಿಸುತ್ತಾರೆ. ಈ …

Read More »