ಬೆಂಗಳೂರು: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಡ್ರೋನ್ ಪ್ರತಾಪ್‍ನನ್ನು ಬಿಬಿಎಂಪಿ ಅಧಿಕಾರಿಗಳು ಮತ್ತು ತಲಘಟ್ಟಪುರ ಪೊಲೀಸರು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಡ್ರೋನ್ ಪ್ರತಾಪ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಡ್ರೋನ್ ಪ್ರತಾಪ್ ತಲೆಮರೆಸಿಕೊಂಡಿದ್ದ. ಅಧಿಕಾರಿಗಳು ಅವನ ಹುಡುಕಾಟದಲ್ಲಿ ತೊಡಗಿದ್ದರು. ಇದೀಗ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರತಾಪ್‍ನನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆತಂದಿದ್ದಾರೆ. ಕೆಂಗೇರಿ ಬಳಿಯ ಖಾಸಗಿ ಹೋಟೆಲ್‍ನಲ್ಲಿ ಸಾಂಸ್ಥಿಕ ಕ್ವಾರಂಟೈನ್‍ಗೆ …
Read More »ಕೊನೆಯ ರೈತರ ತಲುಪದ ಕೃಷ್ಣೆ……?
ಹುಣಸಗಿ: ‘ಕೃಷ್ಣಾ ಅಚ್ಚುಕಟ್ಟು ಪ್ರದೇಶದ ನೀರಾವರಿ ವ್ಯಾಪ್ತಿಯ ಎಲ್ಲ ರೈತರಿಗೂ ನೀರು ಸಿಗಬೇಕು. ರೈತರು ಸ್ವಾವಲಂಬಿಗಳಾಗಬೇಕು’ ಎನ್ನುವ ಮೂಲ ಉದ್ದೇಶವೇ ಮಾಯವಾಗಿದೆ. ಕಾಲುವೆ ಗೇಟ್ ಬಳಿ ಇರುವ ರೈತರು ಮಾತ್ರ ನೀರು ಪಡೆಯುತ್ತಿದ್ದು, ಇಂದಿಗೂ ಕಾಲುವೆ ಅಂಚಿನ ರೈತರು ನೀರಾವರಿಯಿಂದ ವಂಚಿತರಾಗಿದ್ದಾರೆ. ಇದರಿಂದಾಗಿ ಕಾಲುವೆ, ಜಾಲ ಕಾಲುವೆ, ರಸ್ತೆ ಇದ್ದರೂ ಒಣ ಬೇಸಾಯವನ್ನೇ ಮಾಡಿಕೊಂಡಿದ್ದು, ನೀರಾವರಿ ಮರೀಚಿಕೆಯಂತಾಗಿದೆ. ಇದಕ್ಕೆ ಉದಾಹರಣೆ ಎಂಬಂತೆ ವಿತರಣಾ ಕಾಲುವೆ 6 ಇದ್ದು, ಶೇ 50ರಷ್ಟು …
Read More »ರಾತ್ರೋ ರಾತ್ರಿ ಸುರಿದ ಮಳೆಯಿಂದ ತುಂಬಿದ ರೈತರ ಕೆರೆ
ತುಮಕೂರು: ಭಾನುವಾರ ರಾತ್ರಿ ಮಧುಗಿರಿ ತಾಲ್ಲೂಕಿನಲ್ಲಿ ಸುರಿದ ಮಳೆಯಿಂದಾಗಿ ಮಾವಿನ ಕೃಷಿಕ ಅಂಜಿನಪ್ಪ ಅವರ ಭವಿಷ್ಯವೇ ಬದಲಾಯಿತು. 1 ಕೋಟಿ ಲೀಟರ್ ಸಾಮರ್ಥ್ಯದ ಅವರ ಬೃಹತ್ ಕೃಷಿ ಕೊಳವು ತುಂಬಿದೆ, , ಬೆಂಗಳೂರು ಗ್ರಾಮೀಣ ಜಿಲ್ಲೆಯ ದೇವನಹಳ್ಳಿ ಮೂಲದ ಬಿ.ಇ (ಸಿವಿಲ್) ಎಂಜಿನೀಯರ್ ಅಂಜಿನಪ್ಪ ಹಲವು ವರ್ಷಗಳ ಹಿಂದೆ ಕೆರೆ ನಿರ್ಮಿಸಿದ್ದರು. ಅವರು ಕೊರೆಸಿದ್ದ ಮೂರು ಬೋರ್ ವೆಲ್ ಗಳ ನೀರು ಬತ್ತಿ ಹೋದ ಹಿನ್ನೆಲೆಯಲ್ಲಿ ತಮ್ಮ 40 ಎಕರೆ …
Read More »ರಾಜ್ಯದಲ್ಲಿ ಒಂದೇ ದಿನ 61 ಜನರ ಬಲಿ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮಂಗಳವಾರ ಒಂದೇ ದಿನ ಬರೋಬ್ಬರಿ 61 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1464ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 22 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 61 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ. ಇಂದು ಬೆಂಗಳೂರು ನಗರವೊಂದರಲ್ಲೆ ಅತಿ …
Read More »ಸಿಗರೇಟ್ ಗಾಗಿ ತನ್ನ ಜೀವವನ್ನೇ ಪಣಕ್ಕಿಟ್ಟ ಭೂಪ
ನಾಲ್ಕು ಪ್ಯಾಕ್ ಸಿಗರೇಟಿಗೆ ತನ್ನ ಜೀವವನ್ನೇ ಪಣಕ್ಕಿಟ್ಟ ವ್ಯಕ್ತಿಯೊಬ್ಬ ನೆಟ್‌ನಲ್ಲಿ ಸುದ್ದಿಯಾಗಿದ್ದಾನೆ. ಸಮುದ್ರದ ನೀರಿನಲ್ಲಿ ಮುಳುಗಿಹೋಗಿದ್ದ ತನ್ನ ವ್ಯಾನ್‌ನಲ್ಲಿ ನಾಲ್ಕು ಪ್ಯಾಕ್ ಸಿಗರೇಟ್ ಇದ್ದ ಕಾರಣ, ಆ ನೀರಿನಲ್ಲೇ ಈಜಿಕೊಂಡು ಹೋದ ಆತ ಕೊನೆಗೂ ಸಿಗರೇಟ್‌ನೊಂದಿಗೆ ಸುರಕ್ಷಿತವಾಗಿ ಹಿಂದಿರುಗಿದ್ದಾನೆ. ಈ ಪ್ರಸಂಗವನ್ನು ಫೋಟೋಗ್ರಾಫರ್‌ಗಳು ವಿಡಿಯೋ ರೆಕಾರ್ಡಿಂಗ್ ಮಾಡಿಕೊಂಡಿದ್ದಾರೆ. ಈ ಘಟನೆಯು ಬ್ರಿಟನ್‌ನ ಟೀಸೈಡ್ ಬಳಿಯ ರೆಡ್‌ಕಾರ್ ಬೀಚ್‌ನಲ್ಲಿ ಸಂಭವಿಸಿದೆ. ಸಮುದ್ರದಲ್ಲಿ ಮುಳುಗಿದ್ದ ವ್ಯಾನ್ ಅನ್ನು ಟ್ರಾಕ್ಟರ್ ನೆರವಿನಿಂದ ತೀರಕ್ಕೆ ಎಳೆಯುವ …
Read More »ಕುಮಾರಸ್ವಾಮಿ ಸರ್ಕಾರ ಪತನವಾಗಿ ಒಂದು ವರ್ಷ : ಮಾಜಿ ಸಿಎಂ ನಾಳೆ ಸಾರ್ವಜನಿಕರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ಬೆಂಗಳೂರು: ಕುಮಾರಸ್ವಾಮಿ ಸರ್ಕಾರ ಪತನವಾಗಿ ಒಂದು ವರ್ಷವಾದ ಹಿನ್ನಲೆಯಲ್ಲಿ ಮಾಜಿ ಸಿಎಂ ನಾಳೆ ಸಾರ್ವಜನಿಕರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಒಂದು ವರ್ಷದ ಬಿಜೆಪಿ ಸರ್ಕಾರದ ಆಡಳಿತ , ಕಾರ್ಯವೈಖರಿ ಬಗ್ಗೆ ಸಂವಾದ ನಡೆಸಲಿದ್ದು, ಕುಮಾರಸ್ವಾಮಿ ಸಾರ್ವಜನಿಕರ ಜೊತೆ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಪ್ರಸ್ತುತ ಕೊರೋನಾ ಪರಿಸ್ಥಿತಿ ಯನ್ನು ಸರ್ಕಾರ ನಿಭಾಯಿಸುತ್ತಿರುವ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಮಧ್ಯರಾತ್ರಿ ನಡು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ..! ಈಗಾಗಲೇ ಕುಮಾರಸ್ವಾಮಿಗೆ ಮೋಸ ಮಾಡಿ ಒಂದು …
Read More »ಲಾಕ್ ಡೌನ್ ವಿಸ್ತರಣೆ ಬಗ್ಗೆ ಮುಖ್ಯ ಮಂತ್ರಿಗಳ ಹೇಳಿಕೆ
ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ರಾಜ್ಯದ ಜನತೆಯನ್ನ ಉದ್ದೇಶಿಸಿ ಇಂದು (ಮಂಗಳವಾರ) ಸಂಜೆ ಭಾಷಣ ಮಾಡಿದರು. ಇದೇ ಮೊದಲ ಬಾರಿ ಸಮಾಜಿಕ ಜಾಲತಾಣಗಳ ಮೂಲಕ ಕರ್ನಾಟಕದ ಜನರನ್ನು ಉದ್ದೇಶಿಸಿ ಮಾತನಾಡಿದ್ದು, ನಿರೀಕ್ಷೆಯಂತೆ ಕೊರೋನಾ ವೈರಸ್ ಬಗ್ಗೆ ಮಾತನಾಡಿದರು. ಈ ವೇಳೆ ಕರ್ನಾಟಕ ಜನತೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ದೇಶದೆಲ್ಲೆಡೆ ಕೊರೋನಾ ವೈರಸ್ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಕೋವಿಡ್ ನಿಯಂತ್ರಣ ಮಾಡುವುದರಲ್ಲಿ ಪ್ರಾರಂಭದಲ್ಲಿ ನಾವು ಯಶಸ್ವಿಯಾಗಿದ್ದೆವು. ಆದ್ರೆ, ಇತ್ತೀಚಿನ ದಿನಗಳಲ್ಲಿ …
Read More »ಕ ರೋನಾ ಇದೆ ಎಂದು ಹಂಗಿಸಿದಕ್ಕೆ ಆತ್ಮ ಹತ್ಯೆ ಮಾಡಿಕೊಂಡ ಸೋಂಕಿತ..
ಬೆಂಗಳೂರು: ಕೊರೊನಾ ಸೋಂಕಿತರನ್ನು ಜನರು ಅವಮಾನಿಸುತ್ತಿದ್ದು, ಇದರಿಂದ ನೊಂದ ಸೋಂಕಿತರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಸಮಾಜ ಎಷ್ಟೇ ಬದಲಾಗಿದ್ದರೂ ವಿದ್ಯಾವಂತರು ಹೆಚ್ಚಿದ್ದರೂ ಕೂಡ ಜನರ ಮನ:ಸ್ಥಿತಿ ಮಾತ್ರ ಇನ್ನೂ ಬದಲಾಗುತ್ತಿಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿ. ಪತ್ನಿ ಮತ್ತು ಮಗನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಕೀಲಾಗಿ ನೋಡುತ್ತಿದ್ದುದಕ್ಕೆ ಬೇಸರಗೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಸರುಘಟ್ಟದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ನಿವಾಸಿ ನಾಗರಾಜು (56) ಮೃತ …
Read More »N-95 ಮಾಸ್ಕ್ ಧಾರಣೆಯಿಂದ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಸಾಧ್ಯವಿಲ್ಲ ಎಂದು ಎಚ್ಚರಿಸಿದೆ. ಕೇಂದ್ರ ಸರ್ಕಾರ
ಹೊಸದಿಲ್ಲಿ: ಮಾರಕ ಕೊರೊನಾ ವೈರಸ್ ಹಾವಳಿಯ ಸಂದರ್ಭದಲ್ಲಿ ಎಲ್ಲರೂ ಫೇಸ್ ಮಾಸ್ಕ್ ಮೊರೆ ಹೋಗಿರುವುದು ಸಾಮಾನ್ಯ ಸಂಗತಿಯಾಗಿದೆ. ಸರ್ಕಾರ ಖುದ್ದು ಫೇಸ್ ಮಾಸ್ಕ್ ಧರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಅದರಂತೆ ಸದ್ಯ ದೇಶದಲ್ಲಿ ವಿವಿಧ ರೀತಿಯ ಫೇಸ್ ಮಾಸ್ಕ್‌ಗಳು ಬಳಕೆಯಲ್ಲಿದ್ದು, ಅವುಗಳಲ್ಲಿ N-95 ಮಾಸ್ಕ್ ಅತ್ಯಂತ ಜನಪ್ರಿಯವಾಗಿವೆ. ಭಾರೀ ಸಂಖ್ಯೆಯಲ್ಲಿ N-95 ಮಾಸ್ಕ್‌ಗಳನ್ನು ಜನ ಖರೀದಿಸಿದ್ದಾರೆ. ಆದರೆ N-95 ಮಾಸ್ಕ್ ಕುರಿತು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, …
Read More »ಸಚಿವರಾದ ರಮೇಶ ಜಾರಕಿಹೊಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು.
ಗೋಕಾಕ : ದ್ವೀತಿಯ ಪಿಯುಸಿಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಉತ್ತಮ ಅಂಕ ಪಡೆದು ರಾಂಕ್ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೋಳಿಯವರು ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದ ಜೊತೆಯಲ್ಲಿ ಪ್ರೋತ್ಸಾಹ ಧನವನ್ನು ಗೋಕಾಕದ ಗೃಹ ಕಚೇರಿಯಲ್ಲಿ ನೀಡಿದರು. ಈ ಸಂದರ್ಭದಲ್ಲಿ ಮಾದ್ಯಮದವರ ಜೊತೆ ಮಾತಾನಾಡಿದ ಗೋಕಾಕ ಶಿಕ್ಷಣಾಧಿಕಾರಿಯಾದ ಜಿ,ಬಿ,ಬಳಿಗಾರ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಮುಂದಿನ …
Read More »