ನವದೆಹಲಿ : ಗುಜರಾತ್‌ನಲ್ಲಿ 21 ವರ್ಷದ ಯುವಕನೊಬ್ಬ ತನ್ನ ತಾಯಿಯನ್ನು ಕೊಂದು ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಕ್ಷಮಿಸಿ ಅಮ್ಮ, ನಾನು ನಿನ್ನನ್ನು ಕೊಂದಿದ್ದೇನೆ, ಐ ಮಿಸ್ ಯೂ ಎಂದು ಬರೆದುಕೊಂಡಿದ್ದಾನೆ. ಪ್ರಕರಣದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿ ನೀಲೇಶ್ ಗೋಸಾಯಿಯನ್ನು ಬಂಧಿಸಿದ್ದಾರೆ. ಆರೋಪಿ ನೀಲೇಶ್ ತನ್ನ ತಾಯಿಯೊಂದಿಗೆ ವಾಸವಾಗಿದ್ದ. ಇಬ್ಬರ ನಡುವೆ ಆಗಾಗ ಜಗಳ, ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಪ್ರಾಥಮಿಕ ವಿಚಾರಣೆಯ ವೇಳೆ ಆರೋಪಿ ಪೊಲೀಸರಿಗೆ ಚಾಕುವಿನಿಂದ …
Read More »CM’ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ RTI ಕಾರ್ಯಕರ್ತ `ಸ್ನೇಹಮಯಿ ಕೃಷ್ಣ’ ಗಡಿಪಾರಿಗೆ ಮನವಿ!
ಮೈಸೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿದ್ದ ಆರ್.ಟಿ.ಐ. ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಮೈಸೂರು ಪೊಲೀಸ್ ಆಯುಕ್ತರಿಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ದೂರು ನೀಡಿದ್ದಾರೆ. ಸ್ನೇಹಮಯಿ ಕೃಷ್ಣ ಅವರನ್ನು ಗಡಿಪಾರು ಮಾಡಬೇಕು. ಸ್ನೇಹಮಯಿ ಕೃಷ್ಣ ವಿರುದ್ಧ 17 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ರಾಜ್ಯದ ಹಲವೆಡೆ ಅವರ ವಿರುದ್ಧ ಪ್ರಕರಣ ದಾಖಲಾಗಿವೆ. ಆಸ್ತಿ ವಿಚಾರದಲ್ಲಿ ಹಸ್ತಕ್ಷೇಪ ಮಾಡಿ ಭೂಮಿ ವಶಪಡಿಸಿಕೊಳ್ಳುವುದು, ನನ್ನನ್ನು ಸೇರಿದಂತೆ ನಗರದ ಗಣ್ಯರನ್ನು …
Read More »ಇಂದಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿನ ಕ್ಯಾಂಟೀನ್ ಬಂದ್..!
ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ಈ ಹಿನ್ನೆಲೆ ಇಂದಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಕ್ಯಾಂಟೀನ್ ಬಂದ್ ಆಗಲಿದೆ ಎಂದು ತಿಳಿದು ಬಂದಿದೆ. ಕ್ಯಾಂಟೀನ್ ನಲ್ಲಿ ಯಾವ ವಸ್ತುಗಳು ಕೂಡ ಇಂದಿನಿಂದ ಸಿಗೋಲ್ಲ. ನಟ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿರುವ ಹಿನ್ನೆಲೆ ಬಳ್ಳಾರಿ ಜೈಲಿನಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲ್ ನಲ್ಲಿ ದರ್ಬಾರ್ …
Read More »ಆಪರೇಷನ್ ಕಮಲ’ದ ಮೂಲಕ ಸರ್ಕಾರ ಬೀಳಿಸಲು ಬಿಜೆಪಿ ಸಂಚು ಮಾಡುತ್ತಿದೆ : ‘CM
ಬೆಂಗಳೂರು : ‘ಆಪರೇಷನ್ ಕಮಲ’ದ ಮೂಲಕ ಸರ್ಕಾರ ಬೀಳಿಸಲು ಬಿಜೆಪಿ (BJP) ಸಂಚು ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು BJP ಪ್ರಯತ್ನಿಸುತ್ತಿದ್ದು, ನಮ್ಮ ಶಾಸಕರು ದುಡ್ಡಿನ ಆಸೆಗೆ ಬಲಿಯಾಗುವುದಿಲ್ಲ. ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಶಾಸಕ ರವಿ ಗಣಿಗ ನನ್ನ ಬಳಿಯೂ ಹೇಳಿದ್ದಾರೆ. …
Read More »ಜುಲೈ ವೇಳೆಗೆ ಬ್ಯಾಂಕ್ ಸಾಲದ ಬೆಳವಣಿಗೆ ಶೇ.15.1ಕ್ಕೆ ಏರಿಕೆ: RBI
ನವದೆಹಲಿ:ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳ ಮರುಹಂಚಿಕೆ 2024 ರ ಜುಲೈನಲ್ಲಿ ಶೇಕಡಾ 18.1 ರಷ್ಟು ಬೆಳವಣಿಗೆಯನ್ನು ದಾಖಲಿಸಿ 21.55 ಲಕ್ಷ ಕೋಟಿರೂ.ಗೆತಲುಪಿದೆ ಎಂದು ಆರ್ಬಿಐ ತಿಳಿಸಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಆಹಾರೇತರ ಬ್ಯಾಂಕ್ ಸಾಲವು ಜುಲೈ 2024 ರ ವೇಳೆಗೆ ಶೇಕಡಾ 15.1 ರಷ್ಟು ಬೆಳವಣಿಗೆಯನ್ನು ದಾಖಲಿಸಿ 162.92 ಲಕ್ಷ ಕೋಟಿರೂ.ಗೆತಲುಪಿದೆ. ಆದಾಗ್ಯೂ, ಬ್ಯಾಂಕುಗಳ ಠೇವಣಿ ಬೆಳವಣಿಗೆಯು ಶೇಕಡಾ 11.3 ರಷ್ಟು ಹಿಂದುಳಿದು …
Read More »ಹಿರಿಯ ರಾಜಕಾರಿಣಿ, ಮಾಜಿ ಸಚಿವ ಕೆ.ಎಚ್.ಶ್ರೀನಿವಾಸ್ ನಿಧನ
ಬೆಂಗಳೂರು: ಮಾಜಿ ಸಚಿವ ಹಾಗೂ ಜನತಾ ಪರಿವಾರದ ಹಿರಿಯ ನಾಯಕ ಕೆ ಎಚ್ ಶ್ರೀನಿವಾಸ ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮಲೆನಾಡು ಭಾಗದಲ್ಲಿ ಪ್ರಭಾವಿ ನಾಯಕರಾಗಿದ್ದ ಶ್ರೀನಿವಾಸ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ರಾಜ್ಯಶಾಸ್ತ್ರ ಮತ್ತು ಕಾನೂನಿನ ಶಿಕ್ಷಣವನ್ನು ಮುಗಿಸಿದ ನಂತರ ಕಾನೂನು ವೃತ್ತಿಯನ್ನು ಪ್ರಾರಂಭಿಸಿದರು. ರಾಜಕೀಯಕ್ಕೆ ಬರುವ ಮುನ್ನ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಶ್ರೀನಿವಾಸ ಅವರು ಮೈಸೂರು ವಿಧಾನಸಭೆಯ ಮಾಜಿ ಸದಸ್ಯರಾದ ಕಾನುಗೋಡು ಹರಿಯಪ್ಪನವರ್ …
Read More »ಪತಿಯನ್ನು ಹತ್ಯೆ ಮಾಡಿ ಅಪಘಾತದ ಕಥೆ ಸೃಷ್ಟಿಸಿದಳೆ ಪತ್ನಿ?
ಗದಗ: ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಶವ ಹೆದ್ದಾರಿಯಲ್ಲಿ ಪತ್ತೆಯಾಗಿದ್ದು, ಮೊದಲು ಅಪಘಾತದಂತೆ ಕಂಡು ಬಂದರೂ ಪತ್ನಿಯೇ ಹತ್ಯೆ ಮಾಡಿ ಆತನನ್ನು ಹೆದ್ದಾರಿಯಲ್ಲಿ ಎಸೆದಿದ್ದಾಳೆ ಎಂಬ ಆರೋಪ ಮಾಡಲಾಗಿದೆ. ಮಂಜುನಾಥ್ ಮೀಸಿ ಎಂಬಾತ ಶವವಾಗಿ ಪತ್ತೆಯಾದ ವ್ಯಕ್ತಿಯಾಗಿದ್ದು, ಆತನ ಪತ್ನಿ ಶಾರದಮ್ಮ ಕೊಲೆ ಮಾಡಿದ್ದಾಳೆ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಗುರುವಾರ(ಆ 29)ತಡರಾತ್ರಿ ಮನೆಯಲ್ಲೇ ಹತ್ಯೆ ಮಾಡಿ ಹೆದ್ದಾರಿಯಲ್ಲಿ ಬಿಸಾಕಿ ಅಪಘಾತದ ಕಥೆ ಸೃಷ್ಟಿ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಮಂಜುನಾಥ್ ಕೋಟುಮಚಗಿಯಲ್ಲಿ …
Read More »ಸೆ. 2 ರಿಂದ ರಾಜ್ಯಾದ್ಯಂತ 1-5 ನಮೂನೆ ಡಿಜಿಟಲ್ ಪೋಡಿ ದುರಸ್ಥಿ ಅಭಿಯಾನ: ಕೃಷ್ಣ ಬೈರೇಗೌಡ
ಬೆಂಗಳೂರು ಆಗಸ್ಟ್ 30: ಸೆಪ್ಟೆಂಬರ್ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ದಶಕಗಳಿಂದ ಬಾಕಿ ಉಳಿದಿರುವ ಪೋಡಿ ದುರಸ್ಥಿ ಕಾರ್ಯಕ್ಕೆ ಚುರುಕು ನೀಡುವ ಸಂಬಂಧ ವಿಕಾಸಸೌಧದಲ್ಲಿ ಶುಕ್ರವಾರ ಎಲ್ಲಾ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಕಂದಾಯ ನಿರೀಕ್ಷಕರೂ ಸೇರಿ ಇಲಾಖೆಯ ಎಲ್ಲಾ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ …
Read More »ಸಿಎಂ ಬದಲಾವಣೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
ಬೆಂಗಳೂರು: ಮುಡಾ ಹಗರಣ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ಚರ್ಚೆ ಬಗ್ಗೆ ಇದೀಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತೆರೆ ಎಳೆಯುವ ಯತ್ನ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿಎಂ ಬದಲಾಗಬೇಕು ಎಂದು ಯಾರೂ ಸಹ ಬಯಸಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಸಿಎಂ ಬದಲಾವಣೆ ಬಗ್ಗೆ ನಾವು ಊಹೆ ಕೂಡ ಮಾಡಿಲ್ಲ. …
Read More »ಬಿ.ವೈ.ವಿಜಯೇಂದ್ರ ವಿರುದ್ಧದ FIRಗೆ ಹೈಕೋರ್ಟ್ ತಡೆ
ಬಿ.ವೈ.ವಿಜಯೇಂದ್ರ ವಿರುದ್ಧದ FIRಗೆ ಹೈಕೋರ್ಟ್ ತಡೆ ಬೆಂಗಳೂರು: ದ್ವೇಷದ ಪೋಸ್ಟ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಬಿ.ವೈ.ವಿಜಯೇಂದ್ರ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಎಫ್‌ಐಆರ್ ಗೆ ತಡೆ ನೀಡಿದೆ. ಅಲ್ಲದೇ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿದೆ. ಮೀಸಲಾತಿಗೆ ಸಂಬಂಧಿಸಿದಂತೆ ವಿಡಿಯೋ ತುಣುಕೊಂದನ್ನು ಬಿಜೆಪಿ ರಾಜ್ಯ …
Read More »