Breaking News

ರಾಷ್ಟ್ರೀಯ

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಂಕು ತಗುಲಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅಭಿಷೇಕ್ ಪತ್ನಿ ಐಶ್ವರ್ಯಾ ರೈ ಮತ್ತು ಆರಾಧ್ಯ ಅವರಿಗೆ ಜ್ವರ, ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಅವರನ್ನು ಕೂಡ ಶುಕ್ರವಾರ ರಾತ್ರಿ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಚ್ಚನ್ ಕುಟುಂಬದ ನಾಲ್ವರು ಸದಸ್ಯರು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ …

Read More »

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಎನ್’ಕೌಂಟರ್ ನಡೆಸಲು ಆರಂಭಿಸಿದ್ದು, ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು …

Read More »

ತಿರುಪತಿ ತಿರುಮಲ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ.

ನವದೆಹಲಿ,  ತಿರುಪತಿ ತಿರುಮಲ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಆಡಳಿತ ಮಂಡಳಿ ತಿಳಿಸಿದೆ. ದೇವಸ್ಥಾನದ ಅರ್ಚಕರು ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಭಕ್ತರು ಬಂದರೆ ಮತ್ತಷ್ಟು ಬೇಗ ಸೋಂಕು ತಗುಲುತ್ತದೆ ಎಂದು ಹೇಳಲಾಗಿತ್ತು. ಜೂನ್ ಮಧ್ಯವಾರದಲ್ಲೇ ದೇವಸ್ಥಾನವನ್ನು ತೆರೆಯಲಾಯಿತು. ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿಯ ಅಧ್ಯಕ್ಷ ವೈವಿ ಸುಬ್ಬಾರೆಡ್ಡಿ ಮಾತನಾಡಿ, ಯಾವುದೇ ಕಾರಣಕ್ಕೂ ದೇವಸ್ಥಾನದ ಬಾಗಿಲು ಮುಚ್ಚುವುದಿಲ್ಲ ಭಕ್ತರಿಗೆ ವೆಂಕಟೇಶನ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ ಎಂದರು. …

Read More »

ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ.

ಗೋಕಾಕದಲ್ಲಿ ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ. ಲಾಕಡೌನ್ ಲೆಕ್ಕಕ್ಕಿಲ್ಲದಂತೆ ಜನ ಓಡಾಡುತ್ತಿದ್ದಾರೆ. ಲಾಕಡೌನ್ ಆದ ಪ್ರದೇಶದಲ್ಲಿ ಹೇಳೊರಿಲ್ಲ,ಕೇಳೊರಿಲ್ಲ ಅನ್ನೋ ಸ್ಥಿತಿ ಇದ ಕೊರೋನಾ ಸೋಂಕು ತಡೆಗೆ ಲಾಕ್‍ಡೌನ್ ಘೋಷಿಸಲಾಗಿದೆ. ಆದರೆ ಗೋಕಾಕ ಜನತೆ ಲಾಕ್‍ಡೌನ್ ನಿಯಮಗಳನ್ನು ಉಲ್ಲಂಘಿಸಿ ಹೇಗೆ ಬೇಕೋ ಹಾಗೆ ವರ್ತಿಸುತ್ತಿದ್ದಾರೆ. ಇದೆಲ್ಲ ಗೊತ್ತಿದ್ದರೂ ಗೋಕಾಕ ತಹಸೀಲ್ದಾರ್ ತಲೆ ಕೆಡಿಸಿಕೊಳ್ಳುತ್ತಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಿಲ್ಲ.ವಸ್ತುಸ್ಥಿತಿಯನ್ನು ಪರಿಶೀಲಿಸುತ್ತಿಲ್ಲ. ಕೊರಾನಾ ಕೇಸ್‍ಗಳು ಹೆಚ್ಚುತ್ತಿವೆ. ಇದನ್ನು ತಡೆಯಲು ಲಾಕ್‍ಡೌನ್ ಘೋಷಿಸಲಾಗಿತ್ತು. …

Read More »

3.5 ಲಕ್ಷ ಮೌಲ್ಯದ ಚಿನ್ನದ ಮಾಸ್ಕ್ ಧರಿಸಿ ಗಮನಸೆಳೆದ ಉದ್ಯಮಿ!

ಭುವನೇಶ್ವರ: ಕೊರೊನಾ ಮಹಾಮಾರಿ ದೇಶವನ್ನು ಒಕ್ಕರಿಸಿದ ಬಳಿಕ ಸ್ಯಾನಿಟೈಸರ್ ಬಳಕೆ ಹಾಗೂ ಮಾಸ್ಕ್ ಗೆ ತುಂಬಾನೆ ಪ್ರಾಮುಖ್ಯತೆ ಕೊಡಲಾಗುತ್ತಿದೆ. ಮಾಸ್ಕ್ ಇಲ್ಲದೆ ಹೊರಗಡೆ ಓಡಾಡುವಂತಿಲ್ಲ. ಕೆಲವೆಡೆ ಪೊಲೀಸರು ಆಸ್ಕ್ ಧರಿಸಿದ್ದಕ್ಕೆ ದಂಡ ವಿಧಿಸಿರುವ ಪ್ರಸಂಗಗಳೂ ಇವೆ. ಈ ಮಧ್ಯೆ ಮಾಸ್ಕ್ ನಲ್ಲೂ ಫ್ಯಾಶನ್ ಕಂಡುಕೊಂಡಿದ್ದು, ಉದ್ಯಮಿಗಳು ಚಿನ್ನದ ಮಾಸ್ಕ್ ಮೊರೆ ಹೋಗಿದ್ದಾರೆ.   ಹೌದು. ಪುಣೆ ವ್ಯಕ್ತಿಯ ಬಳಿಕ ಇದೀಗ ಒಡಿಶಾದ ಕತಕ್ ಮೂಲದ ಉದ್ಯಮಿ ಅಲೋಕ್ ಮೊಹಂತಿ 3.5 …

Read More »

ಭಾರತ ದಲ್ಲಿ 10ಲಕ್ಷ ದಾಟಿದೆ ಸೋಂಕಿತ ರ ಸಂಖ್ಯೆ..

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಎಂಬ ಹೆಮ್ಮಾರಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಭಾರತದಲ್ಲಿ ಕೊರೊನಾ ಸೋಂಕು ದಾಖಲೆ ಬರೆದಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ. ಗುರುವಾರ ಒಂದೇ ದಿನ 34,956 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 10,03,832ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 687 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನೂ 3,42,473 ಸಕ್ರೀಯ ಪ್ರಕರಣಗಳಿದ್ದು, …

Read More »

ಕಾಮುಕನೊಬ್ಬ ತನ್ನ 7 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಉದಯಪುರ: ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಕಾಮುಕನೊಬ್ಬ ತನ್ನ 7 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಗೋವರ್ಧನ ವಿಲಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ಸುರ್ಫಲಾ ಕಾಯ ಗ್ರಾಮದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. 36 ವರ್ಷದ ಟೆಂಪೋ ಚಾಲಕನನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ತಾಯಿ ದೂರು ನೀಡಿದ್ದು ಗಂಭೀರ ಸ್ಥಿತಿಯಲ್ಲಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಕಾಯಿದೆಯಡಿ …

Read More »

ಮೇಕೆದಾಟು ಅಣೆಕಟ್ಟು ಕಟ್ಟುವ ಕರ್ನಾಟಕದ ಮನವಿ ಪುರಸ್ಕರಿಸುವಂತೆ ಮನವಿ

ನವದೆಹಲಿ : ಮೇಕೆದಾಟು ಸಮಾನಾಂತರ ಅಣೆಕಟ್ಟು ಕಟ್ಟುವ ಕರ್ನಾಟಕ ಸರ್ಕಾರದ ಮನವಿಯನ್ನು ಕೂಡಲೇ ಪುರಸ್ಕರಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಕೇಂದ್ರದ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು. ಕೇಂದ್ರದ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಮತ್ತು ಸುರೇಶ್ ಅಂಗಡಿ ಅವರೊಂದಿಗೆ ನವದೆಹಲಿ ಯ ಜಲಶಕ್ತಿ ಸಚಿವಾಲಯದ ಕಚೇರಿಯಲ್ಲಿ ನಡೆದ ಈ ಭೇಟಿಯ ಸಮಯದಲ್ಲಿ ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು …

Read More »

ತವರು ಮನೆ ನೆನಪು ಮಾಡಿಕೊಂಡ ದೀಪಿಕಾ ಪಡುಕೋಣೆ…………..

ಮುಂಬೈ: ಬಾಲಿವುಡ್ ಪದ್ಮಾವತಿ ದೀಪಿಕಾ ಪಡುಕೋಣೆ ತವರು ಮನೆ ನೆನಪು ಮಾಡಿಕೊಂಡಿದ್ದಾರೆ. ಲಾಕ್‍ಡೌನ್‍ನಿಂದ ಸ್ಥಗಿತಗೊಂಡಿದ್ದ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೂ ಶೂಟಿಂಗ್ ಆರಂಭಗೊಂಡಿಲ್ಲ. ಕಳೆದ ಮೂರು ತಿಂಗಳಿನಿಂದ ಸೆಲೆಬ್ರಿಟಿಗಳು ಮನೆಯಲ್ಲಿಯೇ ಲಾಕ್ ಆಗಿದ್ದಾರೆ. ಕನ್ನಡತಿ ದೀಪಿಕಾ ಪಡುಕೋಣೆ ಸಹ ಮುಂಬೈನಲ್ಲಿದ್ದು, ಪತಿ ರಣ್‍ವೀರ್ ಜೊತೆ ಲಾಕ್‍ಡೌನ್ ಸಮಯವನ್ನು ಕಳೆಯುತ್ತಿದ್ದಾರೆ. ಇಬ್ಬರು ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟಿವ್ ಆಗಿರುವ ಮೂಲಕ ಅಭಿಮಾನಿಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿರುತ್ತಾರೆ. ಇನ್‍ಸ್ಟಾಗ್ರಾಂನಲ್ಲಿ ಅಭಿಮಾನಿ, ನೀವು ಲಾಕ್‍ಡೌನ್ …

Read More »

ಬೆಳಗ್ಗೆ ಸುರಿದ ಮಳೆಗೆ ತತ್ತರಿಸಿದ ಮುಂಬೈ………………

ಮುಂಬೈ: ಇಂದು ಬೆಳಗ್ಗೆ ಸುರಿದ ವರ್ಷಧಾರೆಗೆ ವಾಣಿಜ್ಯ ನಗರಿ ಮುಂಬೈ ತತ್ತರಿಸಿದ್ದು, ಎಲ್ಲಿ ನೋಡಿದಲ್ಲಿ ನೀರು ಕಾಣಿಸುತ್ತಿದೆ. ರಸ್ತೆಯಲ್ಲಿ ನೀರು ಹರಿಯುತ್ತಿರೋದರಿಂದ ವಾಹನ ಸವಾರರು ಟ್ರಾಫಿಕ್ ನಲ್ಲಿ ಸಿಲುಕಿ ಪರದಾಡುವಂತಾಯ್ತು. ಹವಾಮಾನ ಇಲಾಖೆ ಮುಂಬೈನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ. ಸಮುದ್ರದಲ್ಲಿ ಮೂರು ಮೀಟರ್ ಗಿಂತ ಎತ್ತರ ಅಲೆಗಳು ಸೃಷ್ಟಿಯಾಗಲಿವೆ. ಹಾಗಾಗಿ ಸಮುದ್ರ ತೀರಗಳಿಗೆ ಸಾರ್ವಜನಿಕರಿಗೆ ಪ್ರವೇಶ …

Read More »