ಕೋಲಾರ: ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ ವರ್ತಕರಿಂದ ಪ್ರತಿಭಟನೆಯನ್ನು ಮಾಡುತ್ತಿದ್ದು, ಪ್ರತಿಭಟನೆಯಲ್ಲಿ ಕೋವಿಡ್ ನಿಯಮಗಳು ಉಲ್ಲುಂಘನೆ ಮಾಡಿದ್ದಾರೆ. ಪ್ರತಿಭಟನೆಯಲ್ಲಿ ಸಮಾಜಿಕ ಅಂತರ ಪಾಲಿಸದೇ ನಿರ್ಲಕ್ಷತೆಯನ್ನ ವಹಿಸಿದ್ದಾರೆ. ಮಾರುಕಟ್ಟೆಯ ಸೆಸ್ ಪಾವತಿಸುವುದಕ್ಕೆ ವಿರೋಧಿಸಿ ಪ್ರತಿಭಟನೆ ಮಾಡಿತ್ತಿದ್ದು, ಕೃಷಿ ಉತ್ಪನ್ನಗಳ ಖರೀದಿಗಾಗಿ ವರ್ತಕರು ಸಮಿತಿಗೆ ಪಾವತಿಸುವ ಸೆಸ್ ಶುಲ್ಕ ಮಾಡಿದ್ದಾರೆ. ಕೋವಿಡ್ ಸಮಸ್ಯೆ ಬಗೆಹರಿಯುವರೆಗು ಸೆಸ್ ಪಾವತಿ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಕಳೆದ ಎರಡು ತಿಂಗಳಿನಿಂದ ಸೆಸ್ ಸಂಗ್ರಹ ನಿಲ್ಲಿಸಿದ್ದ ಎಪಿಎಂಸಿ ಕೊರೋನಾ ಮುಂದುವರೆದಿದ್ದರೂ …
Read More »ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಧುಗಿರಿ: ತಾಲ್ಲೂಕಿನಲ್ಲಿ 12 ಜನರಿಗೆ ಶುಕ್ರವಾರ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 38 ವರ್ಷದ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಎಲ್ಲರ ನಿದ್ದೆಗೆಡಿಸಿದೆ. ತಾಲ್ಲೂಕಿನ ಶ್ರಾವಂಡನಹಳ್ಳಿಯ 26 ವರ್ಷದ ಮಹಿಳೆ, ಗೊಂದಿಹಳ್ಳಿಯ 65 ವರ್ಷದ ವೃದ್ದ, ಚಿಕ್ಕದಾಳವಟ್ಟದ 63 ವರ್ಷದ ವೃದ್ಧ, ಅಮರಾವತಿಯ 22 ವರ್ಷ ಯುವಕ, ಆಚೇನಹಳ್ಳಿಯ 8 ವರ್ಷದ ಬಾಲಕ, ಮಧುಗಿರಿ …
Read More »ಅಭಿಮಾನಿಗಳ ಬಗ್ಗೆ ಡಿಂಪಲ್ ಕ್ವೀನ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಬರೆದಿದ್ದಾರೆ…!
ಅಭಿಮಾನಿಗಳಂದ್ರೆನೇ ಹಾಗೇ, ನೆಚ್ಚಿನ ನಟನಟಿಯರ ಹುಟ್ಟುಹಬ್ಬ ಬರ್ಲಿ, ಸಿನಿಮಾ ರಿಲೀಸ್ ಆಗಲಿ, ಹಬ್ಬದಂತೆ ಆಚರಿಸ್ತಾರೆ, ಅವರನ್ನ ನೋಡಿ ಕಣ್ತುಂಬಿಕೊಳ್ಳೋಕ್ಕೆ ಗಂಟೆಗಟ್ಟಲೇ ಮನೆಮುಂದೆ ಕಾದು ಕೂತಿರ್ತಾರೆ, ಒಮ್ಮೆ ನೇರವಾಗಿ ತಮ್ಮ ನೆಚ್ಚಿನ ಸ್ಟಾರ್ಗಳನ್ನ ಮಾತನಾಡಿಸಿ ಬಿಟ್ರೆ ಅದಕ್ಕಿಂತ ಖುಷಿ ಮತ್ತೊಂದಿಲ್ಲ, ಅದನ್ನ ಹೊರತುಪಡಿಸಿ ಬೇರೇನನ್ನ ಬಯಸೋದು ಇಲ್ಲ ಅಭಿಮಾನಿಗಳು, ಅದಕ್ಕೆ ಅಭಿಮಾನಿಗಳನ್ನ ದೇವರು ಅಂದ್ರು ಡಾ.ರಾಜ್ ಕುಮಾರ್. ಇದೀಗ ಅಂತಹ ಒಬ್ಬ ಅಭಿಮಾನಿಯ ಬಗ್ಗೆ ಡಿಂಪಲ್ ಕ್ವೀನ್ ರಚಿತಾರಾಮ್ ತಮ್ಮ …
Read More »ಉಚಿತ ಪಡಿತರ ಯೋಜನೆ ಫಲಾನುಭವಿಗಳಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರಗಳು ಫೇಲ್
ನವದೆಹಲಿ: ಲಾಕ್‍ಡೌನ್‍ನಿಂದ ಅತಿ ಹೆಚ್ಚು ಹೊಡೆತ ತಿಂದವರು ವಲಸೆ ಕಾರ್ಮಿಕರು. ಇವರ ಹಸಿವು ನೀಗಿಸಲೆಂದೇ ಕೇಂದ್ರ ಸರ್ಕಾರವೇನೋ ಉಚಿತ ಪಡಿತರ ಯೋಜನೆ ಜಾರಿಗೆ ತಂದಿತು. ಆದರೆ ಕೇಂದ್ರ ಕೊಟ್ಟಿದ್ದನ್ನ ಫಲಾನುಭವಿಗಳಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರಗಳು ಫೇಲ್ ಆಗಿವೆ. ಈ ಮಾತನ್ನ ನಾವು ಹೇಳ್ತಾ ಇಲ್ಲ, ಕೇಂದ್ರ ಸರ್ಕಾರವೇ ಈ ಬಗ್ಗೆ ವರದಿ ಬಿಡುಗಡೆ ಮಾಡಿದ್ದು ಅದರಲ್ಲಿ ರಾಜ್ಯಗಳ ಬೇಜವಾಬ್ದಾರಿ ಅನಾವರಣವಾಗಿದೆ. ಹೌದು. ಲಾಕ್‍ಡೌನ್ ಅವಧಿಯಲ್ಲಿ ಕೊರೊನಾ ಬಿಕ್ಕಟ್ಟಿನ ಹೆಚ್ಚು ಹೊಡೆತ …
Read More »ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಬೆಂಗಳೂರಿನಲ್ಲಿ ಲಾಕ್ಡೌನ್ ಜಾರಿಯಾಗಲಿದೆ…?
ಕೊರೊನಾ ಸೋಂಕು ತಡೆಯುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ್ದು ಭಾನುವಾರ ಲಾಕ್ಡೌನ್ ಜಾರಿ ಮಾಡಲಾಗುವುದು. ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಬೆಂಗಳೂರಿನಲ್ಲಿ ಲಾಕ್ಡೌನ್ ಜಾರಿಯಾಗಲಿದೆ. ಅಗತ್ಯ ಸೇವೆ, ವಸ್ತುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳಿಗೆ ನಿರ್ಬಂಧವಿರುತ್ತದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಈ ಕುರಿತು ಮಾಹಿತಿ ನೀಡಿದ್ದು, ಈ ಸಂದರ್ಭದಲ್ಲಿ ಪ್ರತಿಯೊಬ್ಬರೂ ನಿಯಮಗಳನ್ನು ಪಾಲಿಸಬೇಕೆಂದು ತಿಳಿಸಿದ್ದಾರೆ.
Read More »ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಭವಿಸಿದೆ.
ಬೆಳಗಾವಿ: ಅಥಣಿ ತಾಲ್ಲೂಕಿನ ರಡೇರಹಟ್ಟಿ ಗ್ರಾಮದ ಪದವಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಭವಿಸಿದೆ. ಶಿವಮೂರ್ತಿ ಸುರೇಶ ದಳವಾಯಿ (23) ಮೃತ ವಿದ್ಯಾರ್ಥಿ. ಈತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಸಾವಿಗೆ ಏನು ಕಾರಣವೆಂದು ತಿಳಿದು ಬಂದಿಲ್ಲ. ಈತನ ಮನೆಯವರು ಕೆಲಸಕ್ಕೆ ತೆರಳಿದ ವೇಳೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ …
Read More »ಮೊಬೈಲ್ ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಪೋಷಕರು ಬೈದಿದಕ್ಕೆ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ರಹ್ಮಪುರ ಬಡಾವಣೆಯಲ್ಲಿ ನಡೆದಿದೆ…
ಕಲಬುರಗಿ: ಮೊಬೈಲ್ ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಪೋಷಕರು ಬೈದಿದಕ್ಕೆ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ರಹ್ಮಪುರ ಬಡಾವಣೆಯಲ್ಲಿ ನಡೆದಿದೆ. ರಾಹುಲ್ (15) ಆತ್ಮಹತ್ಯೆಗೆ ಶರಣಾದ ಬಾಲಕ. ಗುರುವಾರ ಸಂಜೆ ಮೊಬೈಲ್ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಹೆತ್ತವರು ಬೈದಿದ್ದಾರೆ. ಇದರಿಂದ ಮನನೊಂದು ರಾತ್ರಿ ಮನೆಯಲ್ಲೇ ಫ್ಯಾನ್ ಗೆ ನೇಣು ಬಿಗಿದುಕೊಂಡಿದ್ದಾನೆ. ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಿಲು ಶಾಸಕರೇಲ್ಲರೂ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರಿಗೆ ಮನವಿ ಮಾಡಿಕೊಂಡಿದ್ದೆವೆ.
ಬೀದರ : ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಿಲು ಶಾಸಕರೇಲ್ಲರೂ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರಿಗೆ ಮನವಿ ಮಾಡಿಕೊಂಡಿದ್ದೆವೆ. ಅವರು ಸಹ ಭರವಸೆ ನೀಡಿದ್ದಾರೆ ಎಂದು ಜೆಡಿಎಸ್ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ಕಾರಾಂಜ ಜಲಾಶಯದ ಬಳಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರನ್ನು ಭೇಟಿಯಾದ ನಂತರ ಮಾತನಾಡಿದ ಅವರು, ಜಿಲ್ಲೆಯ ಕಾರಾಂಜ ಜಲಾಶಯದಲ್ಲಿ ಪ್ರಸ್ತುತ 0.3 ಟಿಎಂಸಿ ನೀರಿದ್ದು ನೀರಿನ ಸಮಸ್ಯೆ ಎದುರಾಗಿದೆ. ಜಲಾಶಯಕ್ಕೆ ಗೋದಾವರಿ ಇಲ್ಲವೇ …
Read More »ಪಶುಸಂಗೋಪನೆ, ಹಜ್ ಮತ್ತು ವಕ್ಷ್ ಸಚಿವ ಪ್ರಭು ಚವ್ಹಾಣ್ ಅವರು ಸೋಮವಾರ(ಜು.6) ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ…
ಬೆಳಗಾವಿ: ಪಶುಸಂಗೋಪನೆ, ಹಜ್ ಮತ್ತು ವಕ್ಷ್ ಸಚಿವ ಪ್ರಭು ಚವ್ಹಾಣ್ ಅವರು ಸೋಮವಾರ(ಜು.6) ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಅಥಣಿಯ ಪಶು ವ್ಯದ್ಯಕಿಯ ಕಾಲೇಜಿನ ಪ್ರಗತಿ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ರಸ್ತೆ ಮೂಲಕ ಬೆಳಗಾವಿಗೆ ಆಗಮಿಸಿ 12.30ಕ್ಕೆ ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ನಗರದ ಪಶುಸಂಗೋಪನಾ ಇಲಾಖೆಯ ಕಚೇರಿಯಲ್ಲಿ ಪಶುಸಂಗೋಪನಾ ಇಲಾಖೆ, ಹಜ್ ಮತ್ತು ವಕ್ಷ್ …
Read More »ರಾಜ್ಯದ ಎರಡನೇಯ ರಾಜಧಾನಿಯನ್ನಾಗಿ ಮಾಡಲು ಸರ್ಕಾರ 500 ಕೋಟಿ….?
ಬೆಳಗಾವಿ- ಬೆಳಗಾವಿ ರಾಜ್ಯದ ಎರಡನೇಯ ರಾಜಧಾನಿಯನ್ನಾಗಿ ಮಾಡಲು ಸರ್ಕಾರ 500 ಕೋಟಿ ಖರ್ಚು ಮಾಡಿ ಸುವರ್ಣ ವಿಧಾನ ಸೌಧ ಕಟ್ಟಡವನ್ನು ನಿರ್ಮಿಸಿದ್ದು,ಸುವರ್ಣ ಸೌಧಕ್ಕೆ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡಬಾರದು,ರಾಜ್ಯ ಮಟ್ಟದ ಕಚೇರಿಗಳನ್ನು ಮಾತ್ರ ಸ್ಥಳಾಂತರ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. ಕನ್ನಡ ಸಂಘಟನೆಗಳ ಕ್ರೀಯಾ ಸಮೀತಿಯ ಅದ್ಯಕ್ಷ ಅಶೋಕ ಚಂದರಗಿ ಅವರ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಕನ್ನಡಪರ ಸಂಘಟನೆಗಳು,ಬೆಳಗಾವಿಯ ಸುವರ್ಣ ಸೌಧಕ್ಕೆ ಜಿಲ್ಲಾ …
Read More »