Breaking News

ರಾಷ್ಟ್ರೀಯ

BIG-BREAKINGಸಾರ್ವಜನಿಕರ ಆಕ್ರೋಶಕ್ಕೆ ತಲೆಬಾಗಿದ ಸರ್ಕಾರ,ಬೈಕ್ ಸಂಚಾರ ಆದೇಶ ವಾಪಸ್,

ಬೆಂಗಳೂರು: ಏಪ್ರಿಲ್ 20ರ ನಂತರ ಬೈಕ್ ಸಂಚಾರಕ್ಕೆ ನೀಡಿದ್ದ ಅವಕಾಶವನ್ನು ಸರ್ಕಾರ ವಾಪಸ್ ತೆಗೆದುಕೊಂಡಿದೆ. ಸಾರ್ವಜನಿಕರ ಆಕ್ರೋಶಕ್ಕೆ ಸರ್ಕಾರ ಕೊನೆಗೂ ತಲೆಬಾಗಿದೆ. ಈ ಕುರಿತು ಅಧಿಕೃತ ಪ್ರಕಟನೆ ಹೊರಡಿಸಿರುವ ಸರ್ಕಾರ ತನ್ನ ನಿರ್ಧಾರವನ್ನು ವಿಮರ್ಶಿಸಿಕೊಂಡಿದೆ. ಜನಾಭಿಪ್ರಾಯದ ಹಿನ್ನೆಲೆಯಲ್ಲಿ, ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಈ ಕೆಳಕಂಡ ನಿರ್ಣಯಗಳನ್ನು ಪುನರ್ ವಿಮರ್ಶೆ ಮಾಡಿ ಸರ್ಕಾರ ಈ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. 1. ದ್ವಿ-ಚಕ್ರ ವಾಹನಗಳ (Two-Wheeler) ಮುಕ್ತ ಸಂಚಾರಕ್ಕೆ ಅವಕಾಶ ಕೊಡುತ್ತೇವೆಂಬ …

Read More »

ಪುತ್ತೂರು ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ 8 ಅಡಿ ಆಳದಿಂದ ಚಿಮ್ಮಿದ ಜಲಧಾರೆ- ಪವಾಡ ಎಂದ ಭಕ್ತರು

ಮಂಗಳೂರು: ದೇಶವೇ ಕೊರೊನಾ ಭೀತಿಯಿಂದ ಲಾಕ್‍ಡೌನ್ ಆಗಿದೆ. ಆದರೆ ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಾಲಿಂಗೇಶ್ವರ ಆವರಣದಲ್ಲಿ ಕೇವಲ 8 ಅಡಿಯಲ್ಲಿ ನೀರು ಸಿಕ್ಕಿ ಅಚ್ಚರಿ ಘಟನೆ ನಡೆದಿದೆ. ಪುತ್ತೂರು ಮಹಾಲಿಂಗೇಶ್ವರನ ಜಾತ್ರೆ ಅಂದ್ರೆ ಜಿಲ್ಲೆಯ ದೊಡ್ಡ ಜಾತ್ರೆ. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್‍ನಿಂದ ಭಕ್ತರಿಗೆ ಪ್ರವೇಶ ಇಲ್ಲದೆ ಶಾಸ್ತ್ರೋಕ್ತವಾಗಿ ಜಾತ್ರೆ ನಡೆಯುತ್ತಿದೆ. ಜಾತ್ರಾ ಸಂದರ್ಭದ ದೇಗುಲದ ಆವರಣದ ಅಯ್ಯಪ್ಪಸ್ವಾಮಿ ಗುಡಿ ಬಳಿ, ದೇವರ ಅವಭೃತ …

Read More »

ಗ್ರೀನ್ ಝೋನ್‍ನಲ್ಲಿದ್ದರೂ ರಾಯಚೂರಿನ ಬಡಾವಣೆಗಳೆಲ್ಲ ಸೀಲ್‍ಡೌನ್

ರಾಯಚೂರು: ಕೊರೊನಾ ವೈರಸ್ ಸೋಂಕು ತಡೆಗಟ್ಟುವ ಹಿನ್ನೆಲೆ ರಾಯಚೂರು ಜಿಲ್ಲೆಯಾದ್ಯಂತ ಲಾಕ್‍ಡೌನ್ ಬಿಗಿಗೊಳಿಸಲಾಗಿದೆ. ಒಂದು ಬಡಾವಣೆಯಿಂದ ಇನ್ನೊಂದು ಬಡಾವಣೆಗೆ ಹೋಗದಂತೆ ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳಲ್ಲಿ ಒಟ್ಟು 4000 ಕಡೆ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. ಈ ಮೂಲಕ ಅನಾವಶ್ಯಕವಾಗಿ ಜನ ಒಂದೆಡೆಯಿಂದ ಇನ್ನೊಂದೆಡೆಗೆ ತಿರುಗಾಡದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಆಸ್ಪತ್ರೆಗಳಿಗೆ ಮತ್ತು ಸರ್ಕಾರಿ ಕೆಲಸಕ್ಕೆ ಹೋಗುವವರು ಪಾಸ್ ತೋರಿಸಿದಲ್ಲಿ ಮಾತ್ರ ಬಿಡಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು …

Read More »

ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳಾ ಕಾರ್ಮಿಕರು ಸಾವು

ಚಿಕ್ಕಮಗಳೂರು: ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳಾ ಕಾರ್ಮಿಕರು ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಕಳಸದ ಬಾಳೆಹೊಳೆ ಸಮೀಪದ ಹಿತ್ಲುಮಕ್ಕಿ ಗ್ರಾಮದಲ್ಲಿ ಶನಿವಾರ ನಡೆದಿದೆ. ತಮಿಳುನಾಡು ಮೂಲದ ಜ್ಯೋತಿ (28), ಮಾದಮ್ಮ(65), ಮಾರಿ (27) ಮೃತ ತೋಟದ ಕಾರ್ಮಿಕರು. ಮಾದಮ್ಮ ಹಾಗೂ ಜ್ಯೋತಿ ತಾಯಿ ಮಗಳಾಗಿದ್ದು, ಮಾರಿ ಸಂಬಂಧಿ ಎಂದು ತಿಳಿದು ಬಂದಿದೆ. ತಮಿಳುನಾಡಿನ ಸೇಲಂ ಧರ್ಮಪುರಿ ಜಿಲ್ಲೆಯ ಪಾಪರೆಟ್ಟಿ ತಾಲೂಕಿನ 14 ಕಾರ್ಮಿಕರು ಕಳೆದ ಕೆಲ ತಿಂಗಳ …

Read More »

ಈ ವೇಳೆ ವಿಪಕ್ಷ ಹೇಗಿರಬೇಕೆಂದು ರಾಹುಲ್ ಗಾಂಧಿ ತೋರಿಸಿದ್ದಾರೆ: ಶಿವಸೇನೆ

ಮುಂಬೈ: ದೇಶ ಸಂಕಷ್ಟಕ್ಕೆ ಸಿಲುಕಿರುವ ಈ ಸಮಯದಲ್ಲಿ ವಿರೋಧ ಪಕ್ಷ ಹೇಗೆ ವರ್ತಿಸಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೋರಿಸಿಕೊಟ್ಟಿದ್ದಾರೆ ಎಂದು ರಾಹುಲ್ ನಡೆಯನ್ನು ಶಿವಸೇನೆ ಮೆಚ್ಚಿಕೊಂಡಿದೆ. ಈ ವಿಚಾರವಾಗಿ ಪಕ್ಷದ ಮುಖವಾಣಿ ಸಾಮ್ನಾದಲ್ಲಿ ದೇಶದ ಹಿತಾಸಕ್ತಿಗಾಗಿ ರಾಹುಲ್ ಗಾಂಧಿ ಅವರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು, ಕೊರೊನಾ ಸಾಂಕ್ರಾಮಿಕ ರೋಗದ ಬಗ್ಗೆ ಕುಳಿತು ಚರ್ಚಿಸಬೇಕು. ರಾಹುಲ್ ಗಾಂಧಿ ಮತ್ತು ಮೋದಿ ಅವರ ರಾಜಕೀಯ ಹಿತಾಸಕ್ತಿಗಳು ಬೇರೆ ಇರಬಹುದು. …

Read More »

ಅಕ್ಷಯ ಪಾತ್ರೆ ಮೂಲಕ ನಟಿ ರವೀನಾ ಟಂಡನ್ ಸಹಾಯ

ನವದೆಹಲಿ: ಕೆಜಿಎಫ್-2 ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಹೆಚ್ಚು ಸುದ್ದಿಯಾಗುತ್ತಿರುವ ಬಾಲಿವುಡ್ ನಟಿ ರವೀನಾ ಟಂಡನ್, ತಮ್ಮ ವಿವಿಧ ಕೆಲಸಗಳ ಮೂಲಕ ಸಹ ಇತರರಿಗೆ ಮಾದರಿಯಾಗಿದ್ದಾರೆ. ಇದೀಗ ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭದಲ್ಲಿಯೂ ಸಹಾಯ ಹಸ್ತ ಚಾಚಿದ್ದು, ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಟಿ ರವೀನಾ ಟಂಡನ್ ಲಾಕ್‍ಡೌನ್ ದಿನಗಳನ್ನು ಕುಟುಂಬದೊಂದಿಗೆ ಎಂಜಾಯ್ ಮಾಡುತ್ತಿದ್ದು, ಮೊಮ್ಮಕ್ಕಳೊಂದಿಗೆ ಆಟವಾಡುವ ಮೂಲಕ ಕಾಲ ಕಳೆಯುತ್ತಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿಯೂ ಹಂಚಿಕೊಂಡಿದ್ದಾರೆ. ರವೀನಾ ತಮ್ಮ ಚಟುವಟಿಕೆಗಳ ಕುರಿತು …

Read More »

ಹುಬ್ಬಳ್ಳಿ:ಜಗದೀಶ್ ಶೆಟ್ಟರ್ ಪುತ್ರನಿಂದ ಆಹಾರ ಕಿಟ್ ವಿತರಣೆ……

ಹುಬ್ಬಳ್ಳಿ: ಕೊರೊನಾ ವೈರಸ್ ಲಾಕ್‍ಡೌನ್ ನಡುವೆ ಸಚಿವ ಜಗದೀಶ್ ಶೆಟ್ಟರ್ ಅವರ ಮಗ ಸರ್ಕಾರದ ಆಹಾರ ಕಿಟ್ ವಿತರಣೆ ಮಾಡಿರುವುದು ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಹೌದು, ಯಾವುದೇ ಚುನಾಯಿತ ಪ್ರತಿನಿಧಿ ಅಲ್ಲದಿದ್ದರು ಕೂಡ ಜಗದೀಶ್ ಶೆಟ್ಟರ್ ಅವರ ಪುತ್ರ ಸಂಕಲ್ಪ ಶೆಟ್ಟರ್ ಕಾರ್ಮಿಕ ಇಲಾಖೆಯ ವತಿಯಿಂದ ವಿತರಿಸಲಾಗುತ್ತಿರುವ ಆಹಾರ ಕಿಟ್ ವಿತರಣೆ ಮಾಡಿ ಫೇಸ್‍ಬುಕ್ ಪೋಸ್ಟ್ ಹಾಕಿರುವುದು ಟೀಕೆಗೆ ಗುರಿಯಾಗಿದೆ. ಅಲ್ಲದೇ ಯಾವುದೇ ಚುನಾಯಿತ ವ್ಯಕ್ತಿ ಆಗಿಲ್ಲದಿದ್ದರು ಕೂಡ ತಂದೆಯ …

Read More »

ದೇಹದ ಉಷ್ಣತೆಯ ಚೆಕ್ಕಿಂಗ್ ಸ್ಕ್ರೀನಿಂಗ್ ಮಷಿನ್ಕೈಕೊಟ್ಟಿದೆ.ಅಧಿಕಾರಿಗಳ ವಿರುದ್ಧ ಗ್ರಾಮಸ್ಥರೂ ಆಕ್ರೋಶ

ಅಥಣಿ: ಕೊರೊನಾ ವೈರಸ್ ಮೊದಲನೇ ಹಂತದ ಮಾನವನ ದೇಹದ ಉಷ್ಣತೆಯ ಚೆಕ್ಕಿಂಗ್ ಸ್ಕ್ರೀನಿಂಗ್ ಮಷಿನ್ ಕೈಕೊಟ್ಟಿರುವ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ. ಕೊರೊನಾ ಭೀತಿಯಿಂದ ಬೆಳಗಾವಿ ಜಿಲ್ಲೆಯು ತತ್ತರಿಸಿದೆ. ಈ ಮಧ್ಯೆ ಜಿಲ್ಲೆಯ ಅಥಣಿ ತಾಲೂಕಿನ ಗಡಿ ಹೊಂದಿರುವ ಗ್ರಾಮಗಳಿಗೆ ಮಹಾರಾಷ್ಟ್ರದಿಂದ, ಜನರು ಒಳ ರಸ್ತೆಯಿಂದ ನುಸುಳುತ್ತಿದ್ದಾರೆ. ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಆತಂಕ ಸೃಷ್ಟಿಸಿದೆ. ಮಹಾರಾಷ್ಟ್ರ ಮೂಲದ ಇಬ್ಬರು ತಾಲೂಕಿನ ಕಕಮರಿ ಗ್ರಾಮದ ಸಂಬಂಧಿಕರ ಮನೆಗೆ ಬಂದಾಗ ಗ್ರಾಮಸ್ಥರು …

Read More »

ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅನುಮತಿ ನೀಡುವುದಿಲ್ಲ:ರಮೇಶ್ ಜಾರಕಿಹೊಳಿ

ಬೆಳಗಾವಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಕೊರೋನಾ ಸೋಂಕು ಹರಡುತ್ತಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅನುಮತಿ ನೀಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಕೊರೊನಾ ನಿಯಂತ್ರಣ ಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಬೆಳಗಾವಿ ನಗರದ ಪ್ರವಾಸಿಮಂದಿರದಲ್ಲಿ ಶನಿವಾರ (ಏ.೧೮) ಜಿಲ್ಲೆಯ ಉನ್ನತ ಅಧಿಕಾರಿಗಳ ಜೊತೆಗೆ ನಡೆದ ಸಭೆ ಯಲ್ಲಿ ಮಾತನಾಡಿದರು. ಸದ್ಯಕ್ಕೆ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿರುವುದರಿಂದ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಆದ್ದರಿಂದ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ …

Read More »

ಕಳ್ಳಭಟ್ಟಿ ತಯಾರಿಕಾ ಅಡ್ಡೆ ಮೇಲೆ ದಾಳಿ, ಕಚ್ಚಾ ಸಾಮಗ್ರಿ ನಾಶ ಪಡಿಸಿದ ಪೊಲೀಸರು

ತಾಳಿಕೋಟೆ: ತಾಲ್ಲೂಕಿನ ಗಡಿ ಸೋಮನಾಳ ಗ್ರಾಮದ ತಾಂಡಾಕ್ಕೆ ಹೊಂದಿಕೊಂಡಿರುವ ಜಮೀನೊಂದರಲ್ಲಿ ಕಳ್ಳಬಟ್ಟಿ ತಯಾರಿಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪಿ.ಎಸ್ ಐ ವಸಂತ ಬಂಡಗಾರ ಅವರ ನೇತೃತ್ವದಲ್ಲಿ ಶನಿವಾರ ಮದ್ಯಾಹ್ನ ದಾಳಿ ಮಾಡಿ ಜಮೀನಿನಲ್ಲಿ ಹೂತ್ತಿಟ್ಟ ಸುಮಾರು ೨೦೦ ಲೀಟರ್‌ಗೂ ಅಧಿಕ ಕಚ್ಚಾ ಸಾಮಗ್ರಿಗಳನ್ನು ನಾಶ ಪಡಿಸಿದ್ದಾರೆ. ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಸರ್ಕಾರವು ಮದ್ಯ ಮಾರಾಟವನ್ನು ಸ್ಥಗಿತಗೊಳಿಸಿದ್ದರಿಂದ ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ಕೆಲವರು ಕಳ್ಳಭಟ್ಟಿ ಸರಾಯಿ ತಯಾರಿಸಿ …

Read More »