Breaking News

ರಾಷ್ಟ್ರೀಯ

ಸೆ.5ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು: ಸಿಎಂ ವಿರುದ್ಧ ಮುಡಾ ಹಗರಣಕ್ಕೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ವಿಚಾರ ಸಂಬಂಧ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಲಹೆ ನೀಡುವಂತ ತೀರ್ಮಾನ, ಆ ಬಳಿಕ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಖಂಡಿಸುವಂತ ನಿರ್ಣಯ ಕೈಗೊಳ್ಳಲಾಗಿತ್ತು. ಈಗ ಸೆಪ್ಟೆಂಬರ್.5ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಮಾಡಲಾಗಿದೆ.   ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 05-09-2024ರಂದು ಗುರುವಾರ …

Read More »

ಡಿಜಿಟಲ್ ಮೀಡಿಯಾ’ಗಳಿಗೂ ಸರ್ಕಾರಿ ಜಾಹೀರಾತು: ಇದು ‘KSDMF’ಗೆ ಸಿಕ್ಕ ಮೊದಲ ಗೆಲುವು- ಅಧ್ಯಕ್ಷ ಸಮೀವುಲ್ಲಾ

ಬೆಂಗಳೂರು : ರಾಜ್ಯ ಸರ್ಕಾರದಿಂದ ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ 2024 ಪ್ರಕಟಿಸಲಾಗಿದೆ. ಇದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂಗೆ ಸಿಕ್ಕಂತ ಮೊದಲ ಗೆಲುವು ಎಂಬುದಾಗಿ ಅಧ್ಯಕ್ಷರಾದಂತ ಬಿ.ಸಮೀವುಲ್ಲಾ ಬೆಲಗೂರು ಹರ್ಷವನ್ನು ವ್ಯಕ್ತ ಪಡಿಸಿದ್ದಾರೆ.   ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಪ್ರಸ್ತುತ ಜಗತ್ತಿನ ಮುಂಚೂಣಿ ಮಾಧ್ಯಮ ಡಿಜಿಟಲ್ ಮಾಧ್ಯಮ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಸರ್ಕಾರದ ಮಟ್ಟದಲ್ಲಿ ಡಿಜಿಟಲ್ ಮಾಧ್ಯಮಗಳ ಮಾನ್ಯತೆ ಇರಲಿಲ್ಲ. ಹೀಗಾಗಿ …

Read More »

ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್‌ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಚುನಾವಣೆಯಲ್ಲಿ ಅಕ್ರಮ ಎಸಗುವ ಮೂಲಕ ಜಯಶಾಲಿಯಾಗಿದ್ದಾರೆಂದು ಆರೋಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ದಾವಣಗೆರೆ ಲೋಕಸಭಾ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಪ್ರಭಾ ಮಲ್ಲಿಕಾರ್ಜುನ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಪರಾಜಿತ ಅಭ್ಯರ್ಥಿ ಜಿ.ಎಸ್. ಗಾಯಿತ್ರಿ ಸಿದ್ದೇಶ್ವರ್ ಹಾಗೂ ದಾವಣಗೆರೆ ನಿವಾಸಿ ಸುಭಾನ್ ಖಾನ್ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯು ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಏಕಸದಸ್ಯ ನ್ಯಾಯಪೀಠದ ಮಂಗಳವಾರ ವಿಚಾರಣೆಗೆ ನಡೆಸಿತು. ವಾದ …

Read More »

ತಜ್ಞರು, ಸಮುದಾಯದ ನಾಯಕರೊಂದಿಗೆ ಚರ್ಚಿಸಿ ಒಳ ಮೀಸಲಾತಿ ಜಾರಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ನಾನು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಸಚಿವರಾದ ಕೆ.ಹೆಚ್. ಮುನಿಯಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಹೆಚ್. ಆಂಜನೇಯ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಎಲ್. ಹನುಮಂತಯ್ಯ ಮತ್ತು ದಲಿತ ಶಾಸಕರು ಹಾಗೂ ಮುಖಂಡರ ನಿಯೋಗ ಇಂದು ಸಿಎಂ ಭೇಟಿಯಾಗಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ …

Read More »

ಒಂದು ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ನಾಲ್ವರು ಘಟಾನುಘಟಿ ನಾಯಕರ ಪೈಪೋಟಿ!

ಒಂದು ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ನಾಲ್ವರು ಘಟಾನುಘಟಿ ನಾಯಕರ ಪೈಪೋಟಿ! ನವದೆಹಲಿ, ಆಗಸ್ಟ್ 28: ಹರ್ಯಾಣ ವಿಧಾನಸಭೆ ಚುನಾವಣೆ 2024ರ ದಿನಾಂಕ ಘೋಷಣೆಯಾಗಿದೆ. 90 ಸದಸ್ಯ ಬಲದ ವಿಧಾನಸಭೆಗೆ ಒಂದೇ ಹಂತದಲ್ಲಿ 1/10/2024ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಸರತ್ತು ಆರಂಭಿಸಿದೆ. ಇಂತಹ ಸಂದರ್ಭದಲ್ಲಿ ಒಂದೇ ಕ್ಷೇತ್ರದ ಟಿಕೆಟ್‌ಗಾಗಿ ಘಟಾನುಘಟಿ ನಾಯಕರು ಪೈಪೋಟಿ ನಡೆಸುತ್ತಿರುವುದು ಪಕ್ಷದ ಚಿಂತೆ ಹೆಚ್ಚಿಸಿದೆ. ಬಾದಶಹಪುರ …

Read More »

4 ತಿಂಗಳ ನಂತರ ಆಸ್ಪತ್ರೆಯಿಂದ ಎಸ್.ಎಂ.ಕೃಷ್ಣ ಡಿಸ್ಚಾರ್ಜ್!

ಬೆಂಗಳೂರು: ಶ್ವಾಸಕೋಶ ಸಮಸ್ಯೆಯಿಂದ (Lung problem) ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ (SM Krishna) ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ (Doctor) ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ ಎಂದು ವಿಧಾನ ಪರಿಷತ್​ ಸದಸ್ಯ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.   ಕೃಷ್ಣ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಶ್ವಾಸಕೋಶದ ಸೊಂಕು‌ ನಿವಾರಣೆ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ಮಣಿಪಾಲ ಆಸ್ಪತ್ರೆ …

Read More »

ನೆಲಕ್ಕುರುಳಿದ ಛತ್ರಪತಿ ಶಿವಾಜಿ ಪ್ರತಿಮೆ

ಮುಂಬೈ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜ್‌ ಪ್ರತಿಮೆ ಸೋಮವಾರ ನೆಲಕ್ಕುರುಳಿದೆ. ಇಂದು (ಸೋಮವಾರ) ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಸಿಂಧುದುರ್ಗ ಜಿಲ್ಲೆಯ ರಾಜ್‌ಕೋಟ್‌ ಕೋಟೆಯ ಬಳಿ ನಿರ್ಮಿಸಿದ್ದ ಪ್ರತಿಮೆ ನೆಲಕ್ಕುರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.   ಜಿಲ್ಲೆಯಲ್ಲಿ ಮೂರು ದಿನಗಳಿಂದ ಭಾರಿ ಪ್ರಮಾಣದಲ್ಲಿ ಗಾಳಿ ಮಳೆಯಾಗುತ್ತಿದ್ದ ಕಾರಣ ಪ್ರತಿಮೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2023ರ …

Read More »

ಆಗಸ್ಟ್‌ 31ಕ್ಕೆ ಪವಿತ್ರಾ ಗೌಡಗೆ ಜಾಮೀನು.?

 ಆಗಸ್ಟ್‌ 31ಕ್ಕೆ ಪವಿತ್ರಾ ಗೌಡಗೆ ಜಾಮೀನು.? ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಲೇ ಇದೆ. ಇನ್ನು ಈ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದ (ಆಗಸ್ಟ್‌ 28) ವಿಚಾರಣೆ ನಡೆಸಿದ ಬೆಂಗಳೂರು ಸಿಸಿಎಚ್ 57 ಕೊರ್ಟ್‌ ಮುಂದೂಡಿ ಆದೇಶ ನೀಡಿದೆ. ಮಾಹಿತಿ ಇಲ್ಲಿದೆ ನೋಡಿ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಾ ಗೌಡಳ …

Read More »

ಹೃದ್ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು KKRDB ಯಿಂದ 50 ಅಂಬ್ಯುಲೆನ್ಸ್: ಡಾ.ಅಜಯ ಸಿಂಗ್

ಕಲಬುರಗಿ: ವಿಭಾಗೀಯ ಕೇಂದ್ರ ಕಲಬುರಗಿಯಲ್ಲಿ ಈಗಾಗಲೇ 371 ಹಾಸಿಗೆಯುಳ್ಳ ಜಯದೇವ ಹೃದ್ರೋಗ ಆಸ್ಪತ್ರೆಗೆ 222 ಕೋ. ರೂ ಅನುದಾನ ನೀಡಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ( KKRDB) ಮಂಡಳಿಯು ಈಗ ಕಲ್ಯಾಣ ಕರ್ನಾಟಕ ಭಾಗದ ಹೃದ್ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಮಂಡಳಿಯಿಂದಲೇ 50 ಅಂಬ್ಯುಲೆನ್ಸ್ ಗಳನ್ನು ನೀಡಲು ನಿರ್ಧರಿಸಿದೆ.   ಹೃದ್ರೋಗಕ್ಕೆ ಒಳಗಾದವರನ್ನು ಒಂದು ಗಂಟೆಯೊಳಗೆ ಆಸ್ಪತ್ರೆಗೆ ಸೇರಿಸುವುದು ಮುಖ್ಯವಾಗಿರುತ್ತದೆ. ಗ್ರಾಮೀಣ ಭಾಗದ ಹೃದ್ರೋಗಿಗಳನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ದೊರಕುವಂತಾಗಲು …

Read More »

ಗೃಹಲಕ್ಷ್ಮೀ ಹಣದಿಂದಲೇ ಸೊಸೆಗೆ ಫ್ಯಾನ್ಸಿ ಸ್ಟೋರ್​ ಹಾಕಿಸಿದ ಅತ್ತೆ; ಜಗಳ ಆಡೋ ಅತ್ತೆ-ಸೊಸೆಯರಿಗೆ ಮಾದರಿ!

ಹಾವೇರಿ: ಇದು ಕಾಂಗ್ರೇಸ್ ಸರ್ಕಾರದ (Congress Govt) ಮಹತ್ವಕಾಂಕ್ಷಿ ಜನಪರ ಯೋಜನೆ. ಈ ಯೋಜನೆಯ ಹಣದಿಂದ ಮಹಿಳೆಯರು ಗೃಹೋಪಯೋಗಿ (Home Appliances) ವಸ್ತುಗಳನ್ನು ಖರೀದಿ ಮಾಡಿದ್ದಾರೆ. ಮೊನ್ನೆ ತಾನೇ ಅಜ್ಜಿಯೊಬ್ಬರು ಊರಿಗೆ ಹೋಳಿಗೆ ಊಟ ಹಾಕಿಸಿದ್ದು ಇದೇ ಗೃಹಲಕ್ಷ್ಮಿ (Gruha Lakshmi Scheme) ಹಣದಿಂದಲೇ. ಇದೀಗ ಇದರ ಬೆನ್ನಲ್ಲೇ ಗೃಹಲಕ್ಷ್ಮಿ ಹಣದಿಂದ ಮತ್ತೊಂದು ಅಪರೂಪ ಘಟನೆಯೊಂದು ನಡೆದಿದೆ. ಸೊಸೆ ಪಾಲಿಗೆ ಅತ್ತೆ ದಾರಿದೀಪವಾಗಿರುವ ವರದಿ ಇಲ್ಲಿದೆ. ಗೃಹಲಕ್ಷ್ಮೀ ಹಣದ 10 …

Read More »