Breaking News

ರಾಷ್ಟ್ರೀಯ

ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವು

ಕಾಸರಗೋಡು: ದುರಂತವೊಂದರಲ್ಲಿದರಲ್ಲಿ , ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಾಸರಗೋಡು ಜಿಲ್ಲೆ ಕನ್ನಂಗಾಡಿನ ಕಲ್ಲುರಾವಿಯಲ್ಲಿ ನಡೆದಿದೆ. ಮೃತರನ್ನು ನೂರುದ್ದೀನ್ ಅವರ ಮಗ ಬಶೀರ್ (4), ನಾಸಿರ್ ಅವರ ಪುತ್ರ ಅಜ್ನಾಸ್ (5) ಮತ್ತು ಸಮೀರ್ ಅವರ ಪುತ್ರ ನಿಷಾದ್ (6) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಮಕ್ಕಳು ಆಟವಾಡಲು ಕೆರೆಗೆ ಇಳಿದಿದ್ದಾರೆ. ಮನೆ ಸಮೀಪ ಆಟವಾಡುತ್ತಿದ್ದ ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ ಎಂದು ಪೋಷಕರು ತಿಳಿಸಿದ್ದಾರೆ. …

Read More »

ಇರೋಕೆ ಊಟ ಇಲ್ಲ, ಹೋಗೋಕೆ ಕಾಸಿಲ್ಲ : ಅಡಕತ್ತರಿಯಲ್ಲಿ ಅಂತರ ರಾಜ್ಯ ಕಾರ್ಮಿಕರ ಭವಿಷ್ಯ..!

ಬೆಂಗಳೂರು : ಅಂತರ ರಾಜ್ಯ ವಲಸಿಗರ ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅಸ್ತು ಎಂದಿದೆ. ರಾಜ್ಯದಲ್ಲೂ ಅನ್ಯ ರಾಜ್ಯದ ಸಾವಿರಾರು ವಲಸಿಗರು ಸಿಲುಕಿಕೊಂಡಿದ್ದು, ತಮ್ಮ ಊರುಗಳಿಗೆ ಹೋಗಲು ಹಾತೊರೆಯುತ್ತಿದ್ದಾರೆ. ಆದರೆ, ಹಲವು ವಲಸಿಗರಿಗೆ ತಮ್ಮ ತವರು ರಾಜ್ಯಕ್ಕೆ ಹೋಗುವ ರಹದಾರಿ ಕಠಿಣವಾಗಿದೆ. ಕೊರೊನಾ ಲಾಕ್‌ಡೌನ್​ನಿಂದ ವಲಸಿಗರು ಅತಂತ್ರ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಒಂದು ಕಡೆ ಕೆಲಸ ಇಲ್ಲ, ಇನ್ನೊಂದೆಡೆ ವಸತಿ, ಆಹಾರ ಇಲ್ಲದೇ ಸಾಕಷ್ಟು ಸಂಕಷ್ಟಕ್ಕೊಳಗಾಗಿದ್ದಾರೆ. ಆಯಾ ರಾಜ್ಯ ಸರ್ಕಾರ ವಲಸಿಗರಿಗೆ …

Read More »

ಹಾರಾಷ್ಟ್ರ, ಗುಜರಾತ್ ಮತ್ತು ಮಧ್ಯಪ್ರದೇಶದ ದೇಶದ ಅತ್ಯಂತ ಅಪಾಯಕಾರಿ ಹಾಟ್‍ಸ್ಪಾಟ್‍

ಮುಂಬೈ/ಅಹಮದಾಬಾದ್/ಭೋಪಾಲ್, ಏ.30- ಭಾರತದಲ್ಲಿ ಕೊರೊನಾ ರಣಕೇಕೆ ಮುಂದುವರಿದಿದ್ದು, ಮಹಾರಾಷ್ಟ್ರ, ಗುಜರಾತ್ ಮತ್ತು ಮಧ್ಯಪ್ರದೇಶದ ದೇಶದ ಅತ್ಯಂತ ಅಪಾಯಕಾರಿ ಹಾಟ್‍ಸ್ಪಾಟ್‍ಗಳಾಗಿರುವುದು ಕಳವಳಕಾರಿಯಾಗಿದೆ. ದೇಶದ ಮೊದಲ ಮೂರು ಡೇಂಜರ್ ಸ್ಟೇಟ್ ಎಂದೇ ಪರಿಗಣಿಸಲ್ಪಟ್ಟಿರುವ ಮಹಾರಾಷ್ಟ್ರ, ಗುಜರಾತ್ ಮತ್ತು ಮಧ್ಯಪ್ರದೇಶದಲ್ಲಿ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಅತಿ ಹೆಚ್ಚು ಪ್ರಮಾಣದಲ್ಲಿ ಸಾವು ಮತ್ತು ಸೋಂಕು ಪ್ರಕರಣಗಳು ದಿನ ನಿತ್ಯ ವರದಿಯಾಗುತ್ತಲೇ ಇವೆ. ಕಳೆದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಸಂಭವಿಸಿದೆ ಒಟ್ಟು 67 ಸಾವು ಪ್ರಕರಣಗಳಲ್ಲಿ. …

Read More »

ಮುಖಕ್ಕೆ ಮಾಸ್ಕ್‌ ಹಾಕದಿದ್ದರೆ 5000 ರೂ. ದಂಡ..!

ತಿರುವನಂತಪುರಂ : ದೇಶದಲ್ಲಿ ಬಹಳ ಕಟ್ಟುನಿಟ್ಟಿನ ಕ್ರಮಗಳ ಮೂಲಕ ಕೊರೋನಾ ತಗ್ಗಿಸುತ್ತಿರುವ ಕೇರಳ ರಾಜ್ಯವು ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳತ್ತಿದೆ. ಕೇರಳದ ವಯನಾಡಿನಲ್ಲಿ ಜಿಲ್ಲೆಯಲ್ಲಿ ಜನರು ಮುಖಕ್ಕೆ ಮಾಸ್ಕ್‌ ಹಾಕದೇ ಸಿಕ್ಕಿಬಿದ್ದರೆ 5000 ರೂ ದಂಡ ವಿಧಿಸಲಾಗುವುದು ಎಂದು ವಯನಾಡಿನ ಜಿಲ್ಲಾ ಪೊಲೀಸ್‌ ಅಧೀಕ್ಷಕ ಆರ್‌ ಇಲಾಂಗೊ ಪ್ರಕಟಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದ ವ್ಯಕ್ತಿಯನ್ನು ಕೇರಳ ಪೊಲೀಸ್‌ ಆಕ್ಟ್‌(ಕೆಪಿಎ) 118ಇ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು. ಜತೆಗೆ, ನಿಯಮ ಉಲ್ಲಂಘನೆ …

Read More »

ಪ್ರತಿ ವರ್ಷ ಕೊರೊನಾ ಕಾಡುವ ಸಾಧ್ಯತೆ ಇದೆ ಎಂದ ಚೀನಾ ವಿಜ್ಞಾನಿಗಳು……

ಬೀಜಿಂಗ್: ಮಹಾಮಾರಿ ಕೊರೊನಾ ಅಟ್ಟಹಾಸ ಇಲ್ಲಿಗೇ ಮುಗಿಯುವುದಿಲ್ಲ ಪ್ರತಿ ವರ್ಷವೂ ಕಾಡುವ ಸಾಧ್ಯತೆ ಇದೆ ಎಂಬ ಭಯಾನಕ ಅಂಶವನ್ನು ಚೀನಾ ವಿಜ್ಞಾನಿಗಳು ತಿಳಿಸಿದ್ದಾರೆ. ಚೀನಾದ ಬೀಜಿಂಗ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಶೋಧಕರು ಈ ಆಘಾತಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಕೊರೊನಾ ವೈರಸನ್ನು ಓಡಿಸಿದರೆ ಮುಗಿಯಿತು ಮತ್ತೆ ಬರಲ್ಲ ಎಂದುಕೊಳ್ಳುವಂತಿಲ್ಲ. ವಿಶ್ವವ್ಯಾಪಿ ಇದರ ಬೆಳವಣಿಗೆಯನ್ನು ಗಮನಿಸಿದಾಗ ಕೊರೊನಾ ಪ್ರತಿ ವರ್ಷ ಬರುವ ಸಾಧ್ಯತೆ ಇದ್ದು, ಜ್ವರದ ರೂಪದಲ್ಲಿ ಜನರನ್ನು ಕಾಡಲಿದೆ ಎಂದು ಹೇಳಿದ್ದಾರೆ. ಇದು …

Read More »

ಕೊರೊನಾ ಹೋರಾಟಕ್ಕಾಗಿ 18 ವರ್ಷಗಳ ನಂತ್ರ ಮತ್ತೆ ನರ್ಸ್ ಆದ ಮೇಯರ್

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದರಿಂದ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮೇಯರ್ 18 ವರ್ಷಗಳ ನಂತರ ಮತ್ತೆ ನರ್ಸ್ ಆಗಿ ಸೇವೆ ಸಲ್ಲಿಸಲು ಮುಂದಾಗಿದ್ದಾರೆ. ಮೇಯರ್ ಕಿಶೋರಿ ಪೆಡ್ನೇಕರ್ ಅವರು ಕೊರೊನಾ ವಿರುದ್ಧದ ಹೋರಾಟದಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸಲು ಮುಂದಾಗಿದ್ದಾರೆ. ಈ ಮೂಲಕ ವೈದ್ಯಕೀಯ ಸಿಬ್ಬಂದಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಕಿಶೋರಿ ಪೆಡ್ನೇಕರ್ ರಾಜಕೀಯಕ್ಕೆ ಬರುವ ಮೊದಲು ನರ್ಸ್ …

Read More »

COVID-19: ಕೊರೋನಾ ಬಳಿಕ ಡಿಸ್ಚಾರ್ಜ್​ ಆದವರಿಗೆ ತಲಾ 2 ಸಾವಿರ ಘೋಷಿಸಿದ ಆಂಧ್ರ ಸರ್ಕಾರ

ಅಮರಾವತಿ(ಏ.28): ಕೊರೋನಾ ವೈರಸ್​ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರಿಗೆ ತಲಾ 2 ಸಾವಿರ ನೀಡುವುದಾಗಿ ಮುಖ್ಯಮಂತ್ರಿ ಜಗನ್​​ ಮೋಹನ್​​ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಘೋಷಿಸಿದೆ. ಸೋಂಕಿತರು ದೇಹದಲ್ಲಿನ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಅಗತ್ಯವಾದ ಆಹಾರ ಖರೀದಿಸಲು ಈ ಹಣ ನೀಡಲಾಗುವುದು ಎಂದು ಜಗನ್​​ ಹೊರಡಿಸಿದ ಆದೇಶದ ಪ್ರತಿಯಲ್ಲಿ ತಿಳಿಸಲಾಗಿದೆ. ಆಂಧ್ರಪ್ರದೇಶದಲ್ಲಿ ನಿನ್ನೆಯವರೆಗೂ 1177 ಕೊರೊನಾ ಪ್ರಕರಣಗಳು ದಾಖಲಾಗಿದೆ. ಇದರಲ್ಲಿ 235 ಜನರು ಗುಣಮುಖರಾಗಿದ್ದಾರೆ. ಈವರೆಗೂ 31 ಜನರು ರಾಜ್ಯದಲ್ಲಿ …

Read More »

ಸ್ಯಾನಿಟೈಸರ್ ಜೊತೆಗೆ ಕೆಮ್ಮಿನ ಔಷಧಿ ಮಿಶ್ರಣ ಮಾಡಿ ಕುಡಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ: ಸ್ಯಾನಿಟೈಸರ್ ಜೊತೆಗೆ ಕೆಮ್ಮಿನ ಔಷಧಿ ಮಿಶ್ರಣ ಮಾಡಿ ಕುಡಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಹೊಯ್ಸಳ ನಗರದಲ್ಲಿ ಈ ಘಟನೆ ನಡೆದಿದ್ದು, ಸುದೀಪ್ ಕೈರಾನ್ ಸಾವನ್ನಪ್ಪಿದ ವಿದ್ಯಾರ್ಥಿ. ಉತ್ತರ ಕನ್ನಡ ಜಿಲ್ಲೆಯ ಮೂಲದವನಾದ ಸುದೀಪ್, ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿದ್ದನು. ವಿದ್ಯಾಭ್ಯಾಸಕ್ಕಾಗಿ ಧಾರವಾಡದ ಹೊಯ್ಸಳ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದನು. ಲಾಕ್‍ಡೌನ್ ಪರಿಣಾಮ ಮದ್ಯ ಸಿಗದ ಹಿನ್ನೆಲೆಯಲ್ಲಿ ಸ್ಯಾನಿಟೈಸರ್ ಜೊತೆ …

Read More »

ಗುಜರಾತಿನ ಹಿರಿಯ ಕಾಂಗ್ರೆಸ್ ನಾಯಕ ಕೊರೊನಾಗೆ ಬಲಿ……….

ಅಹಮದಾಬಾದ್: ಮೊದಲ ಬಾರಿಗೆ ದೇಶದಲ್ಲಿ ಕೊರೊನಾಗೆ ರಾಜಕೀಯ ನಾಯಕರೊಬ್ಬರು ಬಲಿಯಾಗಿದ್ದಾರೆ. ಗುಜರಾತಿನ ಹಿರಿಯ ಕಾಂಗ್ರೆಸ್ ನಾಯಕ 67 ವರ್ಷದ ಬದ್ರುದ್ದೀನ್ ಶೇಖ್ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಏಪ್ರಿಲ್ 15 ರಂದು ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಅವರು ಅಹಮದಾದಬಾದಿನ ಎಸ್‍ವಿಪಿ ಆಸ್ಪತ್ರೆಗೆ ದಾಖಲಾಗಿದ್ದರು. 11 ದಿನಗಳ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ ಕೊರೊನಾ ಲಾಕ್‍ಡೌನ್ ಸಮಯದಲ್ಲಿ ಬದ್ರುದ್ದೀನ್ ಶೇಖ್ ಅವರು ಬಡವರಿಗೆ ಆಹಾರ ವಿತರಿಸಲು ಹೋಗಿದ್ದರು. ಈ …

Read More »

ಕೊರೊನಾಗೆ ಮೃತರಾದವರ ಅಂತ್ಯಸಂಸ್ಕಾರಕ್ಕೆ ಅಡ್ಡಿ ಮಾಡಿದ್ರೆ 3 ವರ್ಷ ಜೈಲು

ಚೆನ್ನೈ: ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದರೆ ತಮಿಳುನಾಡಿನಲ್ಲಿ 3 ವರ್ಷ ಜೈಲು ಶಿಕ್ಷೆಯಾಗಲಿದೆ. ಕೋವಿಡ್-19 ಸೋಂಕಿನಿಂದ ಮೃತಪಟ್ಟ ರೋಗಿಗಳ ಅಂತ್ಯಸಂಸ್ಕಾರ ಅಥವಾ ಹೂಳಲು ಜನ ವಿರೋಧ ವ್ಯಕ್ತಿಪಡಿಸಿದರೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ತಮಿಳುನಾಡು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಮಾರಣಾಂತಿಕ ಕೋವಿಡ್-19 ಮೃತಪಟ್ಟ ವ್ಯಕ್ತಿಗಳ ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸುವುದು ಕ್ರಿಮಿನಲ್ ಅಪರಾಧ ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ. ತಮಿಳುನಾಡು ಸಾರ್ವಜನಿಕ ಕಾಯ್ದೆ 1939ರ ಸೆಕ್ಷನ್ 74ರ ಪ್ರಕಾರ ಅಡ್ಡಿಪಡಿಸಿದರೆ …

Read More »