ಮುಂಬೈ: ಕಾಫಿ ತುಂಬಾ ಕಾಸ್ಟ್ಲಿ ಆಗಿದೆ, ಈಗ ಗ್ರೀನ್ ಟೀ ಮಾತ್ರ ಕುಡಿಯಿರಿ ಎಂದು ಟೀಂ ಇಂಡಿಯಾ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ‘ಕಾಫಿ ವಿಥ್ ಕರಣ್’ ವಿವಾದವನ್ನು ನೆನೆದಿದ್ದಾರೆ. ಇನ್‍ಸ್ಟಾಗ್ರಾಮ್ ಚಾಟ್ ಶೋನಲ್ಲಿ ಪಾಂಡ್ಯ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರೊಂದಿಗೆ ಮಾತನಾಡುತ್ತಿದ್ದಾಗ 2019ರಲ್ಲಿ ನಡೆದ ಘಟನೆಯನ್ನು ಮೆಲುಕು ಹಾಕಿದ್ದಾರೆ. ಕಾರ್ತಿಕ್ ಅವರು ಕರಣ್ ವಿಥ್ ಕಾಫಿ ಕಾರ್ಯಕ್ರಮ ಪ್ರಸ್ತಾಪಿಸುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಹಾರ್ದಿಕ್, “ಕಾಫಿ ತುಂಬಾ ದುಬಾರಿಯಾಗಿದೆ. ಹೀಗಾಗಿ …
Read More »ಪ್ಲಾಸ್ಮಾ ಥೆರಪಿ ಸಹಾಯದಿಂದ ದೆಹಲಿಯ ಕೊರೊನಾ ಸೋಂಕಿತ ರೋಗಿಯೊಬ್ಬರು ಸಂಪೂರ್ಣ ಗುಣಮುಖ
ನವದೆಹಲಿ: ಕೊರೊನಾ ವೈರಸ್ ಭೀತಿ ನಡುವೆ ಒಂದು ಶುಭ ಸುದ್ದಿಯೊಂದು ಲಭ್ಯವಾಗಿದ್ದು, ಪ್ಲಾಸ್ಮಾ ಥೆರಪಿ ಸಹಾಯದಿಂದ ದೆಹಲಿಯ ಕೊರೊನಾ ಸೋಂಕಿತ ರೋಗಿಯೊಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ಭಾರತದಲ್ಲಿಯೇ ಮೊದಲ ಪ್ರಕರಣವಾಗಿದೆ. ದೆಹಲಿಯ 49 ವರ್ಷದ ವ್ಯಕ್ತಿಗೆ ಕೋವಿಡ್-19 ಪಾಸಿಟಿವ್ ಇದೆ ಎಂದು ಏಪ್ರಿಲ್ 4ರಂದು ದೃಢಪಟ್ಟಿತ್ತು. ರೋಗಿ ತೀವ್ರ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಅವರಿಗೆ ಉಸಿರಾಡಲು ಸಹಾಯವಾಗಲಿ ಎಂದು ವೆಂಟಿಲೇಟರ್ ಅಳವಡಿಸಿ ಮ್ಯಾಕ್ಸ್ ಆಸ್ಪತ್ರೆಯಲ್ಲಿ …
Read More »ಭಾರತದಲ್ಲಿ ಕೊರೋನಾಗೆ 825 ಮಂದಿ ಸಾವು, 26,496 ಸೋಂಕಿತರು..!
ನವದೆಹಲಿ/ಮುಂಬೈ,ಏ.26-ಕೊರೊನಾ ವೈರಸ್ ರಣಕೇಕೆ ಭಾರತದಲ್ಲಿ ಅವ್ಯಾಹತವಾಗಿ ಮುಂದುವರಿದಿದೆ. ಲಾಕ್‍ಡೌನ್ ನಡುವೆಯೂ ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಕಳೆದ 24 ತಾಸುಗಳ ಅವಧಿಯಲ್ಲಿ ದೇಶದ ವಿವಿಧೆಡೆ ಒಟ್ಟು 49 ಮಂದಿಯನ್ನು ಕೊರೊನಾ ಬಲಿ ಪಡೆದಿದೆ. ಇದೇ ಅವಧಿಯಲ್ಲಿ 1,990 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಭಾರತದಲ್ಲಿ ಮೃತರ ಸಂಖ್ಯೆ 900 ತಲುಪುತ್ತಿರುವುದು ಆತಂಕಕಾರಿಯಾಗಿದೆ. ಮತ್ತೊಂದಡೆ ಸೋಂಕು ಪೀಡಿತರ ಸಂಖ್ಯೆ 27,000 ಸನಿಹದಲ್ಲಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ …
Read More »ಮಹಾರಾಷ್ಟ್ರದಲ್ಲಿ ಕೊರೋನಾಗೆ ಒಂದೇ ದಿನ 22 ಮಂದಿ ಸಾವು..!
ಮುಂಬೈ, ಏ.26- ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿನ ಸಾವು ಮತ್ತು ಸಾಂಕ್ರಾಮಿಕ ರೋಗಗಳ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ದಿನೇ ದಿನೇ ಶೋಚನೀಯವಾಗುತ್ತದೆ. ರಾಜ್ಯದ ವಿವಿಧೆಡೆ ಕೊರೊನಾ ಹೆಮ್ಮಾರಿಯ ಅಟ್ಟಹಾಸ ಮುಂದುವರಿದಿದ್ದು, ಶನಿವಾರ ಒಂದೇ ದಿನ ಅವಧಿಯಲ್ಲಿ 22 ಮಂದಿ ಮೃತಪಟ್ಟಿದ್ದಾರೆ. ವಾಣಿಜ್ಯ ನಗರಿ ಮುಂಬೈ ಅಪಾಯಕಾರಿಯಾಗಿ ಪರಿಣಮಿಸಿದ್ದು, ಅಲ್ಲಿ 5000ಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಬಾಧಿತರಾಗಿದ್ದಾರೆ. ಅಲ್ಲಿ ಪ್ರತಿದಿನ ಹೊಸ ಸೋಂಕು ಪ್ರಕರಣಗಳು ದೃಢಪಡುತ್ತಲೇ ಇವೆ. ಮಹಾರಾಷ್ಟ್ರದಲ್ಲಿ …
Read More »ಟಿಕ್‍ಟಾಕ್‍ನಲ್ಲಿ ನಾನು ನಿನ್ನನ್ನ ಬ್ಲಾಕ್ ಮಾಡ್ತೀನಿ: ಗೇಲ್…..
ನವದೆಹಲಿ: ನೀನು ತುಂಬ ಕಿರಿಕಿರಿ ಮಾಡುತ್ತೀಯಾ ನಾನು ನಿನ್ನ ಬ್ಲಾಕ್ ಮಾಡುತ್ತೇನೆ ಎಂದು ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಭಾರತದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರನ್ನು ಟೀಕಿಸಿದ್ದಾರೆ. ಭಾರತ ಕ್ರಿಕೆಟ್ ತಂಡದ ಬೌಲರ್ ಆಗಿರುವ ಚಹಲ್ ಅವರು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇರುತ್ತಾರೆ. ಎಲ್ಲರನ್ನೂ ಕಾಲೆಳೆಯುವ ಕೆಲಸ ಮಾಡುತ್ತಾರೆ. ಹೀಗಾಗಿ ಗೇಲ್ ನೀನು ಸೋಶಿಯಲ್ ಮೀಡಿಯಾದಲ್ಲಿ ಕಿರಿಕಿರಿ ಮಾಡುತ್ತಿದ್ದೀಯ ನಾನು ನಿನ್ನ ಬ್ಲಾಕ್ ಮಾಡುತ್ತೇನೆ ಎಂದು ಚಹಲ್‍ಗೆ …
Read More »ಕಟಿಂಗ್ ಶಾಪ್‍ಗೆ ಹೋಗಿದ್ದ ಓರ್ವನಿಂದ 6 ಮಂದಿಗೆ ತಗುಲಿದ ಕೊರೊನಾ…….
ಭೋಪಾಲ್: ಕಟಿಂಗ್ ಮಾಡಿಸಿಕೊಂಡು ಬಂದಿದ್ದ ಓರ್ವ ಸೋಂಕಿತನಿಂದ ಈಗ ಆ ಕಟಿಂಗ್ ಶಾಪ್‍ಗೆ ಹೋಗಿದ್ದ 6 ಮಂದಿಗೆ ಕೊರೊನಾ ವೈರಸ್ ಸೋಂಕು ಹರಡಿದೆ. ಮಧ್ಯಪ್ರದೇಶದ ಖರ್ಗೋನ್ ಜಿಲ್ಲೆಯ ಬಾರ್ಗಾಂವ್ ಗ್ರಾಮದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಇಂದೋರ್ ಹಾಸ್ಟೆಲ್‍ನಲ್ಲಿ ಇದ್ದ ಸೋಂಕಿತ ವ್ಯಕ್ತಿ ಕೆಲ ದಿನಗಳ ಹಿಂದೆ ಗ್ರಾಮಕ್ಕೆ ವಾಪಸ್ ಬಂದಿದ್ದನು. ಬಾರ್ಗಾಂವ್ ಗ್ರಾಮದಲ್ಲಿ ಕಟಿಂಗ್ ಶಾಪ್‍ಗೆ ಏಪ್ರಿಲ್ 5ರಂದು ಸೋಂಕಿತ ಭೇಟಿಕೊಟ್ಟಿದ್ದನು. ಇಲ್ಲಿ ಕ್ಷೌರಿಕನ ಬಳಿ ಕಟಿಂಗ್ ಹಾಗೂ ಶೇವಿಂಗ್ …
Read More »ಅನಂತಕುಮಾರ್ ಹೆಗಡೆ ಟ್ವಿಟ್ಟರ್ ಖಾತೆ ಲಾಕ್-ಹೆಗಡೆ ಕಿಡಿ………..
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆ ಅವರ ಟ್ವಿಟ್ಟರ್ ಖಾತೆಯನ್ನು ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಲಾಕ್ ಮಾಡಲಾಗಿದೆ. ಈ ಬಗ್ಗೆ ಅನಂತಕುಮಾರ್ ಹೆಗಡೆ ಅವರಿಗೆ ನೋಟಿಸ್ ಕಳುಹಿಸಿರುವ ಟ್ವಿಟ್ಟರ್, ‘ನಿಮ್ಮ ಖಾತೆ ನಮ್ಮ ಕೆಲವು ನಿಯಮಗಳನ್ನು ಉಲ್ಲಂಘಿಸಿದೆ’ ಎಂದು ಗಮನಕ್ಕೆ ತಂದಿದೆ. ಅಷ್ಟಕ್ಕೂ ಖಾತೆಯನ್ನು ಅನ್ ಲಾಕ್ ಮಾಡಲು ನಿಯಮಗಳನ್ನು ಉಲ್ಲಂಘಿಸಿದ ಟ್ವೀಟ್ ಅನ್ನು ಡಿಲಿಟ್ ಮಾಡುವಂತೆ ಸೂಚಿಸಿದೆ. ವೆರಿಫೈಡ್ ವಿಐಪಿ ಖಾತೆ ಹೊಂದಿದ್ದ ಸಂಸದ …
Read More »ಇರ್ಫಾನ್ ಖಾನ್ ತಾಯಿ ನಿಧನ – ಅಂತಿಮ ದರ್ಶನವೂ ಇಲ್ಲ
ಜೈಪುರ್: ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ಅವರ ತಾಯಿ ಸಯೀದಾ ಬೇಗಂ (95) ಶನಿವಾರ ನಿಧನರಾಗಿದ್ದಾರೆ. ಇರ್ಫಾನ್ ತಾಯಿ ಸಯೀದಾ ಬೇಗಂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಅವರು ಜೈಪುರದ ಬೆನಿವಾಲ್ ಕಾಂತ ಕೃಷ್ಣ ಕಾಲೋನಿಯಲ್ಲಿ ವಾಸವಾಗಿದ್ದರು. ಇರ್ಫಾನ್ ವಿದೇಶದಲ್ಲಿದ್ದಾರೆ. ಆದರೆ ಕೊರೊನಾ ಲಾಕ್‍ಡೌನ್ ಪರಿಣಾಮದಿಂದಾಗಿ ವಿಮಾನಯಾನ ಸಂಪೂರ್ಣವಾಗಿ ಸ್ಥಗಿತವಾಗಿದೆ. ಹೀಗಾಗಿ ಅವರು ಭಾರತಕ್ಕೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಕೊನೆಯ ಬಾರಿಗೆ ತಾಯಿ ಅಂತಿಮ ದರ್ಶನವೂ …
Read More »ಒಂದೇ ದಿನ 18 ಮಂದಿ ಮೃತಪಟ್ಟಿದ್ದಾರೆ. ವಾಣಿಜ್ಯ ನಗರಿ ಮುಂಬೈನಲ್ಲೇ 11 ಜನರನ್ನು ವೈರಾಣು ಹೊಸಕಿ ಹಾಕಿದೆ.
ಮುಂಬೈ, ಏ.25- ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿನ ಸಾವು ಮತ್ತು ಸಾಂಕ್ರಾಮಿಕ ರೋಗಗಳ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿರುವ ಮಹಾರಾಷ್ಟ್ರ ನಂಬರ್ ಒನ್ ಹಾಟ್‍ಸ್ಪಾಟ್ ರಾಜ್ಯ ಎನಿಸಿದೆ. ರಾಜ್ಯದ ವಿವಿಧೆಡೆ ಕೊರೊನಾ ಹೆಮ್ಮಾರಿಯ ಮರಣ ಮೃದಂಗದ ಮಾರ್ದನಿ ಮುಂದುವರಿದಿದ್ದು, ಒಂದೇ ದಿನ 18 ಮಂದಿ ಮೃತಪಟ್ಟಿದ್ದಾರೆ. ವಾಣಿಜ್ಯ ನಗರಿ ಮುಂಬೈನಲ್ಲೇ 11 ಜನರನ್ನು ವೈರಾಣು ಹೊಸಕಿ ಹಾಕಿದೆ. ದೇಶದಲ್ಲಿ ಮಾರಕ ಕೋವಿಡ್-19 ಸೋಂಕಿನಿಂದ 24 ತಾಸುಗಳಲ್ಲಿ ಇಷ್ಟು ರೋಗಿಗಳು ಅಸುನೀಗಿರುವುದು ಇದೇ …
Read More »ಭಜರಂಗ ದಳದ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ಹೃದಯಾಘಾತದಿಂದ ನಿಧನ ……..
ಬೆಂಗಳೂರು, ಏ. 25 : ಭಜರಂಗ ದಳದ ಮಾಜಿ ಸಂಚಾಲಕ, ಸಾಮಾಜಿಕ ಕಾರ್ಯಕರ್ತ, ವಾಗ್ಮಿ ಮಹೇಂದ್ರ ಕುಮಾರ್ (47)ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮಹೇಂದ್ರ ಕುಮಾರ್ ವಿಧಿವಶರಾಗಿದ್ದಾರೆ. ಭಜರಂಗ ದಳದ ರಾಜ್ಯ ಸಂಚಾಲಕರಾಗಿದ್ದ ಮಹೇಂದ್ರ ಕುಮಾರ್, 2008 ರಲ್ಲಿ ಕ್ರೈಸ್ತ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿ ನಡೆಸಿದ ಸಂಬಂಧ ಬಂಧನಕ್ಕೊಳಗಾಗಿದ್ದರು. ಬಳಿಕ ಅದೇ ಪ್ರಕರಣದಲ್ಲಿ ಅವರನ್ನು ದೋಷಮುಕ್ತಗೊಳಿಸಲಾಗಿತ್ತು. 2008 ರ …
Read More »