Breaking News

ರಾಷ್ಟ್ರೀಯ

ಪ್ರಧಾನಿ ಮೋದಿ ಭಾಷಣಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು ಗೊತ್ತೇ..?

ಬೆಂಗಳೂರು, ಏ.14- ಲಾಕ್ ಡೌನ್ ಸಂದರ್ಭದಲ್ಲಿ ತೊಂದರೆಯಲ್ಲಿರುವ ರೈತ ವರ್ಗ ಮತ್ತು ದಿನಗೂಲಿ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ‌. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಎರಡನೇ ಬಾರಿಗೆ ಮೇ 3ರವರೆಗೆ ಲಾಕ್ ಡೌನ್ ವಿಸ್ತರಿಸಿರುವುದಕ್ಕೆ ನಮ್ಮ ವಿರೋಧ ಇಲ್ಲ. ಕೊರೊನಾ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಮದ್ದು.‌ ಇದರಲ್ಲಿ ಎರಡು …

Read More »

ಚಿಕ್ಕಬಳ್ಳಾಪುರ ನಗರಕ್ಕೂ ವ್ಯಾಪಿಸಿದೆಯಾ ಕೊರೊನಾ?

ಚಿಕ್ಕಬಳ್ಳಾಪುರ: ನಗರಕ್ಕೂ ಕೊರೊನಾ ವ್ಯಾಪಿಸಿದೆಯಾ ಅನ್ನೋ ಅನುಮಾನ ಈಗ ಶುರುವಾಗಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ 12 ಕೊರೊನಾ ಸೋಂಕಿತ ಪ್ರಕರಣಗಳು ಗೌರಿಬಿದನೂರಿನಲ್ಲೇ ಪತ್ತೆಯಾಗಿದ್ದವು. ಹೀಗಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದ ಜನ ನೆಮ್ಮದಿಯಿಂದ ಇದ್ದರು. ಆದರೆ ತಡರಾತ್ರಿ ಚಿಕ್ಕಬಳ್ಳಾಪುರ ನಗರದ ಕೆಲ ನಿವಾಸಿಗಳನ್ನ ಹಾಸ್ಪಿಟಲ್ ಕ್ವಾರಂಟೈನ್ ಗೆ ಕರೆತರಲಾಗಿದೆ. ಅಸಲಿಗೆ ಚಿಕ್ಕಬಳ್ಳಾಪುರ ನಗರದ ಸರಿ ಸುಮಾರು 70 ವರ್ಷದ ಮನೆಯ ಯಜಮಾನ ಅಸ್ತಮಾ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲಿದ್ದು, ಮನೆಯವರು …

Read More »

ಕೊರೊನಾ ತಡೆಯಲು ಜನತೆಗೆ ಮೋದಿಯ ಸಪ್ತ ಸೂತ್ರ……..

ನವದೆಹಲಿ: ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಮತ್ತೆ ಮೂರು ವಾರಗಳ ಲಾಕ್‍ಡೌನ್ ಸಮಯವನ್ನು ವಿಸ್ತರಣೆ ಮಾಡಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ವೇಳೆ ಕೊರೊನಾ ವಿರುದ್ಧ ಮೋದಿ ಸಪ್ತ ಸೂತ್ರಗಳನ್ನು ಸೂಚಿಸಿದ್ದಾರೆ. ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕೊರೊನಾ ನಿಯಂತ್ರಿಸಲು ಲಾಕ್‍ಡೌನ್ ಅನಿವಾರ್ಯವಾಗಿದೆ. ಲಾಕ್‍ಡೌನ್ ಪಾಲನೆಯಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ಮತ್ತಷ್ಟು ನಿಯಂತ್ರಿಸಲು ಮೇ 3ರವರೆಗೆ ಲಾಕ್‍ಡೌನ್ ವಿಸ್ತರಿಸುತ್ತಿದ್ದೇನೆ. ನಾವು ಕೊರೊನಾ ವಿರುದ್ಧ ಹೇಗೆ ಹೋರಾಟ ನಡೆಸಬೇಕು. ಜನರ …

Read More »

ಕಾರವಾರದಲ್ಲಿ ಸೋಂಕಿತರು ಗುಣಮುಖ – ನಾಲ್ವರು ಡಿಸ್ಚಾರ್ಜ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಪತಂಜಲಿ ನೌಕಾನೆಲೆ ಆಸ್ಪತ್ರೆಯಲ್ಲಿ ಕೊರೊನಾ ವೈರಸ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಅವರಲ್ಲಿ ನಾಲ್ವರು ಗುಣಮುಖರಾಗಿದ್ದು, ಇಂದು ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಹರೀಶ್‍ಕುಮಾರ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಭಟ್ಕಳ ಮೂಲದ ಎಂಟು ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ತಕ್ಷಣ ಜಿಲ್ಲಾಡಳಿತ ಅವರಿಗೆ ಭಟ್ಕಳ ತಾಲೂಕು ಆಸ್ಪತ್ರೆಯಿಂದ ಕಾರವಾರ ತಾಲೂಕಿನ ಕದಂಬ ನೌಕಾನೆಲೆಯ ಪತಂಜಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ …

Read More »

ಹುಬ್ಬಳ್ಳಿಯಲ್ಲಿ ಒಂದೇ ಕುಟುಂಬದ ಐವರಿಗೆ ಕೊರೋನಾ; ಆತಂಕ ಹೆಚ್ಚಿಸಿದೆ

ಹುಬ್ಬಳ್ಳಿ,(ಏ.14): ಹುಬ್ಬಳ್ಳಿಯಲ್ಲಿ ಒಂದೇ ಕುಟುಂಬದ ಐವರಿಗೆ ಕೊರೋನಾ ಪಾಸಿಟಿವ್​ ಕಾಣಿಸಿಕೊಂಡ ಹಿನ್ನೆಲೆ ಆತಂಕ ಹೆಚ್ಚಾಗಿದೆ.  ಮುಲ್ಲಾ ಓಣಿಯ ನಿವಾಸಿ 37 ವರ್ಷದ ವ್ಯಕ್ತಿಯ(ಪಿ-236) ಪ್ರಯಾಣ ವಿವರ ದಂಗು ಬಡಿಸಿದೆ. ಈ ವ್ಯಕ್ತಿಯಿಂದಲೇ ಈತನ ಕುಟುಂಬಸ್ಥರಿಗೂ ಸೋಂಕು ತಗುಲಿದೆ. ಸೋಂಕಿತ ವ್ಯಕ್ತಿಯ ಪ್ರಯಾಣ ಹಿನ್ನೆಲೆ ಜಿಲ್ಲಾಡಳಿತಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ. ಪಿ-236 ವ್ಯಕ್ತಿ ಮಾರ್ಚ್​ 23ರಂದು ಬೆಳಗ್ಗೆ ಡ್ರೈವರ್ ಜೊತೆ ಕಾರಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರಕ್ಕೆ ಪ್ರಯಾಣಿಸಿದ್ದಾರೆ. ಮಧ್ಯಾಹ್ನದವರೆಗೆ ಯಲ್ಲಾಪುರದಲ್ಲಿನ …

Read More »

ಮೇ 3ರವರೆಗೆ ಲಾಕ್​ಡೌನ್ ವಿಸ್ತರಣೆ; ಪ್ರಧಾನಿ ಮೋದಿ ಅಧಿಕೃತ ಘೋಷಣೆ

ನವದೆಹಲಿ (ಏ.14): ಕೊರೋನಾ ವೈರಸ್​ ನಿಯಂತ್ರಣ ಮಾಡಲು ದೇಶದಲ್ಲಿ 21 ದಿನಗಳ ಲಾಕ್​ಡೌನ್​ ಹೇರಲಾಗಿತ್ತು. ಆದಾಗ್ಯೂ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಲಾಕ್​ಡೌನ್​ಅನ್ನು ಮತ್ತೆ  ವಿಸ್ತರಣೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ದೇಶ ಉದ್ದೇಶಿಸಿ ಮಾತನಾಡಿದ ಮೋದಿ ಈ ಘೋಷಣೆ ಮಾಡಿದರು. ಮೇ 3ರವರೆಗೆ  ಈ ಲಾಕ್​ಡೌನ್​ ಮುಂದುವರಿಯಲಿದೆ ಎಂದು ಅವರು ಹೇಳಿದರು. “ನಾನು ಲಾಕ್​ಡೌನ್​ ಬಗ್ಗೆ ಎಲ್ಲ ರಾಜ್ಯಗಳ …

Read More »

ಬಿಗ್ ಬ್ರೇಕಿಂಗ್ : ಮೇ.3ರ ವರಗೆ ಲಾಕ್‍ಡೌನ್ ವಿಸ್ತರಣೆ..!

ನವದೆಹಲಿ: ಕರೊನಾ ಸೋಂಕು ಹರಡದಂತೆ ತಡೆಯಲು ಘೋಷಿಸಿದ್ದ 21 ದಿನಗಳ ಲಾಕ್​ಡೌನ್​ ಅವಧಿಯ ಕೊನೇ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ ಮತ್ತೊಂದು ಚಾಲೆಂಜ್ ನೀಡಿದ್ದಾರೆ. ಮೇ.3ರ ವರಗೆ ಲಾಕ್‍ಡೌನ್ ವಿಸ್ತರಣೆ ಘೋಷಿಸಿರುವ ಪ್ರಧಾನಿ ಕೊರೋನಾ ವಿರುದ್ಧ ಹೋರಾಟವನ್ನು ಮುಂದುವರೆಸಲು ಮನವಿ ಮಾಡಿದ್ದಾರೆ. ಇಂದು ಸರಿಯಾಗಿ 10 ಗಂಟೆಗೆ ಭಾಷಣ ಆರಂಭಸಿದ ಪ್ರಧಾನಿ ನರೇಂದ್ರ ಮೋದಿ , ಬಾಬಾ ಸಾಹೇಬ್ ಡಾಕ್ಟರ್ ಬೀಮ್​ ರಾವ್ ಅಂಬೇಡ್ಕರ್ ಅವರ ಜಯಂತಿ …

Read More »

ಡಿಸ್ಚಾರ್ಜ್ ಆಗಿದ್ದ ಇಬ್ಬರಿಗೆ ಮತ್ತೆ ಸೋಂಕು

ನವದೆಹಲಿ: ಡಿಸ್ಚಾರ್ಜ್ ಆಗಿದ್ದ ಕೊರೊನಾ ರೋಗಿಗಳಿಗೆ ಮತ್ತೆ ಸೋಂಕು ಬಂದಿದ್ದು ಆತಂಕ ಎದುರಾಗಿದೆ. ದೆಹಲಿ ಹೊರವಲಯದ ನೋಯ್ಡಾ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆ ಪಡೆದು ಶುಕ್ರವಾರ ಡಿಸ್ಚಾರ್ಜ್ ಆಗಿದ್ದರು. ಡಿಸ್ಚಾರ್ಜ್ ಆಗುವ ಮುನ್ನ 24 ಗಂಟೆಯಲ್ಲಿ ಎರಡು ಬಾರಿ ಪರೀಕ್ಷೆ ಮಾಡಿದ್ದು ನೆಗೆಟಿವ್ ಬಂದಿತ್ತು. ಇದಾದ ಬಳಿಕ ಗಂಟಲಿನ ದ್ರವನ್ನು ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಪರೀಕ್ಷಿಸಿದ ಬಳಿಕ ವರದಿಯನ್ನು ಕೇಂದ್ರ …

Read More »

ರಸ್ತೆಯಲ್ಲಿ ಚೆಲ್ಲಿದ ಹಾಲನ್ನು ಹಂಚಿಕೊಂಡ ಶ್ವಾನ, ಮಾನವ

ಲಕ್ನೋ: ಕೊರೊನಾ ವೈರಸ್ ಹರಡದಂತೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಕೆಲವೊಂದು ಮನಕಲಕುವ ಘಟನೆಗಳು ನಡೆದಿದೆ. ಇದರಲ್ಲಿ ಆಗ್ರಾದಲ್ಲಿ ನಡೆದ ಘಟನೆ ಕೂಡ ಒಂದು. ರಸ್ತೆಯಲ್ಲಿ ಚೆಲ್ಲಿದ ಹಾಲಿಗಾಗಿ 4 ಶ್ವಾನಗಳು ಹಾಗೂ ವ್ಯಕ್ತಿ ಮುಗಿಬಿದ್ದ ಘಟನೆ ನೋಡಿದರೆ ಎಂಥವರ ಮನಸ್ಸು ಕರಗದೇ ಇರದು. ಹೌದು. ಲಾಕ್ ಡೌನ್ ಹಿನ್ನೆಲೆಯಲ್ಲಿ ಎಲ್ಲೂ ಆಹಾರ ಸಿಗುತ್ತಿಲ್ಲ. ಕೆಲವು ಮಾನವೀಯ ಹೃದಯವಿದ್ದವರು ಬಡವರಿಗೆ ಮೂರು ಹೊತ್ತು ಆಹಾರ ಹಂಚುತ್ತಿದ್ದಾರೆ. …

Read More »

ಏನೇ ಬಂದೋಬಸ್ತ್ ಮಾಡಿದ್ರೂ ಮಾನವೀಯತೆಯಿಂದ ಕೆಲಸ ಮಾಡಿ – ಸಿಬ್ಬಂದಿಗೆ ಕಮಿಷನರ್ ಸೂಚನೆ

ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಯಾಗಿದೆ. ಅಂದಿನಿಂದ ಪೊಲೀಸರು ಹಗಲಿರುಳು ಎನ್ನದೇ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಪೊಲೀಸ್ ಸಿಬ್ಬಂದಿಗೆ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಕೆಲವೊಂದು ಸೂಚನೆ ನೀಡಿದ್ದಾರೆ. ಲಾಕ್‍ಡೌನ್‍ನಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಅಲ್ಲದೇ ನಾವು ಏನೇ ಬಂದೋಬಸ್ತ್ ಮಾಡಿದರೂ ಸಹ ಮಾನವೀಯತೆಯಿಂದ ಕೆಲಸ ಮಾಡಬೇಕು ಎಂದು ಪೊಲೀಸ್ ಸಿಬ್ಬಂದಿಗೆ ಭಾಸ್ಕರ್ ರಾವ್ ತಿಳಿಸಿದ್ದಾರೆ. ಕಮಿಷನರ್ ಸಿಬ್ಬಂದಿಗೆ ನೀಡಿದ …

Read More »