Breaking News

ರಾಷ್ಟ್ರೀಯ

ನೀನು ನನಗೆ ವೋಟ್ ಹಾಕಲ್ಲ, ನಾನ್ಯಾಕೆ ನಿಂಗ ರೇಷನ್ ಕಿಟ್ ಕೊಡಬೇಕು?ವಿಧವೆಯ ಮೇಲೆ ಹಲ್ಲೆ

ಬಳ್ಳಾರಿ: ರೇಷನ್ ಕಿಟ್ ಕೇಳಿದ್ದಕ್ಕೆ ವಿಧವೆಯೊಬ್ಬರಿಗೆ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಳ್ಳಾರಿ ತಾಲೂಕಿನ ಬೆಳಗಲ್ಲು ತಾಂಡಾದ ಮೋತಿ ಬಾಯಿ (38) ಹಲ್ಲೆಗೆ ಒಳಗಾದ ವಿಧವೆ. ಬೆಳಗಲ್ಲು ತಾಂಡಾದ ನಿವಾಸಿಗಳಾದ ಲೇಬರ್ ಕಂಟ್ರಾಕ್ಟರ್ ರಾಮುನಾಯ್ಕ, ಲಾರಿ ಮಾಲೀಕರಾದ ಬಾಬು ನಾಯ್ಕ, ವೆಂಕಟೇಶ ನಾಯ್ಕ, ಲಕ್ಷ್ಮಣ ನಾಯ್ಕ ಹಾಗೂ ತೇಜು ನಾಯ್ಕ ಹಲ್ಲೆಗೈದವರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಬಡ ಜನರಿಗೆ ಬೆಳಗಲ್ಲು ತಾಂಡಾ ಸಮೀಪ ಕಾರ್ಖಾನೆಗಳು ರೇಷನ್ ಕಿಟ್ …

Read More »

ಕುಟುಂಬದ 26 ಮಂದಿಗೆ ಕೊರೊನಾ ಸೋಂಕು

ನವದೆಹಲಿ: ಇಡೀ ದೇಶ ಲಾಕ್‍ಡೌನ್ ಆಗಿದೆ. ಕೆಲವು ಕಡೆ ಸೀಲ್‍ಡೌನ್ ಕೂಡ ಮಾಡಿದೆ. ಸರ್ಕಾರ ಮನೆಯಿಂದ ಆಚೆ ಬರಬೇಡಿ ಅಂತ ಸಾರಿ ಸಾರಿ ಹೇಳುತ್ತಿದೆ. ಆದರೆ ಜನರು ಮಾತ್ರ ಸರ್ಕಾರದ ಮಾತು ಕೇಳುತ್ತಿಲ್ಲ. ಇದೀಗ ರೆಡ್ ಝೋನ್‍ನಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಓಡಾಡಿದ ಇಡೀ ಕುಟುಂಬವೊಂದಕ್ಕೆ ಕೊರೊನಾ ಸಂಕಷ್ಟ ಎದುರಾಗಿದೆ. ದೆಹಲಿಯ ರೆಡ್ ಝೊನ್ ಪ್ರದೇಶವಾಗಿರುವ ಜಹಾಂಗೀರ್ ಪುರಿಯಲ್ಲಿ ಒಂದೇ ಕುಟುಂಬದ 26 ಜನರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ರೆಡ್ …

Read More »

ರಾಜ್ಯ ಸರ್ಕಾರ ಜನರ ಜೀವದ ಜೊತೆ ಆಟವಾಡುತ್ತಿದೆಯಾ? ಸರ್ಕಾರವೇ ಕೊರೊನಾ ಸೋಂಕು ಹರಡಿಸುತ್ತಿದೆಯಾ?

ಬೆಂಗಳೂರು: ರಾಜ್ಯ ಸರ್ಕಾರ ಜನರ ಜೀವದ ಜೊತೆ ಆಟವಾಡುತ್ತಿದೆಯಾ? ಸರ್ಕಾರವೇ ಕೊರೊನಾ ಸೋಂಕು ಹರಡಿಸುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ. ಹೌದು, ಸರ್ಕಾರ ನೀಡುತ್ತಿರುವ ಉಚಿತ ಹಾಲು ಪಡೆಯಲು ಜನರು ಕಿಲೋ ಮೀಟರ್ ಗಟ್ಟಲೇ ಕ್ಯೂ ನಿಲ್ಲುತ್ತಿದ್ದಾರೆ. ಕೆಲವೊಮ್ಮೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದ ಪ್ರಸಂಗಗಳನ್ನು ವರದಿಯಾಗಿವೆ. ಇಂತಹದ್ದೇ ಪ್ರಸಂಗ ಇಂದು ಮಲ್ಲೇಶ್ವರಂನ ದತ್ತಾತ್ರೇಯ ವಾರ್ಡ್ ನಲ್ಲಿ ನಡೆದಿದೆ. ಮಲ್ಲೇಶ್ವರಂನ ದತ್ತಾತ್ರೇಯ ವಾರ್ಡ್‍ನಲ್ಲಿ ಬೆಳಗ್ಗೆ 7 ಗಂಟೆಗೆ ಉಚಿತ ಹಾಲು ವಿತರಣೆ ಮಾಡಲಾಗುತ್ತದೆ. …

Read More »

5 ಕೋಟಿ ಕೊಟ್ಟು 50 ಕೋಟಿ ತಂದರು,ಬಡಜನರಿಗೆ ದೊಡ್ಡ ಪ್ರಮಾಣದ ನೆರವನ್ನು ಸರಕಾರದಿಂದ ಪಡೆದಿದ್ದಾರೆ.:ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ ಜಿಲ್ಲೆ ರಾಜಕಾರಣದಲ್ಲಿ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ. ಯಾವುದೇ ಪಕ್ಷವಿರಲಿ ಸರಕಾರದ ಸ್ಥಿರತೆ ಮತ್ತು ಅಸ್ಥಿರತೆ ಎರಡರಲ್ಲೂ ಜಿಲ್ಲೆಯ ಪಾತ್ರ ಪ್ರಾಮುಖ್ಯತೆ ವಹಿಸುತ್ತದೆ. ಜಿಲ್ಲೆಯಲ್ಲಿ ಸಾಹುಕಾರರೆಂದು ಕರೆಸಿಕೊಳ್ಳುವ  3 ಮನೆತನಗಳು ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ನಿರಂತರ ಸುದ್ದಿ ಮಾಡುತ್ತಿವೆ. ಒಬ್ಬರು ಒಂದು ಸರಕಾರ ಬೀಳಿಸಿ ಮತ್ತೊಂದು ಸರಕಾರ ತಂದು ನಿಲ್ಲಿಸಿದರೆ, ಮತ್ತೊಬ್ಬರು ಹಿರಿಯರಾಗಿಯೂ ಸಚಿವಸ್ಥಾನ ಸಿಗದೆ ಸರಕಾರವನ್ನು ಸದಾ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದ್ದಾರೆ. ಇನ್ನೊಬ್ಬರು ಚುನಾವಣೆಯಲ್ಲಿ ಸೋತು ಹೋಗಿದ್ದರೂ ಉಪಮುಖ್ಯಮಂತ್ರಿ …

Read More »

ಕರ್ನಾಟಕಕ್ಕೆ Be Careful ಎಂದ ಕೇಂದ್ರ ಆರೋಗ್ಯ ಇಲಾಖೆ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಇತ್ತ ಸಾವಿನ ಸಂಖ್ಯೆಯೂ ದಿನಕಳೆದಂತೆ ಹೆಚ್ಚಾಗುತ್ತಿದೆ. ಹೀಗಾಗಿ ಕೇಂದ್ರ ಆರೋಗ್ಯ ಇಲಾಖೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕಿ ಎಂದು ಕರ್ನಾಟಕಕ್ಕೆ ಎಚ್ಚರಿಕೆ ನೀಡಿದೆ. ಕೇರಳದಲ್ಲಿ ಕೊರೊನಾ ವೈರಸ್‍ನಿಂದ ಮೂವರು ಮೃತಪಟ್ಟಿದ್ದಾರೆ. ಆದರೆ ಕರ್ನಾಟಕದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಕೇರಳಕ್ಕಿಂತ ಕರ್ನಾಟಕದಲ್ಲಿ ಕೊರೊನಾ ಕಡಿಮೆ ಇದ್ದರೂ ಸಾವಿನ ಸಂಖ್ಯೆ ಹೆಚ್ಚಳವಾಗಿದೆ. ಹೀಗಾಗಿ ಕರ್ನಾಟಕಕ್ಕೆ ಕೇಂದ್ರ ಆರೋಗ್ಯ …

Read More »

ಲಾಕ್‍ಡೌನ್ ನಿಯಮ ಉಲ್ಲಂಘನೆ ಮಾಡಿ, ಕದ್ದುಮುಚ್ಚಿ ಮದ್ಯ ಮಾರಾಟ ಮಾಡಿದ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.

ಬಳ್ಳಾರಿ: ಲಾಕ್‍ಡೌನ್ ನಿಯಮ ಉಲ್ಲಂಘನೆ ಮಾಡಿ, ಕದ್ದುಮುಚ್ಚಿ ಮದ್ಯ ಮಾರಾಟ ಮಾಡಿದ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಮುಖಂಡ ಡಿ.ರಾಘವೇಂದ್ರನನ್ನು ಅಕ್ರಮವಾಗಿ ಮದ್ಯ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಇಡೀ ದೇಶವೇ ಕೊರೊನಾ ಭೀತಿಯಿಂದ ಲಾಕ್‍ಡೌನ್ ಆಗಿದೆ. ಆದರೂ ಬಿಜೆಪಿ ಮುಖಂಡನ ಮಾಲೀಕತ್ವದ ಮದ್ಯದಂಗಡಿಯಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ಇರುವ ಮದ್ಯದಂಗಡಿಯ …

Read More »

ಕೇರಳದಲ್ಲಿ ನಾಳೆಯಿಂದ ಹೋಟೆಲ್, ಬಸ್ ಸಂಚಾರಕ್ಕೆ ಅನುಮತಿ

ಕೇರಳದ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ – ಷರತ್ತುಗಳೊಂದಿಗೆ ಅನುಮತಿ ನೀಡಿದ ಕೇರಳ – ಕೆಂಪು ವಲಯದಲ್ಲಿ ಮೇ 3ರವರೆಗೆ ಲಾಕ್‍ಡೌನ್ ಮುಂದುವರಿಕೆ ತಿರುವನಂತಪುರಂ: ಮಹತ್ವದ ನಿರ್ಧಾರವೊಂದರಲ್ಲಿ ಕೇರಳ ಸರ್ಕಾರ ರಾಜ್ಯದಲ್ಲಿ ಹೋಟೆಲ್, ರೆಸ್ಟೋರೆಂಟ್‍ಗಳ ಓಪನ್‍ಗೆ ಅನುಮತಿ ನೀಡುವುದರ ಜೊತೆಗೆ ಬಸ್‍ಗಳ ಓಡಾಟಕ್ಕೂ ಲಾಕ್‍ಡೌನ್‍ನಿಂದ ವಿನಾಯಿತಿ ನೀಡಿದೆ. ಈ ಮೂಲಕ ನಾಳೆಯಿಂದ ಕೇರಳದ 14 ಜಿಲ್ಲೆಗಳಲ್ಲಿ ಜನ ಜೀವನ ಸಹಜ ಸ್ಥಿತಿಗೆ ಬರಲಿದೆ. 21 ದಿನಗಳ ಲಾಕ್‍ಡೌನ್ ಬಳಿಕ ವಿನಾಯ್ತಿ …

Read More »

ರಾಜಮೌಳಿ ನಿರ್ದೇಶನದಲ್ಲಿ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ನಟನೆ

ಹೈದರಾಬಾದ್: ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಅವರೊಂದಿಗೆ ತಮ್ಮ ಮುಂದಿನ ಸಿನಿಮಾ ಮಾಡುವುದಾಗಿ ಖ್ಯಾತ ನಿರ್ದೇಶಕ ಎಸ್‍ಎಸ್ ರಾಜಮೌಳಿ ಹೇಳಿದ್ದಾರೆ. ಆ ಮೂಲಕ ಟಾಲಿವುಡ್‍ನಲ್ಲಿ ಬಹುದಿನಗಳಿಂದ ಕೇಳಿ ಬರುತ್ತಿದ್ದ ಕ್ರೇಜಿ ಕಾಂಬಿನೇಷನ್ ಸುದ್ದಿಗಳಿಗೆ ತೆರೆ ಹೇಳಿದಿದ್ದಾರೆ. ಸದ್ಯ ಎನ್‍ಟಿಆರ್, ರಾಮ್ ಚರಣ್ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ಆರ್‌ಆರ್‌ಆರ್ ಸಿನಿಮಾದಲ್ಲಿ ರಾಜಮೌಳಿ ಬ್ಯುಸಿಯಾಗಿದ್ದಾರೆ. ಇದೇ ವೇಳೆ ಮಹೇಶ್ ಬಾಬು ಅವರೊಂದಿಗೆ ತಮ್ಮ ಮುಂದಿನ ಸಿನಿಮಾ ಎಂದು ಘೋಷಣೆ ಮಾಡುವ ಮೂಲಕ ಅಭಿಮಾನಿಗಳಲ್ಲಿ …

Read More »

ದೇಶದಲ್ಲಿ 15 ಸಾವಿರ ದಾಟಿದ ಸೋಂಕಿತರ ಸಂಖ್ಯೆ- ಅಮೆರಿಕದಲ್ಲಿ ಒಂದೇ ದಿನ 4,600 ಸಾವು

ನವದೆಹಲಿ: ದೇಶದಲ್ಲಿ ಇಂದು ಒಂದೇ ದಿನ 1,300ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 15,232ಕ್ಕೆ ತಲುಪಿದೆ. ಈ ಪೈಕಿ ತಬ್ಲೀಘಿಗಳ ಪಾಲು 4,200ಕ್ಕೂ ಹೆಚ್ಚು. ಅಂದರೆ ಪ್ರತಿ ಮೂವರು ಸೋಂಕಿತರಲ್ಲಿ ಒಬ್ಬರು ತಬ್ಲಿಘಿಗಳು. ಕಳೆದ 24 ಗಂಟೆಗಳಲ್ಲಿ 43 ಮಂದಿ ಸಾವನ್ನಪ್ಪಿದ್ದು, ಒಟ್ಟು 505 ಜನ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 3,648 ದಾಟಿದ್ದು, ಇಂದು 328 ಹೊಸ ಪ್ರಕರಣಗಳು ಪತ್ತೆಯಾಗಿವೆ. ಗುಜರಾತ್‍ನಲ್ಲಿ ಒಂದೇ ದಿನ …

Read More »

ಮಗನಿಗೆ ಕೊರೊನಾ ಸೋಂಕು- ಹೃದಯಾಘಾತದಿಂದ ತಾಯಿ ಸಾವು…….

ಬಾಗಲಕೋಟೆ: ಮಗನಿಗೆ ಕೊರೊನಾ ಸೋಂಕಿರುವ ವಿಷಯ ತಿಳಿಯುತ್ತಿದ್ದಂತೆ ರೋಗಿ ನಂ.381 ಅವರ 70 ವರ್ಷದ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಂಯ ಜಮಖಂಡಿಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ನಿವಾಸಿಯಾಗಿರುವ ಸೋಂಕಿತ ತಾಯಿ, ಹೃದಯಸಂಬಂಧಿ ಖಾಯಿಲೆ, ರಕ್ತದೊತ್ತಡದಿಂದ ಬಳಲುತ್ತಿದ್ದರು. ಇತ್ತೀಚೆಗೆ ಜಮಖಂಡಿ ಖಾಸಗಿ ಆಸ್ಪತ್ರೆಯಲ್ಲಿ ಒಂದು ದಿನ ದಾಖಲಾಗಿ ಡಿಸ್ಚಾರ್ಜ್ ಆಗಿದ್ದರು. ಮನೆಯಲ್ಲಿ ಕುಟುಂಬದ ಜೊತೆಗಿದ್ದರು. ಇಂದು ಮಗನಿಗೆ ಕೊರೊನಾ ಸೋಂಕಿರುವುದು ದೃಢವಾಗಿತ್ತು. ಇದರಿಂದ ಶಾಕ್‍ಗೆ …

Read More »